ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ
ಚನ್ನಪಟ್ಟಣ.ಜು.12: ತಾಲ್ಲೂಕಿನಾದ್ಯಂತ ಇರುವ ಸಂಘಟಿತ ಮತ್ತು ಅಸಂಘಟಿತ ಕಟ್ಟಡ ಕಾರ್ಮಿಕರಿಗೆ ಇಲಾಖೆ ವತಿಯಿಂದ ದಿನಸಿ ಕಿಟ್ ನೀಡಲಾಗುತ್ತಿದ್ದು, ತಾಲ್ಲೂಕಿನಲ್ಲಿ ಮಂತ್ರಿ ಮತ್ತು ಶಾಸಕರ ನೇತೃತ್ವದಲ್ಲಿ ನೀಡಲಾಗುತ್ತಿದ್ದು, ಇಂದು ಜೆಡಿಎಸ್ ನೇತೃತ್ವದಲ್ಲಿ ನೀಡಿದ ದಿನಸಿ ಕಿಟ್ಗಳಿಗೆ ಜನರು ಕೊರೊನಾ ಲೆಕ್ಕಿಸದೆ ಮುಗಿಬಿದ್ದಿದ್ದರು.
ಇಲಾಖೆಯು ಹತ್ತು ದಿನಗಳ ಹಿಂದೆಯೇ ಪ್ರವಾಸೋದ್ಯಮ ಸಚಿವ ಸಿ.ಪಿ ಯೋಗೇಶ್ವರ್ ಅವರ ನೇತೃತ್ವದಲ್ಲಿ ಹಂಚಲು 10 ಸಾವಿರ ಮತ್ತು ಶಾಸಕರಾದ ಹೆಚ್.ಡಿ ಕುಮಾರಸ್ವಾಮಿಯವರು ಹಂಚಲು 5 ಸಾವಿರ ದಿನಸಿ ಕಿಟ್ಗಳನ್ನು ಇಲಾಖೆವತಿಯಿಂದ ತಾಲ್ಲೂಕಿಗೆ ನೀಡಲಾಗಿತ್ತು ಎಂದು ಬಲ್ಲ ಮೂಲಗಳು ತಿಳಿಸಿವೆ.
ತಾಲ್ಲೂಕಿನಲ್ಲಿ 8 ಸಾವಿರ ಮಂದಿ ನೋಂದಾಯಿತ ಕಾರ್ಮಿಕರಿದ್ದು, ಉಳಿದವರು ಅಸಘಂಟಿತರಾಗಿದ್ದಾರೆ. ಆದರೆ ಇಲಾಖೆ ಶನಿವಾರ ಮಹೇಶ್ವರ ಕಲ್ಯಾಣ ಮಂಟಪದಲ್ಲಿ ಕಿಟ್ ನೀಡುತ್ತಿದ್ದು, ಕಾರ್ಮಿಕರು ಯಾವುದೇ ರೀತಿಯ ಕೊರೊನಾ ಮುನ್ನೆಚ್ಚರಿಕೆ ವಹಿಸದೆ ನಾಮುಂದು ತಾಮುಂದು ಎಂದು ಕಿಟ್ ಪಡೆದುಕೊಳ್ಳಲು ಮುಗಿಬಿದ್ದಿದ್ದರು.
ಬೆರಣಿಕೆಯಷ್ಟಿದ್ದ ಇಲಾಖೆಯ ಸಿಬ್ಬಂದಿ ಮತ್ತು ಪೊಲೀಸ್ ಸಿಬ್ಬಂದಿಗಳು ಕಂಡೂ ಕಾಣದಂತೆ ಮೌನವಹಿಸಿದ್ದರು.
8 ಸಾವಿರ ಮಂದಿಗೆ 15 ಸಾವಿರ ಕಿಟ್ ಅನ್ನು ಇಲಾಖೆ ನೀಡಿದ್ದು, ಯಾವ ಲೆಕ್ಕಾಚಾರದ ಮೇಲೆ ಇಲಾಖೆಯು ಕಿಟ್ ಕೊಟ್ಟಿದೆ? ಎಂಬುದನ್ನು ತಿಳಿಯಲು ಕಾರ್ಮಿಕ ಇಲಾಖೆಯ ಸಹಾಯ ನಿರ್ದೇಶಕ ಮುನಿಲಿಂಗೇಗೌಡರಿಗೆ ಪತ್ರಿಕೆಯು ಹತ್ತಕ್ಕೂ ಹೆಚ್ಚು ಬಾರಿ ಕರೆ ಮಾಡಿದರೂ ಸ್ಪಂದಿಸಲಿಲ್ಲ.
ಶನಿವಾರ ಕಿಟ್ ಪಡೆದವರಲ್ಲಿ, ಕಟ್ಟಡ ಕಾರ್ಮಿಕರಿಗಿಂತ ಸ್ಥಳೀಯ ನಾಯಕರ ಹಿಂಬಾಲಕರೇ ಹೆಚ್ಚು ಮಂದಿ ಕಿಟ್ ಪಡೆದರು ಎಂದು ಕಾರ್ಮಿಕರ ಆರೋಪವಾಗಿದೆ. ಇಲಾಖೆಯು ಯಾವ ಆಧಾರದ ಮೇಲೆ ಕಿಟ್ ಗಳನ್ನು ಹಂಚಿದ್ದಾರೆ ಎಂಬುದು ತಿಳಿದು ಬರಬೇಕಾಗಿದೆ.
ಶನಿವಾರದ ವೇಳೆ ಕಿಟ್ ಪಡೆದುಕೊಳ್ಳುವ ಸಂದರ್ಭದಲ್ಲಿ ಕೊರೊನಾ ಮುಜಾಗ್ರತೆ ವಹಿಸದಿರುವುದರಿಂದ ಸಂಬಂಧಿಸಿದ ಇಲಾಖೆಗಳು ಕಾರ್ಮಿಕ ಇಲಾಖೆ ಮತ್ತು ಸ್ಥಳೀಯ ನಾಯಕರ ಮೇಲೆ ಕ್ರಮತೆಗೆದುಕೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದರು.
ಕಾರ್ಮಿಕ ಇಲಾಖೆಯು ಕಾರ್ಮಿಕರಿಗೆ ನೀಡುವ ಕಿಟ್ ನೆಪಮಾತ್ರವಾಗಿದ್ದು, ಸ್ಥಳೀಯ ನಾಯಕರ ಹಿಂಬಾಲಕರು, ಕೆಲ ಗುತ್ತಿಗೆದಾರರ ಬಳಿ ಕೆಲಸ ನಿರ್ವಹಿಸುವ ಕಾರ್ಮಿಕರು ಹೆಚ್ಚಾಗಿದ್ದರು. ಇವರುಗಳಿಂದ ನಿಜವಾದ ಕಾರ್ಮಿಕರು ಕಿಟ್ ಪಡೆದುಕೊಳ್ಳಲು ಸಾಹಸ ಪಡಬೇಕಾಯಿತು ಎಂದು ಸ್ಥಳೀಯ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರು ದೂರಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in corona »
ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ
ರಾಮನಗರ ಜಿಲ್ಲೆಯಲ್ಲಿ ಕಳೆದ ಏಳು ತಿಂಗಳ ನಂತರ ಇದೇ ಮೊದಲ ಬಾರಿಗೆ ಕೊರೋನಾ ಕಾಣಿಸಿಕೊಂಡಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬಿಡದಿ ಬಳಿಯ ಬೈರಮಂಗಲ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ
ಸೆ.17 ರಂದು ತಪ್ಪದೇ ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ
ರಾಮನಗರ.ಸೆ 17: ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, 318 ಲಸಿಕಾ ತಂಡವನ್ನು ರಚಿಸಲಾಗಿದೆ. ತಂಡಗಳು
ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ
ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಮೇಳವನ್ನು ಹಮ್ನಿಕೊಳ್ಳಲಾಗಿದ್ದು, 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರ
ಸೆಪ್ಟೆಂಬರ್ 8 ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ
ರಾಮನಗರ ,ಸೆ.7; ಕೋವಿಡ್-19 ಲಸಿಕಾಕರಣದ ಪ್ರಗತಿ ವೃದ್ದಿಯ ಉಪಕ್ರಮವಾಗಿ ಸೆಪ್ಟೆಂಬರ್ 8 ರಂದು ಜಿಲ್ಲೆಯಾದ್ಯಂತ ಕೋವಿಡ್-19 ಲಸಿಕಾ
ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ
ಜಿಲ್ಲಾ ಆಸ್ಪತ್ರೆ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಕೋವಿಡ್ ಮೂರನೇ ಅಲೆ ಎದುರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋ
ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ
ಚನ್ನಪಟ್ಟಣ.ಜು.12: ತಾಲ್ಲೂಕಿನಾದ್ಯಂತ ಇರುವ ಸಂಘಟಿತ ಮತ್ತು ಅಸಂಘಟಿತ ಕಟ್ಟಡ ಕಾರ್ಮಿಕರಿಗೆ ಇಲಾಖೆ ವತಿಯಿಂದ ದಿನಸಿ ಕಿಟ್ ನೀಡಲಾಗುತ್ತಿದ್ದು, ತಾಲ್ಲೂಕಿನಲ್ಲಿ ಮಂತ್ರಿ ಮತ್ತು ಶಾಸಕರ ನೇತೃತ್
ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ
ಕೊರೊನಾ ದಿಂದ ಜನಸಾಮಾನ್ಯರ ಬದುಕು ಅಧ:ಪತನಕ್ಕಿಳಿದಿರುವುದು ಸತ್ಯ. ಇದಕ್ಕಾಗಿ, ಪಕ್ಷಗಳು, ಸಂಘಸಂಸ್ಥೆಗಳು ಮತ್ತು ಉಳ್ಳವರನೇಕರು ಬಡಬಗ್ಗರಿಗೆ ದಿನಸಿ ಕಿಟ್ ನೀಡುತ್ತಿರುವುದು ಶ್ಲಾಘನೀಯವಾದರೂ ಕೋವಿಡ್
ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ
ರಾಮನಗರ: ವಾರಾಂತ್ಯದ ಕರ್ಫ್ಯೂ ಗೆ ಕಳೆದ ವಾರದಂತೆ ಈ ವಾರವೂ ಸಹ ಬದಲಾವಣೆಗಳೊಂದಿಗೆ ಮಾರ್ಪಡಿಸಿದ್ದು, ಶನಿವಾರ ಮತ್ತು ಭಾನುವಾರ ಎರಡೂ ದಿನಗಳಲ್ಲಿ
ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ
ಸಂಭವನೀಯ ಕೋವಿಡ್ 3 ನೇ ಅಲೆಯ ಸಂದರ್ಭದಲ್ಲಿ ಯಾವುದೇ ಮಕ್ಕಳಿಗೆ ತೊಂದರೆಯಾಗದಂತೆ ಹಾಗೂ ತುರ್ತು ಚಿಕಿತ್ಸೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ
115 ನೇ ದಿನಕ್ಕೆ ಕಾಲಿಟ್ಟ ಇರುಳಿಗರ ಪ್ರತಿಭಟನೆ
ರಾಮನಗರ: ಕೈಲಾಂಚ ಹೋಬಳಿಯ ವಡ್ಡರಹಳ್ಳಿ ಗೊಲ್ಲರದೊಡ್ಡಿ ಗ್ರಾಮದ ಇರುಳಿಗ ಜನಾಂಗದವರು ಹಂದಿಗೊಂದಿ ಅರಣ್ಯ
ಪ್ರದೇಶದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಕೋವಿಡ್ ಎರಡನೇ ಅಲೆ ಹೆ
ಪ್ರತಿಕ್ರಿಯೆಗಳು