ರಾಮನಗರ, ಚನ್ನಪಟ್ಟಣ, ಕನಕಪುರ ತಾ.ಗಳಲ್ಲೂ ಸದ್ಯದಲ್ಲೇ ಮಾದರಿ ಪಬ್ಲಿಕ್ ಶಾಲೆ ಆರಂಭ

ಮಾಗಡಿ: ಸರಕಾರದ ಪ್ರತೀ ಗ್ರಾಮ ಪಂಚಾಯಿತಿಗೊಂದು ಮಾದರಿ ಪಬ್ಲಿಕ್ ಶಾಲೆ’ ಯೋಜನೆಯಡಿ ಅಭಿವೃದ್ಧಿಪಡಿಸಿರುವ ಸಂಕೀಘಟ್ಟ ಶಾಲೆಯನ್ನು ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಬುಧವಾರ ಲೋಕಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, 21ನೇ ಶತಮಾನವು ಜ್ಞಾನದ ಯುಗವಾಗಿದ್ದು, ಗುಣಮಟ್ಟದ ಶಿಕ್ಷಣವು ಅನಿವಾರ್ಯ ಅಗತ್ಯವಾಗಿದೆ. ಹೀಗಾಗಿ, ಕಡಿಮೆ ಮಕ್ಕಳಿರುವ ಸರಕಾರಿ ಶಾಲೆಗಳನ್ನು ಒಟ್ಟುಗೂಡಿಸಿ, ಅತ್ಯುತ್ತಮ ರೀತಿಯಲ್ಲಿ ಪ್ರತೀ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ತಲಾ ಒಂದು ಮಾದರಿ ಪಬ್ಲಿಕ್ ಶಾಲೆಗಳನ್ನು ನಿರ್ಮಿಸಲಾಗುವುದು ಎಂದರು.
ಮಾದರಿ ಪಬ್ಲಿಕ್ ಶಾಲೆಗಳು ಖಾಸಗಿ ಶಾಲೆಗಳಿಗಿಂತ ಯಾವ ರೀತಿಯಲ್ಲೂ ಕಡಿಮೆ ಇಲ್ಲದಂತೆ ನೋಡಿಕೊಳ್ಳಲಾಗುವುದು. ಸಂಕೀಘಟ್ಟದ ಶಾಲೆಗೆ ಆಟದ ಮೈದಾನ, ಸ್ಮಾರ್ಟ್ ತರಗತಿಗಳು, ಶೌಚಾಲಯ, ಬೋಧಕ ಸಿಬ್ಬಂದಿ ಎಲ್ಲವನ್ನೂ ಒದಗಿಸಲಾಗುವುದು. ಜತೆಗೆ, ಸುತ್ತಮುತ್ತಲಿನ ಹಳ್ಳಿಗಳ ಮಕ್ಕಳನ್ನು ಶಾಲೆಗೆ ಕರೆದುಕೊಂಡು ಬರಲು ಮತ್ತು ಪುನಃ ಮನೆಗೆ ತಲುಪಿಸಲು ವಾಹನ ವ್ಯವಸ್ಥೆಯನ್ನೂ ಮಾಡಲಾಗುವುದು. 2022-23ನೇ ಶೈಕ್ಷಣಿಕ ವರ್ಷದಿಂದ ಈ ಶಾಲೆಯು ಕಾರ್ಯಾರಂಭ ಮಾಡಲಿದೆ ಎಂದು ಅವರು ಹೇಳಿದರು.
ಈ ಶಾಲೆಯನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸಲು ಅಗತ್ಯವಾಗಿರುವ ಮತ್ತಷ್ಟು ಜಮೀನನ್ನು ಸ್ವಾಧೀನ ಪಡಿಸಿಕೊಳ್ಳಲಾಗುವುದು. ಜತೆಗೆ ಕೆಲವರು ಈ ಶಾಲೆಗೋಸ್ಕರ ಭೂಮಿಯನ್ನು ದಾನವಾಗಿ ಮಾಡಲು ಮುಂದೆ ಬಂದಿದ್ದಾರೆ. ಅದನ್ನೂ ಬಳಸಿಕೊಂಡು, ಈ ಶಾಲೆಯನ್ನು ಪರಿಪೂರ್ಣವಾಗಿ ಬೆಳೆಸಲಾಗುವುದು ಎಂದು ಅವರು ತಿಳಿಸಿದರು.
ಸಂಕೀಘಟ್ಟದ ಶಾಲೆಯಲ್ಲಿ ಅಗತ್ಯವಾದ ಹೆಚ್ಚುವರಿ ಕೊಠಡಿಗಳನ್ನು ಈಗಾಗಲೇ ನಿರ್ಮಿಸಲಾಗಿದೆ. ಇದರೊಂದಿಗೆ ಕಂಪ್ಯೂಟರ್ ತರಗತಿಗಳು ಮತ್ತು ವಿಜ್ಞಾನ ಪ್ರಯೋಗಾಲಯಗಳ ಸೌಲಭ್ಯಗಳನ್ನೂ ಕೊಡಲಾಗುವುದು. ಇಲ್ಲಿ 1ರಿಂದ 10ನೇ ತರಗತಿಯವರೆಗೆ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮಗಳೆರಡೂ ಇರಲಿವೆ. ಜಿಲ್ಲೆಯ ರಾಮನಗರ, ಚನ್ನಪಟ್ಟಣ ಮತ್ತು ಕನಕಪುರ ತಾಲ್ಲೂಕುಗಳಲ್ಲೂ ಇಂತಹ ತಲಾ ಒಂದೊಂದು ಶಾಲೆಗಳನ್ನು ಸದ್ಯದಲ್ಲೇ ಆರಂಭಿಸಲಾಗುವುದು ಎಂದು ಅವರು ಭರವಸೆ ನೀಡಿದರು.
ಹೆಚ್ಚಿನ ಸರಕಾರಿ ಶಾಲೆಗಳಲ್ಲಿ 1ರಿಂದ 7ನೇ ತರಗತಿಯವರೆಗೆ ಕೇವಲ 30 ಮಕ್ಕಳಿಗಿಂತ ಕಡಿಮೆ ವಿದ್ಯಾರ್ಥಿಗಳಿದ್ದು, ಅವು ಮುಚ್ಚುವ ಸ್ಥಿತಿಗೆ ಬಂದಿವೆ. ಜತೆಗೆ ಈ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇದ್ದು, ಇರುವ ಒಬ್ಬಿಬ್ಬರು ಶಿಕ್ಷಕರೇ ಎಲ್ಲ ವಿಷಯಗಳನ್ನೂ ಬೋಧಿಸುತ್ತಿದ್ದಾರೆ. ಹೀಗಾಗಿ, ಕಡಿಮೆ ಮಕ್ಕಳಿರುವ ಸ್ಥಳೀಯ ಶಾಲೆಗಳನ್ನು ಒಟ್ಟುಗೂಡಿಸಿ, ಪ್ರತೀ ಗ್ರಾಪಂ ವ್ಯಾಪ್ತಿಯಲ್ಲೂ ಒಂದು ಪಬ್ಲಿಕ್ ಮಾದರಿ ಶಾಲೆಯನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದು ಅವರು ವಿವರಿಸಿದರು.
ಗ್ರಾಮೀಣ ವಿದ್ಯಾರ್ಥಿಗಳು ಕೂಡ ಇಂದು ಜಾಗತಿಕ ಮಟ್ಟದ ಸ್ಪರ್ಧೆಯನ್ನು ಎದುರಿಸುತ್ತಿದ್ದಾರೆ. ಆದ್ದರಿಂದ ಅವರಿಗೂ ಜಾಗತಿಕ ಗುಣಮಟ್ಟದ ಶಿಕ್ಷಣವನ್ನು ಪೂರೈಸುವುದು ಸರಕಾರದ ಕರ್ತವ್ಯವಾಗಿದೆ. ಇದಕ್ಕಾಗಿ ಈಗಾಗಲೇ ಹಲವು ಉಪಕ್ರಮಗಳನ್ನು ರೂಪಿಸಿ, ಜಾರಿಗೊಳಿಸಲಾಗಿದೆ ಎಂದು ಅಶ್ವತ್ಥನಾರಾಯಣ ಹೇಳಿದರು.
ಸಚಿವರು ನಂತರ ಷಟಲ್ ಕಾಕ್ ಆಡುವುದರ ಮೂಲಕ ಕ್ರೀಡಾಂಗಣವನ್ನು ಉದ್ಘಾಟಿಸಿದರು.
*ವಾಹನಕ್ಕೆ ದೇಣಿಗೆ:*
ಸಂಕೀಘಟ್ಟ ಮತ್ತು ತಿಪ್ಪಸಂದ್ರದ ಶಾಲೆಗಳ ವಿದ್ಯಾರ್ಥಿಗಳಿಗೆ ವಾಹನ ವ್ಯವಸ್ಥೆ ಮಾಡಲಿ ಎನ್ನುವ ಕಾರಣಕ್ಕೆ ಸಚಿವ ಅಶ್ವತ್ಥನಾರಾಯಣ ಅವರು ತಮ್ಮ ಫೌಂಡೇಶನ್ ವತಿಯಿಂದ ತಲಾ ಒಂದು ಲಕ್ಷ ದೇಣಿಗೆಯ ಚೆಕ್ ನೀಡಿದರು. ಇದೇ ಸಂದರ್ಭದಲ್ಲಿ ಈ ಎರಡೂ ಪಂಚಾಯಿತಿಗಳ ಸದಸ್ಯರು ಕೂಡ ತಲಾ ಮೂರು ಲಕ್ಷ ದೇಣಿಗೆ ನೀಡಿದರು. ಈ ಸಂದರ್ಭದಲ್ಲಿ ಶಾಸಕ ಮಂಜುನಾಥ ಅವರು ಕೂಡ ತಲಾ ಒಂದು ಲಕ್ಷ ರೂಪಾಯಿ ನೀಡುವುದಾಗಿ ಘೋಷಿಸಿದರು.
ಕಾರ್ಯಕ್ರಮದಲ್ಲಿ ಶಾಸಕ ಮಂಜುನಾಥ್, ವಿಧಾನ ಪರಿಷತ್ ಸದಸ್ಯ ಅ.ದೇವೇಗೌಡ, ಜಿಲ್ಲಾ ಪಂಚಾಯಿತಿ ಸಿಇಓ ಇಕ್ರಂ, ಡಿಡಿಪಿಐ ಗಂಗಣ್ಣ, ಬ್ಲಾಕ್ ಶಿಕ್ಷಣಾಧಿಕಾರಿ ಯತೀಶ್, ತಹಸೀಲ್ದಾರ್ ಶ್ರೀನಿವಾಸ್, ಸಂಕೀಗಟ್ಟ ಗ್ರಾಪಂ ಅಧ್ಯಕ್ಷ ಸೂರ್ಯಕುಮಾರ್, ತಿಪ್ಪಸಂದ್ರ ಗ್ರಾಪಂ ಅಧ್ಯಕ್ಷೆ ಗಂಗಮ್ಮ ಮುಂತಾದವರು ಉಪಸ್ಥಿತರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in education »

ಎಸ್ಎಸ್ಎಲ್ಸಿ ಯಲ್ಲಿ ತಾಲ್ಲೂಕಿನಲ್ಲಿ ಶೇ 95.46 ಫಲಿತಾಂಶ
ಚನ್ನಪಟ್ಟಣ: ತಾಲೂಕಿನಲ್ಲಿ ಈ ಬಾರಿ ಒಟ್ಟು 2821 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಬರೆದಿದ್ದು, ಅದರಲ್ಲಿ 269

ರಾಮನಗರ, ಚನ್ನಪಟ್ಟಣ, ಕನಕಪುರ ತಾ.ಗಳಲ್ಲೂ ಸದ್ಯದಲ್ಲೇ ಮಾದರಿ ಪಬ್ಲಿಕ್ ಶಾಲೆ ಆರಂಭ
ಮಾಗಡಿ: ಸರಕಾರದ ಪ್ರತೀ ಗ್ರಾಮ ಪಂಚಾಯಿತಿಗೊಂದು ಮಾದರಿ ಪಬ್ಲಿಕ್ ಶಾಲೆ’ ಯೋಜನೆಯಡಿ ಅಭಿವೃದ್ಧಿಪಡಿಸಿರುವ ಸಂಕೀಘಟ್ಟ ಶಾಲೆಯನ್ನು ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್

ಪ್ರಾಥಮಿಕ ಶಾಲಾ ಪದವೀಧರ ಸಮಸ್ಯೆ ಬಗೆಹರಿಸುವಂತೆ ಮನವಿ
ರಾಮನಗರ: ಸೇವಾ ನಿರತ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಕ್ರಮವಹಿಸಬೇಕು ಎಂದು ಡಿಡಿಪಿಐ ಹಾಗೂ ಡಯಟ್ ಪ್ರಾಂಶುಪಾಲರಿಗೆ ರಾಮನಗರ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿ

ಶಿಕ್ಷಣ ವ್ಯಾಪಾರೀಕರಣವಾಗುತ್ತಿರುವುದು ಒಳ್ಳೆಯ ಬೆಳವಣಿಗೆ ಅಲ್ಲ: ಡಾ ಮುನಿರಾಜಪ್ಪ
ರಾಮನಗರ: ಜಾಗತೀಕರಣ, ಉದಾರೀಕರಣದಿಂದಾಗಿ ಪ್ರಸ್ತುತ ಶಿಕ್ಷಣ ಕ್ಷೇತ್ರವು ಹಣ ಮಾಡುವ ವ್ಯಾಪಾರವಾಗಿದೆ ಎಂದು ಹಿರಿಯ ಸಂಶೋಧಕ ಡಾ. ಮುನಿರಾಜಪ್ಪ ಬೇಸರ ವ್ಯಕ್ತಪಡಿಸಿದರು.
ಇಲ್ಲಿನ ಜಾನಪದ ಲ

ಮತ್ತೀಕೆರೆ ಶ್ವೇತಾರಾಣಿ ಗೆ ಚಿನ್ನದ ಪದಕ
ಚನ್ನಪಟ್ಟಣ: ತಾಲೂಕಿನ ಮತ್ತೀಕೆರೆ ಗ್ರಾಮದ ಚಿಕ್ಕತಾಯಮ್ಮ ಮತ್ತು ಲೇಟ್ ತಿಮ್ಮೇಗೌಡ ಅವರ ಮೊಮ್ಮಗಳು ವಿ.ಶ್ವೇತಾರಾಣಿ ಮೈಸೂರು ವಿಶ್ವವಿದ್ಯಾಲಯದ 1

ಸೋರುತಿಹುದು ಪೆಟ್ಟಾ ಶಾಲೆಯ ಮಾಳಿಗಿ. ವಿದ್ಯಾರ್ಥಿಗಳ ತಲೆಯ ಮೇಲೆ ತೂಗುಗತ್ತಿ
ಚನ್ನಪಟ್ಟಣ, ಸೆ.೦೬: ನಗರದಲ್ಲಿನ ಸುವರ್ಣ ಮಹೋತ್ಸವ ಆಚರಣೆಯ ಹೊಸ್ತಿಲಲ್ಲಿರುವ ಪಟ್ಟಣದ ಸರ್ಕಾರಿ ಶಾಲೆಯಲ್ಲಿ ಹೆಚ್ಚು ಪ್ರಸಿದ್ದಿ ಪಡೆದಿರುವ ಪಟ್ಟಣದ ಐದು ದ

ನಗರದ ಪ್ರಥಮ ದರ್ಜೆ ಕಾಲೇಜಿಗೆ ಉತ್ತಮ ಹೆಸರಿದೆ. ನ್ಯಾಕ್ ಸಮಿತಿ ಉತ್ತಮ ವರದಿ ನೀಡುವ ವಿಶ್ವಾಸವಿದೆ. ಹೆಚ್ಡಿಕೆ
ಚನ್ನಪಟ್ಟಣ, ಆ. 27: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ನ್ಯಾಕ್ ಸಮಿತಿ ಭೇಟಿ ನೀಡಿದ್ದು ಕಾಲೇಜಿನ ಪರವಾಗಿ ಉತ್ತಮ ವರದಿ ನೀಡುವ ವಿಶ್ವಾಸ ಇದೆ ಎಂದು ಮಾಜಿ ಮುಖ್ಯಮಂತ್ರಿಗಳು ಕ್ಷೇತ್ರದ

ಇಂದಿನಿಂದ ಆರಂಭಗೊಂಡ ಎಸ್ಎಸ್ಎಲ್ಸಿ ಪರೀಕ್ಷೆ. 17 ಪರೀಕ್ಷೆ ಕೇಂದ್ರಗಳು, 3,104 ವಿದ್ಯಾರ್ಥಿಗಳು
ರಾಜ್ಯದಾದ್ಯಂತ ಇಂದು ನಡೆಯುತ್ತಿರುವ ಎಸ್ಎಸ್ಎಲ್ಸಿ ಪರೀಕ್ಷೆಯು ತಾಲ್ಲೂಕಿನಲ್ಲಿಯೂ ನಡೆಯುತ್ತಿದೆ. ತಾಲ್ಲೂಕಿನಾದ್ಯಂತ ಒಟ್ಟು ಹದಿನೇಳು ಕೇಂದ್ರಗಳಲ್ಲಿ ಒಟ್ಟು 3,104 ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪ

ಸಿಇಓ ಇಕ್ರಂ ರವರ ಕಲ್ಪನೆಯಲ್ಲಿ ಅರಳಿದ ಮೈಲನಾಯಕನಹಳ್ಳಿ ಗ್ರಾಮದ ಅಂಗನವಾಡಿ
ಚನ್ನಪಟ್ಟಣ ತಾಲ್ಲೂಕಿನ ಮೈಲನಾಯಕನಹಳ್ಳಿ ಗ್ರಾಮದಲ್ಲಿ ಸುಂದರವಾದ ಅಂಗನವಾಡಿ ಕೇಂದ್ರ ನಿರ್ಮಾಣವಾಗಿದೆ. ಇದಕ್ಕೆ ಮೂಲ ಕಾರಣಕರ್ತ ರಾಮನಗರ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಇಕ್ರಂ ರವ

ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ತಾಲ್ಲೂಕಿನಲ್ಲಿ ಸಕಲ ಸಿದ್ದತೆ:- ಬಿಇಓ ನಾಗರಾಜು
ಚನ್ನಪಟ್ಟಣ: ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಎಲ್ಲಾ ರೀತಿಯ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ವಿದ್ಯಾರ್ಥಿಗಳ
??????????????