ಕೋಡಂಬಳ್ಳಿ ಗ್ರಾಮದ ವ್ಯಾಪಾರಸ್ಥರಿಗೆ ಲೆಕ್ಕಕ್ಕಿಲ್ಲದ ಕೊರೊನಾ
ತಾಲ್ಲೂಕಿನಲ್ಲಿ ಕೊರೊನಾ ವ್ಯಾಪಕವಾಗಿ ಹರಡುತ್ತಿದ್ದರೂ, ತಾಲ್ಲೂಕಿನ ಪ್ರಮುಖ ವಾಣಿಜ್ಯ ಕೇಂದ್ರಗಳಲ್ಲಿ ಒಂದಾದ ಕೋಡಂಬಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮಾತ್ರ ಬೆಳಿಗ್ಗೆ 5 ಗಂಟೆಗೇ ಟೀ ಅಂಗಡಿಗಳು ಮತ್ತು ದಿನಸಿ ಅಂಗಡಿಗಳು ತೆರೆದು ಜನರು ಗಿಜಿಗುಡುವ ಜನಜಂಗುಳಿಯು ಕಂಡು ಬರುತ್ತಿದೆ.
ಸರ್ಕಾರ ಲಾಕ್ಡೌನ್ ಘೋಷಣೆ ಮಾಡಿದ್ದು, ಜನರ ಅವಶ್ಯಕ ವಸ್ತಗಳ ಖರೀದಿಗಾಗಿ ಬೆಳಿಗ್ಗೆ 10 ಗಂಟೆಯಿಂದ 12 ಗಂಟೆ ಯವರೆಗೆ ಮಾತ್ರ ಅವಕಾಶ ನೀಡಿದ್ದು, ಆದರೆ ಇಲ್ಲಿ ಮುಂಜಾನೆಯೇ ಅಂಗಡಿಗಳು ತೆರೆದುಕೊಂಡು ವ್ಯಾಪಾರ ವಹಿವಾಟು ನಡೆಸುತ್ತಿವೆ.
ಅಗತ್ಯ ವಸ್ತುಗಳ ಮಾರಾಟ ಅಂಗಡಿಗಳ ಜೊತೆಯಲ್ಲಿ ಬಟ್ಟೆ, ಎಲೆಕ್ಟ್ರಾ ನಿಕ್, ಒಡವೆ, ಫ್ಯಾನ್ಸಿ ಸ್ಟೋರ್ ಸೇರಿದಂತೆ ಬಹುತೇಕ ಎಲ್ಲಾ ಅಂಗಡಿಗಳು ಮಧ್ಯಾಹ್ನ 12 ಗಂಟೆಯವರೆಗೆ ಕಾರ್ಯನಿರ್ವಹಿಸುತ್ತಿವೆ.
ಇದು ಪ್ರಮುಖ ವಾಣಿಜ್ಯ ಕೇಂದ್ರವಾಗಿದ್ದು, ಇಲ್ಲಿಗೆ ಬರುವ ನೂರಾರು ಗ್ರಾಮಗಳ ಮಂದಿಗೆ ಸೋಂಕು ತಗುಲಿರುವ ಸಾಧ್ಯತೆ ಹೆಚ್ಚಿಗೆ ಇದೆ ಎನ್ನಲಾಗಿದೆ.
ಇಲ್ಲಿನ ಎಟಿಎಂ ಕೇಂದ್ರಗಳು ಬಹುತೇಕ ನಿಷ್ಕ್ರಿಯಗೊಂಡಿದ್ದು, ಜನರು ಹಣ ಡ್ರಾ ಮಾಡಲು ಬ್ಯಾಂಕ್ಗಳ ಮುಂದೆ ನೂಕು ನುಗ್ಗಲಾಗಿ ನಿಂತು, ಸಾಮಾಜಿಕ ಅಂತರವನ್ನೇ ಮರೆತು ಕೊರೊನಾ ಕೊಂಡೊಯ್ಯವ ಮಧ್ಯವರ್ತಿಗಳ ರೀತಿಯಲ್ಲಿ ವರ್ತಿಸುತ್ತಿದ್ದಾರೆ.
12 ಗಂಟೆಯ ನಂತರ ಎಲ್ಲಾ ಅಂಗಡಿಗಳು ಮುಚ್ಚಿದ್ದರೂ ಸಹ ಕೆಲವು ಕೋಳಿ ಅಂಗಡಿಗಳು ಮುಂದಿನ ಬಾಗಿಲೆಳೆದು, ಒಳಗೆ ವ್ಯಾಪಾರ ನಡೆಸುತ್ತಿರುವುದು ಕಂಡು ಬರುತ್ತಿದೆ.
ಒಟ್ಟಿನಲ್ಲಿ ಕೋಡಂಬಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಈ ಅವ್ಯವಸ್ಥೆಯ ಬಗ್ಗೆ ಹೇಳೋರೂ, ಕೇಳೋರಿಲ್ಲದೆ ಅವರಿಗೆ ಇಷ್ಟ ಬಂದ ರೀತಿಯಲ್ಲಿ ವರ್ತಿಸುತ್ತಿದ್ದಾರೆ.
ಇನ್ನಾದರೂ ಗ್ರಾ.ಪಂ ವ್ಯಾಪ್ತಿಯ ಅಧಿಕಾರಿಗಳು ಮತ್ತು ಅಕ್ಕೂರು ಪೊಲೀಸ್ ಠಾಣೆಯ ಸಿಬ್ಬಂದಿಗಳು ಎಚ್ಚೆತ್ತುಕೊಂಡು, ಇದನ್ನು ನಿಯಂತ್ರಿಸ ಬೇಕಾಗಿದೆ, ಇಲ್ಲದಿದ್ದರೆ ಇಲ್ಲಿ ಕೊರೊನಾ ಮಹಾಸ್ಪೋಟ ವಾಗುವುದಂತೂ ನಿಶ್ಚಿತ.
ಕಳೆದ ವರ್ಷ ಕೋಡಂಬಳ್ಳಿ ವ್ಯಾಪ್ತಿಯ ಶ್ಯಾನುಭೋಗನಹಳ್ಳಿ ಮೊದ ಲ್ಗೊಂಡು ಅತಿ ಹೆಚ್ಚು ಅವಾಂತರವಾಗಿದ್ದನ್ನೂ ಗಮನದಲ್ಲಿಟ್ಟುಕೊಂಡು, ಕೊರೊನಾ ಹೆಚ್ಚು ಆಕ್ರಮಿಸಿಕೊಳ್ಳುವ ಮುನ್ನವೇ ತಾಲ್ಲೂಕು ಆಡಳಿತವು ಎಚ್ಚೆತ್ತುಕೊಳ್ಳಬೇಕಾಗಿದೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in corona »
ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ
ರಾಮನಗರ ಜಿಲ್ಲೆಯಲ್ಲಿ ಕಳೆದ ಏಳು ತಿಂಗಳ ನಂತರ ಇದೇ ಮೊದಲ ಬಾರಿಗೆ ಕೊರೋನಾ ಕಾಣಿಸಿಕೊಂಡಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬಿಡದಿ ಬಳಿಯ ಬೈರಮಂಗಲ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ
ಸೆ.17 ರಂದು ತಪ್ಪದೇ ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ
ರಾಮನಗರ.ಸೆ 17: ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, 318 ಲಸಿಕಾ ತಂಡವನ್ನು ರಚಿಸಲಾಗಿದೆ. ತಂಡಗಳು
ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ
ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಮೇಳವನ್ನು ಹಮ್ನಿಕೊಳ್ಳಲಾಗಿದ್ದು, 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರ
ಸೆಪ್ಟೆಂಬರ್ 8 ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ
ರಾಮನಗರ ,ಸೆ.7; ಕೋವಿಡ್-19 ಲಸಿಕಾಕರಣದ ಪ್ರಗತಿ ವೃದ್ದಿಯ ಉಪಕ್ರಮವಾಗಿ ಸೆಪ್ಟೆಂಬರ್ 8 ರಂದು ಜಿಲ್ಲೆಯಾದ್ಯಂತ ಕೋವಿಡ್-19 ಲಸಿಕಾ
ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ
ಜಿಲ್ಲಾ ಆಸ್ಪತ್ರೆ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಕೋವಿಡ್ ಮೂರನೇ ಅಲೆ ಎದುರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋ
ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ
ಚನ್ನಪಟ್ಟಣ.ಜು.12: ತಾಲ್ಲೂಕಿನಾದ್ಯಂತ ಇರುವ ಸಂಘಟಿತ ಮತ್ತು ಅಸಂಘಟಿತ ಕಟ್ಟಡ ಕಾರ್ಮಿಕರಿಗೆ ಇಲಾಖೆ ವತಿಯಿಂದ ದಿನಸಿ ಕಿಟ್ ನೀಡಲಾಗುತ್ತಿದ್ದು, ತಾಲ್ಲೂಕಿನಲ್ಲಿ ಮಂತ್ರಿ ಮತ್ತು ಶಾಸಕರ ನೇತೃತ್
ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ
ಕೊರೊನಾ ದಿಂದ ಜನಸಾಮಾನ್ಯರ ಬದುಕು ಅಧ:ಪತನಕ್ಕಿಳಿದಿರುವುದು ಸತ್ಯ. ಇದಕ್ಕಾಗಿ, ಪಕ್ಷಗಳು, ಸಂಘಸಂಸ್ಥೆಗಳು ಮತ್ತು ಉಳ್ಳವರನೇಕರು ಬಡಬಗ್ಗರಿಗೆ ದಿನಸಿ ಕಿಟ್ ನೀಡುತ್ತಿರುವುದು ಶ್ಲಾಘನೀಯವಾದರೂ ಕೋವಿಡ್
ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ
ರಾಮನಗರ: ವಾರಾಂತ್ಯದ ಕರ್ಫ್ಯೂ ಗೆ ಕಳೆದ ವಾರದಂತೆ ಈ ವಾರವೂ ಸಹ ಬದಲಾವಣೆಗಳೊಂದಿಗೆ ಮಾರ್ಪಡಿಸಿದ್ದು, ಶನಿವಾರ ಮತ್ತು ಭಾನುವಾರ ಎರಡೂ ದಿನಗಳಲ್ಲಿ
ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ
ಸಂಭವನೀಯ ಕೋವಿಡ್ 3 ನೇ ಅಲೆಯ ಸಂದರ್ಭದಲ್ಲಿ ಯಾವುದೇ ಮಕ್ಕಳಿಗೆ ತೊಂದರೆಯಾಗದಂತೆ ಹಾಗೂ ತುರ್ತು ಚಿಕಿತ್ಸೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ
115 ನೇ ದಿನಕ್ಕೆ ಕಾಲಿಟ್ಟ ಇರುಳಿಗರ ಪ್ರತಿಭಟನೆ
ರಾಮನಗರ: ಕೈಲಾಂಚ ಹೋಬಳಿಯ ವಡ್ಡರಹಳ್ಳಿ ಗೊಲ್ಲರದೊಡ್ಡಿ ಗ್ರಾಮದ ಇರುಳಿಗ ಜನಾಂಗದವರು ಹಂದಿಗೊಂದಿ ಅರಣ್ಯ
ಪ್ರದೇಶದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಕೋವಿಡ್ ಎರಡನೇ ಅಲೆ ಹೆ
ಪ್ರತಿಕ್ರಿಯೆಗಳು