Tel: 7676775624 | Mail: info@yellowandred.in

Language: EN KAN

    Follow us :


ನಗರದ ಪ್ರಥಮ ದರ್ಜೆ ಕಾಲೇಜಿಗೆ ಉತ್ತಮ ಹೆಸರಿದೆ. ನ್ಯಾಕ್ ಸಮಿತಿ ಉತ್ತಮ ವರದಿ ನೀಡುವ ವಿಶ್ವಾಸವಿದೆ. ಹೆಚ್ಡಿಕೆ

Posted date: 28 Aug, 2021

Powered by:     Yellow and Red

ನಗರದ ಪ್ರಥಮ ದರ್ಜೆ ಕಾಲೇಜಿಗೆ ಉತ್ತಮ ಹೆಸರಿದೆ. ನ್ಯಾಕ್ ಸಮಿತಿ ಉತ್ತಮ ವರದಿ ನೀಡುವ ವಿಶ್ವಾಸವಿದೆ. ಹೆಚ್ಡಿಕೆ

ಚನ್ನಪಟ್ಟಣ, ಆ. 27:  ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ನ್ಯಾಕ್ ಸಮಿತಿ ಭೇಟಿ ನೀಡಿದ್ದು ಕಾಲೇಜಿನ ಪರವಾಗಿ ಉತ್ತಮ ವರದಿ ನೀಡುವ ವಿಶ್ವಾಸ ಇದೆ ಎಂದು ಮಾಜಿ ಮುಖ್ಯಮಂತ್ರಿಗಳು ಕ್ಷೇತ್ರದ ಶಾಸಕರು ಹಾಗೂ ಕಾಲೇಜಿಗೆ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು ವಿಶ್ವಾಸ ವ್ಯಕ್ತಪಡಿಸಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಭೇಟಿ ನೀಡಿ ಕಾಲೇಜಿನಲ್ಲಿ ಅಭಿವೃದ್ಧಿ ಮಾಡಲಾಗಿರುವ ಧನ್ವಂತರಿ ಉದ್ಯಾನವನವನ್ನು ಉದ್ಘಾಟನೆ ಮಾಡಿ ಮಾತನಾಡಿದ ಅವರು, ಕಾಲೇಜಿಗೆ ನ್ಯಾಕ್ ಸಮಿತಿ ಭೇಟಿ ಮಾಡಿದ್ದು ಈಗಾಗಲೆ ಕಾಲೇಜಿನ ಮೂಲಭೂತ ಸೌಲಭ್ಯಗಳ ಬಗ್ಗೆ ಪರಿಶೀಲನೆ ಮಾಡಿದ್ದಾರೆ. ಕಾಲೇಜಿನ ಉಪನ್ಯಾಸಕರಿಂದ ಕಾಲೇಜಿನ ಫಲಿತಾಂಶದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಪೋಷಕರಿಂದ ಕಾಲೇಜಿನ ಶಿಕ್ಷಣದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಇಂದು ಸಹ ಮಧ್ಯಾಹ್ನದ ಬಳಿಕ ಕಾಲೇಜಿಗೆ ಭೇಟಿ ನೀಡಲಿದ್ದಾರೆ. ನ್ಯಾಕ್ ಸಮಿತಿಯಿಂದ ಕಾಲೇಜಿನ ಬಗ್ಗೆ ಸರ್ಕಾರಕ್ಕೆ ಉತ್ತಮ ವರದಿ ನೀಡುವ ವಿಶ್ವಾಸ ಇದೆ ಎಂದು ಹೇಳಿದರು.


ಕಾಲೇಜಿನಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಹೆಚ್ಚು ಶಿಕ್ಷಣ ಪಡೆಯುತ್ತಿದ್ದಾರೆ. ಕಾಲೇಜಿನಲ್ಲಿ 3,500 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದು, ಈ ನಿಟ್ಟಿನಲ್ಲಿ ಕಾಲೇಜಿಗೆ ಅಗತ್ಯ ಇರುವ ಸೌಲಭ್ಯಗಳನ್ನು ಒದಗಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಈ ನಿಟ್ಟಿನಲ್ಲಿ ಕಾಲೇಜಿನಲ್ಲಿ ಮೂಲಭೂತ ಸೌಲಭ್ಯಗಳ ಸಂಪೂರ್ಣವಾಗಿದೆ. ಕಾಲೇಜಿಗೆ ಹೆಚ್ಚಿನ ಸೌಲಭ್ಯ ಅಗತ್ಯವಿದ್ದಲ್ಲಿ ಒದಗಿಸುವುದಾಗಿ ಕುಮಾರಸ್ವಾಮಿ ಅವರು ತಿಳಿಸಿದರು.


ಮೈಸೂರಿನಲ್ಲಿ ಯುವತಿ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಗೃಹಸಚಿವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಹೆಚ್ಡಿಕೆ ತಾಲೂಕು ಸೇರಿದಂತೆ ರಾಜ್ಯದಲ್ಲಿ ಪೊಲೀಸ್ ಇಲಾಖೆ ನಿಷ್ಕ್ರಿಯವಾಗಿದೆ. ಮೈಸೂರು ಪ್ರಕರಣದಂತೆ ತುಮಕೂರಿನಲ್ಲೂ ಅತ್ಯಾಚಾರ ಪ್ರಕರಣ ನಡೆದಿದೆ. ಇಂದು ಸಾರ್ವಜನಿಕವಾಗಿ ಮದ್ಯ ಸೇವನೆಗೆ ಅವಕಾಶ ಮಾಡಿಕೊಟ್ಟು ಕಣ್ಮುಚ್ಚಿ ಕುಳಿತಿದ್ದರೆ. ಇದು ಅತ್ಯಾಚಾರ ಪ್ರಕರಣಗಳಿಗೆ ದಾರಿಯಾಗುತ್ತಿದೆ. ಗ್ರಾಮೀಣ ಭಾಗದಲ್ಲಿ ಅಂಗಡಿಗಳಲ್ಲಿ ಮಟ್ಕಾ, ಮದ್ಯಮಾರಾಟ ನಡೆಯುತ್ತಿದೆ. ಆದರೂ ಪೊಲೀಸ್ ಇಲಾಖೆ ಮೌನವಾಗಿದೆ. ಸರ್ಕಾರವು ಪೊಲೀಸರಿಂದ ಹಣ ಪಡೆದು ವರ್ಗಾವಣೆ ಮಾಡುವುದನ್ನು ನಿಲ್ಲಿಸುವವರೆಗೆ ಪೊಲೀಸರು ನಿಷ್ಟರಾಗಿ ಕೆಲಸ ಮಾಡುವುದಿಲ್ಲ ಎಂದು ಆರೋಪ ಮಾಡಿದರು.


ಬಳಿಕ ಪ್ರಾಂಶುಪಾಲರ ಜೊತೆ ಚರ್ಚೆ ಮಾಡಿದರು. ಸಂದರ್ಭದಲ್ಲಿ ತಹಸೀಲ್ದಾರ್ ಎಲ್. ನಾಗೇಶ್, ಬಿಇಓ ನಾಗರಾಜು, ಇಓ ಚಂದ್ರು, ನಗರಸಭಾ ಪೌರಾಯುಕ್ತ ಶಿವನಂಕಾರಿಗೌಡ,  

ಕಾಲೇಜಿನ ಹಾಲಿ ಹಾಗೂ ಹಳೆ ವಿದ್ಯಾರ್ಥಿಗಳ ಸಂಘದಿಂದ ಕುಮಾರಸ್ವಾಮಿ ಅವರನ್ನು ಸನ್ಮಾನಿಸಲಾಯಿತು. ಸಂದರ್ಭದಲ್ಲಿ ಪ್ರಾಂಶುಪಾಲ ಡಾ. ವಿ. ವೆಂಕಟೇಶ್, ಸಮಾಜ ಸೇವಕ ಪಂಚಮಿ ಟ್ರಸ್ಟ್‌ನ ಪ್ರಸನ್ನ, ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಉಜ್ಜನಹಳ್ಳಿ ರವೀಶ್, ಕೂರಣಗೆರೆ ರವಿ, ಹೆಚ್.ಸಿ.ಜಯಮುತ್ತು, ಬೋರ್‌ವೆಲ್ ರಾಮಚಂದ್ರು, ರಾಂಪುರ ರಾಜಣ್ಣ, ಸತೀಶ್‌ಬಾಬು ಸೇರಿದಂತೆ ಕಾಲೇಜುನ ಉಪನ್ಯಾಸಕರು ಇದ್ದರು.


ಶ್ಲಾಘನೆ: ಕಾಲೇಜು ಅಭಿವೃದ್ಧಿ ಬಗ್ಗೆ ಪರಿಶೀಲನೆ ಮಾಡಲು ನ್ಯಾಕ್ ಸಮಿತಿ ಬಂದಿದ್ದ ವೇಳೆ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಕುಮಾರಸ್ವಾಮಿ ಅವರು ಭಾಗವಹಿಸಬೇಕಿತ್ತು. ಆದರೆ ನಿನ್ನೆ ಅವರು ಕೆಲ ಕಾರಣದಿಂದ ಕಾಲೇಜಿಗೆ ಬಂದಿರಲಿಲ್ಲ. ಆದರೆ ಶುಕ್ರವಾರ ಅವರು ಹಾಜರಾಗಿ ಕಾಲೇಜಿನಲ್ಲಿನ ಅಭಿವೃದ್ಧಿಗಳ ಬಗ್ಗೆ ಮತ್ತಷ್ಟು ಮಾಹಿತಿ ಪಡೆದು ಏನೇ ಸಹಕಾರ ಬೇಕಾದರೂ ಕೇಳಿ ಎಂದು ಪ್ರಾಂಶುಪಾಲರು ಮತ್ತು ಉಪನ್ಯಾಸಕರಿಗೆ ಪ್ರೋತ್ಸಾಹ ನೀಡಿದ್ದು ಶ್ಲಾಘನೀಯವಾಗಿದೆ.


ಗೋ ರಾ ಶ್ರೀನಿವಾಸ...

ಮೊ:9845856139.

??????????????

  • ????? ???????? ??????????? ???? ??????????.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in education »

ಮತ್ತೀಕೆರೆ ಶ್ವೇತಾರಾಣಿ ಗೆ ಚಿನ್ನದ ಪದಕ
ಮತ್ತೀಕೆರೆ ಶ್ವೇತಾರಾಣಿ ಗೆ ಚಿನ್ನದ ಪದಕ

ಚನ್ನಪಟ್ಟಣ: ತಾಲೂಕಿನ ಮತ್ತೀಕೆರೆ ಗ್ರಾಮದ ಚಿಕ್ಕತಾಯಮ್ಮ ಮತ್ತು ಲೇಟ್ ತಿಮ್ಮೇಗೌಡ ಅವರ ಮೊಮ್ಮಗಳು ವಿ.ಶ್ವೇತಾರಾಣಿ ಮೈಸೂರು ವಿಶ್ವವಿದ್ಯಾಲಯದ 1

ಸೋರುತಿಹುದು ಪೆಟ್ಟಾ ಶಾಲೆಯ ಮಾಳಿಗಿ. ವಿದ್ಯಾರ್ಥಿಗಳ ತಲೆಯ ಮೇಲೆ ತೂಗುಗತ್ತಿ
ಸೋರುತಿಹುದು ಪೆಟ್ಟಾ ಶಾಲೆಯ ಮಾಳಿಗಿ. ವಿದ್ಯಾರ್ಥಿಗಳ ತಲೆಯ ಮೇಲೆ ತೂಗುಗತ್ತಿ

ಚನ್ನಪಟ್ಟಣ, ಸೆ.೦೬: ನಗರದಲ್ಲಿನ ಸುವರ್ಣ ಮಹೋತ್ಸವ ಆಚರಣೆಯ ಹೊಸ್ತಿಲಲ್ಲಿರುವ ಪಟ್ಟಣದ ಸರ್ಕಾರಿ ಶಾಲೆಯಲ್ಲಿ ಹೆಚ್ಚು ಪ್ರಸಿದ್ದಿ ಪಡೆದಿರುವ ಪಟ್ಟಣದ ಐದು ದ

ನಗರದ ಪ್ರಥಮ ದರ್ಜೆ ಕಾಲೇಜಿಗೆ ಉತ್ತಮ ಹೆಸರಿದೆ. ನ್ಯಾಕ್ ಸಮಿತಿ ಉತ್ತಮ ವರದಿ ನೀಡುವ ವಿಶ್ವಾಸವಿದೆ. ಹೆಚ್ಡಿಕೆ
ನಗರದ ಪ್ರಥಮ ದರ್ಜೆ ಕಾಲೇಜಿಗೆ ಉತ್ತಮ ಹೆಸರಿದೆ. ನ್ಯಾಕ್ ಸಮಿತಿ ಉತ್ತಮ ವರದಿ ನೀಡುವ ವಿಶ್ವಾಸವಿದೆ. ಹೆಚ್ಡಿಕೆ

ಚನ್ನಪಟ್ಟಣ, ಆ. 27:  ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ನ್ಯಾಕ್ ಸಮಿತಿ ಭೇಟಿ ನೀಡಿದ್ದು ಕಾಲೇಜಿನ ಪರವಾಗಿ ಉತ್ತಮ ವರದಿ ನೀಡುವ ವಿಶ್ವಾಸ ಇದೆ ಎಂದು ಮಾಜಿ ಮುಖ್ಯಮಂತ್ರಿಗಳು ಕ್ಷೇತ್ರದ

ಇಂದಿನಿಂದ ಆರಂಭಗೊಂಡ ಎಸ್ಎಸ್ಎಲ್ಸಿ ಪರೀಕ್ಷೆ. 17 ಪರೀಕ್ಷೆ ಕೇಂದ್ರಗಳು, 3,104 ವಿದ್ಯಾರ್ಥಿಗಳು
ಇಂದಿನಿಂದ ಆರಂಭಗೊಂಡ ಎಸ್ಎಸ್ಎಲ್ಸಿ ಪರೀಕ್ಷೆ. 17 ಪರೀಕ್ಷೆ ಕೇಂದ್ರಗಳು, 3,104 ವಿದ್ಯಾರ್ಥಿಗಳು

ರಾಜ್ಯದಾದ್ಯಂತ ಇಂದು ನಡೆಯುತ್ತಿರುವ ಎಸ್ಎಸ್ಎಲ್ಸಿ ಪರೀಕ್ಷೆಯು ತಾಲ್ಲೂಕಿನಲ್ಲಿಯೂ ನಡೆಯುತ್ತಿದೆ. ತಾಲ್ಲೂಕಿನಾದ್ಯಂತ ಒಟ್ಟು ಹದಿನೇಳು ಕೇಂದ್ರಗಳಲ್ಲಿ ಒಟ್ಟು 3,104 ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪ

ಸಿಇಓ ಇಕ್ರಂ ರವರ ಕಲ್ಪನೆಯಲ್ಲಿ ಅರಳಿದ ಮೈಲನಾಯಕನಹಳ್ಳಿ ಗ್ರಾಮದ ಅಂಗನವಾಡಿ
ಸಿಇಓ ಇಕ್ರಂ ರವರ ಕಲ್ಪನೆಯಲ್ಲಿ ಅರಳಿದ ಮೈಲನಾಯಕನಹಳ್ಳಿ ಗ್ರಾಮದ ಅಂಗನವಾಡಿ

ಚನ್ನಪಟ್ಟಣ ತಾಲ್ಲೂಕಿನ ಮೈಲನಾಯಕನಹಳ್ಳಿ‌ ಗ್ರಾಮದಲ್ಲಿ ಸುಂದರವಾದ ಅಂಗನವಾಡಿ ಕೇಂದ್ರ ನಿರ್ಮಾಣವಾಗಿದೆ. ಇದಕ್ಕೆ ಮೂಲ ಕಾರಣಕರ್ತ ರಾಮನಗರ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಇಕ್ರಂ ರವ

ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ತಾಲ್ಲೂಕಿನಲ್ಲಿ ಸಕಲ ಸಿದ್ದತೆ:- ಬಿಇಓ ನಾಗರಾಜು
ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ತಾಲ್ಲೂಕಿನಲ್ಲಿ ಸಕಲ ಸಿದ್ದತೆ:- ಬಿಇಓ ನಾಗರಾಜು

ಚನ್ನಪಟ್ಟಣ: ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಎಲ್ಲಾ ರೀತಿಯ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ವಿದ್ಯಾರ್ಥಿಗಳ

1 ರಿಂದ 9 ನೇ ತರಗತಿ ವಿದ್ಯಾರ್ಥಿಗಳೆಲ್ಲರೂ ಪಾಸ್; ಜೂ.15 ರಿಂದ ಹೊಸ ಶೈಕ್ಷಣಿಕ ವರ್ಷ. ಶಿಕ್ಷಣ ಇಲಾಖೆ
1 ರಿಂದ 9 ನೇ ತರಗತಿ ವಿದ್ಯಾರ್ಥಿಗಳೆಲ್ಲರೂ ಪಾಸ್; ಜೂ.15 ರಿಂದ ಹೊಸ ಶೈಕ್ಷಣಿಕ ವರ್ಷ. ಶಿಕ್ಷಣ ಇಲಾಖೆ

ಬೆಂಗಳೂರು: 1 ರಿಂದ 9 ನೇ ತರಗತಿಯವರೆಗಿನ ಎಲ್ಲಾ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ. ಈ ಎಲ್ಲಾ ತರಗತಿಗಳ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ಬಡ್ತಿ ನೀಡಬೇಕು ಎಂದು ರಾಜ್ಯ ಶಿಕ್ಷಣ ಇಲಾಖೆ ಆದೇಶ

ಸರ್ಕಾರಿ  ಶಾಲೆ ಮುಂದೆ ದಾಖಲಾತಿಗೆ ಸರದಿ‌ಯಲ್ಲಿ ಜನರು‌ ನಿಲ್ಲಬೇಕು: ಸುರೇಶ್ ಕುಮಾರ್
ಸರ್ಕಾರಿ ಶಾಲೆ ಮುಂದೆ ದಾಖಲಾತಿಗೆ ಸರದಿ‌ಯಲ್ಲಿ ಜನರು‌ ನಿಲ್ಲಬೇಕು: ಸುರೇಶ್ ಕುಮಾರ್

ಸರ್ಕಾರಿ ಶಾಲೆಗಳಲ್ಲೂ ಮಕ್ಕಳ  ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಿಗೆ ಬೇಕಿರುವ ಸೌಲಭ್ಯವನ್ನು ಕಲ್ಪಿಸಿ ಸರ್ಕಾರಿ ಶಾಲೆಯ ಮುಂದೆ ದಾಖಲಾತಿಗೆ ಜನರು ಸರತಿ ಸಾಲಿನಲ್ಲಿ‌ ನಿಲ್ಲುವಂತೆ‌ ಬೆಳೆಯಬೇಕು

ಉಚಿತ
ಉಚಿತ "ಸಿ.ಸಿ.ಟಿ.ವಿ.ಕ್ಯಾಮರಾ, ಸೆಕ್ಯೂರಿಟಿ ಅಲಾರಾಂ ಸಿಸ್ಟಮ್, ಸ್ಮೋಕ್ ಡಿಟೆಕ್ಟರ್ -ಇನ್ ಸ್ಟಾಲೆಷನ್ ಅಂಡ್ ಸರ್ವಿಸಿಂಗ್" ತರಬೇತಿಗೆ ಅರ್ಜಿ ಆಹ್ವಾನ

ರಾಮನಗರ:ಸೆ/26/20/ಶನಿವಾರ. ಬಿಡದಿ ಬಳಿಯಿರುವ ಕೆನರಾ ಬ್ಯಾಂಕ್ ನ ಎ.ಡಿ.ಪೈ ಗ್ರಾಮೀಣ ಸ್ವ ಉದ್ಯೋಗ  ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವಕರಿಗಾಗಿ 13 ದ

ಬಂದ್ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡಿಕೆ
ಬಂದ್ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡಿಕೆ

ರಾಮನಗರ:ಸೆ/26/20/ಶನಿವಾರ. ರೈತ ಸಂಘದ ಹಲವು ಬಣಗಳು, ದಲಿತಪರ ಸಂಘಟನೆಗಳು ಸೇರಿದಂತೆ ಅನೇಕ ಸಂಘಟನೆಗಳು ಸೇರಿದಂತೆ ಸೋಮವಾರ ಕರ್ನಾಟಕ ಬಂದ್ ಗೆ ಕ

Top Stories »  


Top ↑