Tel: 7676775624 | Mail: info@yellowandred.in

Language: EN KAN

    Follow us :


ರಾಜ್ಯದಲ್ಲೇ ಪ್ರಥಮ: ಮಾಗಡಿ ಆಸ್ಪತ್ರೆಯಲ್ಲಿ ಮಾಡ್ಯೂಲರ್‌ ಐಸಿಯು ಲೋಕಾರ್ಪಣೆ ಮಾಡಿದ ಡಿಸಿಎಂ

Posted date: 27 May, 2021

Powered by:     Yellow and Red

ರಾಜ್ಯದಲ್ಲೇ ಪ್ರಥಮ: ಮಾಗಡಿ ಆಸ್ಪತ್ರೆಯಲ್ಲಿ ಮಾಡ್ಯೂಲರ್‌ ಐಸಿಯು ಲೋಕಾರ್ಪಣೆ ಮಾಡಿದ ಡಿಸಿಎಂ

ತಾಲೂಕಿನ ಎಲ್ಲಾ ಆರೋಗ್ಯ ಕೇಂದ್ರಗಳಲ್ಲೂ ಆಕ್ಸಿಜನ್‌ ಘಟಕ / ಕೊರತೆ ಸಿಬ್ಬಂದಿ ತಕ್ಕಣವೇ ನೇಮಕ / ಎರಡು ತಿಂಗಳಲ್ಲೇ ಮಾಗಡಿ ಆಸ್ಪತ್ರೆಗೆ ಆಕ್ಸಿಜನ್‌ ಘಟಕ / ಇದು ಡಿಸಿಎಂ ಅಶ್ವಥ್ ನಾರಾಯಣ ರವರ ಸಾಧನೆ.


ಮಾಗಡಿ: ರಾಜ್ಯದಲ್ಲಿಯೇ ಮೊತ್ತ ಮೊದಲ ಬಾರಿಗೆ ತಾಲೂಕು ಆಸ್ಪತ್ರೆಯೊಂದರ ಆವರಣದಲ್ಲಿ ಸ್ಥಾಪನೆ ಮಾಡಲಾಗಿರುವ ಅತ್ಯಾಧುನಿಕ ಮಾಡ್ಯೂಲರ್‌ ಐಸಿಯುವನ್ನು ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಗುರುವಾರ ಲೋಕಾರ್ಪಣೆ ಮಾಡಿದರು. 


ಕೋವಿಡ್‌ ಸೋಂಕಿತರಿಗೆ ಪ್ರತ್ಯೇಕವಾಗಿ ಚಿಕಿತ್ಸೆ ನೀಡಲು ಅನುಕೂಲವಾಗುವ ಈ ಮಾಡ್ಯೂಲರ್‌ ಐಸಿಯು ಅನ್ನು ಆ್ಯಕ್ಟ್  ಗ್ರಾಂಟ್ ಮತ್ತು ʼರೆನಾಕ್‌ʼ ಸಂಸ್ಥೆ ಅಭಿವೃದ್ಧಿಪಡಿಸಿದ್ದು, ಈ ರೀತಿಯ ಐಸಿಯುಗಳನ್ನು ಈಗಾಗಲೇ ಬೆಂಗಳೂರಿನ ಕೆ.ಸಿ ಜನರಲ್‌ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಬಳಕೆ ಮಾಡಲಾಗುತ್ತಿದೆ. 


ಈ ಸಂದರ್ಭದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಡಾ.ಅಶ್ವತ್ಥನಾರಾಯಣ ಅವರು, "ಎಸಿಟಿ (ಆಕ್ಷನ್‌ ಕೋವಿಡ್‌ ಟೀಂ) ಗ್ರಾಂಟ್ಸ್  ಈ ಮಾಡ್ಯೂಲರ್‌ ಐಸಿಯು ಅನ್ನು ಮಾಗಡಿ ಆಸ್ಪತ್ರೆಗೆ ಕೊಡುಗೆಯಾಗಿ ನೀಡಿದೆ. ಅದಕ್ಕೆ ಅಗತ್ಯವಾದ ಮಾನಿಟರ್‌ಗಳನ್ನು ಬಿಡದಿಯ ಟೊಯೊಟ ಕಿರ್ಲೋಸ್ಕರ್‌ ಕಂಪನಿ ನೀಡಿದ್ದು, ವೆಂಟಿಲೇಟರ್‌ಗಳು ಪಿ.ಎಂ ಕೇರ್‌ನಿಂದ ಬಂದಿವೆ. ಈ ಐಸಿಯುನಿಂದ, ಹೊರಗಿನಿಂದ ಒಳ ಬರುವ ಅಥವಾ ಒಳಗಿನಿಂದ ಹೊರ ಹೋಗುವ ಗಾಳಿಯು ಸಂಪೂರ್ಣವಾಗಿ ಶುದ್ಧೀಕರಣಗೊಳ್ಳುತ್ತದೆ. ಜತೆಗೆ, ಪ್ರತ್ಯೇಕ ಆಕ್ಸಿಜನ್‌ ಸಂಪರ್ಕದ ಜತೆಗೆ, ನೀರು ಹಾಗೂ ಒಳಚರಂಡಿ ಪ್ರತ್ಯೇಕ ಸಂಪರ್ಕ ಇರುತ್ತದೆ. ಇಡೀ ರಾಜ್ಯದಲ್ಲೇ ಇಂಥ ಆಧುನಿಕ ಐಸಿಯು ಅನ್ನು ಮಾಗಡಿ ಆಸ್ಪತ್ರೆಯಲ್ಲಿ ಅಳವಡಿಸಲಾಗಿದೆ" ಎಂದರು. 


ಇಲ್ಲಿಗೆ ಅಗತ್ಯವಾದ ಎಲ್ಲಾ ಔಷಧಿ, ಆಮ್ಲಜನಕ, ವೈದ್ಯಕೀಯ ಸರಂಜಾಮುಗಳು, ಸಿಬ್ಬಂದಿ ಕೊರತೆ ಇಲ್ಲದಂತೆ ಎಚ್ಚರಿಕೆ ವಹಿಸಲಾಗಿದೆ. ನಾಲ್ವರಿಗೆ ಈ ಐಸಿಯುವನಲ್ಲಿ ಅತ್ಯುತ್ತಮ ಚಿಕಿತ್ಸೆ ಸಿಗುತ್ತದೆ ಎಂದು ಡಾ.ಅಶ್ವತ್ಥನಾರಾಯಣ ಪ್ರಶ್ನೆಯೊಂದಕ್ಕೆ ಉತ್ತರ ಕೊಟ್ಟರು. 


*ಎರಡು ತಿಂಗಳಲ್ಲಿ ಆಕ್ಸಿಜನ್‌ ಘಟಕ:*


ಮಾಗಡಿ ಆಸ್ಪತ್ರೆಯಲ್ಲಿ ಈಗಾಗಲೇ 100 ಹಾಸಿಗೆಗಳಿದ್ದು, ಈ ಪೈಕಿ 50 ಬೆಡ್‌ಗಳಿಗೆ ಆಕ್ಸಿಜನ್‌ ಸೌಲಭ್ಯವಿದೆ. ಇನ್ನು ಕೆಲ ದಿನಗಳಲ್ಲಿಯೇ ಉಳಿದ 50 ಹಾಸಿಗೆಗಳನ್ನೂ ಆಕ್ಸಿಜನ್‌ ಬೆಡ್‌ಗಳನ್ನಾಗಿ ಪರಿವರ್ತನೆ ಮಾಡಲಾಗುವುದು. ಅಲ್ಲದೆ, ನಿಮಿಷಕ್ಕೆ 600 ಕೆಎಲ್‌ ಪೂರೈಕೆ ಸಾಮರ್ಥ್ಯದ ಆಮ್ಲಜನಕ ಉತ್ಪಾದಕ ಘಟಕವನ್ನೂ ಎರಡು ತಿಂಗಳಲ್ಲಿ ಸ್ಥಾಪನೆ ಮಾಡಲಾಗುವುದು. ಜತೆಗೆ,  ಒಟ್ಟು ಬೆಡ್‌ಗಳಲ್ಲಿ 25% ಐಸಿಯು ಬೆಡ್‌ಗಳ ವ್ಯವಸ್ಥೆ ಮಾಡುವ ಉದ್ದೇಶವೂ ಇದೆ. ಸಮುದಾಯ ಆರೋಗ್ಯ ಕೇಂದ್ರಗಳಲ್ಲೂ ಆಕ್ಸಿಜನ್‌ ಘಟಕಗಳನ್ನು ಅಳವಡಿಸಲಾಗುವುದು ಎಂದು ಡಿಸಿಎಂ ಮಾಹಿತಿ ನೀಡಿದರು. 


ಇದಲ್ಲದೆ, ಪ್ರಾಥಮಿಕ & ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಸುಸಜ್ಜಿತ ಲ್ಯಾಬ್‌ ಹಾಗೂ ತುರ್ತು ಸಂದರ್ಭವನ್ನು ದೃಷ್ಟಿಯಲ್ಲಿಟ್ಟುಕೊಂಡು ಆಮ್ಲಜನಕ ಸಾಂದ್ರಕಗಳನ್ನೂ ಒದಗಿಸಲಾಗುವುದು ಎಂದರು.


*ತಕ್ಷಣವೇ ಸಿಬ್ಬಂದಿ ನೇಮಕ:*


ಎಲ್ಲ ಸಮುದಾಯ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಕೂಡಲೇ ಅಗತ್ಯ ಸಿಬ್ಬಂದಿ ನಿಯೋಜನೆ ಮಾಡಲಾಗುವುದು. ಮುಖ್ಯವಾಗಿ ಸೋಲೂರು ಮತ್ತು ತಿಪ್ಪಸಂದ್ರ ಸಮುದಾಯ ಆರೋಗ್ಯ ಕೇಂದ್ರಗಳಿಗೆ ತಕ್ಷಣವೇ ಸಿಬ್ಬಂದಿ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಎಂ ಅವರು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು. 


ಇದಾದ ಮೇಲೆ ಉಪ ಮುಖ್ಯಮಂತ್ರಿಗಳು ಸಿದ್ಧಾರೂಢ ಮಠದ ಆಶ್ರಮದಲ್ಲಿ ಮುಂಚೂಣಿ ವಾರಿಯರ್ಸ್ ಹಾಗೂ ಆದ್ಯತಾ ಗುಂಪಿಗೆ ಲಸಿಕೆ ನೀಡುತ್ತಿರುವುದನ್ನು ವೀಕ್ಷಿಸಿದರು. ಬಳಿಕ ಹುಲಿಕೋಟೆಯ ಕೋವಿಡ್ ಕೇರ್ ಸೆಂಟರ್‌ ಗೆ ಭೇಟಿ ನೀಡಿ ಅಲ್ಲಿ ನೇರವಾಗಿ ಸೋಂಕಿತರ ಯೋಗ ಕ್ಷೇಮ ವಿಚಾರಿಸಿದರು. ಅವರಿಗೆ ನೀಡಲಾಗುತ್ತಿರುವ ಚಿಕಿತ್ಸೆ, ಔಷಧಿ, ಆಹಾರದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆದುಕೊಂಡರು. 


ಅಂತಿಮವಾಗಿ ವಿ ಜಿ ದೊಡ್ಡಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬೇಟಿ ಪರಿಶೀಲನೆ ನಡೆಸಿದರಲ್ಲದೆ, ಕೊರತೆ ಇರುವ ಸಿಬ್ಬಂದಿ ನೇಮಕಕ್ಕೆ ಕೂಡಲೇ ಕ್ರಮ ಕೈಗೊಳ್ಳುವ ಭರವಸೆ ನೀಡಿದರು ಹಾಗೂ ಕೆಲ ದಿನಗಳಲ್ಲಿಯೇ ಇಲ್ಲಿ ಆಮ್ಲಜನಕ ಉತ್ಪಾದನಾ ಘಟಕ ಅಳವಡಿಸಲಾಗುವುದು ಎಂದರು. 


ಮಾಗಡಿ ಶಾಸಕ ಮಂಜುನಾಥ್‌, ಜಿಲ್ಲಾಧಿಕಾರಿ ರಾಕೇಶ ಕುಮಾರ, ಸಿಇಒ ಇಕ್ರಂ,ಡಿಎಚ್ಓ ಡಾ.ನಿರಂಜನ್, ರೆನಾಕ್‌ ಸಂಸ್ಥೆಯ ಹಿರಿಯ ಉಪಾಧ್ಯಕ್ಷ ಸಾಜಿ ಅಬ್ರಹಾಂ, ಹಿರಿಯ ಪ್ರಧಾನ ವ್ಯವಸ್ಥಾಪಕ ಸುಧೀರ್‌ ಮೆನನ್‌, ರಾಮನಗರ ಜಿಲ್ಲಾ ಬಿಜೆಪಿ ಅಧ್ಯಕ್ಷ ಹುಲುವಾಡಿ ದೇವರಾಜ್‌, ಬಿಜೆಪಿ ಮುಖಂಡ ಕೃಷ್ಣಮೂರ್ತಿ, ಮಂಡಲಾಧ್ಯಕ್ಷ ಧನಂಜಯ, ತಾಲೂಕು ವೈದ್ಯಾಧಿಕಾರಿ ಮತ್ತಿತರರು ಡಿಸಿಎಂ ಜತೆಯಲ್ಲಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in corona »

ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ
ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ

ರಾಮನಗರ ಜಿಲ್ಲೆಯಲ್ಲಿ ಕಳೆದ ಏಳು ತಿಂಗಳ ನಂತರ ಇದೇ ಮೊದಲ ಬಾರಿಗೆ ಕೊರೋನಾ ಕಾಣಿಸಿಕೊಂಡಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬಿಡದಿ ಬಳಿಯ ಬೈರಮಂಗಲ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ‌

ಸೆ.17 ರಂದು ತಪ್ಪದೇ  ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ
ಸೆ.17 ರಂದು ತಪ್ಪದೇ ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ

ರಾಮನಗರ.ಸೆ 17: ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, 318 ಲಸಿಕಾ ತಂಡವನ್ನು ರಚಿಸಲಾಗಿದೆ. ತಂಡಗಳು

ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ
ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ

ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಮೇಳವನ್ನು ಹಮ್ನಿಕೊಳ್ಳಲಾಗಿದ್ದು, 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರ

ಸೆಪ್ಟೆಂಬರ್ 8  ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ
ಸೆಪ್ಟೆಂಬರ್ 8 ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ

ರಾಮನಗರ ,ಸೆ.7; ಕೋವಿಡ್-19 ಲಸಿಕಾಕರಣದ ಪ್ರಗತಿ ವೃದ್ದಿಯ ಉಪಕ್ರಮವಾಗಿ ಸೆಪ್ಟೆಂಬರ್ 8 ರಂದು  ಜಿಲ್ಲೆಯಾದ್ಯಂತ  ಕೋವಿಡ್-19 ಲಸಿಕಾ

ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ
ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ

ಜಿಲ್ಲಾ ಆಸ್ಪತ್ರೆ ಹಾಗೂ ತಾಲ್ಲೂಕು  ಆಸ್ಪತ್ರೆಗಳಲ್ಲಿ ಕೋವಿಡ್ ಮೂರನೇ ಅಲೆ ಎದುರಿಸಲು ಸಕಲ ಸಿದ್ಧತೆ  ಮಾಡಿಕೊಳ್ಳಿ ಎಂದು ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋ

ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ
ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ

ಚನ್ನಪಟ್ಟಣ.ಜು.12: ತಾಲ್ಲೂಕಿನಾದ್ಯಂತ ಇರುವ ಸಂಘಟಿತ ಮತ್ತು ಅಸಂಘಟಿತ  ಕಟ್ಟಡ ಕಾರ್ಮಿಕರಿಗೆ ಇಲಾಖೆ ವತಿಯಿಂದ ದಿನಸಿ ಕಿಟ್ ನೀಡಲಾಗುತ್ತಿದ್ದು, ತಾಲ್ಲೂಕಿನಲ್ಲಿ ಮಂತ್ರಿ ಮತ್ತು ಶಾಸಕರ ನೇತೃತ್

ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ
ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ

ಕೊರೊನಾ ದಿಂದ ಜನಸಾಮಾನ್ಯರ ಬದುಕು ಅಧ:ಪತನಕ್ಕಿಳಿದಿರುವುದು ಸತ್ಯ. ಇದಕ್ಕಾಗಿ, ಪಕ್ಷಗಳು, ಸಂಘಸಂಸ್ಥೆಗಳು ಮತ್ತು ಉಳ್ಳವರನೇಕರು ಬಡಬಗ್ಗರಿಗೆ ದಿನಸಿ ಕಿಟ್ ನೀಡುತ್ತಿರುವುದು ಶ್ಲಾಘನೀಯವಾದರೂ ಕೋವಿಡ್

ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ
ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ

ರಾಮನಗರ: ವಾರಾಂತ್ಯದ ಕರ್ಫ್ಯೂ ಗೆ ಕಳೆದ ವಾರದಂತೆ ಈ ವಾರವೂ ಸಹ ಬದಲಾವಣೆಗಳೊಂದಿಗೆ ಮಾರ್ಪಡಿಸಿದ್ದು, ಶನಿವಾರ ಮತ್ತು ಭಾನುವಾರ ಎರಡೂ ದಿನಗಳಲ್ಲಿ

ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ
ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ

ಸಂಭವನೀಯ ಕೋವಿಡ್ 3 ನೇ ಅಲೆಯ ಸಂದರ್ಭದಲ್ಲಿ ಯಾವುದೇ ಮಕ್ಕಳಿಗೆ ತೊಂದರೆಯಾಗದಂತೆ ಹಾಗೂ ತುರ್ತು ಚಿಕಿತ್ಸೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು  ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ

115 ನೇ ದಿನಕ್ಕೆ ಕಾಲಿಟ್ಟ  ಇರುಳಿಗರ ಪ್ರತಿಭಟನೆ
115 ನೇ ದಿನಕ್ಕೆ ಕಾಲಿಟ್ಟ ಇರುಳಿಗರ ಪ್ರತಿಭಟನೆ

ರಾಮನಗರ: ಕೈಲಾಂಚ ಹೋಬಳಿಯ ವಡ್ಡರಹಳ್ಳಿ ಗೊಲ್ಲರದೊಡ್ಡಿ ಗ್ರಾಮದ ಇರುಳಿಗ ಜನಾಂಗದವರು ಹಂದಿಗೊಂದಿ ಅರಣ್ಯ 

ಪ್ರದೇಶದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಕೋವಿಡ್ ಎರಡನೇ ಅಲೆ ಹೆ

Top Stories »  


Top ↑