ಕೋವಿಡ್ ಕೇರ್ ಸೆಂಟರ್ ಗಳಲ್ಲಿ ರೋಗಿಗಳಿಗೆ ಉತ್ತಮ ವ್ಯವಸ್ಥೆ: ಜಿಲ್ಲಾಧಿಕಾರಿ ಡಾ ರಾಕೇಶ್ ಕುಮಾರ್ ಕೆ
ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಕೋವಿಡ್ ರೋಗಿಗಳಿಗೆ ಉತ್ತಮ ವೈದ್ಯಕೀಯ ವ್ಯವಸ್ಥೆ, ಪೌಷ್ಠಿಕ ಆಹಾರ ಹಾಗೂ ರೋಗಿಗಳು ಗುಣವಾಗಲು ಬೇಕಿರುವ ಎಲ್ಲಾ ಮೂಲಭೂತ ವ್ಯವಸ್ಥೆಗಳನ್ನು ಒದಗಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರು ತಿಳಿಸಿದರು.
ಅವರು ಇಂದು ಕನಕಪುರ ತಾಲ್ಲೂಕಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕನಕಪುರ ತಾಲ್ಲೂಕಿನಲ್ಲಿ ದೊಡ್ಡಹಾಲಹಳ್ಳಿ ಹಾಗೂ ಕೋಡಿಹಳ್ಳಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೋವಿಡ್ ಕೇರ್ ಸೆಂಟರ್ ಗಳಿಗೆ ಭೇಟಿ ನೀಡಿ ರೋಗಿಗಳೊಂದಿಗೆ ಮಾತನಾಡಿದರು. ಕೋವಿಡ್ ಕೇರ್ ಸೆಂಟರ್ ನಲ್ಲಿ ನೀಡಲಾಗುತ್ತಿರುವ ಆಹಾರ ಹಾಗೂ ವೈದ್ಯಕೀಯ ಚಿಕಿತ್ಸೆಯ ಬಗ್ಗೆ ಚರ್ಚಿಸಿದರು.
ರೋಗಿಗಳು ಗುಣಮಟ್ಟದ ಆಹಾರ ದೊರಕುತ್ತಿದ್ದು, ಪ್ರತಿದಿನ ಪಲ್ಸ್ ಆಕ್ಸಿಮೀಟರ್ ನಲ್ಲಿ ಆಕ್ಸಿಜನ್ ಮಟ್ಟ ಪರಿಶೀಲಿಸುತ್ತಿದ್ದಾರೆ. ಮೂಲಭೂತ ವ್ಯವಸ್ಥೆಗಳಿದ್ದು, ಯಾವುದೇ ರೀತಿಯ ತೊಂದರೆ ಇಲ್ಲ ಎಂದು ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.
ಜಿಲ್ಲಾಧಿಕಾರಿಗಳು ನಂತರ ದೊಡ್ಡಹಾಲಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ನಾನ್ ಕೋವಿಡ್ ರೋಗಿಗಳ ಚಿಕಿತ್ಸೆಗಳು ಸಹ ನಡೆಯಬೇಕಿದ್ದು, ಆರೋಗ್ಯ ಕೇಂದ್ರದಲ್ಲಿ ಮಾಡಿರುವ ವ್ಯವಸ್ಥೆ ಹಾಗೂ ಔಷಧಿಗಳ ಲಭ್ಯತೆಯನ್ನು ಪರಿಶೀಲಿಸಿದರು.
ರಾಮನಗರದ ಆರೋಗ್ಯ ಇಲಾಖೆ ಕನಕಪುರದ ರೋಟರಿ ಭವನದಲ್ಲಿ 18 ರಿಂದ 44 ವರ್ಷದ ಸಿನಿಮಾ ಕಲಾವಿದರಿಗೆ ಆಯೋಜಿಸಿದ್ದ ಲಸಿಕಾ ಶಿಬಿರಕ್ಕೆ ಜಿಲ್ಲಾಧಿಕಾರಿ ಡಾ. ರಾಕೇಶ್ ಕುಮಾರ್ ಕೆ. ಅವರು ಭೇಟಿ ನೀಡಿ ಸರ್ಕಾರ ಗುರುತಿಸಿರುವ ಆದ್ಯತಾ ವಲಯದ ಜನರಿಗೆ ಜಿಲ್ಲೆಯಲ್ಲಿ ಲಸಿಕೆ ನೀಡಲಾಗುತ್ತಿದೆ. ಆದ್ಯತಾ ವಲಯದಲ್ಲಿ ಬರುವ ಸಾರ್ವಜನಿಕರು ತಪ್ಪದೇ ಲಸಿಕೆ ಪಡೆದುಕೊಳ್ಳಿ ಎಂದರು.
ಕನಕಪುರ ತಾಲ್ಲೂಕು ಕಚೇರಿಯಲ್ಲಿ ಕೋವಿಡ್ ಕುರಿತಂತೆ ಪ್ರಗತಿ ಪರಿಶೀಲನೆ ನಡೆಸಿ ತಾಲ್ಲೂಕು ವೈದ್ಯಾಧಿಕಾರಿಗಳು, ತಹಶೀಲ್ದಾರ್, ಕಾರ್ಯನಿರ್ವಾಹಕ ಅಧಿಕಾರಿಗಳು ಕೋವಿಡ್ ಕೇರ್ ಸೆಂಟರ್ ಗಳಿಗೆ ಭೇಟಿ ನೀಡಿ ಪರಿಶೀಲಿಸುವಂತೆ ನಿರ್ದೇಶನ ನೀಡಿದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in corona »
ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ
ರಾಮನಗರ ಜಿಲ್ಲೆಯಲ್ಲಿ ಕಳೆದ ಏಳು ತಿಂಗಳ ನಂತರ ಇದೇ ಮೊದಲ ಬಾರಿಗೆ ಕೊರೋನಾ ಕಾಣಿಸಿಕೊಂಡಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬಿಡದಿ ಬಳಿಯ ಬೈರಮಂಗಲ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ
ಸೆ.17 ರಂದು ತಪ್ಪದೇ ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ
ರಾಮನಗರ.ಸೆ 17: ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, 318 ಲಸಿಕಾ ತಂಡವನ್ನು ರಚಿಸಲಾಗಿದೆ. ತಂಡಗಳು
ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ
ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಮೇಳವನ್ನು ಹಮ್ನಿಕೊಳ್ಳಲಾಗಿದ್ದು, 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರ
ಸೆಪ್ಟೆಂಬರ್ 8 ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ
ರಾಮನಗರ ,ಸೆ.7; ಕೋವಿಡ್-19 ಲಸಿಕಾಕರಣದ ಪ್ರಗತಿ ವೃದ್ದಿಯ ಉಪಕ್ರಮವಾಗಿ ಸೆಪ್ಟೆಂಬರ್ 8 ರಂದು ಜಿಲ್ಲೆಯಾದ್ಯಂತ ಕೋವಿಡ್-19 ಲಸಿಕಾ
ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ
ಜಿಲ್ಲಾ ಆಸ್ಪತ್ರೆ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಕೋವಿಡ್ ಮೂರನೇ ಅಲೆ ಎದುರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋ
ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ
ಚನ್ನಪಟ್ಟಣ.ಜು.12: ತಾಲ್ಲೂಕಿನಾದ್ಯಂತ ಇರುವ ಸಂಘಟಿತ ಮತ್ತು ಅಸಂಘಟಿತ ಕಟ್ಟಡ ಕಾರ್ಮಿಕರಿಗೆ ಇಲಾಖೆ ವತಿಯಿಂದ ದಿನಸಿ ಕಿಟ್ ನೀಡಲಾಗುತ್ತಿದ್ದು, ತಾಲ್ಲೂಕಿನಲ್ಲಿ ಮಂತ್ರಿ ಮತ್ತು ಶಾಸಕರ ನೇತೃತ್
ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ
ಕೊರೊನಾ ದಿಂದ ಜನಸಾಮಾನ್ಯರ ಬದುಕು ಅಧ:ಪತನಕ್ಕಿಳಿದಿರುವುದು ಸತ್ಯ. ಇದಕ್ಕಾಗಿ, ಪಕ್ಷಗಳು, ಸಂಘಸಂಸ್ಥೆಗಳು ಮತ್ತು ಉಳ್ಳವರನೇಕರು ಬಡಬಗ್ಗರಿಗೆ ದಿನಸಿ ಕಿಟ್ ನೀಡುತ್ತಿರುವುದು ಶ್ಲಾಘನೀಯವಾದರೂ ಕೋವಿಡ್
ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ
ರಾಮನಗರ: ವಾರಾಂತ್ಯದ ಕರ್ಫ್ಯೂ ಗೆ ಕಳೆದ ವಾರದಂತೆ ಈ ವಾರವೂ ಸಹ ಬದಲಾವಣೆಗಳೊಂದಿಗೆ ಮಾರ್ಪಡಿಸಿದ್ದು, ಶನಿವಾರ ಮತ್ತು ಭಾನುವಾರ ಎರಡೂ ದಿನಗಳಲ್ಲಿ
ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ
ಸಂಭವನೀಯ ಕೋವಿಡ್ 3 ನೇ ಅಲೆಯ ಸಂದರ್ಭದಲ್ಲಿ ಯಾವುದೇ ಮಕ್ಕಳಿಗೆ ತೊಂದರೆಯಾಗದಂತೆ ಹಾಗೂ ತುರ್ತು ಚಿಕಿತ್ಸೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ
115 ನೇ ದಿನಕ್ಕೆ ಕಾಲಿಟ್ಟ ಇರುಳಿಗರ ಪ್ರತಿಭಟನೆ
ರಾಮನಗರ: ಕೈಲಾಂಚ ಹೋಬಳಿಯ ವಡ್ಡರಹಳ್ಳಿ ಗೊಲ್ಲರದೊಡ್ಡಿ ಗ್ರಾಮದ ಇರುಳಿಗ ಜನಾಂಗದವರು ಹಂದಿಗೊಂದಿ ಅರಣ್ಯ
ಪ್ರದೇಶದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಕೋವಿಡ್ ಎರಡನೇ ಅಲೆ ಹೆ
ಪ್ರತಿಕ್ರಿಯೆಗಳು