Tel: 7676775624 | Mail: info@yellowandred.in

Language: EN KAN

    Follow us :


ಕೋವಿಡ್ ರೋಗಿಗಳ ಚಿಕಿತ್ಸೆಗೆ ಯಾವುದೇ ತೊಂದರೆ ಇಲ್ಲ: ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ.

Posted date: 19 Apr, 2021

Powered by:     Yellow and Red

ಕೋವಿಡ್ ರೋಗಿಗಳ ಚಿಕಿತ್ಸೆಗೆ ಯಾವುದೇ ತೊಂದರೆ ಇಲ್ಲ: ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ.

ಕೋವಿಡ್ ರೋಗಿಗಳ ಚಿಕಿತ್ಸೆಗೆ ಬೇಕಿರುವ ರೆಮಿಡಿಸ್ವರ್ ಔಷಧಿ ಹಾಗೂ ಆಮ್ಲಜನಕ  ಲಭ್ಯವಿದ್ದು ಕೋವಿಡ್  ರೋಗಿಗಳ ಚಿಕಿತ್ಸೆಗೆ ಯಾವುದೇ ತೊಂದರೆ ಇಲ್ಲ ಎಂದು ಜಿಲ್ಲಾಧಿಕಾರಿ‌ ಡಾ: ರಾಕೇಶ್ ಕುಮಾರ್ ಕೆ ಅವರು‌ ತಿಳಿಸಿದರು. 

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಜಿಲ್ಲೆಯಲ್ಲಿ 567 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವ್ ಸರಾಸರಿ 3.9 ಇರುತ್ತದೆ. ಕಂದಾಯ ಭವನದ ಕೋವಿಡ್ ಆಸ್ಪತ್ರೆ ಯಲ್ಲಿ 153 ಜನರಿಗೆ, ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ 26 ಜನರಿಗೆ ಹಾಗೂ ಲಕ್ಷಣ ರಹಿತ 312 ರೋಗಿಗಳಿಗೆ ಕೋವಿಡ್ ಕೇರ್ ಸೆಂಟರ್ ನಲ್ಲಿ‌ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.


*ಕೋವಿಡ್ ಲಕ್ಷಣಗಳು ಕಂಡುಬಂದಲ್ಲಿ  ಸ್ವಯಂ ಪ್ರೇರಿತವಾಗಿ ಪರೀಕ್ಷೆಗೆ ಒಳಪಡಿ.* ಪ್ರಾಥಮಿಕ ಹಂತದಲ್ಲೇ ರೋಗವನ್ನು ಪತ್ತೆಹಚ್ಚಿದರೆ. ರೋಗ ಹರಡುವುದನ್ನು ತಡೆಗಟ್ಟಬಹುದು ಹಾಗೂ ಚಿಕಿತ್ಸೆಯ ಅವಧಿ ಕೂಡ ಕಡಿಮೆಯಾಗುತ್ತದೆ. ಕೊನೆಯ ಹಂತದಲ್ಲಿ ಚಿಕಿತ್ಸೆ ಕೂಡ ಕಷ್ಟಕರವಾಗಿರುತ್ತದೆ. ಜಿಲ್ಲೆಯಲ್ಲಿ ಈವರೆಗೆ ಕೋವಿಡ್ ಪಾಸಿಟಿವ್ ಬಂದವರಿಗೆ ಹೋಮ್ ಕ್ವಾರಂಟೈನ್ ಗೆ ಅವಕಾಶ ನೀಡಿರುವುದಿಲ್ಲ. ಮುಂದಿನ ದಿನಗಳಲ್ಲಿ ಪ್ರಕರಣ ಹೆಚ್ಚದಲ್ಲಿ ಅವಕಾಶ ನೀಡಲಾಗುವುದು. ಜಿಲ್ಲೆಯಲ್ಲಿ ಶೇ 93 ರಷ್ಟು ರೋಗಿಗಳು ಗುಣಮುಖರಾಗುತ್ತಿದ್ದಾರೆ ಎಂದರು.


ಜೀವ ಮತ್ತು ಜೀವನೋಪಾಯ ಕೂಡ ಮುಖ್ಯ ಎಂದು ಸರ್ಕಾರ ಅಂಗಡಿ ಮುಂಗಟ್ಟು, ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶ ನೀಡಿದೆ. ಅಂಗಡಿ ಮುಂಗಟ್ಟುಗಳು ಕೋವಿಡ್ ನಿಯಮಾವಳಿಗಳನ್ನು ಪಾಲಿಸಿ. ಮದುವೆ ಮತ್ತು ಇನ್ನಿತರ ಚಟುವಟಿಕೆಗಳಿಗೆ ಸರ್ಕಾರ ನಿಗದಿಪಡಿಸಿರುವ ಗರಿಷ್ಠ ಜನರು ಮಾತ್ರ ಭಾಗವಹಿಸಲು ಅವಕಾಶವಿದೆ. ತಹಶೀಲ್ದಾರ್  ಅವರಿಂದ ಪಾಸ್ ಪಡೆಯಬೇಕು. ನಿಯಮ ಉಲ್ಲಂಘನೆ ಕಂಡುಬಂದಲ್ಲಿ ಕಲ್ಯಾಣ ಮಂಟಪ, ಅಂಗಡಿ ಮುಂಗಟ್ಟುಗಳಿಗೆ ಬೀಗಮುದ್ರೆ ಹಾಕಲಾಗುವುದು ಎಂದರು.


ಏಪ್ರಿಲ್ 1 ರಿಂದ  18 ರವರೆಗೆ ಮಾಸ್ಕ್ ಧರಿಸದೆ ಇರುವ 11,863 ಜನರಿಂದ 11,86300/- ರೂ ದಂಡ ವಸೂಲಿ ಮಾಡಲಾಗಿದೆ. ಈವರೆಗೆ ಒಟ್ಟು 57,04,850 ರೂ ದಂಡ ವಸೂಲಿ ಮಾಡಲಾಗಿದೆ ಎಂದರು.


45 ವರ್ಷ ಮೇಲ್ಪಟ್ಟ 1,37,971 ಜನರಿಗೆ ಕೋವಿಡ್ ಲಸಿಕೆ ನೀಡಲಾಗಿದೆ. ಶೇ 45 ಗುರಿ ಸಾಧಿಸಲಾಗಿದೆ. ಜಿಲ್ಲೆಯಲ್ಲಿ 3 ದಿನಗಳಿಗೆ ಸಾಕಾಗುವಷ್ಟು 19,000 ಡೋಸ್ ಲಸಿಕೆ ಲಭ್ಯವಿದೆ. ಬೇಡಿಕೆಗೆ ಅನುಗುಣವಾಗಿ ಲಸಿಕೆಯನ್ನು ಕೇಂದ್ರ ಕಚೇರಿಯಿಂದ ನೀಡಲಾಗುವುದು.

ಲಸಿಕೆಯಿಂದ ಯಾವುದೇ ಅಡ್ಡ ಪರಿಣಾಮ ಇಲ್ಲ ಲಸಿಕೆ ಪಡೆದುಕೊಳ್ಳಿ  ಎಂದರು.


ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ‌ಅಧಿಕಾರಿ ಇಕ್ರಂ ಅವರು ‌ಮಾತನಾಡಿ ಕೋವಿಡ್ ಕೇರ್ ಸೆಂಟರ್ ನಲ್ಲಿ‌ ಸ್ವಚ್ಛತೆ ಹಾಗೂ ಕಸ ವಿಲೇವಾರಿಗೆ ಕ್ರಮ ವಹಿಸಲಾಗುವುದು ಎಂದರು.


ಪತ್ರಿಕಾ ಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಿರೀಶ್ ಅಪರ ಜಿಲ್ಲಾಧಿಕಾರಿ ಜವರೇಗೌಡ ಟಿ ಅವರು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in corona »

ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ
ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ

ರಾಮನಗರ ಜಿಲ್ಲೆಯಲ್ಲಿ ಕಳೆದ ಏಳು ತಿಂಗಳ ನಂತರ ಇದೇ ಮೊದಲ ಬಾರಿಗೆ ಕೊರೋನಾ ಕಾಣಿಸಿಕೊಂಡಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬಿಡದಿ ಬಳಿಯ ಬೈರಮಂಗಲ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ‌

ಸೆ.17 ರಂದು ತಪ್ಪದೇ  ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ
ಸೆ.17 ರಂದು ತಪ್ಪದೇ ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ

ರಾಮನಗರ.ಸೆ 17: ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, 318 ಲಸಿಕಾ ತಂಡವನ್ನು ರಚಿಸಲಾಗಿದೆ. ತಂಡಗಳು

ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ
ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ

ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಮೇಳವನ್ನು ಹಮ್ನಿಕೊಳ್ಳಲಾಗಿದ್ದು, 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರ

ಸೆಪ್ಟೆಂಬರ್ 8  ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ
ಸೆಪ್ಟೆಂಬರ್ 8 ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ

ರಾಮನಗರ ,ಸೆ.7; ಕೋವಿಡ್-19 ಲಸಿಕಾಕರಣದ ಪ್ರಗತಿ ವೃದ್ದಿಯ ಉಪಕ್ರಮವಾಗಿ ಸೆಪ್ಟೆಂಬರ್ 8 ರಂದು  ಜಿಲ್ಲೆಯಾದ್ಯಂತ  ಕೋವಿಡ್-19 ಲಸಿಕಾ

ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ
ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ

ಜಿಲ್ಲಾ ಆಸ್ಪತ್ರೆ ಹಾಗೂ ತಾಲ್ಲೂಕು  ಆಸ್ಪತ್ರೆಗಳಲ್ಲಿ ಕೋವಿಡ್ ಮೂರನೇ ಅಲೆ ಎದುರಿಸಲು ಸಕಲ ಸಿದ್ಧತೆ  ಮಾಡಿಕೊಳ್ಳಿ ಎಂದು ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋ

ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ
ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ

ಚನ್ನಪಟ್ಟಣ.ಜು.12: ತಾಲ್ಲೂಕಿನಾದ್ಯಂತ ಇರುವ ಸಂಘಟಿತ ಮತ್ತು ಅಸಂಘಟಿತ  ಕಟ್ಟಡ ಕಾರ್ಮಿಕರಿಗೆ ಇಲಾಖೆ ವತಿಯಿಂದ ದಿನಸಿ ಕಿಟ್ ನೀಡಲಾಗುತ್ತಿದ್ದು, ತಾಲ್ಲೂಕಿನಲ್ಲಿ ಮಂತ್ರಿ ಮತ್ತು ಶಾಸಕರ ನೇತೃತ್

ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ
ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ

ಕೊರೊನಾ ದಿಂದ ಜನಸಾಮಾನ್ಯರ ಬದುಕು ಅಧ:ಪತನಕ್ಕಿಳಿದಿರುವುದು ಸತ್ಯ. ಇದಕ್ಕಾಗಿ, ಪಕ್ಷಗಳು, ಸಂಘಸಂಸ್ಥೆಗಳು ಮತ್ತು ಉಳ್ಳವರನೇಕರು ಬಡಬಗ್ಗರಿಗೆ ದಿನಸಿ ಕಿಟ್ ನೀಡುತ್ತಿರುವುದು ಶ್ಲಾಘನೀಯವಾದರೂ ಕೋವಿಡ್

ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ
ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ

ರಾಮನಗರ: ವಾರಾಂತ್ಯದ ಕರ್ಫ್ಯೂ ಗೆ ಕಳೆದ ವಾರದಂತೆ ಈ ವಾರವೂ ಸಹ ಬದಲಾವಣೆಗಳೊಂದಿಗೆ ಮಾರ್ಪಡಿಸಿದ್ದು, ಶನಿವಾರ ಮತ್ತು ಭಾನುವಾರ ಎರಡೂ ದಿನಗಳಲ್ಲಿ

ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ
ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ

ಸಂಭವನೀಯ ಕೋವಿಡ್ 3 ನೇ ಅಲೆಯ ಸಂದರ್ಭದಲ್ಲಿ ಯಾವುದೇ ಮಕ್ಕಳಿಗೆ ತೊಂದರೆಯಾಗದಂತೆ ಹಾಗೂ ತುರ್ತು ಚಿಕಿತ್ಸೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು  ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ

115 ನೇ ದಿನಕ್ಕೆ ಕಾಲಿಟ್ಟ  ಇರುಳಿಗರ ಪ್ರತಿಭಟನೆ
115 ನೇ ದಿನಕ್ಕೆ ಕಾಲಿಟ್ಟ ಇರುಳಿಗರ ಪ್ರತಿಭಟನೆ

ರಾಮನಗರ: ಕೈಲಾಂಚ ಹೋಬಳಿಯ ವಡ್ಡರಹಳ್ಳಿ ಗೊಲ್ಲರದೊಡ್ಡಿ ಗ್ರಾಮದ ಇರುಳಿಗ ಜನಾಂಗದವರು ಹಂದಿಗೊಂದಿ ಅರಣ್ಯ 

ಪ್ರದೇಶದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಕೋವಿಡ್ ಎರಡನೇ ಅಲೆ ಹೆ

Top Stories »  


Top ↑