Tel: 7676775624 | Mail: info@yellowandred.in

Language: EN KAN

    Follow us :


ನಮ್ಮ ಗ್ರಾಮ ಕೋವಿಡ್ ಮುಕ್ತವಾಗಬೇಕು ಎಂಬ ಮನೋಭಾವ ಮೂಡಬೇಕು: ಡಾ ಅಶ್ವಥ್ ನಾರಾಯಣ

Posted date: 19 May, 2021

Powered by:     Yellow and Red

ನಮ್ಮ ಗ್ರಾಮ ಕೋವಿಡ್ ಮುಕ್ತವಾಗಬೇಕು ಎಂಬ ಮನೋಭಾವ ಮೂಡಬೇಕು: ಡಾ ಅಶ್ವಥ್ ನಾರಾಯಣ

ನಮ್ಮ ಗ್ರಾಮ ಕೋವಿಡ್ ಮುಕ್ತವಾಗಬೇಕು ಎಂಬ ಮನೋಭಾವ ಪ್ರತಿಯೊಬ್ಬರಲ್ಲೂ ಮೂಡಬೇಕು. ಕೋವಿಡ್ ಸೋಂಕಿನ ಲಕ್ಷಣ ಕಂಡು ಬಂದಲ್ಲಿ ಯಾವುದೇ ಹಿಂಜರಿಕೆ ಇಲ್ಲದೆ ಪರೀಕ್ಷೆ ಮಾಡಿಸಿಕೊಂಡು ಚಿಕಿತ್ಸೆ ಪಡೆದುಕೊಳ್ಳಬೇಕು. ಈ ಮನೋಭಾವ ಮೂಡಿಸುವ ರೀತಿ ಜಾಗೃತಿ ಮೂಡಿಸಲು ಗ್ರಾಮ ಪಂಚಾಯತ್ ಜನಪ್ರತಿನಿಧಿಗಳು ಹಾಗೂ ಆಡಳಿತ ಕೈಜೋಡಿಸಬೇಕು ಎಂದು ಉಪಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ: ಅಶ್ವಥ್ ನಾರಾಯಣ್ ಸಿ.ಎನ್ ಅವರು ತಿಳಿಸಿದರು.


ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದರು. ಗ್ರಾಮಗಳಲ್ಲಿ ಮನೆ ಮನೆ ಸರ್ವೆ ನಡೆಸಿ ಸೋಂಕಿತರನ್ನು ಪರೀಕ್ಷಿಸಿ ಚಿಕಿತ್ಸೆ ನೀಡಿ ಎಂದರು.


ಜಿಲ್ಲೆಯಲ್ಲಿ ಹೋಮ್ ಐಸೊಲೇಷನ್ ನಿಲುಗಡೆ ಮಾಡಿ ಎಲ್ಲರಿಗೂ ಕೋವಿಡ್ ಕೇರ್ ಸೆಂಟರ್  ನಲ್ಲಿ  ಚಿಕಿತ್ಸೆ ನೀಡುವ ಹಿನ್ನಲೆಯಲ್ಲಿ ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತದೆ. ಯಾವುದೇ ಲೋಪವಿಲ್ಲದೆ ಕಾರ್ಯನಿರ್ವಹಣೆಯಾಗಬೇಕು‌ ಕೋವಿಡ್ ಕೇರ್ ಸೆಂಟರ್ ಗೆ ಮಹಿಳೆಯರು ಬರಲು ಹಿಂದೇಟು ಹಾಕುತ್ತಾರೆ. ಅವರಿಗೂ ಸಹ ಸೂಕ್ತ ವ್ಯವಸ್ಥೆ ಇದೆ ಎಂಬ ಮನೋಭಾವ ಅವರಲ್ಲಿ ಮೂಡಬೇಕು ಎಂದರು.


*ಪ್ರತಿ ದಿನ ಉತ್ಸಾಹದಿಂದ ಕೆಲಸ ಮಾಡಿ:*

ಕೋವಿಡ್ ಸೋಂಕು ಹೋಗಲಾಡಿಸಲು ಕಾರ್ಯನಿರ್ವಹಿಸುವ ಅಧಿಕಾರಿಗಳು ಮೈ ಮರೆಯುವಂತಿಲ್ಲ.ಕೋವಿಡ್ ಲಸಿಕೆ ನೀಡುವ ಕೆಲಸ ಸಂಪೂರ್ಣವಾಗಿ ಮುಗಿಯುವವರೆಗೆ  ಪ್ರತಿದಿನ ಉತ್ಸಾಹದಿಂದ ಕಾರ್ಯನಿರ್ವಹಿಸಬೇಕು ಎಂದರು.


*ಮುಂದಿನ ದಿನಕ್ಕೂ ಸಿದ್ಧತೆ:*  ಮೂರನೇ ಅಲೆ ಕೋವಿಡ್ ಚಿಕಿತ್ಸೆಗೆ ಬೇಕಿರುವ ಸಿದ್ಧತೆ ಮಾಡಿಕೊಳ್ಳಬೇಕಿದ್ದು, ಜಿಲ್ಲಾಸ್ಪತ್ರೆಯಲ್ಲಿ 150, ತಾಲ್ಲೂಕು ಆಸ್ಪತ್ರೆಯಲ್ಲಿ 25 ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ 10 ಆಕ್ಸಿಜನೇಟಡ್ ಐಸಿಯು ಬೆಡ್ ಗಳನ್ನು ಸಿದ್ಧತೆ ಮಾಡಿಕೊಳ್ಳಬೇಕಿರುತ್ತದೆ. 


*ಬ್ಲಾಕ್ ಫಂಗಸ್* ಗೆ ಸಂಬಂಧಿಸಿದಂತೆ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ಸರ್ಕಾರದಿಂದ ಉಚಿತ ಚಿಕಿತ್ಸೆ ನೀಡಲಾಗುವುದು. ಜಿಲ್ಲೆಯಲ್ಲಿ ಬ್ಲಾಕ್‌  ಫಂಗಸ್ ಸೋಂಕಿತರು ವರದಿಯಾದಲ್ಲಿ ಚಿಕಿತ್ಸೆ ಕೊಡಿಸಿ ಎಂದರು.


ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರು ಜಿಲ್ಲೆಯಲ್ಲಿ ಗ್ರಾಮ ಪಂಚಾಯತ್ ಗಳಲ್ಲಿ ಆರೋಗ್ಯ ದ ಬಗ್ಗೆ ಸರ್ವೆ ನಡೆಸಲಾಗುತ್ತಿದೆ. ಪ್ರತಿದಿನ ಮೂರರಿಂದ ರಿಂದ ನಾಲ್ಕು ಗ್ರಾಮ ಪಂಚಾಯತ್ ಗಳಲ್ಲಿ  ಆರೋಗ್ಯ ಶಿಬಿರ ನಡೆಸಿ ಗ್ರಾಮಗಳಲ್ಲಿ ಕೋವಿಡ್ ಸೋಂಕಿನ ಲಕ್ಷಣವುಳ್ಳವರು ಕಂಡುಬಂದಲ್ಲಿ‌ ಸ್ಥಳದಲ್ಲೇ ಸ್ವಾಬ್ ಸಂಗ್ರಹಿಸಲಾಗುವುದು. ಆರೋಗ್ಯ ಶಿಬಿರ ನಡೆಸುವ ಬಗ್ಗೆ ಜನರಿಗೆ ಮೊದಲೇ ಸಮಯ ಹಾಗೂ ದಿನಾಂಕ ನೀಡಲಾಗುವುದು. ಹತ್ತು ದಿನದೊಳಗಾಗಿ ಈ ಕೆಲಸ ಪೂರ್ಣಗೊಳಿಸಲು ಯೋಜಿಸಲಾಗುತ್ತಿದೆ ಎಂದರು.  


ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಇಕ್ರಂ, ಅಪರ ಜಿಲ್ಲಾಧಿಕಾರಿ  ಜವರೇಗೌಡ ಟಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ: ನಿರಂಜನ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.,

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in corona »

ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ
ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ

ರಾಮನಗರ ಜಿಲ್ಲೆಯಲ್ಲಿ ಕಳೆದ ಏಳು ತಿಂಗಳ ನಂತರ ಇದೇ ಮೊದಲ ಬಾರಿಗೆ ಕೊರೋನಾ ಕಾಣಿಸಿಕೊಂಡಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬಿಡದಿ ಬಳಿಯ ಬೈರಮಂಗಲ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ‌

ಸೆ.17 ರಂದು ತಪ್ಪದೇ  ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ
ಸೆ.17 ರಂದು ತಪ್ಪದೇ ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ

ರಾಮನಗರ.ಸೆ 17: ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, 318 ಲಸಿಕಾ ತಂಡವನ್ನು ರಚಿಸಲಾಗಿದೆ. ತಂಡಗಳು

ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ
ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ

ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಮೇಳವನ್ನು ಹಮ್ನಿಕೊಳ್ಳಲಾಗಿದ್ದು, 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರ

ಸೆಪ್ಟೆಂಬರ್ 8  ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ
ಸೆಪ್ಟೆಂಬರ್ 8 ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ

ರಾಮನಗರ ,ಸೆ.7; ಕೋವಿಡ್-19 ಲಸಿಕಾಕರಣದ ಪ್ರಗತಿ ವೃದ್ದಿಯ ಉಪಕ್ರಮವಾಗಿ ಸೆಪ್ಟೆಂಬರ್ 8 ರಂದು  ಜಿಲ್ಲೆಯಾದ್ಯಂತ  ಕೋವಿಡ್-19 ಲಸಿಕಾ

ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ
ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ

ಜಿಲ್ಲಾ ಆಸ್ಪತ್ರೆ ಹಾಗೂ ತಾಲ್ಲೂಕು  ಆಸ್ಪತ್ರೆಗಳಲ್ಲಿ ಕೋವಿಡ್ ಮೂರನೇ ಅಲೆ ಎದುರಿಸಲು ಸಕಲ ಸಿದ್ಧತೆ  ಮಾಡಿಕೊಳ್ಳಿ ಎಂದು ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋ

ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ
ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ

ಚನ್ನಪಟ್ಟಣ.ಜು.12: ತಾಲ್ಲೂಕಿನಾದ್ಯಂತ ಇರುವ ಸಂಘಟಿತ ಮತ್ತು ಅಸಂಘಟಿತ  ಕಟ್ಟಡ ಕಾರ್ಮಿಕರಿಗೆ ಇಲಾಖೆ ವತಿಯಿಂದ ದಿನಸಿ ಕಿಟ್ ನೀಡಲಾಗುತ್ತಿದ್ದು, ತಾಲ್ಲೂಕಿನಲ್ಲಿ ಮಂತ್ರಿ ಮತ್ತು ಶಾಸಕರ ನೇತೃತ್

ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ
ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ

ಕೊರೊನಾ ದಿಂದ ಜನಸಾಮಾನ್ಯರ ಬದುಕು ಅಧ:ಪತನಕ್ಕಿಳಿದಿರುವುದು ಸತ್ಯ. ಇದಕ್ಕಾಗಿ, ಪಕ್ಷಗಳು, ಸಂಘಸಂಸ್ಥೆಗಳು ಮತ್ತು ಉಳ್ಳವರನೇಕರು ಬಡಬಗ್ಗರಿಗೆ ದಿನಸಿ ಕಿಟ್ ನೀಡುತ್ತಿರುವುದು ಶ್ಲಾಘನೀಯವಾದರೂ ಕೋವಿಡ್

ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ
ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ

ರಾಮನಗರ: ವಾರಾಂತ್ಯದ ಕರ್ಫ್ಯೂ ಗೆ ಕಳೆದ ವಾರದಂತೆ ಈ ವಾರವೂ ಸಹ ಬದಲಾವಣೆಗಳೊಂದಿಗೆ ಮಾರ್ಪಡಿಸಿದ್ದು, ಶನಿವಾರ ಮತ್ತು ಭಾನುವಾರ ಎರಡೂ ದಿನಗಳಲ್ಲಿ

ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ
ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ

ಸಂಭವನೀಯ ಕೋವಿಡ್ 3 ನೇ ಅಲೆಯ ಸಂದರ್ಭದಲ್ಲಿ ಯಾವುದೇ ಮಕ್ಕಳಿಗೆ ತೊಂದರೆಯಾಗದಂತೆ ಹಾಗೂ ತುರ್ತು ಚಿಕಿತ್ಸೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು  ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ

115 ನೇ ದಿನಕ್ಕೆ ಕಾಲಿಟ್ಟ  ಇರುಳಿಗರ ಪ್ರತಿಭಟನೆ
115 ನೇ ದಿನಕ್ಕೆ ಕಾಲಿಟ್ಟ ಇರುಳಿಗರ ಪ್ರತಿಭಟನೆ

ರಾಮನಗರ: ಕೈಲಾಂಚ ಹೋಬಳಿಯ ವಡ್ಡರಹಳ್ಳಿ ಗೊಲ್ಲರದೊಡ್ಡಿ ಗ್ರಾಮದ ಇರುಳಿಗ ಜನಾಂಗದವರು ಹಂದಿಗೊಂದಿ ಅರಣ್ಯ 

ಪ್ರದೇಶದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಕೋವಿಡ್ ಎರಡನೇ ಅಲೆ ಹೆ

Top Stories »  


Top ↑