Tel: 7676775624 | Mail: info@yellowandred.in

Language: EN KAN

    Follow us :


ಕೋವಿಡ್-19 ಹರಡದಂತೆ ಮುಂಜಾಗ್ರತಾ ಕ್ರಮವಾಗಿ 144 ಜಾರಿಗೊಳಿಸಿದ ಡಿಸಿ ರಾಕೇಶ್ ಕುಮಾರ್

Posted date: 29 Mar, 2021

Powered by:     Yellow and Red

ಕೋವಿಡ್-19 ಹರಡದಂತೆ ಮುಂಜಾಗ್ರತಾ ಕ್ರಮವಾಗಿ 144 ಜಾರಿಗೊಳಿಸಿದ ಡಿಸಿ ರಾಕೇಶ್ ಕುಮಾರ್

ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಾಗೂ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ರಾಮನಗರ ಜಿಲ್ಲಾ ವ್ಯಾಪ್ತಿಯಲ್ಲಿ ಈ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ Disaster Management act 2005 ಹಾಗೂ ಸಿ.ಆರ್.ಪಿ.ಸಿ. ಸೆಕ್ಷನ್ 144 ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ನಿಬಂಧನೆಗಳಿಗೊಳಪಡುವಂತೆ ನಿಷೇಧಾಜ್ಞೆಯನ್ನು ಜಾರಿಗೂಳಿಸಿ ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ. ಅವರು ಇಂದು ಆದೇಶ ಹೊರಡಿಸಿದ್ದಾರೆ.


ರಾಮನಗರ ಜಿಲ್ಲಾ ವ್ಯಾಪ್ತಿಯಲ್ಲಿ ಮುಂಬರುವ ಧಾರ್ಮಿಕ ಹಬ್ಬಗಳಾದ ಯುಗಾದಿ, ಹೋಲಿ, ಷಬ್-ಎ-ಬರತ್, ಗುಡ್‌ಪ್ರೈಡೇ ಇತ್ಯಾದಿ ಹಬ್ಬಗಳ ಸಂಧರ್ಭದಲ್ಲಿ ಯಾವುದೇ ಸಾರ್ವಜನಿಕ ಸ್ಥಳಗಳು ಸಾರ್ವಜನಿಕ ಮೈದಾನ /ಸಾರ್ವಜನಿಕ ಉದ್ಯಾನ ವನಗಳಲ್ಲಿ ಮಾರುಕಟ್ಟೆಗಳಲ್ಲಿ ಧಾರ್ಮಿಕ ಸ್ಥಳಗಳು ಸೇರಿದಂತೆ ಇತ್ಯಾದಿ ಸಾರ್ವಜನಿಕ ಸ್ಥಳಗಳಲ್ಲಿ ಸಾರ್ವಜನಿಕ ಸಭೆ ಸಮಾರಂಭಗಳನ್ನು ಆಚರಿಸುವುದನ್ನು ಮತ್ತು ಆಯೋಜಿಸುವುದನ್ನು ನಿಷೇಧಿಸಿದೆ.


ಧಾರ್ಮಿಕ ಉತ್ಸವಗಳೊಂದಿಗೆ ಜಾತ್ರೆಗಳು, ಮೇಳಗಳನ್ನು ನಿಷೇದಿಸಿದೆ ಮತ್ತು ಎಲ್ಲಾ ರೀತಿಯ ಧಾರ್ಮಿಕ ಕಾರ್ಯಕ್ರಮಗಳನ್ನು ಸಾಮೂಹಿಕವಾಗಿ ಗುಂಪು ಸೇರದೆ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಕೇಂದ್ರ ಹಾಗೂ ರಾಜ್ಯ ಮತ್ತು ಜಿಲ್ಲಾಡಳಿತ ವತಿಯಿಂದ ಕೋವಿಡ್-19 ತಡೆಗಟ್ಟುವ ಸಂಬಂಧ ಹೊರಡಿಸಿರುವ ನಿಯಮ ಮತ್ತು ನಿಬಂಧನೆಗೆ ಒಳಪಟ್ಟು ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಸಾಂಕೇತಿಕವಾಗಿ ಆಚರಣೆ ಮಾಡಲು ಸೂಚಿಸಿದೆ.


ಸಾರ್ವಜನಿಕರು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಕಡ್ಡಾಯವಾಗಿದ್ದು, ಉಲ್ಲಂಘಿಸಿದಲ್ಲಿ ಸರ್ಕಾರದ ಆದೇಶ ಸಂಖ್ಯೆ;HFW 146 CGM 2020, ದಿನಾಂಕ;-24/03/2021ರ ಆದೇಶದಲ್ಲಿ ಸೂಚಿಸಿರುವಂತೆ ಕ್ರಮವಹಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶಿಸಿದೆ.


ಯಾವುದೇ ವ್ಯಕ್ತಿಯು ಈ ಆದೇಶವನ್ನು  ಉಲ್ಲಂಘಿಸಿದಲ್ಲಿ ಅಂತಹವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಕಲಂ 51 ರಿಂದ 60 ರ ಜೊತೆಗೆ ಭಾರತೀಯ ದಂಡ ಸಂಹಿತೆಯ ಕಲಂ 188 ರ ರೀತ್ಯಾ ಕಾನೂನು ಕ್ರಮ ಜರುಗಿಸಲಾಗುವುದು ಎಂದು ರಾಮನಗರ ಜಿಲ್ಲಾಧಿಕಾರಿ ಡಾ. ರಾಕೇಶ್ ಕುಮಾರ್ ಕೆ ಅವರು ಆದೇಶದಲ್ಲಿ  ತಿಳಿಸಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in corona »

ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ
ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ

ರಾಮನಗರ ಜಿಲ್ಲೆಯಲ್ಲಿ ಕಳೆದ ಏಳು ತಿಂಗಳ ನಂತರ ಇದೇ ಮೊದಲ ಬಾರಿಗೆ ಕೊರೋನಾ ಕಾಣಿಸಿಕೊಂಡಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬಿಡದಿ ಬಳಿಯ ಬೈರಮಂಗಲ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ‌

ಸೆ.17 ರಂದು ತಪ್ಪದೇ  ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ
ಸೆ.17 ರಂದು ತಪ್ಪದೇ ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ

ರಾಮನಗರ.ಸೆ 17: ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, 318 ಲಸಿಕಾ ತಂಡವನ್ನು ರಚಿಸಲಾಗಿದೆ. ತಂಡಗಳು

ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ
ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ

ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಮೇಳವನ್ನು ಹಮ್ನಿಕೊಳ್ಳಲಾಗಿದ್ದು, 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರ

ಸೆಪ್ಟೆಂಬರ್ 8  ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ
ಸೆಪ್ಟೆಂಬರ್ 8 ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ

ರಾಮನಗರ ,ಸೆ.7; ಕೋವಿಡ್-19 ಲಸಿಕಾಕರಣದ ಪ್ರಗತಿ ವೃದ್ದಿಯ ಉಪಕ್ರಮವಾಗಿ ಸೆಪ್ಟೆಂಬರ್ 8 ರಂದು  ಜಿಲ್ಲೆಯಾದ್ಯಂತ  ಕೋವಿಡ್-19 ಲಸಿಕಾ

ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ
ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ

ಜಿಲ್ಲಾ ಆಸ್ಪತ್ರೆ ಹಾಗೂ ತಾಲ್ಲೂಕು  ಆಸ್ಪತ್ರೆಗಳಲ್ಲಿ ಕೋವಿಡ್ ಮೂರನೇ ಅಲೆ ಎದುರಿಸಲು ಸಕಲ ಸಿದ್ಧತೆ  ಮಾಡಿಕೊಳ್ಳಿ ಎಂದು ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋ

ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ
ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ

ಚನ್ನಪಟ್ಟಣ.ಜು.12: ತಾಲ್ಲೂಕಿನಾದ್ಯಂತ ಇರುವ ಸಂಘಟಿತ ಮತ್ತು ಅಸಂಘಟಿತ  ಕಟ್ಟಡ ಕಾರ್ಮಿಕರಿಗೆ ಇಲಾಖೆ ವತಿಯಿಂದ ದಿನಸಿ ಕಿಟ್ ನೀಡಲಾಗುತ್ತಿದ್ದು, ತಾಲ್ಲೂಕಿನಲ್ಲಿ ಮಂತ್ರಿ ಮತ್ತು ಶಾಸಕರ ನೇತೃತ್

ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ
ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ

ಕೊರೊನಾ ದಿಂದ ಜನಸಾಮಾನ್ಯರ ಬದುಕು ಅಧ:ಪತನಕ್ಕಿಳಿದಿರುವುದು ಸತ್ಯ. ಇದಕ್ಕಾಗಿ, ಪಕ್ಷಗಳು, ಸಂಘಸಂಸ್ಥೆಗಳು ಮತ್ತು ಉಳ್ಳವರನೇಕರು ಬಡಬಗ್ಗರಿಗೆ ದಿನಸಿ ಕಿಟ್ ನೀಡುತ್ತಿರುವುದು ಶ್ಲಾಘನೀಯವಾದರೂ ಕೋವಿಡ್

ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ
ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ

ರಾಮನಗರ: ವಾರಾಂತ್ಯದ ಕರ್ಫ್ಯೂ ಗೆ ಕಳೆದ ವಾರದಂತೆ ಈ ವಾರವೂ ಸಹ ಬದಲಾವಣೆಗಳೊಂದಿಗೆ ಮಾರ್ಪಡಿಸಿದ್ದು, ಶನಿವಾರ ಮತ್ತು ಭಾನುವಾರ ಎರಡೂ ದಿನಗಳಲ್ಲಿ

ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ
ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ

ಸಂಭವನೀಯ ಕೋವಿಡ್ 3 ನೇ ಅಲೆಯ ಸಂದರ್ಭದಲ್ಲಿ ಯಾವುದೇ ಮಕ್ಕಳಿಗೆ ತೊಂದರೆಯಾಗದಂತೆ ಹಾಗೂ ತುರ್ತು ಚಿಕಿತ್ಸೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು  ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ

115 ನೇ ದಿನಕ್ಕೆ ಕಾಲಿಟ್ಟ  ಇರುಳಿಗರ ಪ್ರತಿಭಟನೆ
115 ನೇ ದಿನಕ್ಕೆ ಕಾಲಿಟ್ಟ ಇರುಳಿಗರ ಪ್ರತಿಭಟನೆ

ರಾಮನಗರ: ಕೈಲಾಂಚ ಹೋಬಳಿಯ ವಡ್ಡರಹಳ್ಳಿ ಗೊಲ್ಲರದೊಡ್ಡಿ ಗ್ರಾಮದ ಇರುಳಿಗ ಜನಾಂಗದವರು ಹಂದಿಗೊಂದಿ ಅರಣ್ಯ 

ಪ್ರದೇಶದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಕೋವಿಡ್ ಎರಡನೇ ಅಲೆ ಹೆ

Top Stories »  


Top ↑