Tel: 7676775624 | Mail: info@yellowandred.in

Language: EN KAN

    Follow us :


ಕೋವಿಡ್ ಚಿಕಿತ್ಸೆಗೆ ಜಿಲ್ಲೆಯಲ್ಲಿ 20 ಕೋವಿಡ್ ಕೇರ್ ಸೆಂಟರ್ ತೆರೆಯಲಾಗಿದೆ. ಜಿಲ್ಲಾಧಿಕಾರಿ ರಾಕೇಶ್ ಕುಮಾರ್

Posted date: 03 Jun, 2021

Powered by:     Yellow and Red

ಕೋವಿಡ್ ಚಿಕಿತ್ಸೆಗೆ ಜಿಲ್ಲೆಯಲ್ಲಿ 20 ಕೋವಿಡ್ ಕೇರ್ ಸೆಂಟರ್ ತೆರೆಯಲಾಗಿದೆ. ಜಿಲ್ಲಾಧಿಕಾರಿ ರಾಕೇಶ್ ಕುಮಾರ್

ರಾಮನಗರ; ಕೋವಿಡ್ ಸೋಂಕನ್ನು ತಡೆಗಟ್ಟಿ ಸೋಂಕಿತರಿಗೆ ಚಿಕಿತ್ಸೆ ನೀಡುವ ದೊಡ್ಡ ಜವಾಬ್ದಾರಿ ಜಿಲ್ಲಾಡಳಿತದ ಮೇಲಿದೆ.  ಕೆಲವರಿಗೆ ಆಸ್ಪತ್ರೆಯಲ್ಲಿ ಉನ್ನತಮಟ್ಟದ ಚಿಕಿತ್ಸೆ ನೀಡುವ ಅವಶ್ಯಕತೆ ಇದೆ. ಕೋವಿಡ್ ರೋಗ ಲಕ್ಷಣ ಇಲ್ಲದವರಿಗೆ ಹಾಗೂ ಸಣ್ಣ ಪುಟ್ಟ ಲಕ್ಷಣ ಇರುವವರಿಗೆ ಕೋವಿಡ್ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ನೀಡಬೇಕಿದೆ.


ಹೋಮ್ ಐಸೋಲೇಷನ್‌ನಲ್ಲಿ ಕೋವಿಡ್ ರೋಗವು ಹೆಚ್ಚು ಜನರಿಗೆ ಹರಡಬಹುದು ಎಂದು ಜಿಲ್ಲಾಡಳಿತ ಹೋಮ್ ಐಸೋಲೇಷನ್‌ನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಹೆಚ್ಚು ಕೋವಿಡ್ ಕೇರ್ ಸೆಂಟರ್‌ಗಳನ್ನು ತೆರೆದು ಚಿಕಿತ್ಸೆ ನೀಡತ್ತಿದೆ. ಕೋವಿಡ್ ಕೇರ್ ಸೆಂಟರ್‌ನಲ್ಲಿ ರೋಗಿಗಳ ಮೇಲೆ ನಿಗಾ ವಹಿಸಲು ವೈದ್ಯರು ಹಾಗೂ ಅಧಿಕಾರಿಗಳನ್ನು ಸಹ ನಿಯೋಜಿಸಲಾಗಿದೆ. 


ರಾಮನಗರ ತಾಲ್ಲೂಕಿನಲ್ಲಿ ಸುಗ್ಗನಹಳ್ಳಿ ಆಯುಷ್ ತರಬೇತಿ ಕೇಂದ್ರದಲ್ಲಿ-95, ಕೆ.ಪಿ.ದೊಡ್ಡಿಯ ಮಾರಾರ್ಜಿ ದೇಸಾಯಿ ವಸತಿ ನಿಲಯದಲ್ಲಿ-100, ಮಾಯಗಾನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ನಿಲಯದಲ್ಲಿ-100, ಗೊಲ್ಲಹಳ್ಳಿ ಮೊರಾರ್ಜಿ ದೇಸಾಯಿ ವಸತಿ ನಿಲಯದಲ್ಲಿ-100 ಹಾಗೂ ಹನುಮಾನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ನಿಲಯದಲ್ಲಿ-120.

ಚನ್ನಪಟ್ಟಣ ತಾಲ್ಲೂಕಿನ ಹೊನ್ನಾಯಕನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ-100, ಹೊನ್ನಾಯಕನಹಳ್ಳಿ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ-95, ಜೆ.ಬ್ಯಾಡರಹಳ್ಳಿ ಬಿ.ಜಿ.ಎಸ್. ವಸತಿ ಶಾಲೆಯಲ್ಲಿ-49, ಚಕ್ಕೆರೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ-100 ಹಾಗೂ ಮಹದೇಶ್ವರ ನಗರ ಡಿ.ದೇವರಾಜು ಅರಸು ಹಿಂದುಳಿದ ವರ್ಗದ ಬಾಲಕರ ವಸತಿ ನಿಲಯದಲ್ಲಿ-45 . ಕನಕಪುರ ತಾಲ್ಲೂಕಿನ ಹೊಸಕೋಟೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ-110, ದೊಡ್ಡ ಬಾದಗೆರೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ-160, ಕೋಡಿಹಳ್ಳಿ ಬಾಲಕರ ಮೆಟ್ರಿಕ್  ವಸತಿ ನಿಲಯದಲ್ಲಿ-100, ದೊಡ್ಡಾಲಹಳ್ಳಿ ಬಾಲಕಿಯರ ಮೆಟ್ರಿಕ್  ವಸತಿ ನಿಲಯದಲ್ಲಿ-75 ಹಾಗೂ ಸಾತನೂರು ಆಶ್ರಮ ಶಾಲೆ ವಸತಿ ಗೃಹದಲ್ಲಿ-80, ಮಾಗಡಿ ತಾಲ್ಲೂಕಿನಲ್ಲಿ ಹುಲಿಕಟ್ಟೆ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ-100, ಕುದೂರು ಸರ್ಕಾರಿ ಬಾಲಕರ ವಸತಿ ನಿಲಯ-1 ರಲ್ಲಿ -30, ಯಲ್ಲಾಪುರ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ-100, ಮೊರಾರ್ಜಿ ದೇಸಾಯಿ ಬಾಲಕರ ವಸತಿ ನಿಲಯದಲ್ಲಿ-60 ಹಾಗೂ ಸರ್ಕಾರಿ ಬಾಲಕರ ವಸತಿ ನಿಲಯ-3 ರಲ್ಲಿ -24 ಮಂದಿ ಸೇರಿದಂತೆ ಒಟ್ಟು 1,769 ಬೆಡ್‌ಗಳ ವ್ಯವಸ್ಥೆ ಮಾಡಲಾಗಿದೆ. ಕೋವಿಡ್ ಸೋಂಕಿತರು ಚಿಕಿತ್ಸೆ ಪಡೆದು ಗುಣಮುಖರಾಗುತ್ತಿದ್ದಾರೆ ಎಂದರು.


ಗ್ರಾಮ ಪಂಚಾಯಿತಿ ವತಿಯಿಂದ  ಕೋವಿಡ್ ಕೇರ್ ಸೆಂಟರ್‌ಗೆ ದಾಖಲಾದ ಸೋಂಕಿತರಿಗೆ ಬೇಕಿರುವ ಮಾಸ್ಕ್ ಹಾಗೂ ಸ್ಯಾನಿಟೈಜರ್‌ಗಳನ್ನು  ನೀಡಲಾಗುತ್ತಿದೆ. ಸ್ವಚ್ಛತೆಗೆ ಆದ್ಯತೆ ನೀಡಿ ಪ್ರತಿದಿನ ಪಿ.ಪಿ.ಇ ಕಿಟ್ ಧರಿಸಿ ಸಿಬ್ಬಂದಿಗಳು ಶೌಚಾಲಯ ಸೇರಿದಂತೆ ಕೋವಿಡ್ ಕೇರ್ ಸೆಂಟರ್  ಸ್ವಚ್ಛತಾ ಕಾರ್ಯವನ್ನು ಪ್ರತಿದಿನ ಕೈಗೊಳ್ಳಲಾಗುತ್ತಿದೆ.


ಪೌಷ್ಠಿಕ ಆಹಾರ ಸೇವನೆ ಅತಿ ಮುಖ್ಯವಾಗಿದ್ದು, ಚನ್ನಪಟ್ಟಣ ತಾಲ್ಲೂಕಿನ ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಪ್ರತಿದಿನ ಬೆಳಗಿನ ಉಪಹಾರ, ಮಧ್ಯಾಹ್ನ ಹಾಗೂ ರಾತ್ರಿ ಊಟ ಎರಡು ಬಾರಿ ಕಾಫಿ ಹಾಗೂ ಟೀ ನೀಡಲಾಗುತ್ತಿದೆ. ಪ್ರತಿದಿನ ಮೊಟ್ಟೆ, ಬಾಳೆಹಣ್ಣು‌ ಹಾಗೂ   ಕಾಫಿ ಮತ್ತು ಟೀ ಯೊಂದಿಗೆ ಸೇವಿಸಲು ಎಲ್ಲರಿಗೂ ಒಂದು ಪ್ಯಾಕೇಟ್ ಬಿಸ್ಕೆಟ್ ಸಹ ನೀಡಲಾಗುತ್ತಿದೆ ಎನ್ನುತ್ತಾರೆ ಚನ್ನಪಟ್ಟಣ ತಹಶೀಲ್ದಾರ್ ನಾಗೇಶ್.


ಹಾಸ್ಟೆಲ್ ಗಳಲ್ಲಿ ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಸೋಂಕಿತರಿಗೆ ಕುಡಿಯಲು ಬಿಸಿ ನೀರು ನೀಡಲು ಹಾಟ್ ವಾಟರ್ ಡಿಸ್ಪೆನ್ಸರ್ ಗಳ ವ್ಯವಸ್ಥೆ ಸಹ ಮಾಡಲಾಗಿದೆ. ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಸ್ನಾನದ ಬಿಸಿ ನೀರಿಗಾಗಿ ಸೋಲಾರ್ ಇದ್ದು, ತೊಂದರೆ ಇರುವ ಕಡೆ ಗೀಜರ್ ಗಳನ್ನು ಸಹ ಅಳವಾಡಿಸಲಾಗಿದೆ.


*ವೈದ್ಯಕೀಯ ವ್ಯವಸ್ಥೆ:* ಕೋವಿಡ್ ಕೇರ್ ಸೆಂಟರ್ ಗಳಲ್ಲಿ‌ ಸೋಂಕಿತರ ಆರೋಗ್ಯದ ಮೇಲೆ ನಿಗಾ ವಹಿಸಲು ವೈದ್ಯರನ್ನು ನಿಯೋಜಿಸಲಾಗಿದೆ. ಸೋಂಕಿತರು ದಾಖಲಾದಾಗ ವಿಟಮಿನ್ ಸಿ ಹಾಗೂ ಜಿಂಕ್ ಮಾತ್ರೆಗಳನ್ನು ನೀಡಲಾಗುವುದು. ಸಣ್ಣದಾಗಿ ರೋಗ ಲಕ್ಷಣವಿದ್ದಲ್ಲಿ ಅದಕ್ಕೆ ಅನುಗುಣವಾಗಿ ಔಷಧಿ ಸಹ ನೀಡಲಾಗುವುದು. ಆಕ್ಸಿಜನ್ ಲೆವಲ್ ನ್ನು ಪರೀಕ್ಷಿಸಲಾಗುತ್ತದೆ. ಆಕ್ಸಿಜನ್ ಲೆವಲ್  ಕಡಿಮೆಯಾಗಿ ಸೋಂಕಿತರ ಆರೋಗ್ಯದಲ್ಲಿ ತೊಂದರೆ ಆದರೆ ತಕ್ಷಣ ಚಿಕಿತ್ಸೆ ನೀಡಲು ಆಕ್ಸಿಜನ್ ಕಾನ್ಸನ್ ಟ್ರೇಟರ್ ವ್ಯವಸ್ಥೆ ಸಹ ಇದ್ದು, ಹೆಚ್ಚಿನ ಚಿಕಿತ್ಸೆಗೆ ಉನ್ನತ ಆಸ್ಪತ್ರೆಗೆ ದಾಖಲಿಸಲಾಗುವುದು.


ಗ್ರಾಮ ಪಂಚಾಯಿತಿ, ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಆರೋಗ್ಯ ಕೇಂದ್ರಗಳು ನಿರ್ವಹಿಸುತ್ತಿರುವ ಕೋವಿಡ್ ಕೇರ್ ಸೆಂಟರ್ ವ್ಯವಸ್ಥೆ ನೋಡಿಕೊಳ್ಳಲು ಪ್ರತಿ ಕೋವಿಡ್ ಕೇರ್ ಸೆಂಟರ್ ಗೆ ಒಬ್ಬರು ನೋಡಲ್ ಅಧಿಕಾರಿಗಳು ಇರುತ್ತಾರೆ. ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಉಪವಿಭಾಗಾಧಿಕಾರಿಗಳು ಕೋವಿಡ್ ಕೇರ್ ಸೆಂಟರ್ ಗಳಿಗೆ  ಭೇಟಿ ನೀಡಿ ಸೋಂಕಿತರೊಂದಿಗೆ ಆರೋಗ್ಯ ಹಾಗೂ‌ ವ್ಯವಸ್ಥೆಗಳ ಬಗ್ಗೆ ಚರ್ಚಿಸುತ್ತಾರೆ‌. ತೊಂದರೆಗಳಿದ್ದಲ್ಲಿ ಪರಿಹರಿಸುತ್ತಿದ್ದಾರೆ.


ಪ್ರತಿ ಸೆಂಟರ್ ನಲ್ಲೂ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲು ಪೊಲೀಸ್ ಇಲಾಖೆ ವತಿಯಿಂದ ಪೊಲೀಸ್ ಗಳನ್ನು ಸಹ ನಿಯೋಜಿಸಲಾಗಿದೆ.


ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪೊಲೀಸ್ ಇಲಾಖೆಯಿಂದ ಕೋವಿಡ್ ಸೋಂಕನ್ನು ಹರಡದಂತೆ ತಡೆಗಟ್ಟಲು ಹಾಗೂ ಕೋವಿಡ್ ಸೋಂಕಿತರಿಗೆ ಉತ್ತಮ ವ್ಯವಸ್ಥೆ ಕಲ್ಪಿಸಿ  ಚಿಕಿತ್ಸೆ ನೀಡಲು ಶ್ರಮಿಸಲಾಗುತ್ತಿದೆ. ಸಾರ್ವಜನಿಕರು ರೋಗದ ಲಕ್ಷಣ ಕಂಡು‌ ಬಂದ ತಕ್ಷಣ ಪರೀಕ್ಷೆಗೆ ಒಳಪಟ್ಟು ಕೋವಿಡ್ ಸೋಂಕು ಕಂಡುಬಂದಲ್ಲಿ ವೈದ್ಯರ ಸಲಹೆ‌ ಪಡೆದು ಕೋವಿಡ್ ಕೇರ್‌‌ ಸೆಂಟರ್ ನ್ನು‌ ಸದುಪಯೋಗ ಪಡಿಸಿಕೊಳ್ಳಿ‌ ಎಂದು ಜಿಲ್ಲಾಧಿಕಾರಿ ಡಾ ರಾಕೇಶ್ ಕುಮಾರ್ ಮಾಹಿತಿ ನೀಡಿದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in corona »

ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ
ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ

ರಾಮನಗರ ಜಿಲ್ಲೆಯಲ್ಲಿ ಕಳೆದ ಏಳು ತಿಂಗಳ ನಂತರ ಇದೇ ಮೊದಲ ಬಾರಿಗೆ ಕೊರೋನಾ ಕಾಣಿಸಿಕೊಂಡಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬಿಡದಿ ಬಳಿಯ ಬೈರಮಂಗಲ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ‌

ಸೆ.17 ರಂದು ತಪ್ಪದೇ  ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ
ಸೆ.17 ರಂದು ತಪ್ಪದೇ ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ

ರಾಮನಗರ.ಸೆ 17: ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, 318 ಲಸಿಕಾ ತಂಡವನ್ನು ರಚಿಸಲಾಗಿದೆ. ತಂಡಗಳು

ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ
ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ

ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಮೇಳವನ್ನು ಹಮ್ನಿಕೊಳ್ಳಲಾಗಿದ್ದು, 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರ

ಸೆಪ್ಟೆಂಬರ್ 8  ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ
ಸೆಪ್ಟೆಂಬರ್ 8 ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ

ರಾಮನಗರ ,ಸೆ.7; ಕೋವಿಡ್-19 ಲಸಿಕಾಕರಣದ ಪ್ರಗತಿ ವೃದ್ದಿಯ ಉಪಕ್ರಮವಾಗಿ ಸೆಪ್ಟೆಂಬರ್ 8 ರಂದು  ಜಿಲ್ಲೆಯಾದ್ಯಂತ  ಕೋವಿಡ್-19 ಲಸಿಕಾ

ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ
ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ

ಜಿಲ್ಲಾ ಆಸ್ಪತ್ರೆ ಹಾಗೂ ತಾಲ್ಲೂಕು  ಆಸ್ಪತ್ರೆಗಳಲ್ಲಿ ಕೋವಿಡ್ ಮೂರನೇ ಅಲೆ ಎದುರಿಸಲು ಸಕಲ ಸಿದ್ಧತೆ  ಮಾಡಿಕೊಳ್ಳಿ ಎಂದು ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋ

ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ
ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ

ಚನ್ನಪಟ್ಟಣ.ಜು.12: ತಾಲ್ಲೂಕಿನಾದ್ಯಂತ ಇರುವ ಸಂಘಟಿತ ಮತ್ತು ಅಸಂಘಟಿತ  ಕಟ್ಟಡ ಕಾರ್ಮಿಕರಿಗೆ ಇಲಾಖೆ ವತಿಯಿಂದ ದಿನಸಿ ಕಿಟ್ ನೀಡಲಾಗುತ್ತಿದ್ದು, ತಾಲ್ಲೂಕಿನಲ್ಲಿ ಮಂತ್ರಿ ಮತ್ತು ಶಾಸಕರ ನೇತೃತ್

ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ
ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ

ಕೊರೊನಾ ದಿಂದ ಜನಸಾಮಾನ್ಯರ ಬದುಕು ಅಧ:ಪತನಕ್ಕಿಳಿದಿರುವುದು ಸತ್ಯ. ಇದಕ್ಕಾಗಿ, ಪಕ್ಷಗಳು, ಸಂಘಸಂಸ್ಥೆಗಳು ಮತ್ತು ಉಳ್ಳವರನೇಕರು ಬಡಬಗ್ಗರಿಗೆ ದಿನಸಿ ಕಿಟ್ ನೀಡುತ್ತಿರುವುದು ಶ್ಲಾಘನೀಯವಾದರೂ ಕೋವಿಡ್

ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ
ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ

ರಾಮನಗರ: ವಾರಾಂತ್ಯದ ಕರ್ಫ್ಯೂ ಗೆ ಕಳೆದ ವಾರದಂತೆ ಈ ವಾರವೂ ಸಹ ಬದಲಾವಣೆಗಳೊಂದಿಗೆ ಮಾರ್ಪಡಿಸಿದ್ದು, ಶನಿವಾರ ಮತ್ತು ಭಾನುವಾರ ಎರಡೂ ದಿನಗಳಲ್ಲಿ

ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ
ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ

ಸಂಭವನೀಯ ಕೋವಿಡ್ 3 ನೇ ಅಲೆಯ ಸಂದರ್ಭದಲ್ಲಿ ಯಾವುದೇ ಮಕ್ಕಳಿಗೆ ತೊಂದರೆಯಾಗದಂತೆ ಹಾಗೂ ತುರ್ತು ಚಿಕಿತ್ಸೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು  ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ

115 ನೇ ದಿನಕ್ಕೆ ಕಾಲಿಟ್ಟ  ಇರುಳಿಗರ ಪ್ರತಿಭಟನೆ
115 ನೇ ದಿನಕ್ಕೆ ಕಾಲಿಟ್ಟ ಇರುಳಿಗರ ಪ್ರತಿಭಟನೆ

ರಾಮನಗರ: ಕೈಲಾಂಚ ಹೋಬಳಿಯ ವಡ್ಡರಹಳ್ಳಿ ಗೊಲ್ಲರದೊಡ್ಡಿ ಗ್ರಾಮದ ಇರುಳಿಗ ಜನಾಂಗದವರು ಹಂದಿಗೊಂದಿ ಅರಣ್ಯ 

ಪ್ರದೇಶದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಕೋವಿಡ್ ಎರಡನೇ ಅಲೆ ಹೆ

Top Stories »  


Top ↑