Tel: 7676775624 | Mail: info@yellowandred.in

Language: EN KAN

    Follow us :


ಮುಂದಿನ ವಾರದಲ್ಲಿ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೊರೊನಾ ತಪಾಸಣೆ. ವೈದ್ಯಾಧಿಕಾರಿ

Posted date: 16 Jul, 2020

Powered by:     Yellow and Red

ಮುಂದಿನ ವಾರದಲ್ಲಿ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೊರೊನಾ ತಪಾಸಣೆ. ವೈದ್ಯಾಧಿಕಾರಿ

ಚನ್ನಪಟ್ಟಣ:ಜು/೧೬/೨೦/ಗುರುವಾರ. ಮುಂದಿನ ವಾರದಲ್ಲಿ ತಾಲ್ಲೂಕಿನ ಇರುವ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೊರೊನಾ (ಸ್ವಾಬ್) ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗುವುದು, ಆಗ ಗ್ರಾಮೀಣ ಪ್ರದೇಶದ ಶಂಕಿತರು ನಗರಕ್ಕೆ ಬರುವುದು ತಪ್ಪುತ್ತದೆ ಎಂದು ತಾಲ್ಲೂಕು ವೈದ್ಯಾಧಿಕಾರಿ ಡಾ ರಾಜು ರವರು ತಿಳಿಸಿದರು.

ಅವರು ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಇಲಾಖೆ ಸಹಯೋಗದೊಂದಿಗೆ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಡೆಂಗಿ ದಿನಾಚರಣೆ ಸಂದರ್ಭದಲ್ಲಿ ಅವರು ತಾಲೂಕು ಆಡಳಿತ ಹಾಗೂ ಗ್ರಾಮ ಪಂಚಾಯತಿ ಮಟ್ಟದ ಅಧಿಕಾರಿಗಳಿಗೆ ಮಾಹಿತಿ ನೀಡಿದರು.


ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಟಾಸ್ಕ್ ಫೋರ್ಸ್ ಸಮಿತಿ ರಚಿಸಲಾಗಿದೆ. ಗ್ರಾಮ ಪಂಚಾಯತಿಯ ಆಡಳಿತಾಧಿಕಾರಿ, ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಹೆಚ್ಚು ಗಮನ ನೀಡಬೇಕು. ಎನ್ ಜಿ ಓ ಗಳ ಸಹಾಯವನ್ನು ಪಡೆದುಕೊಳ್ಳಿ,  ನಿಮ್ಮ ಜೊತೆಗೆ ತಾಲ್ಲೂಕು ಆಡಳಿತ ಮತ್ತು ಆರೋಗ್ಯ ಇಲಾಖೆ ಇರುತ್ತದೆ ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.


ಅಂತರಾಷ್ಟ್ರೀಯ ಮತ್ತು ಅಂತರ ರಾಜ್ಯ ದಿಂದ ಬಂದವರನ್ನು ಸರ್ಕಾರದ ವತಿಯಿಂದ ೧೪ ದಿನಗಳ ಕಾಲ ಇನ್ಸ್ ಟಿಟ್ಯುಷನಲ್ ಕ್ವಾರಂಟೈನ್ ಮಾಡಿಯೇ ಕಳುಹಿಸಲಾಗುತ್ತಿದೆ. ತದನಂತರ ಬಂದವರು ಎಲ್ಲೆಂದರಲ್ಲಿ ಓಡಾಡುವ ಹಾಗಿಲ್ಲ. ಅವರನ್ನು ಪತ್ತೆ ಹಚ್ಚಿ ೧೪ ದಿನಗಳ ಕಾಲ ಹೋಂ ಕ್ವಾರಂಟೈನ್ ಮಾಡಬೇಕು. ಬೆಂಗಳೂರಿನಿಂದ ಬಂದವರನ್ನು ಗುರುತಿಸಿ, ಅವರು ಕಂಟೈನ್ಮೆಂಟ್ ಝೋನ್ ನಿಂದ ಬಂದಿದ್ದರೆ ಅವರನ್ನು ಸಹ ಹೋಂ ಕ್ವಾರಂಟೈನ್ ಮಾಡಬೇಕು ಎಂದು ಸೂಚಿಸದರು.


ಯಾವ ಪಂಚಾಯತಿ ವ್ಯಾಪ್ತಿಯಲ್ಲಿ ಕೊರೊನಾ ಸೋಂಕು ದೃಢಪಟ್ಟ ಮಾಹಿತಿ ಬಂದ ತಕ್ಷಣ ಗ್ರಾಮ ಪಂಚಾಯತಿ ಪಿಡಿಓ, ಆಡಳಿತಾಧಿಕಾರಿ ಮತ್ತು ಸಿಬ್ಬಂದಿಗಳು ಅಲ್ಲಿರಬೇಕು. ಸಬೂಬು ಕಾರಣ ನೀಡಬಾರದು. ಯಾವುದೇ ಸಭೆಯಲ್ಲಿ ಭಾಗವಹಿಸಿದರೂ ಸಹ ಬಿಟ್ಟು ಬರಬೇಕು. ಖುದ್ದು ನಾನೇ ಭೇಟಿ ನೀಡಿ ಸೋಂಕಿತರನ್ನು ವರ್ಗಾಯಿಸಿ ಸೀಲ್ಡೌನ್ ಮಾಡಿದ ನಂತರ ಬರುತ್ತೀರಿ. ಸೋಂಕಿತರ ವಿಷಯದಲ್ಲಿ ಹಿರಿಯ ಅಧಿಕಾರಿಗಳಿಂದ ಮಾಹಿತ  ಬರುವವರೆಗೂ ಕಾಯಬಾರದು. ಹೊನ್ನನಾಯಕನಹಳ್ಳಿ ಮತ್ತು ಚಕ್ಕೆರೆ ಗ್ರಾಮದ ಕ್ವಾರಂಟೈನ್ ಸೆಂಟರ್ ಗಳಿಗೆ ಬೇರೆ ಪಂಚಾಯತಿ ಸಿಬ್ಬಂದಿಗಳು ಸಹ ಭಾಗವಹಿಸಿ ಕೆಲಸ ನಿರ್ವಹಿಸಬೇಕು ಎಂದು ಅಧಿಕಾರಿಗಳಗೆ ತಹಶಿಲ್ದಾರ್ ಸುದರ್ಶನ್ ರವರು ಸೂಚಿಸಿದರು.


ಕಳೆದ ಮಾರ್ಚಿ ತಿಂಗಳಿನಲ್ಲಿ ಎಲ್ಲಾ ಗ್ರಾಮಗಳಿಗೂ ಸ್ಯಾನಿಟೈಸರ್ ಮಾಡಲಾಗಿತ್ತು. ಈಗ ಮಳೆಗಾಲವಾದ್ದರಿಂದ ಸೋಂಕು ರೋಗಗಳು ಹೆಚ್ಚು ಬರುತ್ತವೆ. ಈ ತಿಂಗಳು ಗ್ರಾಮ ವತಿಯಿಂದ ಸ್ಯಾನಿಟೈಸರ್ ಮಾಡಬೇಕು. ಶಂಕಿತರಿಗೆ ಸಂಬಂಧ ಪಟ್ಟಂತಹ ಕೆಲವು ವಸ್ತುಗಳನ್ನು ಖರೀದಿಸಿ ಇಟ್ಟುಕೊಳ್ಳಬೇಕು ಎಂದು ತಾಲ್ಲೂಕು ಪಂಚಾಯತಿ ಅಧ್ಯಕ್ಷ ಹರೂರು ರಾಜಣ್ಣ ನವರು ಅಧಿಕಾರಿಗಳಿಗೆ ಸೂಚನೆ ನೀಡಿದರು.


ತಾಲ್ಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಚಂದ್ರು ರವರು ಮಾತನಾಡಿ ಕೊರೊನಾ ಸೋಂಕಿತರು ದಿನೆದಿನೇ ಹೆಚ್ಚಾಗುತ್ತಿದ್ದು, ಅದರ ನಿರ್ವಹಣೆ ಒಂದು ಸವಾಲಾಗಿದೆ. ಇದನ್ನು ಸಣ್ಣ ಮಟ್ಟದಲ್ಲಿಯೇ ಚಿವುಟಿ ಹಾಕಬೇಕು. ಹಾಗಾಗಿ ಟಾಸ್ಕ್ ಫೋರ್ಸ್ ಮತ್ತು ಗ್ರಾಮ ಪಂಚಾಯತಿ ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕು ಎಂದು ಕರೆ ನೀಡಿದರು.


ಇದಕ್ಕೂ ಮೊದಲು ಈಶ ಫೌಂಡೇಶನ್ ನ ಸ್ವಯಂ ಸೇವಕರು ಕಾವೇರಿ ಕೂಗು ವಿನ ಬಗ್ಗೆ ಮಾಹಿತಿ ನೀಡಿದರು.

ಕಾವೇರಿ ಕೂಗು ಅಭಿಯಾನದ ಮುಖ್ಯ ಉದ್ದೇಶವೇನೆಂದರೆ

ಶೇಕಡಾ ೭೦ ರಷ್ಟು ನೀರು ಸಮುದ್ರ ದ ಪಾಲಾಗುತ್ತಿದೆ. ಸರ್ಕಾರ, ಜನಪ್ರತಿನಿಧಿ, ಪರಿಸರ ಸ್ನೇಹಿತರು ಗಿಡನೆಡುವ ಬಗ್ಗೆ ಜಗಳ ಇದು ನಮ್ಮ ಕೆಲಸವಲ್ಲ ಸರ್ಕಾರದ ಕೆಲಸ ಎನ್ನದೆ ಅವರವರೇ ಗಿಡ ನೆಡಬೇಕು.


ಎಲ್ಲಾ ರೈತರು ತಮ್ಮ ಹೊಲಗದ್ದೆಗಳ ಬದುಗಳಲ್ಲಿ ನೆಡುವ ಕಾರ್ಯಕ್ರಮ ಹಾಕಿಕೊಳ್ಳಬೇಕು. ಸರ್ಕಾರದ ಸವಲತ್ತುಗಳನ್ನು ಬಳಸಿಕೊಳ್ಳಬೇಕು.

೨೦೧೭ ರಿಂದ ನಾವು ಸ್ವಯಂ ಸೇವಕರಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಮಾಹಿತಿ ನೀಡಿದರು.


ಭೂಮಿ ಹಸಿರುಮಯವಾದಾಗ ತಂಪಾಗುತ್ತದೆ. ವಾತಾವರಣ ಹಿತವಾಗಿರುತ್ತದೆ.

ಪ್ರತಿ ತಾಲ್ಲೂಕಿನಲ್ಲಿ ಒಂದು ನರ್ಸರಿ ಆಯ್ಕೆ ಮಾಡಿ ೫೦ ಸಾವಿರ ಗಿಡಗಳನ್ನು ಬೆಳೆಸಿ ನೀಡಲಾಗುತ್ತದೆ. ಒಂದರಿಂದ ಮೂರು ರೂಪಾಯಿಗಳು ದರ.

ಒಂದು ಹೆಕ್ಟೇರ್ ಗೆ ೪೦೦ ಗಿಡಗಳನ್ನು ನೆಟ್ಟರೆ ಐದು ವರ್ಷ ಕ್ಕೆ ೫೦ ಸಾವಿರ ರೂಪಾಯಿ ಸಿಗುತ್ತದೆ. ಅಂತರ ಹೆಚ್ಚಿರುವುದರಿಂದ ಬೇರೆ ಬೆಳೆಯನ್ನು ಬೆಳೆಯಬಹುದು ಎಂದು ಈಶ ಫೌಂಡೇಶನ್ ಸ್ವಯಂ ಸೇವಕರ ಪ್ರತಿನಿಧಿಗಳು ತಿಳಿಸಿ ಕೊಟ್ಟರು.


ಎಇಓ ಲೋಕೇಶ್, ತಾಲ್ಲೂಕು ಮಟ್ಟದ ಆಡಳಿತಾಧಿಕಾರಿಗಳು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.


ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in corona »

ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ
ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ

ರಾಮನಗರ ಜಿಲ್ಲೆಯಲ್ಲಿ ಕಳೆದ ಏಳು ತಿಂಗಳ ನಂತರ ಇದೇ ಮೊದಲ ಬಾರಿಗೆ ಕೊರೋನಾ ಕಾಣಿಸಿಕೊಂಡಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬಿಡದಿ ಬಳಿಯ ಬೈರಮಂಗಲ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ‌

ಸೆ.17 ರಂದು ತಪ್ಪದೇ  ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ
ಸೆ.17 ರಂದು ತಪ್ಪದೇ ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ

ರಾಮನಗರ.ಸೆ 17: ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, 318 ಲಸಿಕಾ ತಂಡವನ್ನು ರಚಿಸಲಾಗಿದೆ. ತಂಡಗಳು

ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ
ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ

ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಮೇಳವನ್ನು ಹಮ್ನಿಕೊಳ್ಳಲಾಗಿದ್ದು, 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರ

ಸೆಪ್ಟೆಂಬರ್ 8  ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ
ಸೆಪ್ಟೆಂಬರ್ 8 ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ

ರಾಮನಗರ ,ಸೆ.7; ಕೋವಿಡ್-19 ಲಸಿಕಾಕರಣದ ಪ್ರಗತಿ ವೃದ್ದಿಯ ಉಪಕ್ರಮವಾಗಿ ಸೆಪ್ಟೆಂಬರ್ 8 ರಂದು  ಜಿಲ್ಲೆಯಾದ್ಯಂತ  ಕೋವಿಡ್-19 ಲಸಿಕಾ

ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ
ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ

ಜಿಲ್ಲಾ ಆಸ್ಪತ್ರೆ ಹಾಗೂ ತಾಲ್ಲೂಕು  ಆಸ್ಪತ್ರೆಗಳಲ್ಲಿ ಕೋವಿಡ್ ಮೂರನೇ ಅಲೆ ಎದುರಿಸಲು ಸಕಲ ಸಿದ್ಧತೆ  ಮಾಡಿಕೊಳ್ಳಿ ಎಂದು ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋ

ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ
ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ

ಚನ್ನಪಟ್ಟಣ.ಜು.12: ತಾಲ್ಲೂಕಿನಾದ್ಯಂತ ಇರುವ ಸಂಘಟಿತ ಮತ್ತು ಅಸಂಘಟಿತ  ಕಟ್ಟಡ ಕಾರ್ಮಿಕರಿಗೆ ಇಲಾಖೆ ವತಿಯಿಂದ ದಿನಸಿ ಕಿಟ್ ನೀಡಲಾಗುತ್ತಿದ್ದು, ತಾಲ್ಲೂಕಿನಲ್ಲಿ ಮಂತ್ರಿ ಮತ್ತು ಶಾಸಕರ ನೇತೃತ್

ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ
ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ

ಕೊರೊನಾ ದಿಂದ ಜನಸಾಮಾನ್ಯರ ಬದುಕು ಅಧ:ಪತನಕ್ಕಿಳಿದಿರುವುದು ಸತ್ಯ. ಇದಕ್ಕಾಗಿ, ಪಕ್ಷಗಳು, ಸಂಘಸಂಸ್ಥೆಗಳು ಮತ್ತು ಉಳ್ಳವರನೇಕರು ಬಡಬಗ್ಗರಿಗೆ ದಿನಸಿ ಕಿಟ್ ನೀಡುತ್ತಿರುವುದು ಶ್ಲಾಘನೀಯವಾದರೂ ಕೋವಿಡ್

ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ
ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ

ರಾಮನಗರ: ವಾರಾಂತ್ಯದ ಕರ್ಫ್ಯೂ ಗೆ ಕಳೆದ ವಾರದಂತೆ ಈ ವಾರವೂ ಸಹ ಬದಲಾವಣೆಗಳೊಂದಿಗೆ ಮಾರ್ಪಡಿಸಿದ್ದು, ಶನಿವಾರ ಮತ್ತು ಭಾನುವಾರ ಎರಡೂ ದಿನಗಳಲ್ಲಿ

ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ
ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ

ಸಂಭವನೀಯ ಕೋವಿಡ್ 3 ನೇ ಅಲೆಯ ಸಂದರ್ಭದಲ್ಲಿ ಯಾವುದೇ ಮಕ್ಕಳಿಗೆ ತೊಂದರೆಯಾಗದಂತೆ ಹಾಗೂ ತುರ್ತು ಚಿಕಿತ್ಸೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು  ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ

115 ನೇ ದಿನಕ್ಕೆ ಕಾಲಿಟ್ಟ  ಇರುಳಿಗರ ಪ್ರತಿಭಟನೆ
115 ನೇ ದಿನಕ್ಕೆ ಕಾಲಿಟ್ಟ ಇರುಳಿಗರ ಪ್ರತಿಭಟನೆ

ರಾಮನಗರ: ಕೈಲಾಂಚ ಹೋಬಳಿಯ ವಡ್ಡರಹಳ್ಳಿ ಗೊಲ್ಲರದೊಡ್ಡಿ ಗ್ರಾಮದ ಇರುಳಿಗ ಜನಾಂಗದವರು ಹಂದಿಗೊಂದಿ ಅರಣ್ಯ 

ಪ್ರದೇಶದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಕೋವಿಡ್ ಎರಡನೇ ಅಲೆ ಹೆ

Top Stories »  


Top ↑