Tel: 7676775624 | Mail: info@yellowandred.in

Language: EN KAN

    Follow us :


ಕೊರೊನಾ: ಇಂದು ಜಿಲ್ಲಾದ್ಯಂತ 47 ಪ್ರಕರಣ ದೃಢ*

Posted date: 17 Sep, 2020

Powered by:     Yellow and Red

ಕೊರೊನಾ: ಇಂದು ಜಿಲ್ಲಾದ್ಯಂತ 47 ಪ್ರಕರಣ ದೃಢ*

ರಾಮನಗರ:ಸೆ/17/20/ಗುರುವಾರ. ಜಿಲ್ಲೆಯಲ್ಲಿ ಚನ್ನಪಟ್ಟಣ 15, ಮಾಗಡಿ 6 ಮತ್ತು ರಾಮನಗರ 26 ಪ್ರಕರಣಗಳು ಸೇರಿ ಇಂದು ಒಟ್ಟು 47 ಕರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇವರನ್ನು ರಾಮನಗರ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ವಿವಿಧ ಕೋವಿಡ್-19 ಆಸ್ಪತ್ರೆಗಳಿಗೆ ದಾಖಲಿಸಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ತಿಳಿಸಿದ್ದಾರೆ.


 *ಒಟ್ಟು ಪ್ರಕರಣ:* ಇದುವರೆಗೆ ಜಿಲ್ಲೆಯಲ್ಲಿ 4,770 ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಚನ್ನಪಟ್ಟಣ 1,135, ಕನಕಪುರ 959, ಮಾಗಡಿ 738 ಮತ್ತು ರಾಮನಗರ 1,938 ಪ್ರಕರಣಗಳು ಸೇರಿವೆ.


 *ಸಾವು* : ಜಿಲ್ಲೆಯಲ್ಲಿ ಇದುವರೆಗೆ ಚನ್ನಪಟ್ಟಣ ತಾಲ್ಲೂಕಿನಲ್ಲಿ 12, ಕನಕಪುರ ತಾಲ್ಲೂಕಿನಲ್ಲಿ 11, ಮಾಗಡಿ ತಾಲ್ಲೂಕಿನಲ್ಲಿ 14 ಜನ ಹಾಗೂ ರಾಮನಗರ ತಾಲ್ಲೂಕಿನಲ್ಲಿ 15 ಜನ ಸಾವನ್ನಪ್ಪಿದ್ದಾರೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 52 ಮಂದಿ ನಿಧನರಾಗಿದ್ದಾರೆ.


 *ಗುಣಮುಖ* : ಇಂದು ಚನ್ನಪಟ್ಟಣ ತಾಲ್ಲೂಕಿನಲ್ಲಿ 08, ಕನಕಪುರ ತಾಲ್ಲೂಕಿನಲ್ಲಿ 04, ಮಾಗಡಿ ತಾಲ್ಲೂಕಿನಲ್ಲಿ 08 ಹಾಗೂ ರಾಮನಗರ ತಾಲ್ಲೂಕಿನಲ್ಲಿ 11 ಜನ ಸೇರಿ ಒಟ್ಟಾರೆ 31 ಜನರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 3,889 ಜನರು ಗುಣಮುಖರಾಗಿದ್ದಾರೆ. ಈ ಪೈಕಿ ಚನ್ನಪಟ್ಟಣ 923, ಕನಕಪುರ 782, ಮಾಗಡಿ 525 ಮತ್ತು ರಾಮನಗರ 1,659 ಜನರು ಸೇರಿದ್ದಾರೆ.


 *ಸಕ್ರಿಯ ಪ್ರಕರಣ:* ಜಿಲ್ಲೆಯಲ್ಲಿ ದಾಖಲಾಗಿರುವ 4,770 ಪ್ರಕರಣಗಳ ಪೈಕಿ 3,889 ಜನರು ಗುಣಮುಖರಾಗಿದ್ದಾರೆ, ಇನ್ನೂ 829 ಜನರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಒಟ್ಟು 829 ಸಕ್ರಿಯ ಪ್ರಕರಣಗಳ ಪೈಕಿ ಚನ್ನಪಟ್ಟಣ 200, ಕನಕಪುರ 166, ಮಾಗಡಿ 199 ಮತ್ತು ರಾಮನಗರ 264 ಪ್ರಕರಣಗಳು ಸೇರಿವೆ.


 *ಜಿಲ್ಲಾ ಆರೋಗ್ಯ ಇಲಾಖೆ ವರದಿ:* ಕೋವಿಡ್ ನಿಯಂತ್ರಣ ಕುರಿತಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಿಂದ ಬಿಡುಗಡೆ ಮಾಡಿರುವ ಗುರುವಾರ (ಸೆ. 17) ವರದಿಯಲ್ಲಿ ಜಿಲ್ಲೆಯಲ್ಲಿ ನಿಗಾಕ್ಕೆ ಒಳಗಾದವರ ಒಟ್ಟು ಸಂಖ್ಯೆ 41,202 (ಹೊಸದಾಗಿ ಇಂದಿನ 532 ಸೇರಿ).


 *ಜ್ವರ ತಪಾಸಣೆ:* ಜ್ವರ ತಪಾಸಣಾ ಕೇಂದ್ರದಲ್ಲಿ ಇಂದು 78 ಜನರು ತಪಾಸಣೆಗೆ ಒಳಗಾಗಿದ್ದಾರೆ, ಒಟ್ಟಾರೆಯಾಗಿ 7,119 ಮಂದಿ ತಪಾಸಣೆಗೆ ಮಾಡಿಸಿಕೊಂಡಿದ್ದಾರೆ.


 *ಮಾದರಿ ಸಂಗ್ರಹ:* ಇಂದು ಹೊಸದಾಗಿ 532 ಮಾದರಿಗಳನ್ನು ಸೋಂಕಿನ ಪರೀಕ್ಷೆಗಾಗಿ ಸಂಗ್ರಹಿಸಲಾಗಿದೆ. ಇದುವರೆಗೆ ಒಟ್ಟು 41,461 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಒಟ್ಟು 36,316 ಪರೀಕ್ಷಾ ವರದಿಯ ಫಲಿತಾಂಶ ನಕಾರಾತ್ಮಕವಾಗಿರುತ್ತದೆ. ಇಂದಿನ 185 ಬಾಕಿ ವರದಿ ಸೇರಿ ಒಟ್ಟು 323 ಪ್ರಕರಣಗಳ ವರದಿಯನ್ನು ನಿರೀಕ್ಷಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.=2302

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in corona »

ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ
ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ

ರಾಮನಗರ ಜಿಲ್ಲೆಯಲ್ಲಿ ಕಳೆದ ಏಳು ತಿಂಗಳ ನಂತರ ಇದೇ ಮೊದಲ ಬಾರಿಗೆ ಕೊರೋನಾ ಕಾಣಿಸಿಕೊಂಡಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬಿಡದಿ ಬಳಿಯ ಬೈರಮಂಗಲ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ‌

ಸೆ.17 ರಂದು ತಪ್ಪದೇ  ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ
ಸೆ.17 ರಂದು ತಪ್ಪದೇ ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ

ರಾಮನಗರ.ಸೆ 17: ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, 318 ಲಸಿಕಾ ತಂಡವನ್ನು ರಚಿಸಲಾಗಿದೆ. ತಂಡಗಳು

ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ
ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ

ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಮೇಳವನ್ನು ಹಮ್ನಿಕೊಳ್ಳಲಾಗಿದ್ದು, 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರ

ಸೆಪ್ಟೆಂಬರ್ 8  ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ
ಸೆಪ್ಟೆಂಬರ್ 8 ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ

ರಾಮನಗರ ,ಸೆ.7; ಕೋವಿಡ್-19 ಲಸಿಕಾಕರಣದ ಪ್ರಗತಿ ವೃದ್ದಿಯ ಉಪಕ್ರಮವಾಗಿ ಸೆಪ್ಟೆಂಬರ್ 8 ರಂದು  ಜಿಲ್ಲೆಯಾದ್ಯಂತ  ಕೋವಿಡ್-19 ಲಸಿಕಾ

ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ
ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ

ಜಿಲ್ಲಾ ಆಸ್ಪತ್ರೆ ಹಾಗೂ ತಾಲ್ಲೂಕು  ಆಸ್ಪತ್ರೆಗಳಲ್ಲಿ ಕೋವಿಡ್ ಮೂರನೇ ಅಲೆ ಎದುರಿಸಲು ಸಕಲ ಸಿದ್ಧತೆ  ಮಾಡಿಕೊಳ್ಳಿ ಎಂದು ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋ

ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ
ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ

ಚನ್ನಪಟ್ಟಣ.ಜು.12: ತಾಲ್ಲೂಕಿನಾದ್ಯಂತ ಇರುವ ಸಂಘಟಿತ ಮತ್ತು ಅಸಂಘಟಿತ  ಕಟ್ಟಡ ಕಾರ್ಮಿಕರಿಗೆ ಇಲಾಖೆ ವತಿಯಿಂದ ದಿನಸಿ ಕಿಟ್ ನೀಡಲಾಗುತ್ತಿದ್ದು, ತಾಲ್ಲೂಕಿನಲ್ಲಿ ಮಂತ್ರಿ ಮತ್ತು ಶಾಸಕರ ನೇತೃತ್

ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ
ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ

ಕೊರೊನಾ ದಿಂದ ಜನಸಾಮಾನ್ಯರ ಬದುಕು ಅಧ:ಪತನಕ್ಕಿಳಿದಿರುವುದು ಸತ್ಯ. ಇದಕ್ಕಾಗಿ, ಪಕ್ಷಗಳು, ಸಂಘಸಂಸ್ಥೆಗಳು ಮತ್ತು ಉಳ್ಳವರನೇಕರು ಬಡಬಗ್ಗರಿಗೆ ದಿನಸಿ ಕಿಟ್ ನೀಡುತ್ತಿರುವುದು ಶ್ಲಾಘನೀಯವಾದರೂ ಕೋವಿಡ್

ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ
ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ

ರಾಮನಗರ: ವಾರಾಂತ್ಯದ ಕರ್ಫ್ಯೂ ಗೆ ಕಳೆದ ವಾರದಂತೆ ಈ ವಾರವೂ ಸಹ ಬದಲಾವಣೆಗಳೊಂದಿಗೆ ಮಾರ್ಪಡಿಸಿದ್ದು, ಶನಿವಾರ ಮತ್ತು ಭಾನುವಾರ ಎರಡೂ ದಿನಗಳಲ್ಲಿ

ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ
ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ

ಸಂಭವನೀಯ ಕೋವಿಡ್ 3 ನೇ ಅಲೆಯ ಸಂದರ್ಭದಲ್ಲಿ ಯಾವುದೇ ಮಕ್ಕಳಿಗೆ ತೊಂದರೆಯಾಗದಂತೆ ಹಾಗೂ ತುರ್ತು ಚಿಕಿತ್ಸೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು  ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ

115 ನೇ ದಿನಕ್ಕೆ ಕಾಲಿಟ್ಟ  ಇರುಳಿಗರ ಪ್ರತಿಭಟನೆ
115 ನೇ ದಿನಕ್ಕೆ ಕಾಲಿಟ್ಟ ಇರುಳಿಗರ ಪ್ರತಿಭಟನೆ

ರಾಮನಗರ: ಕೈಲಾಂಚ ಹೋಬಳಿಯ ವಡ್ಡರಹಳ್ಳಿ ಗೊಲ್ಲರದೊಡ್ಡಿ ಗ್ರಾಮದ ಇರುಳಿಗ ಜನಾಂಗದವರು ಹಂದಿಗೊಂದಿ ಅರಣ್ಯ 

ಪ್ರದೇಶದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಕೋವಿಡ್ ಎರಡನೇ ಅಲೆ ಹೆ

Top Stories »  


Top ↑