Tel: 7676775624 | Mail: info@yellowandred.in

Language: EN KAN

    Follow us :


ರಾಮನಗರಕ್ಕೆ ಕೂಡಲೇ ಎರಡು ಆಂಬುಲೆನ್ಸ್‌ ಒದಗಿಸುವ ಭರವಸೆ ನೀಡಿದ ಎಚ್‌ಡಿಕೆ

Posted date: 23 May, 2021

Powered by:     Yellow and Red

ರಾಮನಗರಕ್ಕೆ ಕೂಡಲೇ ಎರಡು ಆಂಬುಲೆನ್ಸ್‌ ಒದಗಿಸುವ ಭರವಸೆ ನೀಡಿದ ಎಚ್‌ಡಿಕೆ

ರಾಮನಗರ: ರಾಮನಗರ ಜಿಲ್ಲೆಯ ಕೋವಿಡ್‌ ಸ್ಥಿತಿಗತಿಗಳ ಕುರಿತು ತಹಶೀಲ್ದಾರ್‌ಗಳೊಂದಿಗೆ ಮಾಜಿ ಮುಖ್ಯಮಂತ್ರಿ, ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ ಕುಮಾರಸ್ವಾಮಿ ಶನಿವಾರ ವರ್ಚುವಲ್‌ ಸಭೆ ನಡೆಸಿ ಸಲಹೆಸೂಚನೆ ನೀಡಿ ಜಿಲ್ಲೆಯ ಕೋವಿಡ್ ಮಾಹಿತಿ ಪಡೆದರು.


ರಾಮನಗರ ಶಾಸಕಿ ಅನಿತಾ ಕುಮಾರಸ್ವಾಮಿ, ಮಾಗಡಿ ಶಾಸಕ ಎ. ಮಂಜು, ರಾಮನಗರ ಜಿಲ್ಲೆಯ ನಾಲ್ಕು ತಾಲೂಕುಗಳ ತಹಶೀಲ್ದಾರ್‌ಗಳು ವರ್ಚುವಲ್‌ ಸಭೆಯಲ್ಲಿ ಭಾಗವಹಿಸಿದರು. ತಹಶೀಲ್ದಾರ್‌ಗಳ ಜೊತೆಯಲ್ಲಿ ಕುಮಾರಸ್ವಾಮಿ ಮಾತುಕತೆ ನಡೆಸಿದರು. ಶಾಸಕರೂ ತಮ್ಮ ಕ್ಷೇತ್ರಗಳ ಸ್ಥಿತಿಗತಿಗಳ ಕುರಿತು ಮಾಹಿತಿ ಪಡೆದರು. 


ಸಮರ್ಪಕ ಪರೀಕ್ಷೆ, ಸೂಕ್ತ ಚಿಕಿತ್ಸೆ, ಆಸ್ಪತ್ರೆಗಳಲ್ಲಿ ಶುಚಿತ್ವ ಕಾಪಾಡುವಂತೆ ಕುಮಾರಸ್ವಾಮಿ ಸಲಹೆ ನೀಡಿದರು. ಆರೈಕೆ ಕೇಂದ್ರಗಳಲ್ಲಿ ಆಹಾರಕ್ಕೆ ಯಾವುದೇ ತೊಂದರೆಯಾಗದಂತೆ ಗಮನಹರಿಸುವಂತೆ ಸೂಚಿಸಿದರು. 


*ರಾಮನಗರ ಕ್ಷೇತ್ರಕ್ಕೆ ಎರಡು ಆಂಬ್ಯುಲೆನ್ಸ್‌*

ರಾಮನಗರದಲ್ಲಿ ಆಂಬ್ಯುಲೆನ್ಸ್‌ ಕೊರತೆ ಇರುವುದಾಗಿ ತಹಶೀಲ್ದಾರ್‌ ಹೇಳಿದರು. ಸೋಮವಾರದ ಒಳಗಾಗಿ ಆಂಬ್ಯುಲೆನ್ಸ್‌ ಒದಗಿಸುವುದಾಗಿ ಕುಮಾರಸ್ವಾಮಿ ಕ್ಷಣದಲ್ಲೇ ತಿಳಿಸಿದರು. ತಕ್ಷಣಕ್ಕೆ ಒಂದು ಆಂಬ್ಯುಲೆನ್ಸ್‌ನ ಅಗತ್ಯವಿರುವುದಾಗಿ ತಹಶೀಲ್ದಾರ್‌ ಹೇಳಿದರು. ಎರಡು ಆಂಬ್ಯುಲೆನ್ಸ್‌ಗಳನ್ನು ನೀಡುವುದಾಗಿ ಎಚ್‌ಡಿಕೆ ತಿಳಿಸಿದರು. 


*ಬ್ಲಾಕ್‌ ಫಂಗಸ್‌ ನಿಭಾಯಿಸಲು ಸೂಚಿಸಿದ ಅನಿತಾ ಕುಮಾರಸ್ವಾಮಿ* 

ಜಿಲ್ಲೆಯಲ್ಲಿ ಬ್ಲಾಕ್‌ ಫಂಗಸ್‌ ರೋಗಕ್ಕೆ ಎಷ್ಟು ಮಂದಿ ಗುರಿಯಾಗಿದ್ದಾರೆ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಅವರು ತಹಶೀಲ್ದಾರ್‌ಗಳಿಂದ ಮಾಹಿತಿ ಪಡೆದರು. ಜಿಲ್ಲೆಯಲ್ಲಿ ಐದು ಮಂದಿ ಸೋಂಕಿತರಿದ್ದು ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ಕಳುಹಿಸಿರುವುದಾಗಿ ಅಧಿಕಾರಿಗಳು ಹೇಳಿದರು. 


ಪೊಲೀಸರ ನೆರವಿನೊಂದಿಗೆ ಜಿಲ್ಲೆಯಲ್ಲಿ ಲಾಕ್‌ಡೌನ್‌ ಅನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಂತೆಯೂ ಅನಿತಾ ಕುಮಾರಸ್ವಾಮಿ ಸಲಹೆ ನೀಡಿದರು. 


*ಬ್ಲಾಕ್‌ ಫಂಗಸ್‌ ಔಷಧ ತರಿಸಿಕೊಳ್ಳಲು ಸೂಚನೆ* 

ಜಿಲ್ಲೆಯಲ್ಲಿ ಬ್ಲಾಕ್‌ ಫಂಗಸ್‌ ಚಿಕಿತ್ಸೆಗೆ ಅಗತ್ಯವಿರುವ *ಆಂಫೊಟೆರಿಸಿನ್ ಬಿ* ಔಷಧದ ಕೊರತೆ ಇರುವುದಾಗಿ ಅಧಿಕಾರಿಗಳು ತಿಳಿಸಿದರು. ಈ ವಿಚಾರವಾಗಿ ಸರ್ಕಾರದ ಮೇಲೆ ತಾವೂ ಒತ್ತಡ ಹೇರುತ್ತಿರುವುದಾಗಿ ಎಚ್‌ಡಿಕೆ ತಿಳಿಸಿದರು. ಅಲ್ಲದೆ, ಅಧಿಕಾರಿಗಳೂ ಒತ್ತಡ ಹಾಕಿ ಔಷಧ ತರಿಸಿಕೊಳ್ಳುವುದರ ಕಡೆಗೆ, ಅದನ್ನು ದಾಸ್ತಾನು ಮಾಡುವುದರ ಕಡೆ ಗಮನಹರಿಸಬೇಕಾಗಿ ತಿಳಿಸಿದರು. 


*ಪ್ರತ್ಯೇಕ ಆಂಬುಲೆನ್ಸ್‌ ಬಳಸುವಂತೆ ಎ. ಮಂಜು ಸೂಚನೆ* 

ಕೋವಿಡ್‌ನಿಂದ ಗುಣಮುಖರಾಗುವ ಸೋಂಕಿತರನ್ನು ಅವರ ಮನೆಗಳಿಗೆ ಕಳುಹಿಸಲು ಪ್ರತ್ಯೇಕ ಆಂಬ್ಯುಲೆನ್ಸ್‌ ಬಳಸುವಂತೆ ಮಾಗಡಿ ಶಾಸಕ ಎ. ಮಂಜು ಅಧಿಕಾರಿಗಳಿಗೆ ಸೂಚನೆ ನೀಡಿದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in corona »

ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ
ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ

ರಾಮನಗರ ಜಿಲ್ಲೆಯಲ್ಲಿ ಕಳೆದ ಏಳು ತಿಂಗಳ ನಂತರ ಇದೇ ಮೊದಲ ಬಾರಿಗೆ ಕೊರೋನಾ ಕಾಣಿಸಿಕೊಂಡಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬಿಡದಿ ಬಳಿಯ ಬೈರಮಂಗಲ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ‌

ಸೆ.17 ರಂದು ತಪ್ಪದೇ  ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ
ಸೆ.17 ರಂದು ತಪ್ಪದೇ ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ

ರಾಮನಗರ.ಸೆ 17: ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, 318 ಲಸಿಕಾ ತಂಡವನ್ನು ರಚಿಸಲಾಗಿದೆ. ತಂಡಗಳು

ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ
ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ

ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಮೇಳವನ್ನು ಹಮ್ನಿಕೊಳ್ಳಲಾಗಿದ್ದು, 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರ

ಸೆಪ್ಟೆಂಬರ್ 8  ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ
ಸೆಪ್ಟೆಂಬರ್ 8 ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ

ರಾಮನಗರ ,ಸೆ.7; ಕೋವಿಡ್-19 ಲಸಿಕಾಕರಣದ ಪ್ರಗತಿ ವೃದ್ದಿಯ ಉಪಕ್ರಮವಾಗಿ ಸೆಪ್ಟೆಂಬರ್ 8 ರಂದು  ಜಿಲ್ಲೆಯಾದ್ಯಂತ  ಕೋವಿಡ್-19 ಲಸಿಕಾ

ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ
ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ

ಜಿಲ್ಲಾ ಆಸ್ಪತ್ರೆ ಹಾಗೂ ತಾಲ್ಲೂಕು  ಆಸ್ಪತ್ರೆಗಳಲ್ಲಿ ಕೋವಿಡ್ ಮೂರನೇ ಅಲೆ ಎದುರಿಸಲು ಸಕಲ ಸಿದ್ಧತೆ  ಮಾಡಿಕೊಳ್ಳಿ ಎಂದು ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋ

ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ
ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ

ಚನ್ನಪಟ್ಟಣ.ಜು.12: ತಾಲ್ಲೂಕಿನಾದ್ಯಂತ ಇರುವ ಸಂಘಟಿತ ಮತ್ತು ಅಸಂಘಟಿತ  ಕಟ್ಟಡ ಕಾರ್ಮಿಕರಿಗೆ ಇಲಾಖೆ ವತಿಯಿಂದ ದಿನಸಿ ಕಿಟ್ ನೀಡಲಾಗುತ್ತಿದ್ದು, ತಾಲ್ಲೂಕಿನಲ್ಲಿ ಮಂತ್ರಿ ಮತ್ತು ಶಾಸಕರ ನೇತೃತ್

ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ
ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ

ಕೊರೊನಾ ದಿಂದ ಜನಸಾಮಾನ್ಯರ ಬದುಕು ಅಧ:ಪತನಕ್ಕಿಳಿದಿರುವುದು ಸತ್ಯ. ಇದಕ್ಕಾಗಿ, ಪಕ್ಷಗಳು, ಸಂಘಸಂಸ್ಥೆಗಳು ಮತ್ತು ಉಳ್ಳವರನೇಕರು ಬಡಬಗ್ಗರಿಗೆ ದಿನಸಿ ಕಿಟ್ ನೀಡುತ್ತಿರುವುದು ಶ್ಲಾಘನೀಯವಾದರೂ ಕೋವಿಡ್

ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ
ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ

ರಾಮನಗರ: ವಾರಾಂತ್ಯದ ಕರ್ಫ್ಯೂ ಗೆ ಕಳೆದ ವಾರದಂತೆ ಈ ವಾರವೂ ಸಹ ಬದಲಾವಣೆಗಳೊಂದಿಗೆ ಮಾರ್ಪಡಿಸಿದ್ದು, ಶನಿವಾರ ಮತ್ತು ಭಾನುವಾರ ಎರಡೂ ದಿನಗಳಲ್ಲಿ

ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ
ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ

ಸಂಭವನೀಯ ಕೋವಿಡ್ 3 ನೇ ಅಲೆಯ ಸಂದರ್ಭದಲ್ಲಿ ಯಾವುದೇ ಮಕ್ಕಳಿಗೆ ತೊಂದರೆಯಾಗದಂತೆ ಹಾಗೂ ತುರ್ತು ಚಿಕಿತ್ಸೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು  ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ

115 ನೇ ದಿನಕ್ಕೆ ಕಾಲಿಟ್ಟ  ಇರುಳಿಗರ ಪ್ರತಿಭಟನೆ
115 ನೇ ದಿನಕ್ಕೆ ಕಾಲಿಟ್ಟ ಇರುಳಿಗರ ಪ್ರತಿಭಟನೆ

ರಾಮನಗರ: ಕೈಲಾಂಚ ಹೋಬಳಿಯ ವಡ್ಡರಹಳ್ಳಿ ಗೊಲ್ಲರದೊಡ್ಡಿ ಗ್ರಾಮದ ಇರುಳಿಗ ಜನಾಂಗದವರು ಹಂದಿಗೊಂದಿ ಅರಣ್ಯ 

ಪ್ರದೇಶದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಕೋವಿಡ್ ಎರಡನೇ ಅಲೆ ಹೆ

Top Stories »  


Top ↑