Tel: 7676775624 | Mail: info@yellowandred.in

Language: EN KAN

    Follow us :


ತಾಲ್ಲೂಕಿನ ಕೋವಿಡ್ ಕೇರ್ ಕೇಂದ್ರಗಳಿಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದ ಡಿಸಿ

Posted date: 26 May, 2021

Powered by:     Yellow and Red

ತಾಲ್ಲೂಕಿನ ಕೋವಿಡ್ ಕೇರ್ ಕೇಂದ್ರಗಳಿಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದ ಡಿಸಿ

ನಗರದ ಮಹದೇಶ್ವರ ದೇವಾಲಯದ ಬಳಿ ಇರುವ ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಪುರುಷರ ವಿದ್ಯಾರ್ಥಿ ನಿಲಯ ದಲ್ಲಿ ಹೊಸದಾಗಿ ಸ್ಥಾಪಿಸಿರುವ ಕೋವಿಡ್ ಸೆಂಟರ್ ಗೆ ಜಿಲ್ಲಾಧಿಕಾರಿ ಡಾ ರಾಕೇಶ್ ಕುಮಾರ್ ಭೇಟಿ ನೀಡಿದರು. ಎಲ್ಲಾ ಸೋಂಕಿತರನ್ನು ದೂರವೇ ನಿಲ್ಲಿಸಿ ಮಾತನಾಡಿದ ಅವರು ಕೊರೊನಾ ಹೊರತುಪಡಿಸಿ ಉಳಿದ ಯಾವ ರೋಗಕ್ಕೆ ನೀವು ಮಾತ್ರೆತೆಗೆದುಕೊಳ್ಳುತ್ತಿದ್ದೀರಿ ಎಂದು ಪ್ರಶ್ನಿಸಿದರು.


ಊಟ ತಿಂಡಿ ಮತ್ತು ಶುಚಿತ್ವದ ಬಗ್ಗೆ ಅವರು ಸೋಂಕಿತರನ್ನು ವಿಚಾರಿಸಿದರು. ಸೋಂಕಿತರೆಲ್ಲರೂ ಯಾವುದೇ ತೊಂದರೆ ಇಲ್ಲಾ ಎಂದು ಉತ್ತರಿಸುವ ಮೂಲಕ ನಗರಸಭೆ, ವೈದ್ಯಾಧಿಕಾರಿ ಮತ್ತು ತಾಲ್ಲೂಕು ಆಡಳಿತಕ್ಕೆ ಶಹಬ್ಬಾಸ್ ಗಿರಿ ನೀಡಿದರು.

ಯಾವುದೇ ತೊಂದರೆ ಆದರೂ ಶೀಘ್ರವಾಗಿ ಸ್ಥಳದಲ್ಲೇ ಇರುವ ಅಧಿಕಾರಿಗಳಿಗೆ ಸುದ್ದಿ ಮುಟ್ಟಿಸಿ ಚಿಕಿತ್ಸೆ ಪಡೆದುಕೊಳ್ಳುವಂತೆ ಸೂಚಿಸಿದರು.ಭೇಟಿ ಸಂದರ್ಭದಲ್ಲಿ ತಹಶಿಲ್ದಾರ್ ನಾಗೇಶ್, ಪೌರಾಯುಕ್ತ ಶಿವನಂಕಾರಿಗೌಡ, ತಾಲ್ಲೂಕು ವೈದ್ಯಾಧಿಕಾರಿ ಕೆ ಪಿ ರಾಜು, ಸಮಾಜ ಕಲ್ಯಾಣಾಧಿಕಾರಿ ಮೋಹನ್ ಎನ್, ಫಾರ್ಮಾಸಿಸ್ಟ್ ರಮಾಕಾಂತ್, ನರ್ಸ್ ಗೀತಾ ಸೇರಿದಂತೆ ಇನ್ನಿತರ ಅಧಿಕಾರಿಗಳು ಹಾಜರಿದ್ದರು.


ತಾಲ್ಲೂಕಿನ ಮತ್ತೊಂದು ಕೇಂದ್ರವಾದ ಹೊನ್ನನಾಯಕನಹಳ್ಳಿ ಗ್ರಾಮಕ್ಕೂ ಭೇಟಿ ನೀಡಿದ ಅವರು ಅಲ್ಲಿಯೂ ಸಹ ಪ್ರತಿಯೊಬ್ಬ ರೋಗಿಗಳನ್ನು ಸಂದರ್ಶಿಸಿಸಿದರು. ಅವರ ಆರೋಗ್ಯದ ಜೊತೆಗೆ ವ್ಯವಸ್ಥೆ ಯ ಬಗ್ಗೆ ಕೇಳಿ ತಿಳಿದುಕೊಂಡರು. ಕಳೆದ ಮೂರು ದಿನಗಳ ಹಿಂದಿನ ಧರಣಿ ಬಗ್ಗೆ ವಿಚಾರಿಸಿದ ಅವರು ಶಾಂತ ರೀತಿಯಲ್ಲಿ ವರ್ತಿಸಿ, ಏನೇ ಸಮಸ್ಯೆಗಳಿದ್ದರೂ ಮೊದಲು ಅಧಿಕಾರಿಗಳ ಗಮನಕ್ಕೆ ತಂದರೆ ಬಗೆಹರಿಸುವುದಾಗಿ ಅವರು ತಿಳಿಸಿದರು.


ನಗರದ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದ ಅವರು ವೈದ್ಯರ ಜೊತೆ ಸಮಾಲೋಚನೆ ನಡೆಸಿದರು. ಕೋವಿಡ್ ಸೋಂಕಿತರು, ಕೋವ್ಯಾಕ್ಷಿನ್ ಮತ್ತು ಕೋವಿಶೀಲ್ಡ್ ಲಸಿಕೆ ಬಗ್ಗೆ ಮಾಹಿತಿ ಪಡೆದರು. ಅಲ್ಲಿಂದ ನಿರ್ಗಮಿಸಿದ ಅವರು ತಾಲ್ಲೂಕು ಪಂಚಾಯತಿ ಕೇಂದ್ರದಲ್ಲಿ ತಾಲ್ಲೂಕು ಅಧಿಕಾರಿಗಳ ಸಭೆ ನಡೆಸಿದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in corona »

ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ
ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ

ರಾಮನಗರ ಜಿಲ್ಲೆಯಲ್ಲಿ ಕಳೆದ ಏಳು ತಿಂಗಳ ನಂತರ ಇದೇ ಮೊದಲ ಬಾರಿಗೆ ಕೊರೋನಾ ಕಾಣಿಸಿಕೊಂಡಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬಿಡದಿ ಬಳಿಯ ಬೈರಮಂಗಲ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ‌

ಸೆ.17 ರಂದು ತಪ್ಪದೇ  ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ
ಸೆ.17 ರಂದು ತಪ್ಪದೇ ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ

ರಾಮನಗರ.ಸೆ 17: ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, 318 ಲಸಿಕಾ ತಂಡವನ್ನು ರಚಿಸಲಾಗಿದೆ. ತಂಡಗಳು

ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ
ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ

ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಮೇಳವನ್ನು ಹಮ್ನಿಕೊಳ್ಳಲಾಗಿದ್ದು, 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರ

ಸೆಪ್ಟೆಂಬರ್ 8  ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ
ಸೆಪ್ಟೆಂಬರ್ 8 ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ

ರಾಮನಗರ ,ಸೆ.7; ಕೋವಿಡ್-19 ಲಸಿಕಾಕರಣದ ಪ್ರಗತಿ ವೃದ್ದಿಯ ಉಪಕ್ರಮವಾಗಿ ಸೆಪ್ಟೆಂಬರ್ 8 ರಂದು  ಜಿಲ್ಲೆಯಾದ್ಯಂತ  ಕೋವಿಡ್-19 ಲಸಿಕಾ

ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ
ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ

ಜಿಲ್ಲಾ ಆಸ್ಪತ್ರೆ ಹಾಗೂ ತಾಲ್ಲೂಕು  ಆಸ್ಪತ್ರೆಗಳಲ್ಲಿ ಕೋವಿಡ್ ಮೂರನೇ ಅಲೆ ಎದುರಿಸಲು ಸಕಲ ಸಿದ್ಧತೆ  ಮಾಡಿಕೊಳ್ಳಿ ಎಂದು ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋ

ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ
ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ

ಚನ್ನಪಟ್ಟಣ.ಜು.12: ತಾಲ್ಲೂಕಿನಾದ್ಯಂತ ಇರುವ ಸಂಘಟಿತ ಮತ್ತು ಅಸಂಘಟಿತ  ಕಟ್ಟಡ ಕಾರ್ಮಿಕರಿಗೆ ಇಲಾಖೆ ವತಿಯಿಂದ ದಿನಸಿ ಕಿಟ್ ನೀಡಲಾಗುತ್ತಿದ್ದು, ತಾಲ್ಲೂಕಿನಲ್ಲಿ ಮಂತ್ರಿ ಮತ್ತು ಶಾಸಕರ ನೇತೃತ್

ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ
ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ

ಕೊರೊನಾ ದಿಂದ ಜನಸಾಮಾನ್ಯರ ಬದುಕು ಅಧ:ಪತನಕ್ಕಿಳಿದಿರುವುದು ಸತ್ಯ. ಇದಕ್ಕಾಗಿ, ಪಕ್ಷಗಳು, ಸಂಘಸಂಸ್ಥೆಗಳು ಮತ್ತು ಉಳ್ಳವರನೇಕರು ಬಡಬಗ್ಗರಿಗೆ ದಿನಸಿ ಕಿಟ್ ನೀಡುತ್ತಿರುವುದು ಶ್ಲಾಘನೀಯವಾದರೂ ಕೋವಿಡ್

ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ
ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ

ರಾಮನಗರ: ವಾರಾಂತ್ಯದ ಕರ್ಫ್ಯೂ ಗೆ ಕಳೆದ ವಾರದಂತೆ ಈ ವಾರವೂ ಸಹ ಬದಲಾವಣೆಗಳೊಂದಿಗೆ ಮಾರ್ಪಡಿಸಿದ್ದು, ಶನಿವಾರ ಮತ್ತು ಭಾನುವಾರ ಎರಡೂ ದಿನಗಳಲ್ಲಿ

ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ
ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ

ಸಂಭವನೀಯ ಕೋವಿಡ್ 3 ನೇ ಅಲೆಯ ಸಂದರ್ಭದಲ್ಲಿ ಯಾವುದೇ ಮಕ್ಕಳಿಗೆ ತೊಂದರೆಯಾಗದಂತೆ ಹಾಗೂ ತುರ್ತು ಚಿಕಿತ್ಸೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು  ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ

115 ನೇ ದಿನಕ್ಕೆ ಕಾಲಿಟ್ಟ  ಇರುಳಿಗರ ಪ್ರತಿಭಟನೆ
115 ನೇ ದಿನಕ್ಕೆ ಕಾಲಿಟ್ಟ ಇರುಳಿಗರ ಪ್ರತಿಭಟನೆ

ರಾಮನಗರ: ಕೈಲಾಂಚ ಹೋಬಳಿಯ ವಡ್ಡರಹಳ್ಳಿ ಗೊಲ್ಲರದೊಡ್ಡಿ ಗ್ರಾಮದ ಇರುಳಿಗ ಜನಾಂಗದವರು ಹಂದಿಗೊಂದಿ ಅರಣ್ಯ 

ಪ್ರದೇಶದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಕೋವಿಡ್ ಎರಡನೇ ಅಲೆ ಹೆ

Top Stories »  


Top ↑