Tel: 7676775624 | Mail: info@yellowandred.in

Language: EN KAN

    Follow us :


ವಾರದೊಳಗೆ ರಾಮನಗರದಲ್ಲಿ 240 ಆಕ್ಸಿಜನ್‌ ಬೆಡ್;‌ ಜಿಲ್ಲೆಯಲ್ಲಿ 62 ಕೋವಿಡ್‌ ಕೇರ್‌ ಸೆಂಟರ್‌ಗಳ ಆರಂಭ: ಡಾ.ಸಿ.ಎನ್.‌ಅಶ್ವತ್ಥನಾರಾಯಣ

Posted date: 07 May, 2021

Powered by:     Yellow and Red

ವಾರದೊಳಗೆ ರಾಮನಗರದಲ್ಲಿ 240 ಆಕ್ಸಿಜನ್‌ ಬೆಡ್;‌ ಜಿಲ್ಲೆಯಲ್ಲಿ 62 ಕೋವಿಡ್‌ ಕೇರ್‌ ಸೆಂಟರ್‌ಗಳ ಆರಂಭ: ಡಾ.ಸಿ.ಎನ್.‌ಅಶ್ವತ್ಥನಾರಾಯಣ

ಬೆಂಗಳೂರು: ಮುಂದಿನ ಒಂದು ವಾರದೊಳಗೆ ರಾಮನಗರ ಜಿಲ್ಲಾ ಕೇಂದ್ರದಲ್ಲಿ 240 ಆಕ್ಸಿಜನ್‌ ಬೆಡ್‌ಗಳ ವ್ಯವಸ್ಥೆ ಮಾಡಲಾಗುವುದು ಹಾಗೂ ಜಿಲ್ಲೆಯ ಒಟ್ಟು 62 ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ತಲಾ ಒಂದೊಂದು ಕೋವಿಡ್‌ ಕೇರ್‌ ಸೆಂಟರ್‌ ತೆರೆಯಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ತಿಳಿಸಿದರು. 


*ಬೆಂಗಳೂರಿನಲ್ಲಿ ಶುಕ್ರವಾರ ಸಂಸದ ಡಿ.ಕೆ.ಸುರೇಶ್‌ ಹಾಗೂ ಜಿಲ್ಲೆಯ ಉನ್ನತ ಅಧಿಕಾರಿಗಳ ಜತೆ ವರ್ಚುಯಲ್‌ ಸಭೆ ನಡೆಸಿದ ಡಿಸಿಎಂ;* ರಾಮನಗರದ ಹೊಸ ಜಿಲ್ಲಾಸ್ಪತ್ರೆಯಲ್ಲಿ 120 ಹಾಗೂ ಕಂದಾಯ ಭವನದಲ್ಲಿ 120 ಆಕ್ಸಿಜನ್‌ ಬೆಡ್‌ಗಳ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು. 


ಸದ್ಯಕ್ಕೆ ಜಿಲ್ಲೆಯ ಸೋಂಕಿತರ ಸಂಖ್ಯೆಗೆ ಹೋಲಿಸಿದರೆ ಆಕ್ಸಿಜನ್‌ ಬೆಡ್‌ಗಳ ಸಮಸ್ಯೆ ಇಲ್ಲ. ಆದರೂ ಮುನ್ನೆಚ್ಚರಿಕೆಯಿಂದ ಇಷ್ಟು ಹೊಸ ಬೆಡ್‌ಗಳನ್ನು ಹಾಕಲಾಗುತ್ತಿದೆ. ಅದೇ ರೀತಿ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿರುವ ಶಾಲೆ-ಹಾಸ್ಟೆಲ್‌ಗಳಲ್ಲಿ ಕೋವಿಡ್‌ ಕೇರ್‌ ಸೆಂಟರ್‌ಗಳನ್ನು ತೆರೆಯಲಾಗುತ್ತಿದೆ. ಈಗಿನ ಅಂಕಿ-ಅಂಶಗಳ ಪ್ರಕಾರ ಜಿಲ್ಲೆಯಲ್ಲಿ ಒಟ್ಟು 2,800 ಸೋಂಕಿತರು ಮನೆಗಳಲ್ಲೇ ಕ್ವಾರಂಟೈನ್‌ ಆಗಿ ಚಿಕಿತ್ಸೆ ಪಡೆಯುತ್ತಿದ್ದು, ಅವರೆಲ್ಲರನ್ನೂ ಕೋವಿಡ್‌ ಕೇರ್‌ ಸೆಂಟರ್‌ಗಳಿಗೆ ಶಿಫ್ಟ್‌ ಮಾಡಲಾಗುವುದು ಎಂದು ಡಿಸಿಎಂ ಸಭೆಗೆ ತಿಳಿಸಿದರು. 


*ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್‌ ವ್ಯವಸ್ಥೆ:*


ಜಿಲ್ಲಾಸ್ಪತ್ರೆಯಲ್ಲಿ ನಿಮಿಷಕ್ಕೆ 1,000 ಕೆಎಲ್‌ ಆಮ್ಲಜನಕ ಪೂರೈಕೆ ಮಾಡುವ ಘಟಕವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನೆರವಿನಿಂದ ಸ್ಥಾಪನೆ ಮಾಡಲಾಗುತ್ತಿದೆ. ಪ್ರಾಧಿಕಾರವು 1.08 ಕೋಟಿ ರೂ. ನೆರವು ನೀಡುತ್ತಿದೆ. ಜತೆಗೆ, ಕನಕಪುರ, ಮಾಗಡಿ, ಚನ್ನಪಟ್ಟಣ ತಾಲೂಕು ಆಸ್ಪತ್ರೆಗಳಲ್ಲಿ 500 ಎಲ್‌ಎಂಪಿ ಆಕ್ಸಿಜನ್ ಪೂರೈಕೆ ಘಟಕಗಳನ್ನು ಸ್ಥಾಪಿಸಲಾಗುತ್ತಿದೆ. ಇವೆಲ್ಲ ಅತಿ ತ್ವರಿತವಾಗಿ ಕಾರ್ಯಗತವಾಗುತ್ತವೆ ಎಂದು ಡಾ.ಅಶ್ವತ್ಥನಾರಾಯಣ ಹೇಳಿದರು. 


ಇನ್ನು, ಗಂಭೀರ ಸೋಂಕಿತರ ಪರೀಕ್ಷೆಗೆ ಸಿಟಿ ಸ್ಕ್ಯಾನ್‌ ಮಾಡಲು ಖಾಸಗಿ ಆಸ್ಪತ್ರೆಗಳ ಜತೆ ಒಪ್ಪಂದ ಮಾಡಿಕೊಳ್ಳಲಾಗುತ್ತಿದೆ. ಜತೆಗೆ, ಜಿಲ್ಲಾಸ್ಪತ್ರೆಯಲ್ಲಿ ಟೊಯೋಟಾ ಕಿರ್ಲೋಸ್ಕರ್‌ ಕಂಪನಿ ನೆರವಿನಿಂದ ಸಿಟಿ ಸ್ಕ್ಯಾನ್‌ ಯಂತ್ರವನ್ನು ಸ್ಥಾಪಿಸಲಾಗುವುದು ಎಂದರು.


ವರ್ಚಯಲ್‌ ಸಭೆಯಲ್ಲಿ ಸಂಸದ ಡಿ.ಕೆ.ಸುರೇಶ್‌ ಅವರೊಂದಿಗೆ ವಿಧಾನ ಪರಿಷತ್‌ ಸದಸ್ಯ ಅ.ದೇವೇಗೌಡ, ಜಿಲ್ಲಾಧಿಕಾರಿ ರಾಕೇಶ್‌ಕುಮಾರ್, ಪೊಲೀಸ್‌ ವರಿಷ್ಠಾಧಿಕಾರಿ ಗಿರೀಶ್‌, ಡಿಎಚ್ಓ ಡಾ.ನಿರಂಜನ ಮುಂತಾದ ಹಿರಿಯ ಅಧಿಕಾರಿಗಳು ಇದ್ದರು.

ಉಪ ಮುಖ್ಯಮಂತ್ರಿಯವರ ಆಪ್ತ ಕಾರ್ಯದರ್ಶಿಯೂ ಆದ ಹಿರಿಯ ಕೆಎಎಸ್ ಅಧಿಕಾರಿ ಸತೀಶ ಕುಮಾರ್ ಅವರನ್ನು ರಾಮನಗರ ಜಿಲ್ಲೆಯ ಕೋವಿಡ್ ನೋಡಲ್ ಅಧಿಕಾರಿಯನ್ನಾಗಿ ಮಾಡಿದ್ದು ಅವರು ಕೂಡ ಸಭೆಯಲ್ಲಿ ಹಾಜರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in corona »

ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ
ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ

ರಾಮನಗರ ಜಿಲ್ಲೆಯಲ್ಲಿ ಕಳೆದ ಏಳು ತಿಂಗಳ ನಂತರ ಇದೇ ಮೊದಲ ಬಾರಿಗೆ ಕೊರೋನಾ ಕಾಣಿಸಿಕೊಂಡಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬಿಡದಿ ಬಳಿಯ ಬೈರಮಂಗಲ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ‌

ಸೆ.17 ರಂದು ತಪ್ಪದೇ  ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ
ಸೆ.17 ರಂದು ತಪ್ಪದೇ ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ

ರಾಮನಗರ.ಸೆ 17: ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, 318 ಲಸಿಕಾ ತಂಡವನ್ನು ರಚಿಸಲಾಗಿದೆ. ತಂಡಗಳು

ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ
ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ

ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಮೇಳವನ್ನು ಹಮ್ನಿಕೊಳ್ಳಲಾಗಿದ್ದು, 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರ

ಸೆಪ್ಟೆಂಬರ್ 8  ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ
ಸೆಪ್ಟೆಂಬರ್ 8 ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ

ರಾಮನಗರ ,ಸೆ.7; ಕೋವಿಡ್-19 ಲಸಿಕಾಕರಣದ ಪ್ರಗತಿ ವೃದ್ದಿಯ ಉಪಕ್ರಮವಾಗಿ ಸೆಪ್ಟೆಂಬರ್ 8 ರಂದು  ಜಿಲ್ಲೆಯಾದ್ಯಂತ  ಕೋವಿಡ್-19 ಲಸಿಕಾ

ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ
ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ

ಜಿಲ್ಲಾ ಆಸ್ಪತ್ರೆ ಹಾಗೂ ತಾಲ್ಲೂಕು  ಆಸ್ಪತ್ರೆಗಳಲ್ಲಿ ಕೋವಿಡ್ ಮೂರನೇ ಅಲೆ ಎದುರಿಸಲು ಸಕಲ ಸಿದ್ಧತೆ  ಮಾಡಿಕೊಳ್ಳಿ ಎಂದು ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋ

ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ
ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ

ಚನ್ನಪಟ್ಟಣ.ಜು.12: ತಾಲ್ಲೂಕಿನಾದ್ಯಂತ ಇರುವ ಸಂಘಟಿತ ಮತ್ತು ಅಸಂಘಟಿತ  ಕಟ್ಟಡ ಕಾರ್ಮಿಕರಿಗೆ ಇಲಾಖೆ ವತಿಯಿಂದ ದಿನಸಿ ಕಿಟ್ ನೀಡಲಾಗುತ್ತಿದ್ದು, ತಾಲ್ಲೂಕಿನಲ್ಲಿ ಮಂತ್ರಿ ಮತ್ತು ಶಾಸಕರ ನೇತೃತ್

ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ
ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ

ಕೊರೊನಾ ದಿಂದ ಜನಸಾಮಾನ್ಯರ ಬದುಕು ಅಧ:ಪತನಕ್ಕಿಳಿದಿರುವುದು ಸತ್ಯ. ಇದಕ್ಕಾಗಿ, ಪಕ್ಷಗಳು, ಸಂಘಸಂಸ್ಥೆಗಳು ಮತ್ತು ಉಳ್ಳವರನೇಕರು ಬಡಬಗ್ಗರಿಗೆ ದಿನಸಿ ಕಿಟ್ ನೀಡುತ್ತಿರುವುದು ಶ್ಲಾಘನೀಯವಾದರೂ ಕೋವಿಡ್

ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ
ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ

ರಾಮನಗರ: ವಾರಾಂತ್ಯದ ಕರ್ಫ್ಯೂ ಗೆ ಕಳೆದ ವಾರದಂತೆ ಈ ವಾರವೂ ಸಹ ಬದಲಾವಣೆಗಳೊಂದಿಗೆ ಮಾರ್ಪಡಿಸಿದ್ದು, ಶನಿವಾರ ಮತ್ತು ಭಾನುವಾರ ಎರಡೂ ದಿನಗಳಲ್ಲಿ

ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ
ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ

ಸಂಭವನೀಯ ಕೋವಿಡ್ 3 ನೇ ಅಲೆಯ ಸಂದರ್ಭದಲ್ಲಿ ಯಾವುದೇ ಮಕ್ಕಳಿಗೆ ತೊಂದರೆಯಾಗದಂತೆ ಹಾಗೂ ತುರ್ತು ಚಿಕಿತ್ಸೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು  ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ

115 ನೇ ದಿನಕ್ಕೆ ಕಾಲಿಟ್ಟ  ಇರುಳಿಗರ ಪ್ರತಿಭಟನೆ
115 ನೇ ದಿನಕ್ಕೆ ಕಾಲಿಟ್ಟ ಇರುಳಿಗರ ಪ್ರತಿಭಟನೆ

ರಾಮನಗರ: ಕೈಲಾಂಚ ಹೋಬಳಿಯ ವಡ್ಡರಹಳ್ಳಿ ಗೊಲ್ಲರದೊಡ್ಡಿ ಗ್ರಾಮದ ಇರುಳಿಗ ಜನಾಂಗದವರು ಹಂದಿಗೊಂದಿ ಅರಣ್ಯ 

ಪ್ರದೇಶದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಕೋವಿಡ್ ಎರಡನೇ ಅಲೆ ಹೆ

Top Stories »  


Top ↑