ತಿಟ್ಟಮಾರನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಸಮಸ್ಯೆ ಬಗೆಹರಿಸಿದ ತಹಶಿಲ್ದಾರ್, ಡಿವೈಎಸ್ಪಿ ಮತ್ತು ತಂಡ
ಇದು ನಮ್ಮ sanmitra.co.in ಪತ್ರಿಕೆಯ ಫಲಶೃತಿ)
ತಾಲ್ಲೂಕಿನ ತಿಟ್ಟಮಾರನಹಳ್ಳಿ ಗ್ರಾಮದಲ್ಲಿ ಚರಂಡಿ ಅವ್ಯವಸ್ಥೆಯಿಂದ, ಮನೆಗೆ ಮಳೆ ನೀರು ನುಗ್ಗಿ ಸಾಕಷ್ಟು ಸಮಸ್ಯೆ ಸೃಷ್ಠಿಯಾಗಿದ್ದನ್ನು ನಮ್ಮ sanmitra.co.in ಪತ್ರಿಕೆಯು ಬುಧವಾರದಂದು ವರದಿ ಪ್ರಕಟಿಸಿತ್ತು.
ವರದಿಯನ್ನು ಗಮನಿಸಿದ ತಹಶಿಲ್ದಾರ್ ನಾಗೇಶ್ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಡಿವೈಎಸ್ಪಿ ರಮೇಶ್ ರವರು ಇಂದು ಭೇಟಿ ನೀಡಿ ಪರಿಶೀಲಿಸಿದರು.
ಮೊದಲಿಗೆ ಡಿವೈಎಸ್ಪಿ ರಮೇಶ್ ರವರು ತಮ್ಮ ಸಿಬ್ಬಂದಿಗಳೊಂದಿಗೆ ತೆರಳಿ ಪರಿಶೀಲಿಸಿ, ಸಂಬಂಧಿಸಿದವರ ಬಳಿ ಮಾತನಾಡಿ ಬಂದರು.
ತದ ನಂತರ ಕಂದಾಯ ನಿರೀಕ್ಷಕ, ಗ್ರಾಮ ಲೆಕ್ಕಾಧಿಕಾರಿ ಮತ್ತು ಸರ್ವೇಯರ್ ಗಳೊಂದಿಗೆ ತೆರಳಿದ ದಂಡಾಧಿಕಾರಿ ನಾಗೇಶ್ ರವರು ಎರಡು ಗಂಟೆಗಳ ಕಾಲ ಮೊಕ್ಕಾಂ ಹೂಡಿ, ಜೆಸಿಬಿ ಮೂಲಕ ಚರಂಡಿ ನೀರು ಹರಿಯುವಂತೆ ಹಳ್ಳವನ್ನು ಬಗೆಸಿದರು.
ಈ ಜಾಗ ನನ್ನದೆಂದು ಖಾಸಗಿ ವ್ಯಕ್ತಿಯೊಬ್ಬರು ಪೂರ್ಣ ಹಳ್ಳ ಮುಚ್ಚಿದ್ದು, ಅಲ್ಲಿ ನಿಮ್ಮ ಜಾಗದ ಜೊತೆಗೆ ಖರಾಬು ಜಾಗವು ಇದೆ ಎಂದು ತಹಶಿಲ್ದಾರ್ ನಾಗೇಶ್ ರವರು ಖರಾಬು ಜಾಗದಲ್ಲಿ ಹಳ್ಳ ತೆಗೆಸಿ, ಚರಂಡಿ ಮತ್ತು ಮಳೆಯ ನೀರು ಸರಾಗವಾಗಿ ಹರಿಯಲು ಅನುವು ಮಾಡಿಕೊಟ್ಟರು.
ಚರಂಡಿ ನೀರು ಸರಾಗವಾಗಿ ಹರಿಯಲು ಸಾಧ್ಯವಾಗದೇ, ರಸ್ತೆಯಲ್ಲಿ ನಿಲ್ಲುವ ಮೂಲಕ ಕಿರಿಕಿರಿ ಉಂಟಾಗಿತ್ತು. ಇಂದು ಈ ಸಮಸ್ಯೆಯನ್ನು ಬಗೆಹರಿಸಿಕೊಟ್ಟ ತಹಸೀಲ್ದಾರ್ ಎಲ್.ನಾಗೇಶ್ ಸರ್. ಡಿವೈಎಸ್ಪಿ ರಮೇಶ್ ಸರ್, ಸರ್ವೆ ಇಲಾಖೆಯ ಅಧಿಕಾರಿಗಳು, ಕಂದಾಯ ನಿರೀಕ್ಷಕ ಯುವರಾಜ್, ವಿಎ ಮಂಜು, ಗ್ರಾಪಂ ಪಿಡಿಓ ಕಾವ್ಯಾ ಹಾಗೂ ಇತರೆ ಅಧಿಕಾರಿಗಳು ಹಾಗೂ ವರದಿ ಮಾಡಿ ಸಮಸ್ಯೆಗೆ ನಾಂದಿ ಹಾಡಿದ sanmitra.co.in ಪತ್ರಿಕಾ ಬಳಗಕ್ಕೆ ಗ್ರಾಮಸ್ಥರ ಪರವಾಗಿ ಅಭಿಲಾಷ್ ಮತ್ತು ಗ್ರಾಮದ ಯುವಕರು ಧನ್ಯವಾದಗಳನ್ನು ತಿಳಿಸಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in corona »
ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ
ರಾಮನಗರ ಜಿಲ್ಲೆಯಲ್ಲಿ ಕಳೆದ ಏಳು ತಿಂಗಳ ನಂತರ ಇದೇ ಮೊದಲ ಬಾರಿಗೆ ಕೊರೋನಾ ಕಾಣಿಸಿಕೊಂಡಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬಿಡದಿ ಬಳಿಯ ಬೈರಮಂಗಲ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ
ಸೆ.17 ರಂದು ತಪ್ಪದೇ ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ
ರಾಮನಗರ.ಸೆ 17: ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, 318 ಲಸಿಕಾ ತಂಡವನ್ನು ರಚಿಸಲಾಗಿದೆ. ತಂಡಗಳು
ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ
ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಮೇಳವನ್ನು ಹಮ್ನಿಕೊಳ್ಳಲಾಗಿದ್ದು, 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರ
ಸೆಪ್ಟೆಂಬರ್ 8 ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ
ರಾಮನಗರ ,ಸೆ.7; ಕೋವಿಡ್-19 ಲಸಿಕಾಕರಣದ ಪ್ರಗತಿ ವೃದ್ದಿಯ ಉಪಕ್ರಮವಾಗಿ ಸೆಪ್ಟೆಂಬರ್ 8 ರಂದು ಜಿಲ್ಲೆಯಾದ್ಯಂತ ಕೋವಿಡ್-19 ಲಸಿಕಾ
ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ
ಜಿಲ್ಲಾ ಆಸ್ಪತ್ರೆ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಕೋವಿಡ್ ಮೂರನೇ ಅಲೆ ಎದುರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋ
ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ
ಚನ್ನಪಟ್ಟಣ.ಜು.12: ತಾಲ್ಲೂಕಿನಾದ್ಯಂತ ಇರುವ ಸಂಘಟಿತ ಮತ್ತು ಅಸಂಘಟಿತ ಕಟ್ಟಡ ಕಾರ್ಮಿಕರಿಗೆ ಇಲಾಖೆ ವತಿಯಿಂದ ದಿನಸಿ ಕಿಟ್ ನೀಡಲಾಗುತ್ತಿದ್ದು, ತಾಲ್ಲೂಕಿನಲ್ಲಿ ಮಂತ್ರಿ ಮತ್ತು ಶಾಸಕರ ನೇತೃತ್
ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ
ಕೊರೊನಾ ದಿಂದ ಜನಸಾಮಾನ್ಯರ ಬದುಕು ಅಧ:ಪತನಕ್ಕಿಳಿದಿರುವುದು ಸತ್ಯ. ಇದಕ್ಕಾಗಿ, ಪಕ್ಷಗಳು, ಸಂಘಸಂಸ್ಥೆಗಳು ಮತ್ತು ಉಳ್ಳವರನೇಕರು ಬಡಬಗ್ಗರಿಗೆ ದಿನಸಿ ಕಿಟ್ ನೀಡುತ್ತಿರುವುದು ಶ್ಲಾಘನೀಯವಾದರೂ ಕೋವಿಡ್
ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ
ರಾಮನಗರ: ವಾರಾಂತ್ಯದ ಕರ್ಫ್ಯೂ ಗೆ ಕಳೆದ ವಾರದಂತೆ ಈ ವಾರವೂ ಸಹ ಬದಲಾವಣೆಗಳೊಂದಿಗೆ ಮಾರ್ಪಡಿಸಿದ್ದು, ಶನಿವಾರ ಮತ್ತು ಭಾನುವಾರ ಎರಡೂ ದಿನಗಳಲ್ಲಿ
ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ
ಸಂಭವನೀಯ ಕೋವಿಡ್ 3 ನೇ ಅಲೆಯ ಸಂದರ್ಭದಲ್ಲಿ ಯಾವುದೇ ಮಕ್ಕಳಿಗೆ ತೊಂದರೆಯಾಗದಂತೆ ಹಾಗೂ ತುರ್ತು ಚಿಕಿತ್ಸೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ
115 ನೇ ದಿನಕ್ಕೆ ಕಾಲಿಟ್ಟ ಇರುಳಿಗರ ಪ್ರತಿಭಟನೆ
ರಾಮನಗರ: ಕೈಲಾಂಚ ಹೋಬಳಿಯ ವಡ್ಡರಹಳ್ಳಿ ಗೊಲ್ಲರದೊಡ್ಡಿ ಗ್ರಾಮದ ಇರುಳಿಗ ಜನಾಂಗದವರು ಹಂದಿಗೊಂದಿ ಅರಣ್ಯ
ಪ್ರದೇಶದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಕೋವಿಡ್ ಎರಡನೇ ಅಲೆ ಹೆ
ಪ್ರತಿಕ್ರಿಯೆಗಳು