ಚನ್ನಪಟ್ಟಣ ತಾಲೂಕಿನಲ್ಲಿ ಇಂದು ೬-೧=೫ ಮಂದಿಗೆ ಸೋಂಕು ದೃಢ. ೮೬-೧=೮೫ ಕ್ಕೇರಿದ ಸೋಂಕಿತರು
ಚನ್ನಪಟ್ಟಣ:ಜು/೧೮/೨೦/ಶನಿವಾರ. ತಾಲ್ಲೂಕಿನಲ್ಲಿ ಇಂದು ಸಾರ್ವಜನಿಕ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗಳನ್ನು ಹೊರತು ಪಡಿಸಿ ತಾಲೂಕಿನಾದ್ಯಂತ ೬ ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ನಗರದ ಯಾಸ್ಗರ್ ಮೊಹಲ್ಲಾ ದ ೬೦ ವರ್ಷದ ವೃದ್ದನಿಗೆ, ಜೀವನ್ ಪುರದ ೩೧ ವರ್ಷದ ಯುವಕನಿಗೆ, ಬೆಂಗಳೂರು ನಗರದ ಡಿಜಿ ಕಛೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ನಗರ ನಿವಾಸಿ ೩೦ ವರ್ಷದ ಮಹಿಳೆಗೆ ಸೋಂಕು ದೃಢಪಟ್ಟಿದೆ.
ರಾಮನಗರದ ಸಾರಿಗೆ (ಆರ್ ಟಿ ಓ) ಕಛೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಂಕಲಗೆರೆ ಗ್ರಾಮದ ೩೫ ವರ್ಷದ ಪುರುಷನಿಗೆ ೩೦ ವರ್ಷದ ದೃಶ್ಯ ಮಾಧ್ಯಮದ ಜಿಲ್ಲಾ ವರದಿಗಾರರಿಗೆ ಸೋಂಕು ದೃಢ ಪಟ್ಟಿದ್ದು ಎಲ್ಲರನ್ನೂ ರಾಮನಗರದ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹನುಮಾಪುರದೊಡ್ಡಿ ಗ್ರಾಮದ ಯುವಕನೊಬ್ಬನಿಗೆ ಈ ಹಿಂದೆ ಸೋಂಕು ದೃಢವಾಗಿದ್ದು, ಮತ್ತೊಮ್ಮೆ ಸ್ವಾಬ್ ತೆಗೆದ ನಂತರ ಆತನಿಗೆ ನೆಗೆಟಿವ್ ಬಂದಿದೆಯಾದ್ದರಿಂದ ಆತನನ್ನು ಆತನ ಮನೆಯಲ್ಲೇ ಹೋಂ ಕ್ವಾರಂಟೈನ್ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಪ್ರಥಮ ಸಂಪರ್ಕಿತರು ಮತ್ತು ದ್ವಿತೀಯ ಸಂಪರ್ಕಿತರನ್ನು ಪತ್ತೆ ಹಚ್ಚುವ ಕಾರ್ಯ ನಡೆದಿದೆ. ಈ ಎಲ್ಲಾ ಏರಿಯಾದ ನಿವಾಸಿಗಳ ಬೀದಿಗಳನ್ನು ಸೀಲ್ಡೌನ್ ಮಾಡಲಾಗುವುದು ಎಂದು ಆಡಳಿತ ತಿಳಿಸಿದೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in corona »
ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ
ರಾಮನಗರ ಜಿಲ್ಲೆಯಲ್ಲಿ ಕಳೆದ ಏಳು ತಿಂಗಳ ನಂತರ ಇದೇ ಮೊದಲ ಬಾರಿಗೆ ಕೊರೋನಾ ಕಾಣಿಸಿಕೊಂಡಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬಿಡದಿ ಬಳಿಯ ಬೈರಮಂಗಲ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ
ಸೆ.17 ರಂದು ತಪ್ಪದೇ ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ
ರಾಮನಗರ.ಸೆ 17: ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, 318 ಲಸಿಕಾ ತಂಡವನ್ನು ರಚಿಸಲಾಗಿದೆ. ತಂಡಗಳು
ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ
ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಮೇಳವನ್ನು ಹಮ್ನಿಕೊಳ್ಳಲಾಗಿದ್ದು, 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರ
ಸೆಪ್ಟೆಂಬರ್ 8 ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ
ರಾಮನಗರ ,ಸೆ.7; ಕೋವಿಡ್-19 ಲಸಿಕಾಕರಣದ ಪ್ರಗತಿ ವೃದ್ದಿಯ ಉಪಕ್ರಮವಾಗಿ ಸೆಪ್ಟೆಂಬರ್ 8 ರಂದು ಜಿಲ್ಲೆಯಾದ್ಯಂತ ಕೋವಿಡ್-19 ಲಸಿಕಾ
ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ
ಜಿಲ್ಲಾ ಆಸ್ಪತ್ರೆ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಕೋವಿಡ್ ಮೂರನೇ ಅಲೆ ಎದುರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋ
ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ
ಚನ್ನಪಟ್ಟಣ.ಜು.12: ತಾಲ್ಲೂಕಿನಾದ್ಯಂತ ಇರುವ ಸಂಘಟಿತ ಮತ್ತು ಅಸಂಘಟಿತ ಕಟ್ಟಡ ಕಾರ್ಮಿಕರಿಗೆ ಇಲಾಖೆ ವತಿಯಿಂದ ದಿನಸಿ ಕಿಟ್ ನೀಡಲಾಗುತ್ತಿದ್ದು, ತಾಲ್ಲೂಕಿನಲ್ಲಿ ಮಂತ್ರಿ ಮತ್ತು ಶಾಸಕರ ನೇತೃತ್
ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ
ಕೊರೊನಾ ದಿಂದ ಜನಸಾಮಾನ್ಯರ ಬದುಕು ಅಧ:ಪತನಕ್ಕಿಳಿದಿರುವುದು ಸತ್ಯ. ಇದಕ್ಕಾಗಿ, ಪಕ್ಷಗಳು, ಸಂಘಸಂಸ್ಥೆಗಳು ಮತ್ತು ಉಳ್ಳವರನೇಕರು ಬಡಬಗ್ಗರಿಗೆ ದಿನಸಿ ಕಿಟ್ ನೀಡುತ್ತಿರುವುದು ಶ್ಲಾಘನೀಯವಾದರೂ ಕೋವಿಡ್
ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ
ರಾಮನಗರ: ವಾರಾಂತ್ಯದ ಕರ್ಫ್ಯೂ ಗೆ ಕಳೆದ ವಾರದಂತೆ ಈ ವಾರವೂ ಸಹ ಬದಲಾವಣೆಗಳೊಂದಿಗೆ ಮಾರ್ಪಡಿಸಿದ್ದು, ಶನಿವಾರ ಮತ್ತು ಭಾನುವಾರ ಎರಡೂ ದಿನಗಳಲ್ಲಿ
ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ
ಸಂಭವನೀಯ ಕೋವಿಡ್ 3 ನೇ ಅಲೆಯ ಸಂದರ್ಭದಲ್ಲಿ ಯಾವುದೇ ಮಕ್ಕಳಿಗೆ ತೊಂದರೆಯಾಗದಂತೆ ಹಾಗೂ ತುರ್ತು ಚಿಕಿತ್ಸೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ
115 ನೇ ದಿನಕ್ಕೆ ಕಾಲಿಟ್ಟ ಇರುಳಿಗರ ಪ್ರತಿಭಟನೆ
ರಾಮನಗರ: ಕೈಲಾಂಚ ಹೋಬಳಿಯ ವಡ್ಡರಹಳ್ಳಿ ಗೊಲ್ಲರದೊಡ್ಡಿ ಗ್ರಾಮದ ಇರುಳಿಗ ಜನಾಂಗದವರು ಹಂದಿಗೊಂದಿ ಅರಣ್ಯ
ಪ್ರದೇಶದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಕೋವಿಡ್ ಎರಡನೇ ಅಲೆ ಹೆ
ಪ್ರತಿಕ್ರಿಯೆಗಳು