Tel: 7676775624 | Mail: info@yellowandred.in

Language: EN KAN

    Follow us :


ಗ್ರಾಮ ಹಾಗೂ ವಾರ್ಡವಾರು ನೋಡಲ್ ಅಧಿಕಾರಿ ನೇಮಕ‌ ಮಾಡಿದ: ಡಾ: ರಾಕೇಶ್ ಕುಮಾರ್

Posted date: 28 Apr, 2021

Powered by:     Yellow and Red

ಗ್ರಾಮ ಹಾಗೂ ವಾರ್ಡವಾರು ನೋಡಲ್ ಅಧಿಕಾರಿ ನೇಮಕ‌ ಮಾಡಿದ:  ಡಾ: ರಾಕೇಶ್ ಕುಮಾರ್

ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯತಿ ಹಾಗೂ ವಾಡ್೯ವಾರು ತಾಲ್ಲೂಕು ಮಟ್ಟದ ಅಧಿಕಾರಿಗಳನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡುವಂತೆ ಜಿಲ್ಲಾಧಿಕಾರಿ ಡಾಃ ರಾಕೇಶ್ ಕುಮಾರ್ ಕೆ ಅವರು ತಿಳಿಸಿದರು.


ಅವರು ಇಂದು ಅಧಿಕಾರಿಗಳೊಂದಿಗೆ ವರ್ಚುಯಲ್ ಸಭೆ ನಡೆಸಿ ಮಾತನಾಡಿದರು. ಐ.ಎಲ್.ಐ, ಎಸ್.ಎ.ಆರ್.ಐ ಲಕ್ಷಣವುಳ್ಳವರು ಕೋವಿಡ್ ಪರೀಕ್ಷೆಗೆ ತಪ್ಪದೇ ಒಳಗಾಗಬೇಕು. ಈ ಹಿನ್ನಲೆಯಲ್ಲಿ ಹೆಚ್ಚಿನ ನಿಗಾ ವಹಿಸಲು ನೋಡಲ್ ಅಧಿಕಾರಿಗಳನ್ನು ನೇಮಕ‌ ಮಾಡಲಾಗುತ್ತಿದೆ ಎಂದರು.


 ಕೆ.ಪಿ.ಎಂ.ಇ  ನೊಂದಾಯಿತ  ಕ್ಲಿನಿಕ್ ಗಳು ತಪ್ಪದೇ ಐ.ಎಲ್.ಐ, ಎಸ್.ಎ.ಆರ್.ಐ ರೋಗಿಗಳ ವಿವರವನ್ನು ಪ್ರತಿ ದಿನ ನೀಡಬೇಕಿರುತ್ತದೆ. ಆದರೆ ಕೆಲವು ಕ್ಲಿನಿಕ್ ಗಳು ಮಾಹಿತಿ ನೀಡುತ್ತಿಲ್ಲ. ನೋಡಲ್ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಕ್ಲಿನಿಕ್ ಗಳನ್ನು ಪರಿಶೀಲಿಸಬೇಕು.


ಮೆಡಿಕಲ್ ಸ್ಟೋರ್ ಗಳಲ್ಲೂ ಸಹ  ಕೆಮ್ಮು, ನೆಗಡಿ, ಜ್ವರಕ್ಕೆ ಸಂಬಂಧಿಸಿದಂತೆ ಔಷಧಿಗಳನ್ನು ಖರೀದಿಸುತ್ತಾರೆ. ಗುಣಮುಖವಾಗದೆ ಇದ್ದಾಗ  ಆಸ್ಪತ್ರೆಗಳಿಗೆ ಬರುತ್ತಾರೆ. ನೋಡಲ್ ಅಧಿಕಾರಿಗಳು ಮೆಡಿಕಲ್ ಸ್ಟೋರ್ ಗಳಲ್ಲಿಯೂ ಸಹ ವಿವರವನ್ನು ಪಡೆದುಕೊಳ್ಳಬೇಕು. ಇದರಿಂದ ಪ್ರಾಥಮಿಕ ಹಂತದಲ್ಲೇ ಐ.ಎಲ್.ಐ, ಎಸ್.ಎ.ಆರ್.ಐ ಪ್ರಕರಣಗಳನ್ನು ಗುರುತಿಸಿ ಪರೀಕ್ಷೆಗೆ ಒಳಪಡಿಸಬಹುದು ಎಂದರು.


ನೋಡಲ್ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಕೋವಿಡ್ ಪಾಸಿಟಿವ್ ಪ್ರಕರಣಗಳ ವಿವರವನ್ನು ವಾರ್ ರೂಂ ನಿಂದ ಪಡೆದುಕೊಂಡು ಅವರನ್ನು ಮುಂದಿನ ಚಿಕಿತ್ಸೆಗೆ ಕೋವಿಡ್ ಕೇರ್ ಸೆಂಟರ್, ಹೋಮ್ ಐಸೊಲೇಷನ್,‌ ಕೋವಿಡ್ ಆಸ್ಪತ್ರೆಯಲ್ಲಿ ದಾಖಲಿಸಿರುವ ಬಗ್ಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಿ ಇದರಿಂದ ಅವರಿಗೆ ಚಿಕಿತ್ಸೆ ಪ್ರಾರಂಭವಾಗಿರುವ ಬಗ್ಗೆ ಖಾತ್ರಿಯಾಗುತ್ತದೆ. ಹೋಮ್ ಐಸೊಲೇಷನ್ ಪ್ರಕರಣಗಳನ್ನು ಅಶಾ ಕಾರ್ಯಕರ್ತೆಯರು ಭೇಟಿ ನೀಡಿ ಪರಿಶೀಲಿಸಬೇಕಿರುತ್ತದೆ. ಈ ಬಗ್ಗೆ ನೋಡಲ್ ಅಧಿಕಾರಿಗಳು ನಿಗಾ ವಹಿಸಬೇಕಿರುತ್ತದೆ ಎಂದರು.


ಗ್ರಾಮ ಮಟ್ಟದಲ್ಲಿ ಕೋವಿಡ್ ಲಕ್ಷಣಗಳು ಕಂಡು ಬಂದರೆ ಪರೀಕ್ಷೆಗೆ ಒಳಪಡಬೇಕು. ಪ್ರಾಥಮಿಕ ಹಂತದಲ್ಲೇ ಗುರುತಿಸಿದರೆ ಚಿಕಿತ್ಸೆ ಪಡೆದುಕೊಂಡು ಗುಣವಾಗಬಹುದು ಎಂದು ಪ್ರತಿ ದಿನ ಅರಿವು ಮೂಡಿಸುವ  ಐ.ಇ.ಸಿ ಕಾರ್ಯಕ್ರಮಗಳನ್ನು ‌ಆಯೋಜಿಸಬೇಕು ಎಂದರು. 


ತಹಶೀಲ್ದಾರ್ ಹಾಗೂ ಕಾರ್ಯನಿರ್ವಾಹಕ ಅಧಿಕಾರಿಗಳು ಒಟ್ಟಿಗೆ ಸೇರಿ ಗ್ರಾಮ ಹಾಗೂ ವಾಡ್೯ವಾರು  ನೋಡಲ್ ಅಧಿಕಾರಿಗಳ ಪಟ್ಟಿ ಕಳುಹಿಸಿಕೊಟ್ಟರೆ  ಅದೇಶ ಹೊರಡಿಸಲಾಗುವುದು. ಇದರಿಂದ ಹೆಚ್ಚಿನ ಅಧಿಕಾರಿಗಳನ್ನು ಬಳಸಿಕೊಂಡು ಕಾರ್ಯನಿರ್ವಹಿಸಬಹುದು ಎಂದರು. 


ಸಭೆಯಲ್ಲಿ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಇಕ್ರಂ, ಜಿಲ್ಲಾ ಆರೋಗ್ಯಾಧಿಕಾರಿ ಡಾ: ನಿರಂಜನ್, ಎಲ್ಲಾ ತಾಲ್ಲೂಕು ತಹಶೀಲ್ದಾರ್ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in corona »

ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ
ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ

ರಾಮನಗರ ಜಿಲ್ಲೆಯಲ್ಲಿ ಕಳೆದ ಏಳು ತಿಂಗಳ ನಂತರ ಇದೇ ಮೊದಲ ಬಾರಿಗೆ ಕೊರೋನಾ ಕಾಣಿಸಿಕೊಂಡಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬಿಡದಿ ಬಳಿಯ ಬೈರಮಂಗಲ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ‌

ಸೆ.17 ರಂದು ತಪ್ಪದೇ  ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ
ಸೆ.17 ರಂದು ತಪ್ಪದೇ ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ

ರಾಮನಗರ.ಸೆ 17: ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, 318 ಲಸಿಕಾ ತಂಡವನ್ನು ರಚಿಸಲಾಗಿದೆ. ತಂಡಗಳು

ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ
ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ

ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಮೇಳವನ್ನು ಹಮ್ನಿಕೊಳ್ಳಲಾಗಿದ್ದು, 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರ

ಸೆಪ್ಟೆಂಬರ್ 8  ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ
ಸೆಪ್ಟೆಂಬರ್ 8 ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ

ರಾಮನಗರ ,ಸೆ.7; ಕೋವಿಡ್-19 ಲಸಿಕಾಕರಣದ ಪ್ರಗತಿ ವೃದ್ದಿಯ ಉಪಕ್ರಮವಾಗಿ ಸೆಪ್ಟೆಂಬರ್ 8 ರಂದು  ಜಿಲ್ಲೆಯಾದ್ಯಂತ  ಕೋವಿಡ್-19 ಲಸಿಕಾ

ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ
ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ

ಜಿಲ್ಲಾ ಆಸ್ಪತ್ರೆ ಹಾಗೂ ತಾಲ್ಲೂಕು  ಆಸ್ಪತ್ರೆಗಳಲ್ಲಿ ಕೋವಿಡ್ ಮೂರನೇ ಅಲೆ ಎದುರಿಸಲು ಸಕಲ ಸಿದ್ಧತೆ  ಮಾಡಿಕೊಳ್ಳಿ ಎಂದು ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋ

ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ
ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ

ಚನ್ನಪಟ್ಟಣ.ಜು.12: ತಾಲ್ಲೂಕಿನಾದ್ಯಂತ ಇರುವ ಸಂಘಟಿತ ಮತ್ತು ಅಸಂಘಟಿತ  ಕಟ್ಟಡ ಕಾರ್ಮಿಕರಿಗೆ ಇಲಾಖೆ ವತಿಯಿಂದ ದಿನಸಿ ಕಿಟ್ ನೀಡಲಾಗುತ್ತಿದ್ದು, ತಾಲ್ಲೂಕಿನಲ್ಲಿ ಮಂತ್ರಿ ಮತ್ತು ಶಾಸಕರ ನೇತೃತ್

ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ
ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ

ಕೊರೊನಾ ದಿಂದ ಜನಸಾಮಾನ್ಯರ ಬದುಕು ಅಧ:ಪತನಕ್ಕಿಳಿದಿರುವುದು ಸತ್ಯ. ಇದಕ್ಕಾಗಿ, ಪಕ್ಷಗಳು, ಸಂಘಸಂಸ್ಥೆಗಳು ಮತ್ತು ಉಳ್ಳವರನೇಕರು ಬಡಬಗ್ಗರಿಗೆ ದಿನಸಿ ಕಿಟ್ ನೀಡುತ್ತಿರುವುದು ಶ್ಲಾಘನೀಯವಾದರೂ ಕೋವಿಡ್

ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ
ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ

ರಾಮನಗರ: ವಾರಾಂತ್ಯದ ಕರ್ಫ್ಯೂ ಗೆ ಕಳೆದ ವಾರದಂತೆ ಈ ವಾರವೂ ಸಹ ಬದಲಾವಣೆಗಳೊಂದಿಗೆ ಮಾರ್ಪಡಿಸಿದ್ದು, ಶನಿವಾರ ಮತ್ತು ಭಾನುವಾರ ಎರಡೂ ದಿನಗಳಲ್ಲಿ

ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ
ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ

ಸಂಭವನೀಯ ಕೋವಿಡ್ 3 ನೇ ಅಲೆಯ ಸಂದರ್ಭದಲ್ಲಿ ಯಾವುದೇ ಮಕ್ಕಳಿಗೆ ತೊಂದರೆಯಾಗದಂತೆ ಹಾಗೂ ತುರ್ತು ಚಿಕಿತ್ಸೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು  ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ

115 ನೇ ದಿನಕ್ಕೆ ಕಾಲಿಟ್ಟ  ಇರುಳಿಗರ ಪ್ರತಿಭಟನೆ
115 ನೇ ದಿನಕ್ಕೆ ಕಾಲಿಟ್ಟ ಇರುಳಿಗರ ಪ್ರತಿಭಟನೆ

ರಾಮನಗರ: ಕೈಲಾಂಚ ಹೋಬಳಿಯ ವಡ್ಡರಹಳ್ಳಿ ಗೊಲ್ಲರದೊಡ್ಡಿ ಗ್ರಾಮದ ಇರುಳಿಗ ಜನಾಂಗದವರು ಹಂದಿಗೊಂದಿ ಅರಣ್ಯ 

ಪ್ರದೇಶದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಕೋವಿಡ್ ಎರಡನೇ ಅಲೆ ಹೆ

Top Stories »  


Top ↑