ಜಿಲ್ಲೆಯಲ್ಲಿ ಕೋವಿಡ್ ಸೋಂಕು ಇಳಿಮುಖ: ಸಾರ್ವಜನಿಕರು ಮುನ್ನಚ್ಚರಿಕಾ ಕ್ರಮ ಕಡ್ಡಾಯವಾಗಿ ಪಾಲಿಸಿ : ಡಾ.ರಾಕೇಶ್ ಕುಮಾರ್.ಕೆ
ಜಿಲ್ಲೆಯಲ್ಲಿ ಪ್ರತಿದಿನ ಸರಾಸರಿ 200-250 ಕೋವಿಡ್ ಪ್ರಕರಣಗಳು ವರದಿಯಾಗುತ್ತಿದ್ದು, ಹಿಂದಿನ ದಿನಗಳಿಗೆ ಹೋಲಿಕೆ ಮಾಡಿದರೆ ಕೋವಿಡ್ ಸೋಂಕು ಇಳಿಮುಖವಾಗಿರುತ್ತದೆ. ಕೋವಿಡ್ ಸೋಂಕು ಸಂಪೂರ್ಣವಾಗಿ ಹೋಗಿಲ್ಲ ಯಾವ ಸಮಯದಲ್ಲೂ ಬೇಕಾದರೂ ಹೆಚ್ಚಳವಾಗಬಹುದು. ಸಾರ್ವಜನಿಕರು ಮರೆಯದೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್ ಧರಿಸುವುದು ಹಾಗೂ ಸ್ಯಾನಿಟೈಜರ್ ಬಳಸುವುದನ್ನು ರೂಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಕೇಶ್ ಕುಮಾರ್ ಕೆ ಅವರು ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದರು ಸರ್ಕಾರದ ಆದೇಶದಂತೆ ಜಿಲ್ಲೆಯಲ್ಲಿ ಜೂನ್ 07 ರವರೆಗೆ ಲಾಕ್ಡೌನ್ನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು. ನಿಯಮ ಉಲ್ಲಂಘಿಸಿದವರಿಗೆ ಡಿ.ಎಂ ಆಕ್ಟ್ ಅಡಿ ಪ್ರಕರಣ ದಾಖಲಿಸಲಾಗುವುದು ಸಾರ್ವಜನಿಕರು ಲಾಕ್ ಡೌನ್ ನಿಯಮವನ್ನು ಪಾಲಿಸುವಂತೆ ತಿಳಿಸಿದರು.
ಜಿಲ್ಲೆಯಲ್ಲಿ ಪ್ರತಿದಿನ 1600-1700 ಕೋವಿಡ್ ಪರೀಕ್ಷೆ ನಡೆಸಿ 16 ರಿಂದ 18 ಗಂಟೆಯೊಳಗಾಗಿ ವರದಿ ನೀಡಲಾಗುತ್ತಿದೆ. ಕೋವಿಡ್ ಪರೀಕ್ಷೆಗೆ ಸಂಬಂಧಿಸಿದಂತೆ ವೈದ್ಯಕೀಯ ಪರಿಕರ ಹಾಗೂ ಸಿಬ್ಬಂದಿಗಳ ಸಮಸ್ಯೆ ಇಲ್ಲ. ಶೇಕಡ 30 ರಷ್ಟು ಮಾತ್ರ ರ್ಯಾಪಿಡ್ ಆ್ಯಂಟಿಜನ್ ಪರೀಕ್ಷೆ ಮಾಡಲಾಗುತ್ತಿದೆ ಎಂದರು.
ಜಿಲ್ಲೆಯಲ್ಲಿ ಹೋಮ್ ಐಸೋಲೇಷನ್ ನೀಡುವುದನ್ನು ಕಡಿಮೆ ಮಾಡಲಾಗಿದ್ದು, ಕೋವಿಡ್ ಕೇರ್ ಸಂಖ್ಯೆಯನ್ನು ಹೆಚ್ಚಳ ಮಾಡಲಾಗಿದೆ. ಪ್ರತಿ ತಾಲ್ಲೂಕಿನಲ್ಲಿ 4-5 ಕೋವಿಡ್ ಕೇರ್ ಸೆಂಟರ್ಗಳನ್ನು ತೆರೆದು ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಕೋವಿಡ್ ಕೇರ್ ಸೆಂಟರ್ಗಳಲ್ಲಿ ಉತ್ತಮ ಪೌಷ್ಠಿಕ ಆಹಾರ ನೀಡಲಾಗುತ್ತಿದೆ. ಇದರ ಜೊತೆಯಲ್ಲಿ ದಾನಿಗಳು ಸಹ ಆಹಾರವನ್ನು ಒದಗಿಸುತ್ತಿದ್ದಾರೆ. ರಾಜರಾಜೇಶ್ವರಿ ಮೆಡಿಕಲ್ ಕಾಲೇಜಿನಿಂದ ಜಿಲ್ಲೆಗೆ 44 ಔಟ್ ಸರ್ಜನ್ಗಳನ್ನು ನೇಮಕ ಮಾಡಿಕೊಟ್ಟಿದ್ದಾರೆ. ಇವರ ಸೇವೆ ಪಡೆದು ಗ್ರಾಮಗಳಲ್ಲಿ ಆರೋಗ್ಯ ಶಿಬಿರವನ್ನು ಆಯೋಜಿಸಲಾಗುತ್ತಿದೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ನಾನ್ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ಸಹ ನೀಡಲಾಗುತ್ತಿದೆ ಎಂದರು.
ಜಿಲ್ಲೆಯಲ್ಲಿ ಹೊಸ ಜಿಲ್ಲಾಸ್ಪತ್ರೆಯಲ್ಲಿ 125 ಆಕ್ಸಿಜನೇಟರ್ ಬೆಡ್ ವ್ಯವಸ್ಥೆ ಇದ್ದು, ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕಂದಾಯ ಭವನದಲ್ಲಿರುವ ಕೋವಿಡ್ ರೆಫರಲ್ ಆಸ್ಪತ್ರೆಯಲ್ಲಿ 165 ಬೆಡ್ ಹಿಚ್ಚಳ ಮಾಡಲಾಗಿದ್ದು, ಕೆಲವು ವೈದ್ಯಕೀಯ ಸಲಕರಣೆಗಳು ಸರಬರಾಜು ಆಗಬೇಕಿದ್ದು, ತಕ್ಷಣದಲ್ಲೇ ಪ್ರಾರಂಭಿಸಲಾಗುವುದು ಜಿಲ್ಲೆಯಲ್ಲಿ 26 ಐ.ಸಿ.ಯು ಹಾಗೂ 16 ವೆಂಟಿಲೇಟರ್ ಬೆಡ್ಗಳು ಖಾಲಿ ಇದ್ದು, ಬೆಡ್ಗಳ ಸಮಸ್ಯೆ ಇಲ್ಲ ಎಂದರು.
ಜಿಲ್ಲೆಯಲ್ಲಿ ಲಸಿಕೆಯ ಕೊರತೆ ಇಲ್ಲ ಕೋವ್ಯಾಕ್ಸಿನ್ ಲಸಿಕೆಯನ್ನು ಎರಡನೇ ಡೋಸ್ಗೆ ಮಾತ್ರ ಉಪಯೋಗಿಸಲಾಗುತ್ತಿದೆ. ಬೀದಿ ಬದಿ ವ್ಯಾಪರಿಗಳು, ವಾಹನ ಚಾಲಕರು, ಕಟ್ಟಡ ಕಾರ್ಮಿಕರು ಮುಂತಾದ ಆದ್ಯತಾ ವಲಯದ 18 ರಿಂದ 44 ವಯೋಮಿತಿಯೊಳಗಿನವರಿಗೆ ಮೊದಲ ಡೋಸ್ ಕೋವಿಶೀಲ್ಡ್ ಹಾಗೂ 45 ವರ್ಷ ಮೇಲ್ಪಟ್ಟವರಿಗೆ ಕೋವಿಶೀಲ್ಡ್ ಲಸಿಕೆ ನೀಡಲಾಗುತ್ತಿದೆ ಎಂದರು.
ಜಿಲ್ಲೆಯಲ್ಲಿ 9 ಬ್ಲ್ಯಾಕ್ ಫಂಗಸ್ ಪ್ರಕರಣ ವರದಿಯಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ-2, ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ-2, ವಿಕ್ಟೋರಿಯಾ ಆಸ್ಪತ್ರೆಯಲ್ಲಿ-4 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಒಬ್ಬರು ಗುಣಮುಖರಾಗಿರುತ್ತಾರೆ ಎಂದರು.
ಪತ್ರಿಕಾ ಗೋಷ್ಠಿಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯಾಕಾರ್ಯನಿರ್ವಹಕ ಇಕ್ರಂ, ಅಪರ ಜಿಲ್ಲಾಧಿಕಾರಿ ಜವರೇಗೌಡ ಟಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಿರಂಜನ್ ಹಾಗೂ ಆರ್.ಸಿ.ಹೆಚ್ ಅಧಿಕಾರಿ ಡಾ.ಪದ್ಮಾ ಉಪಸ್ಥಿತರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in corona »
ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ
ರಾಮನಗರ ಜಿಲ್ಲೆಯಲ್ಲಿ ಕಳೆದ ಏಳು ತಿಂಗಳ ನಂತರ ಇದೇ ಮೊದಲ ಬಾರಿಗೆ ಕೊರೋನಾ ಕಾಣಿಸಿಕೊಂಡಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬಿಡದಿ ಬಳಿಯ ಬೈರಮಂಗಲ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ
ಸೆ.17 ರಂದು ತಪ್ಪದೇ ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ
ರಾಮನಗರ.ಸೆ 17: ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, 318 ಲಸಿಕಾ ತಂಡವನ್ನು ರಚಿಸಲಾಗಿದೆ. ತಂಡಗಳು
ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ
ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಮೇಳವನ್ನು ಹಮ್ನಿಕೊಳ್ಳಲಾಗಿದ್ದು, 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರ
ಸೆಪ್ಟೆಂಬರ್ 8 ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ
ರಾಮನಗರ ,ಸೆ.7; ಕೋವಿಡ್-19 ಲಸಿಕಾಕರಣದ ಪ್ರಗತಿ ವೃದ್ದಿಯ ಉಪಕ್ರಮವಾಗಿ ಸೆಪ್ಟೆಂಬರ್ 8 ರಂದು ಜಿಲ್ಲೆಯಾದ್ಯಂತ ಕೋವಿಡ್-19 ಲಸಿಕಾ
ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ
ಜಿಲ್ಲಾ ಆಸ್ಪತ್ರೆ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಕೋವಿಡ್ ಮೂರನೇ ಅಲೆ ಎದುರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋ
ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ
ಚನ್ನಪಟ್ಟಣ.ಜು.12: ತಾಲ್ಲೂಕಿನಾದ್ಯಂತ ಇರುವ ಸಂಘಟಿತ ಮತ್ತು ಅಸಂಘಟಿತ ಕಟ್ಟಡ ಕಾರ್ಮಿಕರಿಗೆ ಇಲಾಖೆ ವತಿಯಿಂದ ದಿನಸಿ ಕಿಟ್ ನೀಡಲಾಗುತ್ತಿದ್ದು, ತಾಲ್ಲೂಕಿನಲ್ಲಿ ಮಂತ್ರಿ ಮತ್ತು ಶಾಸಕರ ನೇತೃತ್
ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ
ಕೊರೊನಾ ದಿಂದ ಜನಸಾಮಾನ್ಯರ ಬದುಕು ಅಧ:ಪತನಕ್ಕಿಳಿದಿರುವುದು ಸತ್ಯ. ಇದಕ್ಕಾಗಿ, ಪಕ್ಷಗಳು, ಸಂಘಸಂಸ್ಥೆಗಳು ಮತ್ತು ಉಳ್ಳವರನೇಕರು ಬಡಬಗ್ಗರಿಗೆ ದಿನಸಿ ಕಿಟ್ ನೀಡುತ್ತಿರುವುದು ಶ್ಲಾಘನೀಯವಾದರೂ ಕೋವಿಡ್
ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ
ರಾಮನಗರ: ವಾರಾಂತ್ಯದ ಕರ್ಫ್ಯೂ ಗೆ ಕಳೆದ ವಾರದಂತೆ ಈ ವಾರವೂ ಸಹ ಬದಲಾವಣೆಗಳೊಂದಿಗೆ ಮಾರ್ಪಡಿಸಿದ್ದು, ಶನಿವಾರ ಮತ್ತು ಭಾನುವಾರ ಎರಡೂ ದಿನಗಳಲ್ಲಿ
ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ
ಸಂಭವನೀಯ ಕೋವಿಡ್ 3 ನೇ ಅಲೆಯ ಸಂದರ್ಭದಲ್ಲಿ ಯಾವುದೇ ಮಕ್ಕಳಿಗೆ ತೊಂದರೆಯಾಗದಂತೆ ಹಾಗೂ ತುರ್ತು ಚಿಕಿತ್ಸೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ
115 ನೇ ದಿನಕ್ಕೆ ಕಾಲಿಟ್ಟ ಇರುಳಿಗರ ಪ್ರತಿಭಟನೆ
ರಾಮನಗರ: ಕೈಲಾಂಚ ಹೋಬಳಿಯ ವಡ್ಡರಹಳ್ಳಿ ಗೊಲ್ಲರದೊಡ್ಡಿ ಗ್ರಾಮದ ಇರುಳಿಗ ಜನಾಂಗದವರು ಹಂದಿಗೊಂದಿ ಅರಣ್ಯ
ಪ್ರದೇಶದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಕೋವಿಡ್ ಎರಡನೇ ಅಲೆ ಹೆ
ಪ್ರತಿಕ್ರಿಯೆಗಳು