
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಅಕ್ರಮ: ಹೆಚ್ಚಿನ ವಿಚಾರಣೆಗಾಗಿ ಮೂವರು ಪೊಲೀಸರ ವಶಕ್ಕೆ: ಏಳು ಆರೋಪಿಗಳು ನ್ಯಾಯಾಂಗ ಬಂಧನಕ್ಕೆ
ರಾಮನಗರ: 2022-23 ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ಹತ್ತು ಆರೋಪಿಗಳನ್ನು ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ಇವರಲ್ಲಿ ಮೂವರನ್ನು ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ.ಮಾಗಡಿಯ ಕೆಂಪೇಗೌಡ ಶಾಲೆಯ ಪ್ರಾಚಾರ್ಯ ಶ್ರೀನಿವಾಸ, ಗುಮಾಸ್ತ ರಂಗೇಗೌಡ ಹಾಗೂ ರಂಗನಾಥ ಶಾಲೆಯ ಹಿಂದಿ ಶಿಕ್ಷಕ ಕೃಷ್ಣಮೂರ್ತಿ ಅವರನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ. ಉಳಿದ ಏಳು ಮಂದಿಯನ್ನು ನ್ಯಾ

ಎಸ್ಎಸ್ಎಲ್ಸಿ ಯಲ್ಲಿ ತಾಲ್ಲೂಕಿನಲ್ಲಿ ಶೇ 95.46 ಫಲಿತಾಂಶ
ಚನ್ನಪಟ್ಟಣ: ತಾಲೂಕಿನಲ್ಲಿ ಈ ಬಾರಿ ಒಟ್ಟು 2821 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಬರೆದಿದ್ದು, ಅದರಲ್ಲಿ 2693 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ. ಶೇ 95.46 ರಷ್ಟು ಫಲಿತಾಂಶದೊಂದಿಗೆ ಚನ್ನಪಟ್ಟಣ ತಾಲ್ಲೂಕು ಜಿಲ್ಲೆಯಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತದೆ. ತಾಲ್ಲೂಕಿನ ಒಟ್ಟು ಅರವತ್ತೇಳು ಪ್ರೌಢಶಾಲೆ

ರಾಮನಗರ, ಚನ್ನಪಟ್ಟಣ, ಕನಕಪುರ ತಾ.ಗಳಲ್ಲೂ ಸದ್ಯದಲ್ಲೇ ಮಾದರಿ ಪಬ್ಲಿಕ್ ಶಾಲೆ ಆರಂಭ
ಮಾಗಡಿ: ಸರಕಾರದ ಪ್ರತೀ ಗ್ರಾಮ ಪಂಚಾಯಿತಿಗೊಂದು ಮಾದರಿ ಪಬ್ಲಿಕ್ ಶಾಲೆ’ ಯೋಜನೆಯಡಿ ಅಭಿವೃದ್ಧಿಪಡಿಸಿರುವ ಸಂಕೀಘಟ್ಟ ಶಾಲೆಯನ್ನು ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಬುಧವಾರ ಲೋಕಾರ್ಪಣೆ ಮಾಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, 21ನೇ ಶತಮಾನವು ಜ್ಞಾನದ ಯುಗವಾಗಿದ್ದು, ಗುಣಮಟ್ಟದ ಶಿಕ್ಷಣವು ಅನಿವಾರ್ಯ ಅಗತ್ಯವಾಗಿದೆ. ಹೀಗಾಗಿ, ಕಡಿಮೆ ಮಕ್ಕಳಿರುವ ಸರಕಾರಿ ಶಾಲೆ

ಪ್ರಾಥಮಿಕ ಶಾಲಾ ಪದವೀಧರ ಸಮಸ್ಯೆ ಬಗೆಹರಿಸುವಂತೆ ಮನವಿ
ರಾಮನಗರ: ಸೇವಾ ನಿರತ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಕ್ರಮವಹಿಸಬೇಕು ಎಂದು ಡಿಡಿಪಿಐ ಹಾಗೂ ಡಯಟ್ ಪ್ರಾಂಶುಪಾಲರಿಗೆ ರಾಮನಗರ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಮನವಿ ಸಲ್ಲಿಸಿದರು.ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಕ್ರಮವಹಿಸಬೇಕು. ಇಲ್ಲದಿದ್ದರೆ ಕನಿಷ್ಠ ಮೂರು ತರಬೇತಿಗಳನ್ನು ಬಹಿಷ್ಕರಿಸಲಾಗುವುದು ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜ

ಶಿಕ್ಷಣ ವ್ಯಾಪಾರೀಕರಣವಾಗುತ್ತಿರುವುದು ಒಳ್ಳೆಯ ಬೆಳವಣಿಗೆ ಅಲ್ಲ: ಡಾ ಮುನಿರಾಜಪ್ಪ
ರಾಮನಗರ: ಜಾಗತೀಕರಣ, ಉದಾರೀಕರಣದಿಂದಾಗಿ ಪ್ರಸ್ತುತ ಶಿಕ್ಷಣ ಕ್ಷೇತ್ರವು ಹಣ ಮಾಡುವ ವ್ಯಾಪಾರವಾಗಿದೆ ಎಂದು ಹಿರಿಯ ಸಂಶೋಧಕ ಡಾ. ಮುನಿರಾಜಪ್ಪ ಬೇಸರ ವ್ಯಕ್ತಪಡಿಸಿದರು.ಇಲ್ಲಿನ ಜಾನಪದ ಲೋಕದ ದೊಡ್ಡಮನೆಯಲ್ಲಿ ಬೆಂಗಳೂರಿನ ಕಾವೇರಿ ಬಿ.ಇಡಿ ಕಾಲೇಜಿನ ವತಿಯಿಂದ ಪ್ರಶಿಕ್ಷಣಾರ್ಥಿಗಳಿಗೆ ಹಮ್ಮಿಕೊಂಡಿರುವ ‘ಸಮುದಾಯ ಜೀವನ ಶಿಬಿರ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಶಿಕ್ಷಕ ವೃತ್ತಿ ಖಂಡಿತವೂ ಹಣ ಗಳಿಸುವುದಕ್ಕೆ ದ

ಮತ್ತೀಕೆರೆ ಶ್ವೇತಾರಾಣಿ ಗೆ ಚಿನ್ನದ ಪದಕ
ಚನ್ನಪಟ್ಟಣ: ತಾಲೂಕಿನ ಮತ್ತೀಕೆರೆ ಗ್ರಾಮದ ಚಿಕ್ಕತಾಯಮ್ಮ ಮತ್ತು ಲೇಟ್ ತಿಮ್ಮೇಗೌಡ ಅವರ ಮೊಮ್ಮಗಳು ವಿ.ಶ್ವೇತಾರಾಣಿ ಮೈಸೂರು ವಿಶ್ವವಿದ್ಯಾಲಯದ 101 ನೇ ಘಟಿಕೋತ್ಸವದಲ್ಲಿ ಚಿನ್ನದ ಪದಕ ಮತ್ತು ನಗದು ಬಹುಮಾನಕ್ಕೆ ಭಾಜನರಾಗಿದ್ದಾರೆ.ಮಂಜುಳಾ ಮತ್ತು ಲೇಟ್ ವಸಂತಕುಮಾರ್ ಅವರ ಪುತ್ರಿಯಾದ ಶ್ವೇತಾರಾಣಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ಶಾಸ್ತ್ರ ವಿಷಯದ ಸ್ನಾತಕೋತ

ಸೋರುತಿಹುದು ಪೆಟ್ಟಾ ಶಾಲೆಯ ಮಾಳಿಗಿ. ವಿದ್ಯಾರ್ಥಿಗಳ ತಲೆಯ ಮೇಲೆ ತೂಗುಗತ್ತಿ
ಚನ್ನಪಟ್ಟಣ, ಸೆ.೦೬: ನಗರದಲ್ಲಿನ ಸುವರ್ಣ ಮಹೋತ್ಸವ ಆಚರಣೆಯ ಹೊಸ್ತಿಲಲ್ಲಿರುವ ಪಟ್ಟಣದ ಸರ್ಕಾರಿ ಶಾಲೆಯಲ್ಲಿ ಹೆಚ್ಚು ಪ್ರಸಿದ್ದಿ ಪಡೆದಿರುವ ಪಟ್ಟಣದ ಐದು ದೀಪಗಳ ವೃತ್ತ (ಡೂಂಲೈಟ್ ಸರ್ಕಲ್) ದಲ್ಲಿರುವ ಪೆಟ್ಟಾ ಸರ್ಕಾರಿ ಪ್ರಾಥಮಿಕ ಪಾಠ ಶಾಲೆಗೆ 50 ವರ್ಷಕ್ಕೂ ಹೆಚ್ಚು ಇತಿಹಾಸವಿದ್ದು, ಈ ಶಾಲೆಯಲ್ಲಿ ಶಿಕ್ಷಣ ಪಡೆದ ಹಲವಾರು ವಿದ್ಯಾರ್ಥಿಗಳು ಇಂದು ಸಮಾಜದಲ್ಲಿ ಗಣ್ಯವ್ಯಕ್ತಿಗಳಾಗಿದ್ದಾರೆ. ಇಂತಹ ಶಾಲೆ

ನಗರದ ಪ್ರಥಮ ದರ್ಜೆ ಕಾಲೇಜಿಗೆ ಉತ್ತಮ ಹೆಸರಿದೆ. ನ್ಯಾಕ್ ಸಮಿತಿ ಉತ್ತಮ ವರದಿ ನೀಡುವ ವಿಶ್ವಾಸವಿದೆ. ಹೆಚ್ಡಿಕೆ
ಚನ್ನಪಟ್ಟಣ, ಆ. 27: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ನ್ಯಾಕ್ ಸಮಿತಿ ಭೇಟಿ ನೀಡಿದ್ದು ಕಾಲೇಜಿನ ಪರವಾಗಿ ಉತ್ತಮ ವರದಿ ನೀಡುವ ವಿಶ್ವಾಸ ಇದೆ ಎಂದು ಮಾಜಿ ಮುಖ್ಯಮಂತ್ರಿಗಳು ಕ್ಷೇತ್ರದ ಶಾಸಕರು ಹಾಗೂ ಕಾಲೇಜಿಗೆ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು ವಿಶ್ವಾಸ ವ್ಯಕ್ತಪಡಿಸಿದರು.ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಭೇಟಿ ನೀಡಿ ಕಾಲೇಜಿನಲ್ಲಿ ಅಭಿವೃದ್ಧಿ ಮಾಡಲಾಗಿರುವ ಧನ್ವಂತರಿ ಉ

ಇಂದಿನಿಂದ ಆರಂಭಗೊಂಡ ಎಸ್ಎಸ್ಎಲ್ಸಿ ಪರೀಕ್ಷೆ. 17 ಪರೀಕ್ಷೆ ಕೇಂದ್ರಗಳು, 3,104 ವಿದ್ಯಾರ್ಥಿಗಳು
ರಾಜ್ಯದಾದ್ಯಂತ ಇಂದು ನಡೆಯುತ್ತಿರುವ ಎಸ್ಎಸ್ಎಲ್ಸಿ ಪರೀಕ್ಷೆಯು ತಾಲ್ಲೂಕಿನಲ್ಲಿಯೂ ನಡೆಯುತ್ತಿದೆ. ತಾಲ್ಲೂಕಿನಾದ್ಯಂತ ಒಟ್ಟು ಹದಿನೇಳು ಕೇಂದ್ರಗಳಲ್ಲಿ ಒಟ್ಟು 3,104 ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲಿದ್ದು, ಶಿಕ್ಷಣ ಇಲಾಖೆಯು ಆರೋಗ್ಯ ಇಲಾಖೆ ಮತ್ತು ಪೋಲಿಸ್ ಇಲಾಖೆಯ, ಸ್ಕೌಟ್ ಗೈಡ್ ಜೊತೆಗೂಡಿ ಮುಂಜಾಗ್ರತಾ ಕ್ರಮ ಕೈಗೊಂಡಿರುವುದಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜು ತಿಳಿಸಿದರು.ನಗರದ ಬಾಲ

ಸಿಇಓ ಇಕ್ರಂ ರವರ ಕಲ್ಪನೆಯಲ್ಲಿ ಅರಳಿದ ಮೈಲನಾಯಕನಹಳ್ಳಿ ಗ್ರಾಮದ ಅಂಗನವಾಡಿ
ಚನ್ನಪಟ್ಟಣ ತಾಲ್ಲೂಕಿನ ಮೈಲನಾಯಕನಹಳ್ಳಿ ಗ್ರಾಮದಲ್ಲಿ ಸುಂದರವಾದ ಅಂಗನವಾಡಿ ಕೇಂದ್ರ ನಿರ್ಮಾಣವಾಗಿದೆ. ಇದಕ್ಕೆ ಮೂಲ ಕಾರಣಕರ್ತ ರಾಮನಗರ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಇಕ್ರಂ ರವರು.ಅವರ ಆಸ್ಥೆಯಿಂದ ತಾಲ್ಲೂಕಿನಲ್ಲಿ ಪುಟ್ಟ ಮಕ್ಕಳಿಗೆ ಸ್ವರ್ಗ ಎಂದರೇನೆಂಬುದನ್ನು ತೋರಿಸಿಕೊಟ್ಟಿದ್ದಾರೆ.ಕೋವಿಡ್ ಸಮಯದಲ್ಲಿ ಅಂಗನವಾಡಿಯ ಸುಂದರ ಪರಿಕಲ್ಪನೆಗಾಗಿಯೇ ಅವರು ಎರಡು ದಿನಗಳ ಕಾಲ ತೆಲಂಗಾಣಕ್ಕೆ