Tel: 7676775624 | Mail: info@yellowandred.in

Language: EN KAN

    Follow us :


ಅಂಗನವಾಡಿ ಕಾರ್ಯಕರ್ತೆಯರಿಗೆ ಕೋವಿಡ್-19 ರ ವಿರುದ್ಧ ರಕ್ಷಣಾ ಸಾಮಾಗ್ರಿಗಳ ವಿತರಣೆ ಮಾಡಿದ ಡಿಸಿಎಂ

Posted date: 19 May, 2021

Powered by:     Yellow and Red

ಅಂಗನವಾಡಿ ಕಾರ್ಯಕರ್ತೆಯರಿಗೆ ಕೋವಿಡ್-19 ರ ವಿರುದ್ಧ ರಕ್ಷಣಾ ಸಾಮಾಗ್ರಿಗಳ ವಿತರಣೆ ಮಾಡಿದ ಡಿಸಿಎಂ

ರಾಮನಗರ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಕೊರೊನಾ ವಿರುದ್ಧ ರಕ್ಷಣಾ ಸಾಮಾಗ್ರಿಗಳನ್ನು ಸಾಂಕೇತಿಕವಾಗಿ ಉಪಮುಖ್ಯಮಂತ್ರಿ (ಉನ್ನತ ಶಿಕ್ಷಣ,ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜಿವನೋಪಾಯ ಇಲಾಖೆ, ವಿದ್ಯುನ್ಮಾಮ, ಐಟಿ ಮತ್ತು ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ) ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಸಿ.ಎನ್. ಅಶ್ವಥ್ ನಾರಾಯಣ ಅವರು ವಿತರಿಸಿದರು.


ಅವರು ಇಂದು ಹೊಸ ಜಿಲ್ಲಾಸ್ಪತ್ರೆಯ ಕಾಮಗಾರಿಯ ಪರಿಶೀಲನೆ ವೇಳೆ ರಕ್ಷಣಾ ಸಾಮಗ್ರಿಗಳನ್ನು ವಿತರಿಸಿದರು‌.

ರಾಮನಗರ ಜಿಲ್ಲೆಯಲ್ಲಿ 1,543 ಅಂಗನವಾಡಿ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿದ್ದು, ಇವುಗಳಲ್ಲಿ 1,301 ಮುಖ್ಯ ಅಂಗನವಾಡಿ ಕೇಂದ್ರಗಳಿವೆ. ಅದರಲ್ಲಿ ಒಬ್ಬರು ಕಾರ್ಯಕರ್ತೆ ಮತ್ತು ಒಬ್ಬ ಸಹಾಯಕಿ ಕಾರ್ಯನಿರ್ವಹಿಸುತ್ತಿದ್ದಾರೆ.  242 ಮಿನಿ ಅಂಗನವಾಡಿ ಕೇಂದ್ರಗಳಿದ್ದು ಅದರಲ್ಲಿ ಒಬ್ಬರು ಅಂಗನವಾಡಿ ಕಾರ್ಯಕರ್ತೆ ಮಾತ್ರ ಕೆಲಸ ನಿರ್ವಹಿಸುತ್ತಿದ್ದು. ಇವರುಗಳಿಗೆ ಸ್ಯಾನಿಟೈಸರ್, ಎನ್ 95 ಮಾಸ್ಕ್, ಫೇಸ್ ಶೀಲ್ಡ್, ಮತ್ತು ಹ್ಯಾಂಡ್ ಗ್ಲೋವ್ಸ್ ಗಳನ್ನು ಸಾಂಕೇತಿಕವಾಗಿ ನೀಡಿದರು.. 


ಪ್ರತಿ ಅಂಗನವಾಡಿ ಕೇಂದ್ರಕ್ಕೆ 500 ಎಂ.ಎಲ್ ನಂತೆ ಒಟ್ಟು 7,715  ಸ್ಯಾನಿಟೈಸರ್ ಬಾಟಲ್,  ಪ್ರತಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ 2 ರಂತೆ ಒಟ್ಟು 5,688 ಎನ್ 95 ಮಾಸ್ಕ್, ಪ್ರತಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ತಲಾ 20 ರಂತೆ ಒಟ್ಟು 42,660 ಸರ್ಜಿಕಲ್ ಮಾಸ್ಕ್, ಪ್ರತಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ತಲಾ ಒಂದರಂತೆ ಒಟ್ಟು 2,844 ಸೇಫ್ ಶೀಲ್ಡ್ ಹಾಗೂ ಪ್ರತಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಒಂದು ಜೊತೆಯಂತೆ ಒಟ್ಟು 2,844 ಹ್ಯಾಂಡ್ ಗ್ಲೋವ್ಸ್  ಗಳನ್ನು ಜಿಲ್ಲೆಯಲ್ಲಿ ವಿತರಿಸಲಾಗಿದೆ.


ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಇಕ್ರಂ, ಅಪರ ಜಿಲ್ಲಾಧಿಕಾರಿ ಜವರೇಗೌಡ ಟಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ: ನಿರಂಜನ್,  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಮನ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in corona »

ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ
ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ

ರಾಮನಗರ ಜಿಲ್ಲೆಯಲ್ಲಿ ಕಳೆದ ಏಳು ತಿಂಗಳ ನಂತರ ಇದೇ ಮೊದಲ ಬಾರಿಗೆ ಕೊರೋನಾ ಕಾಣಿಸಿಕೊಂಡಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬಿಡದಿ ಬಳಿಯ ಬೈರಮಂಗಲ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ‌

ಸೆ.17 ರಂದು ತಪ್ಪದೇ  ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ
ಸೆ.17 ರಂದು ತಪ್ಪದೇ ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ

ರಾಮನಗರ.ಸೆ 17: ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, 318 ಲಸಿಕಾ ತಂಡವನ್ನು ರಚಿಸಲಾಗಿದೆ. ತಂಡಗಳು

ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ
ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ

ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಮೇಳವನ್ನು ಹಮ್ನಿಕೊಳ್ಳಲಾಗಿದ್ದು, 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರ

ಸೆಪ್ಟೆಂಬರ್ 8  ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ
ಸೆಪ್ಟೆಂಬರ್ 8 ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ

ರಾಮನಗರ ,ಸೆ.7; ಕೋವಿಡ್-19 ಲಸಿಕಾಕರಣದ ಪ್ರಗತಿ ವೃದ್ದಿಯ ಉಪಕ್ರಮವಾಗಿ ಸೆಪ್ಟೆಂಬರ್ 8 ರಂದು  ಜಿಲ್ಲೆಯಾದ್ಯಂತ  ಕೋವಿಡ್-19 ಲಸಿಕಾ

ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ
ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ

ಜಿಲ್ಲಾ ಆಸ್ಪತ್ರೆ ಹಾಗೂ ತಾಲ್ಲೂಕು  ಆಸ್ಪತ್ರೆಗಳಲ್ಲಿ ಕೋವಿಡ್ ಮೂರನೇ ಅಲೆ ಎದುರಿಸಲು ಸಕಲ ಸಿದ್ಧತೆ  ಮಾಡಿಕೊಳ್ಳಿ ಎಂದು ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋ

ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ
ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ

ಚನ್ನಪಟ್ಟಣ.ಜು.12: ತಾಲ್ಲೂಕಿನಾದ್ಯಂತ ಇರುವ ಸಂಘಟಿತ ಮತ್ತು ಅಸಂಘಟಿತ  ಕಟ್ಟಡ ಕಾರ್ಮಿಕರಿಗೆ ಇಲಾಖೆ ವತಿಯಿಂದ ದಿನಸಿ ಕಿಟ್ ನೀಡಲಾಗುತ್ತಿದ್ದು, ತಾಲ್ಲೂಕಿನಲ್ಲಿ ಮಂತ್ರಿ ಮತ್ತು ಶಾಸಕರ ನೇತೃತ್

ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ
ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ

ಕೊರೊನಾ ದಿಂದ ಜನಸಾಮಾನ್ಯರ ಬದುಕು ಅಧ:ಪತನಕ್ಕಿಳಿದಿರುವುದು ಸತ್ಯ. ಇದಕ್ಕಾಗಿ, ಪಕ್ಷಗಳು, ಸಂಘಸಂಸ್ಥೆಗಳು ಮತ್ತು ಉಳ್ಳವರನೇಕರು ಬಡಬಗ್ಗರಿಗೆ ದಿನಸಿ ಕಿಟ್ ನೀಡುತ್ತಿರುವುದು ಶ್ಲಾಘನೀಯವಾದರೂ ಕೋವಿಡ್

ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ
ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ

ರಾಮನಗರ: ವಾರಾಂತ್ಯದ ಕರ್ಫ್ಯೂ ಗೆ ಕಳೆದ ವಾರದಂತೆ ಈ ವಾರವೂ ಸಹ ಬದಲಾವಣೆಗಳೊಂದಿಗೆ ಮಾರ್ಪಡಿಸಿದ್ದು, ಶನಿವಾರ ಮತ್ತು ಭಾನುವಾರ ಎರಡೂ ದಿನಗಳಲ್ಲಿ

ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ
ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ

ಸಂಭವನೀಯ ಕೋವಿಡ್ 3 ನೇ ಅಲೆಯ ಸಂದರ್ಭದಲ್ಲಿ ಯಾವುದೇ ಮಕ್ಕಳಿಗೆ ತೊಂದರೆಯಾಗದಂತೆ ಹಾಗೂ ತುರ್ತು ಚಿಕಿತ್ಸೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು  ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ

115 ನೇ ದಿನಕ್ಕೆ ಕಾಲಿಟ್ಟ  ಇರುಳಿಗರ ಪ್ರತಿಭಟನೆ
115 ನೇ ದಿನಕ್ಕೆ ಕಾಲಿಟ್ಟ ಇರುಳಿಗರ ಪ್ರತಿಭಟನೆ

ರಾಮನಗರ: ಕೈಲಾಂಚ ಹೋಬಳಿಯ ವಡ್ಡರಹಳ್ಳಿ ಗೊಲ್ಲರದೊಡ್ಡಿ ಗ್ರಾಮದ ಇರುಳಿಗ ಜನಾಂಗದವರು ಹಂದಿಗೊಂದಿ ಅರಣ್ಯ 

ಪ್ರದೇಶದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಕೋವಿಡ್ ಎರಡನೇ ಅಲೆ ಹೆ

Top Stories »  


Top ↑