Tel: 7676775624 | Mail: info@yellowandred.in

Language: EN KAN

    Follow us :


23ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ: ಸಕಲ ರೀತಿಯ ಸಿದ್ದತೆಗಳು-ಡಿಡಿಪಿಐ

Posted date: 21 Mar, 2018

Powered by:     Yellow and Red

23ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ: ಸಕಲ ರೀತಿಯ ಸಿದ್ದತೆಗಳು-ಡಿಡಿಪಿಐ

ರಾಮನಗರ : ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಇದೇ ಮಾ.23ರಿಂದ ಏಪ್ರಿಲ್ 6ರ ವರೆಗೆ ನಡೆಯಲಿದೆ. ಅದಕ್ಕಾಗಿ ಜಿಲ್ಲೆಯಲ್ಲಿ ಅಗತ್ಯವಿರುವ ಸಕಲ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. 
ಜಿಲ್ಲೆಯಲ್ಲಿ ಒಟ್ಟು 281 ಪ್ರೌಢ ಶಾಲೆಗಳಿದ್ದು, 13,228 ರೆಗ್ಯುಲರ್ ವಿದ್ಯಾರ್ಥಿಗಳು ಹಾಗೂ 446 ಖಾಸಗಿ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 13,674 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲು ಸಜ್ಜಾಗಿದ್ದಾರೆ. ಈ ವಿದ್ಯಾರ್ಥಿಗಳಿಗೆ ಚನ್ನಪಟ್ಟಣದಲ್ಲಿ 13, ಕನಕಪುರದಲ್ಲಿ 16, ಮಾಗಡಿಯಲ್ಲಿ 13 ಹಾಗೂ ರಾಮನಗರದಲ್ಲಿ 13 ಪರೀಕ್ಷಾ ಕೇಂದ್ರಗಳಂತೆ ಒಟ್ಟು 55 ಪರೀಕ್ಷಾ ಕೇಂದ್ರಗಳನ್ನು ರಚಿಸಲಾಗಿದ್ದು, 2 ಕೇಂದ್ರಗಳಲ್ಲಿ ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇವುಗಳಲ್ಲಿ ಸೂಕ್ಷ್ಮ ಹಾಗೂ ಅತೀ ಸೂಕ್ಷ್ಮ ಪರೀಕ್ಷಾ ಕೇಂದ್ರಗಳು ಯಾವುದು ಇಲ್ಲ. ಈ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಈ ಬಾರಿ ಸಿಸಿಟಿವಿಯನ್ನು ಅಳವಡಿಸಲಾಗಿದೆ. 
ಎಲ್ಲಾ 55 ಪರೀಕ್ಷಾ ಕೇಂದ್ರಗಳಿಗೂ ಸ್ಥಾನಿಕ ಜಾಗೃತಿ ದಳವನ್ನು ರೋಟೇಷನ್ ಪದ್ದತಿಯಲ್ಲಿ ಬ್ಲಾಕ್‍ವಾರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಂತದಲ್ಲಿ ಪಟ್ಟಿ ಸಿದ್ದಪಡಿಸಿಕೊಳ್ಳಲಾಗಿದ್ದು, ತಾಲೂಕು ಹಂತದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಹಶೀಲ್ದಾರರು, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳ ನೇತೃತ್ವದಲ್ಲಿ ಮೂರು ಸಂಚಾರಿ ಜಾಗೃತಿ ದಳಗಳನ್ನು ರಚಿಸಲಾಗಿದೆ. 
ಜಿಲ್ಲಾ ಹಂತದಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು (ಆಡಳಿತ) ಹಾಗು ಉಪನಿರ್ದೇಶಕರು (ಅಭಿವೃದ್ಧಿ) ಇವರ ನೇತೃತ್ವದಲ್ಲಿ ಒಟ್ಟು ನಾಲ್ಕು ಸಂಚಾರಿ ಜಾಗೃತಿ ದಳಗಳನ್ನು ರಚಿಸಲಾಗಿದೆ. 
ಎಲ್ಲಾ 55 ಪರೀಕ್ಷಾ ಕೇಂದ್ರಗಳಿಗೂ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ರೋಟೇಷನ್ ಮೂಲಕ ವೀಕ್ಷಕರನ್ನಾಗಿ ನೇಮಿಸಲು ಪಟ್ಟಿ ಸಿದ್ದಪಡಿಸಿಕೊಳ್ಳಲಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಆಸನಗಳ ವ್ಯವಸ್ಥೆ, ಗಾಳಿ ಬೆಳಕು, ಕುಡಿಯುವ ನೀರು, ಶೌಚಾಲಯಗಳ ವ್ಯವಸ್ಥೆ ಇರುವ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಖಚಿತ ಪಡಿಸಿಕೊಳ್ಳಲಾಗಿದೆ. 
ಎಲ್ಲಾ 55 ಪರೀಕ್ಷಾ ಕೇಂದ್ರಗಳಿಗೂ ಮಾರ್ಗ ಅಧಿಕಾರಿಗಳ ವಾಹನಗಳಿಗೆ ಭದ್ರತಾ ಕೊಠಡಿಗಳಿಗೆ ಸೂಕ್ತ ಭದ್ರತಾ ವ್ಯವಸ್ಥೆ ಮಾಡಿಕೊಳ್ಳಲಾಗಿದ್ದು, ಎಲ್ಲಾ ಪರೀಕ್ಷಾ ಕೇಂದ್ರಗಳಿಗೂ ಸೂಕ್ತ ಪ್ರಥಮ ಚಿಕಿತ್ಸಾ ಪೆಟ್ಟಿಗಳೊಡನೆ ಆರೋಗ್ಯ ಇಲಾಖೆ ಅಧಿಕಾರಗಳ ನಿಯೋಜನೆ ಮಾಡಿಕೊಳ್ಳುವ ಬಗ್ಗೆ ಯೋಜಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

 

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in education »

ಅಂದು ಶಾಲೆ ಕಲಿಯಲು ಪಡಿಪಾಟಲು ಪಡಬೇಕಾಗಿತ್ತು. ಅಪ್ಪಗೆರೆ ತಿಮ್ಮರಾಜು
ಅಂದು ಶಾಲೆ ಕಲಿಯಲು ಪಡಿಪಾಟಲು ಪಡಬೇಕಾಗಿತ್ತು. ಅಪ್ಪಗೆರೆ ತಿಮ್ಮರಾಜು

ಚನ್ನಪಟ್ಟಣ: ನಾವು ನಮ್ಮ ಕಾಲದಲ್ಲಿ ಶಾಲೆಗೆ ಹೋಗಿ ವಿದ್ಯೆ ಕಲಿಯಲು ಪಡಿಪಾಟಲು ಪಡಬೇಕಾಗಿತ್ತು. ಹಲವಾರು ಸಮಸ್ಯೆಗಳು ನಮ್ಮ ಎದುರಿಗಿದ್ದವು. ಆದರೆ, ಈಗ ಅಂತಹ

ಪ್ರತಿ ವಿದ್ಯಾರ್ಥಿಗಳು ಕೌಶಲ್ಯ ರೂಢಿಸಿಕೊಳ್ಳಬೇಕು: ಶಿಕ್ಷಣಾಧಿಕಾರಿ ಮರಿಗೌಡ
ಪ್ರತಿ ವಿದ್ಯಾರ್ಥಿಗಳು ಕೌಶಲ್ಯ ರೂಢಿಸಿಕೊಳ್ಳಬೇಕು: ಶಿಕ್ಷಣಾಧಿಕಾರಿ ಮರಿಗೌಡ

ಚನ್ನಪಟ್ಟಣ: ಶಾಲಾ ವಿದ್ಯಾರ್ಥಿಗಳು ಕೇವಲ ಪಾಠ ಮತ್ತು ಆಟಕ್ಕೆ ಸೀಮಿತವಾಗದೆ ವಿವಿಧ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು. ಕೌಶಲ್ಯ ಕಲಿತ ಮಕ್ಕಳ ಪ್ರತಿಭೆಯನ್ನ

ಪ್ರತಿ ಸರ್ಕಾರಗಳು ಪದವೀಧರರ ಜೊತೆ ಚೆಲ್ಲಾಟವಾಡುತ್ತಿವೆ, ಉದಯ್ ಸಿಂಗ್
ಪ್ರತಿ ಸರ್ಕಾರಗಳು ಪದವೀಧರರ ಜೊತೆ ಚೆಲ್ಲಾಟವಾಡುತ್ತಿವೆ, ಉದಯ್ ಸಿಂಗ್

ಚನ್ನಪಟ್ಟಣ: ಪ್ರತಿ ವರ್ಷವೂ ಲಕ್ಷಾಂತರ ಯುವಕ ಯುವತಿಯರು ಪದವಿಯೊಂದಿಗೆ ಹೊರಬರುತ್ತಾರೆ. ವಿಶ್ವ ವಿದ್ಯಾಲಯಗಳಿಂದ ಪದವಿಯೊಂದಿಗೆ ಬರುವವರಿಗೆ ಸೂಕ್ತ  ಉದ್ಯೋಗ

ದಿವ್ಯಚೇತನ ಇಂಗ್ಲಿಷ್ ಶಾಲೆಯಲ್ಲಿ ಮೇಳೈಸಿದ ಮಿನಿ ವಿಜ್ಞಾನ ಮೇಳ
ದಿವ್ಯಚೇತನ ಇಂಗ್ಲಿಷ್ ಶಾಲೆಯಲ್ಲಿ ಮೇಳೈಸಿದ ಮಿನಿ ವಿಜ್ಞಾನ ಮೇಳ

ಚನ್ನಪಟ್ಟಣ: ಅಗಸ್ತ್ಯ ಅಂತರಾಷ್ಟ್ರೀಯ ಪ್ರತಿಷ್ಠಾನ ಬ್ರಾಡ್ಕಾಂ ವಿಜ್ಞಾನ ಕೇಂದ್ರ ಚನ್ನಪಟ್ಟಣ ಇವರ ವತಿಯಿಂದ ನಗರದ ದಿವ್ಯ ಚೇತನ ಇಂಗ್ಲಿಷ್ ಪ್ರೌಢಶಾಲೆಯಲ್ಲ

ಪಾಠದ ಜೊತೆಗೆ ಆಟದಲ್ಲಿಯೂ ಮುಂಚೂಣಿಗೆ ಬರಬೇಕು. ವಿ ಬಾಲಸುಬ್ರಹ್ಮಣ್ಯಂ
ಪಾಠದ ಜೊತೆಗೆ ಆಟದಲ್ಲಿಯೂ ಮುಂಚೂಣಿಗೆ ಬರಬೇಕು. ವಿ ಬಾಲಸುಬ್ರಹ್ಮಣ್ಯಂ

ಚನ್ನಪಟ್ಟಣ,: ಪ್ರತಿಯೊಬ್ಬ ವಿದ್ಯಾರ್ಥಿಯು ಶಿಕ್ಷಣದ ಜೊತೆಯಲ್ಲಿ ಕ್ರೀಡಾಮನೋಭಾವನೆ ಬೆಳಸಿಕೊಳ್ಳಬೇಕು. ಮನಸ್ಸು ಉಲ್ಲಸಿತವಾಗಲು ಕ್ರೀಡೆ ಸಹಕಾರಿ ಎಂದು ಬಾಲು

ಉಪನ್ಯಾಸಕರ ಧರಣಿ, ಕಲಿಕೆಗೆ ತೊಂದರೆ, ಎಬಿವಿಪಿ ಯಿಂದ ಪ್ರತಿಭಟನೆ
ಉಪನ್ಯಾಸಕರ ಧರಣಿ, ಕಲಿಕೆಗೆ ತೊಂದರೆ, ಎಬಿವಿಪಿ ಯಿಂದ ಪ್ರತಿಭಟನೆ

ಚನ್ನಪಟ್ಟಣ: ಸರ್ಕಾರಿ ಕಾಲೇಜುಗಳ ಉಪನ್ಯಾಸಕರು ಧರಣಿ ನಿರತರಾಗಿರುವುದರಿಂದ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆಯಿದೆ. ಇದರಿಂದ ಶೈಕ್ಷಣಿಕ ವರ್ಷದ ಕಲಿಕೆಗೆ ತೊ

ಆರೋಗ್ಯ, ಆಯಸ್ಸು ಹೆಚ್ಚಿಸುವ ವೈದ್ಯರು ಆರೋಗ್ಯ ಕಾಪಾಡಿಕೊಳ್ಳಬೇಕು. ಚಾಮುಂಡೇಶ್ವರಿ ಆಸ್ಪತ್ರೆ ಉದ್ಘಾಟನೆಯಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ
ಆರೋಗ್ಯ, ಆಯಸ್ಸು ಹೆಚ್ಚಿಸುವ ವೈದ್ಯರು ಆರೋಗ್ಯ ಕಾಪಾಡಿಕೊಳ್ಳಬೇಕು. ಚಾಮುಂಡೇಶ್ವರಿ ಆಸ್ಪತ್ರೆ ಉದ್ಘಾಟನೆಯಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ

ಚನ್ನಪಟ್ಟಣ:bಆಸ್ಪತ್ರೆಗೆ ಬರುವ ರೋಗಿಗಳ ಅರೋಗ್ಯ ತಪಾಸಿಸಿ, ರೋಗ ವಾಸಿ ಮಾಡಿ, ಅವರ ಆರೋಗ್ಯ ದ ಜೊತೆಗೆ ಆಯಸ್ಸನ್ನು ಹೆಚ್ಚಿಸುವಲ್ಲಿ ನಿಷ್ಣಾತರಾದ ವೈದ್ಯರು

ಪೆಟ್ಟಾ ಸರ್ಕಾರಿ ಶಾಲಾ ಆವರಣದಲ್ಲಿ ನಗರಸಭೆಯ ಕಸದ ರಾಶಿ, ಅಲ್ಲಗಳೆದ ಪೌರಾಯುಕ್ತ
ಪೆಟ್ಟಾ ಸರ್ಕಾರಿ ಶಾಲಾ ಆವರಣದಲ್ಲಿ ನಗರಸಭೆಯ ಕಸದ ರಾಶಿ, ಅಲ್ಲಗಳೆದ ಪೌರಾಯುಕ್ತ

ಚನ್ನಪಟ್ಟಣ: ನಗರದ ಡೂಂ ಲೈಟ್ ವೃತ್ತದಲ್ಲಿರುವ ಏಳು ದಶಕದಷ್ಟು ಹಳೆಯಾದಾದ ಪೆಟ್ಟಾ ಹೆಸರಿನ ಸರ್ಕಾರಿ ಶಾಲಾ ಆವರಣದಲ್ಲಿ ಹತ್ತಾರು ಟನ್ ಕಸದ ರಾಶಿಯನ್ನು ರಾ

ಆರ್ಥಿಕವಾಗಿ ಬೆಳೆದವರೆಲ್ಲರೂ ವಿದ್ಯಾರ್ಜನೆಗೆ ಮುಂದಡಿಯಿಡಬೇಕು, ಸಚಿವ ಮಧುಬಂಗಾರಪ್ಪ
ಆರ್ಥಿಕವಾಗಿ ಬೆಳೆದವರೆಲ್ಲರೂ ವಿದ್ಯಾರ್ಜನೆಗೆ ಮುಂದಡಿಯಿಡಬೇಕು, ಸಚಿವ ಮಧುಬಂಗಾರಪ್ಪ

ಚನ್ನಪಟ್ಟಣ: ಬಡತನದ ಬೇಗೆಯಲ್ಲಿ ಬೆಂದು, ಉನ್ನತ ಶಿಕ್ಷಣ ಪಡೆದು, ಉತ್ತಮ ಸ್ಥಾನಮಾನದ ಜೊತೆಗೆ ಆರ್ಥಿಕವಾಗಿ ಸದೃಢವಾದ ನಂತರ ತನ್ನ ಜನ್ಮದಾತರಿಗೆ, ಹುಟ್ಡಿದೂರ

ಕಾವೇರಿ ಕಿಚ್ಚು, ರಾಮನಗರ ಜಿಲ್ಲೆ ಬಂದ್, ಶಾಲಾ-ಕಾಲೇಜಿಗೆ ರಜೆ, ಸರ್ಕಾರಿ ಕಛೇರಿ ರಜೆಗಾಗಿ ಕಾಯುತ್ತಿರುವ ನೌಕರರು
ಕಾವೇರಿ ಕಿಚ್ಚು, ರಾಮನಗರ ಜಿಲ್ಲೆ ಬಂದ್, ಶಾಲಾ-ಕಾಲೇಜಿಗೆ ರಜೆ, ಸರ್ಕಾರಿ ಕಛೇರಿ ರಜೆಗಾಗಿ ಕಾಯುತ್ತಿರುವ ನೌಕರರು

ರಾಮನಗರ: ನಮ್ಮ ರಾಜ್ಯದ ಕೆಲ ಭಾಗಗಳಿಗೆ ಕುಡಿಯುವ ನೀರಿಗೆ ತತ್ವಾರವಾಗಿದೆ, ಮಂಡ್ಯ, ಮೈಸೂರು ಭಾಗದ ರೈತರಿಗೆ ಬೆಳೆ ಬೆಳೆಯಲು ನೀರಿಲ್ಲಾ, ಇಂತಹ ಸಂಕಷ್ಟದ ಸಮಯ

Top Stories »  


Top ↑