ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ
![ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ](https://sanmitra.co.in//domains/sanmitra/images/2926_yellowandred.jpg)
ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಮೇಳವನ್ನು ಹಮ್ನಿಕೊಳ್ಳಲಾಗಿದ್ದು, 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರು ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೋವಿಡ್ ಲಸಿಕಾ ಮೇಳದ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದರು.
ಕೋವಿಡ್ ಲಸಿಕೆ ಪಡೆಯಲು ಜಿಲ್ಲೆಯಲ್ಲಿ 1,81,000 ಮೊದಲ ಡೋಸ್ ಹಾಗೂ ಎರಡನೇ ಡೋಸ್ ಪಡೆಯಲು 50,000 ಜನರು ಬಾಕಿ ಇದ್ದು, ಲಸಿಕೆ ಪಡೆಯದೇ ಇರುವವರನ್ನು ಗುರುತಿಸಿ ಒಟ್ಟುಗೂಡಿಸುವುದು ದೊಡ್ಡ ಸವಾಲಾಗಿದ್ದು, ಎಲ್ಲಾ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದರು.
ಗ್ರಾಮ ಹಾಗೂ ವಾಡ್೯ ಮಟ್ಟದ ಟಾಸ್ಕ್ ಫೋರ್ಸ್ ಸಭೆ ಕರೆದು ಲಸಿಕೆ ನೀಡುವ ಸ್ಥಳವನ್ನು ಗುರುತಿಸಿ. ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಶಿಕ್ಷಕರು ಮನೆ ಮನೆ ಭೇಟಿ ಮಾಡಿ ಲಸಿಕೆ ಪಡೆಯದೆ ಇರುವ ಜನರನ್ನು ಗುರುತಿಸಿ ಲಸಿಕೆ ಪಡೆಯಲು ಒಟ್ಟುಗೂಡಿಸುವ ಕೆಲಸಕ್ಕೆ ನಿಯೋಜಿಸುವಂತೆ ತಹಶೀಲ್ದಾರ್ ಗಳಿಗೆ ನಿರ್ದೇಶನ ನೀಡಿದರು.
ಲಸಿಕೆ ನೀಡಲು 318 ತಂಡಗಳನ್ನು ರಚಿಸಲಾಗುವುದು, ಪ್ರತಿ ತಂಡದಲ್ಲಿ ಮೆಡಿಕಲ್ ಆಫೀಸರ್, ವ್ಯಾಕ್ಸಿನೇಟರ್ ಹಾಗೂ ಡಾಟಾ ಎಂಟ್ರಿ ಆಪರೇಟರ್ ಇರಲಿದ್ದಾರೆ. ಲಸಿಕೆ ಪಡೆಯುವುದರಲ್ಲಿ ಕಡಿಮೆ ಸಾಧನೆಯಾಗಿರುವ ಸ್ಥಳವನ್ನು ಗುರುತಿಸಿ, ಕಟ್ಟಡ ಕಾರ್ಮಿಕರು ಹೆಚ್ಚಿರುವ ಸ್ಥಳಗಳನ್ನು ಗುರುತಿಸಿ, ಲಸಿಕೆ ನೀಡುವ ಸ್ಥಳ ಜನರಿಗೆ ಹತ್ತಿರ ಹಾಗೂ ಲಸಿಕೆ ನೀಡಲು ಯಾವುದೇ ತೊಂದರೆಯಾಗದ ಸ್ಥಳವನ್ನು ಗುರುತಿಸಿ ಯೋಜನೆ ಸಿದ್ದಪಡಿಸಿಕೊಂಡು ವರದಿ ನೀಡುವಂತೆ ತಿಳಿಸಿದರು.
ಚನ್ನಪಟ್ಟಣ ತಾಲ್ಲೂಕು-15,000, ಕನಕಪುರ ತಾಲ್ಲೂಕು-15,000, ರಾಮನಗರ ತಾಲ್ಲೂಕು- 10,000 ಹಾಗೂ ಮಾಗಡಿ ತಾಲೂಕಿಗೆ-10,000 ಗುರಿ ನಿಗದಿ ಮಾಡಿ ಜಿಲ್ಲಾಧಿಕಾರಿಗಳು ಸೆ. 17 ರಂದು ಲಸಿಕಾ ಮೇಳ ಗ್ರಾಮ ಹಾಗೂ ವಾಡ್೯ಗಳಲ್ಲಿ ಬೆಳಿಗ್ಗೆ 7.30 ಕ್ಕೆ ಪ್ರಾರಂಭವಾಗಬೇಕು ಎಂದರು.
ಕೋವಿಡ್ ವಿರುದ್ಧದ ಹೋರಾಟದಲ್ಲಿ ಸಾರ್ವಜನಿಕರ ಸಹಭಾಗಿತ್ವ ಅತ್ಯಂತ ಮುಖ್ಯ. ಕೋವಿಡ್ ಲಸಿಕೆ ಪಡೆಯುವುದರಿಂದ ಯಾವುದೇ ಅಡ್ಡ ಪರಿಣಾಮ ಉಂಟಾಗುವುದಿಲ್ಲ. ಲಸಿಕಾ ಮೇಳವನ್ನು ಸದುಪಯೋಗಪಡಿಸಿಕೊಳ್ಳಿ ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಇಕ್ರಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಿರೀಶ್, ಅಪರ ಜಿಲ್ಲಾಧಿಕಾರಿ ಜವರೇಗೌಡ ಟಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ: ನಿರಂಜನ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in corona »
![ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ](https://sanmitra.co.in//domains/sanmitra/images/3549_yellowandred_a.jpeg)
ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ
ರಾಮನಗರ ಜಿಲ್ಲೆಯಲ್ಲಿ ಕಳೆದ ಏಳು ತಿಂಗಳ ನಂತರ ಇದೇ ಮೊದಲ ಬಾರಿಗೆ ಕೊರೋನಾ ಕಾಣಿಸಿಕೊಂಡಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬಿಡದಿ ಬಳಿಯ ಬೈರಮಂಗಲ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ
![ಸೆ.17 ರಂದು ತಪ್ಪದೇ ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ ಸೆ.17 ರಂದು ತಪ್ಪದೇ ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ](https://sanmitra.co.in//domains/sanmitra/images/2929_yellowandred.jpg)
ಸೆ.17 ರಂದು ತಪ್ಪದೇ ಕೋವಿಡ್ ಲಸಿಕೆ ಪಡೆದುಕೊಳ್ಳಿ : ಡಾ: ರಾಕೇಶ್ ಕುಮಾರ್ ಕೆ
ರಾಮನಗರ.ಸೆ 17: ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, 318 ಲಸಿಕಾ ತಂಡವನ್ನು ರಚಿಸಲಾಗಿದೆ. ತಂಡಗಳು
![ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ](https://sanmitra.co.in//domains/sanmitra/images/2926_yellowandred.jpg)
ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ
ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಮೇಳವನ್ನು ಹಮ್ನಿಕೊಳ್ಳಲಾಗಿದ್ದು, 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರ
![ಸೆಪ್ಟೆಂಬರ್ 8 ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ ಸೆಪ್ಟೆಂಬರ್ 8 ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ](https://sanmitra.co.in//domains/sanmitra/images/2915_yellowandred.jpeg)
ಸೆಪ್ಟೆಂಬರ್ 8 ರಂದು ಜಿಲ್ಲಾದ್ಯಂತ ಕೋವಿಡ್ ಲಸಿಕಾ ಮೇಳ
ರಾಮನಗರ ,ಸೆ.7; ಕೋವಿಡ್-19 ಲಸಿಕಾಕರಣದ ಪ್ರಗತಿ ವೃದ್ದಿಯ ಉಪಕ್ರಮವಾಗಿ ಸೆಪ್ಟೆಂಬರ್ 8 ರಂದು ಜಿಲ್ಲೆಯಾದ್ಯಂತ ಕೋವಿಡ್-19 ಲಸಿಕಾ
![ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ](https://sanmitra.co.in//domains/sanmitra/images/2864_yellowandred.jpg)
ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ
ಜಿಲ್ಲಾ ಆಸ್ಪತ್ರೆ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಕೋವಿಡ್ ಮೂರನೇ ಅಲೆ ಎದುರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋ
![ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ](https://sanmitra.co.in//domains/sanmitra/images/2796_yellowandred.jpg)
ಕಾರ್ಮಿಕ ಇಲಾಖೆಯ ಕಿಟ್ ನೀಡಿದ ಜೆಡಿಎಸ್. ಕೊರೊನಾ ಲೆಕ್ಕಿಸದೆ ಮುಗಿಬಿದ್ದ ಸಹಸ್ರಾರು ಮಂದಿ
ಚನ್ನಪಟ್ಟಣ.ಜು.12: ತಾಲ್ಲೂಕಿನಾದ್ಯಂತ ಇರುವ ಸಂಘಟಿತ ಮತ್ತು ಅಸಂಘಟಿತ ಕಟ್ಟಡ ಕಾರ್ಮಿಕರಿಗೆ ಇಲಾಖೆ ವತಿಯಿಂದ ದಿನಸಿ ಕಿಟ್ ನೀಡಲಾಗುತ್ತಿದ್ದು, ತಾಲ್ಲೂಕಿನಲ್ಲಿ ಮಂತ್ರಿ ಮತ್ತು ಶಾಸಕರ ನೇತೃತ್
![ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ](https://sanmitra.co.in//domains/sanmitra/images/2771_yellowandred.jpg)
ಕೊರೊನಾ ಅಣಕಿಸಿದ ಕಾಂಗ್ರೆಸ್ ದಿನಸಿ ಕಿಟ್. ಕಿಟ್ ಗಾಗಿ ಮುಗಿಬಿದ್ದ ಜನಸಾಮಾನ್ಯರು. ಗಾಳಿಗೆ ತೂರಿಹೋದ ನಿಯಮ
ಕೊರೊನಾ ದಿಂದ ಜನಸಾಮಾನ್ಯರ ಬದುಕು ಅಧ:ಪತನಕ್ಕಿಳಿದಿರುವುದು ಸತ್ಯ. ಇದಕ್ಕಾಗಿ, ಪಕ್ಷಗಳು, ಸಂಘಸಂಸ್ಥೆಗಳು ಮತ್ತು ಉಳ್ಳವರನೇಕರು ಬಡಬಗ್ಗರಿಗೆ ದಿನಸಿ ಕಿಟ್ ನೀಡುತ್ತಿರುವುದು ಶ್ಲಾಘನೀಯವಾದರೂ ಕೋವಿಡ್
![ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ](https://sanmitra.co.in//domains/sanmitra/images/2760_yellowandred.jpg)
ವಾರಾಂತ್ಯ ಕರ್ಫ್ಯೂ, 6 ರಿಂದ 2. ಅಗತ್ಯ ವಸ್ತುಗಳ ಅಂಗಡಿಗಳಿಗೆ ಮಾತ್ರ ಅವಕಾಶ. ಜಿಲ್ಲಾಧಿಕಾರಿ
ರಾಮನಗರ: ವಾರಾಂತ್ಯದ ಕರ್ಫ್ಯೂ ಗೆ ಕಳೆದ ವಾರದಂತೆ ಈ ವಾರವೂ ಸಹ ಬದಲಾವಣೆಗಳೊಂದಿಗೆ ಮಾರ್ಪಡಿಸಿದ್ದು, ಶನಿವಾರ ಮತ್ತು ಭಾನುವಾರ ಎರಡೂ ದಿನಗಳಲ್ಲಿ
![ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ](https://sanmitra.co.in//domains/sanmitra/images/2754_yellowandred.jpg)
ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ
ಸಂಭವನೀಯ ಕೋವಿಡ್ 3 ನೇ ಅಲೆಯ ಸಂದರ್ಭದಲ್ಲಿ ಯಾವುದೇ ಮಕ್ಕಳಿಗೆ ತೊಂದರೆಯಾಗದಂತೆ ಹಾಗೂ ತುರ್ತು ಚಿಕಿತ್ಸೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ
![115 ನೇ ದಿನಕ್ಕೆ ಕಾಲಿಟ್ಟ ಇರುಳಿಗರ ಪ್ರತಿಭಟನೆ 115 ನೇ ದಿನಕ್ಕೆ ಕಾಲಿಟ್ಟ ಇರುಳಿಗರ ಪ್ರತಿಭಟನೆ](https://sanmitra.co.in//domains/sanmitra/images/2741_yellowandred.jpg)
115 ನೇ ದಿನಕ್ಕೆ ಕಾಲಿಟ್ಟ ಇರುಳಿಗರ ಪ್ರತಿಭಟನೆ
ರಾಮನಗರ: ಕೈಲಾಂಚ ಹೋಬಳಿಯ ವಡ್ಡರಹಳ್ಳಿ ಗೊಲ್ಲರದೊಡ್ಡಿ ಗ್ರಾಮದ ಇರುಳಿಗ ಜನಾಂಗದವರು ಹಂದಿಗೊಂದಿ ಅರಣ್ಯ
ಪ್ರದೇಶದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಕೋವಿಡ್ ಎರಡನೇ ಅಲೆ ಹೆ
ಪ್ರತಿಕ್ರಿಯೆಗಳು