ಬಡ ವಿದ್ಯಾರ್ಥಿಗಳಿಗೆ ವಿದ್ಯೆ ಹೊರೆಯಾಗಬಾರದು ಟಿ ಕೆ ಯೋಗೇಶ್

ಚನ್ನಪಟ್ಟಣ: ಬಡ ಹಾಗೂ ಮಧ್ಯಮ ವರ್ಗದ ಮಕ್ಕಳಿಗೆ ಯಾವುದೇ ಹೊರೆ ಆಗದಂತೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ನಮ್ಮ ಸಂಸ್ಥೆ ನಿರಂತರವಾಗಿ ಶ್ರಮಿಸುತ್ತಿದೆ. ಸಂಸ್ಥೆಗೆ ದಾನಿಗಳು ಸಹ ಬೆನ್ನೆಲುಬಾಗಿ ನಿಂತಿರುವುದು ಸಂತಷದ ವಿಚಾರ ಎಂದು ಒಕ್ಕಲಿಗರ ಸಾರ್ವಜನಿಕ ವಿದ್ಯಾರ್ಥಿ ನಿಲಯದ ಅಧ್ಯಕ್ಷ ಟಿ.ಕೆ.ಯೋಗೇಶ್ (ಪಾಪು) ತಿಳಿಸಿದರು.
ನಗರದ ಜೆಸಿ ರಸ್ತೆಯಲ್ಲಿರುವ ಒಕ್ಕಲಿಗರ ಸಾರ್ವಜನಿಕ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಸಂಸ್ಥೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ, ದಾನಿಗಳು ನೀಡಿದ ಸಮವಸ್ತ್ರಗಳನ್ನು ವಿತರಿಸಿ ಮಾತನಾಡಿದ ಅವರು, ಗ್ರಾಮೀಣ ಭಾಗ ಸೇರಿದಂತೆ ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಯಾವುದೇ ಹೊರೆಯಾಗದಂತೆ ಶಿಕ್ಷಣ ನೀಡುವ ಉದ್ದೇಶದಿಂದ ಹಲವು ಹಿರಿಯರು ಕಟ್ಟಿರುವ ಸಂಸ್ಥೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಸಂಸ್ಥೆ ಹಾಗೂ ವಿದ್ಯಾರ್ಥಿಗಳ ಅನುಕೂಲಕ್ಕೆ ಕೆಲ ದಾನಿಗಳು ಮುಂದಾಗಿರುವುದು ಸಂತಷದ ವಿಚಾರ. ಮಕ್ಕಳ ವಿದ್ಯಾಭ್ಯಾಸಕ್ಕೆ ಯಾವುದೇ ಅನಾನುಕೂಲ ಎದುರಾಗಬಾರದು ಎಂಬುದು ಸಂಸ್ಥೆಯ ಆಡಳಿತ ಮಂಡಳಿ ಉದ್ದೇಶವಾಗಿದೆ. ಸಂಸ್ಥೆಯ ಅಭಿವೃದ್ಧಿಗೆ ದಾನಿಗಳು ಸಹ ಹೆಚ್ಚಿನ ರೀತಿಯಲ್ಲಿ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಕಾರ್ಯದರ್ಶಿ ಸಿ.ಚನ್ನಪ್ಪ (ಸಿಸಿ) ಮಾತನಾಡಿ, ವಿದ್ಯೆ ಎಂಬುದು ಯಾರು ಕದಿಯಲಾರದ ಅಮೂಲ್ಯ ವಸ್ತು. ಈ ವಸ್ತುವನ್ನು ಅಷ್ಟು ಸುಲಭವಾಗಿ ಗಳಿಸಿಕೊಳ್ಳಲು ಸಾಧ್ಯವಿಲ್ಲ. ಇದು ಸಾಧಕರ ಸ್ವತ್ತೆ ವಿನಹ ಸೋಮಾರಿಗಳಲ್ಲ ಸ್ವತ್ತಲ್ಲ. ಕಠಿಣ ಪರಿಶ್ರಮ ಇದ್ದರೆ ಮಾತ್ರ ಉನ್ನತ ಸಾಧನೆ ಮಾಡಲು ಸಾಧ್ಯ. ಸಂಸ್ಥೆಯ ಶಿಕ್ಷಕರು ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಶ್ರಮಿಸುತ್ತಿದ್ದಾರೆ. ಸಂಸ್ಥೆಯೂ ಸಹ ನಿಮಗೆ ಎಲ್ಲಾ ರೀತಿಯ ಸಹಕಾರ ನೀಡಲು ಸಿದ್ದವಿದೆ. ಮಕ್ಕಳು ಅಭ್ಯಾಸದ ಬಗ್ಗೆ ಹೆಚ್ಚಿನ ಗಮನಕೊಟ್ಟು ಉತ್ತಮ ಸಾಧನೆ ಮಾಡಬೇಕು. ಆ ಮೂಲಕ ಸಂಸ್ಥೆಗೆ ಕೀರ್ತಿ ತರಬೇಕು ಎಂದು ಕಿವಿಮಾತು ಹೇಳಿದರು.
ಕ್ರಿಯೇಟಿವ್ ಕೋ ಅಪರೇಟಿವ್ ಸೊಸೈಟಿ ಬೆಂಗಳೂರು. ಒಕ್ಕಲಿಗರ ಸಂಘದ ನಿರ್ದೇಶಕ ಚಕ್ಕೆರೆ ವೆಂಕಟರಾಮೇಗೌಡ, ಇಂಜಿನಿಯರ್ ಕೆ.ವಿ.ರವಿ, ಸಮಾಜ ಸೇವಕ ಎಸ್ ಎಲ್ ಮರಿಯಪ್ಪ ಜೊತೆಗೂಡಿ ನೀಡಿದ ಸಮವಸ್ತ್ರಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.
ಈ ವೇಳೆ ಖಜಾಂಚಿ ಎಸ್.ಟಿ.ನಾರಾಯಣಗೌಡ, ಮುಖ್ಯ ಶಿಕ್ಷಕ ಸಿ.ಬಿ.ಕುಮಾರ್, ಐಟಿಐ ಕಾಲೇಜಿನ ಪ್ರಾಂಶುಪಾಲ ರಮೇಶ್, ಶಿಕ್ಷಕರಾದ ಬಿ.ಆರ್.ತನುಜಾ, ಪಲ್ಲವಿ, ವಿಜಯಶಂಕರ್, ಸೀನಪ್ಪ, ಸಿಬ್ಬಂದಿ ಯೋಗೇಶ್ ಸೇರಿದಂತೆ ಹಲವರು ಇದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in education »

ಸ್ಪರ್ಧಾತ್ಮಕ ಯುಗದಲ್ಲಿ ಡಿಜಿಟಲ್ ಗ್ರಂಥಾಲಯ ಸಹಕಾರಿಯಾಗಲಿದೆ; ಉಮಾ ಮಹದೇವನ್
ರಾಮನಗರ, ಆ.04: ಪ್ರತೀ ಗ್ರಾಮ ಪಚಾಯಿತಿಗಳಲ್ಲಿ ಡಿಜಿಟಲ್ ಗ್ರಂಥಾಲಯ ತೆರೆಯುವುದರಿಂದ ಗ್ರಾಮೀಣ ಭಾಗದ ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಮತ್ತು

ತಾಲ್ಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ ಚುನಾವಣೆ ಅಕ್ರಮ ವಸಂತಕುಮಾರ್ ಆರೋಪ
ಚನ್ನಪಟ್ಟಣ: ತಾಲ್ಲೂಕಿನ ಪ್ರೌಢಶಾಲೆ ಸಹಶಿಕ್ಷಕರ ಸಂಘದ ಚುನಾವಣೆಯಲ್ಲಿ ನನ್ನಂಥ ಹಲವಾರು ಮಂದಿ ಪ್ರೌಢಶಾಲಾ ಸಹಶಿಕ್ಷಕರ ಹೆಸರನ್ನು ಕೈಬಿಟ್ಟು, ತಮ

ಬಡ ವಿದ್ಯಾರ್ಥಿಗಳಿಗೆ ವಿದ್ಯೆ ಹೊರೆಯಾಗಬಾರದು ಟಿ ಕೆ ಯೋಗೇಶ್
ಚನ್ನಪಟ್ಟಣ: ಬಡ ಹಾಗೂ ಮಧ್ಯಮ ವರ್ಗದ ಮಕ್ಕಳಿಗೆ ಯಾವುದೇ ಹೊರೆ ಆಗದಂತೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ನಮ್ಮ ಸಂಸ್ಥೆ ನಿರಂತರವಾಗಿ ಶ್ರಮಿಸುತ್

ಎಸ್ಎಸ್ಎಲ್ಸಿ ಪರೀಕ್ಷೆ ಅಕ್ರಮ: ಹೆಚ್ಚಿನ ವಿಚಾರಣೆಗಾಗಿ ಮೂವರು ಪೊಲೀಸರ ವಶಕ್ಕೆ: ಏಳು ಆರೋಪಿಗಳು ನ್ಯಾಯಾಂಗ ಬಂಧನಕ್ಕೆ
ರಾಮನಗರ: 2022-23 ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ಹತ್ತು ಆರೋಪಿಗಳನ್ನು ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ಇವರಲ್ಲಿ ಮೂವರನ್ನು ಹೆಚ್ಚಿನ ವಿಚಾರಣೆಗಾ

ಎಸ್ಎಸ್ಎಲ್ಸಿ ಯಲ್ಲಿ ತಾಲ್ಲೂಕಿನಲ್ಲಿ ಶೇ 95.46 ಫಲಿತಾಂಶ
ಚನ್ನಪಟ್ಟಣ: ತಾಲೂಕಿನಲ್ಲಿ ಈ ಬಾರಿ ಒಟ್ಟು 2821 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಬರೆದಿದ್ದು, ಅದರಲ್ಲಿ 269

ರಾಮನಗರ, ಚನ್ನಪಟ್ಟಣ, ಕನಕಪುರ ತಾ.ಗಳಲ್ಲೂ ಸದ್ಯದಲ್ಲೇ ಮಾದರಿ ಪಬ್ಲಿಕ್ ಶಾಲೆ ಆರಂಭ
ಮಾಗಡಿ: ಸರಕಾರದ ಪ್ರತೀ ಗ್ರಾಮ ಪಂಚಾಯಿತಿಗೊಂದು ಮಾದರಿ ಪಬ್ಲಿಕ್ ಶಾಲೆ’ ಯೋಜನೆಯಡಿ ಅಭಿವೃದ್ಧಿಪಡಿಸಿರುವ ಸಂಕೀಘಟ್ಟ ಶಾಲೆಯನ್ನು ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್

ಪ್ರಾಥಮಿಕ ಶಾಲಾ ಪದವೀಧರ ಸಮಸ್ಯೆ ಬಗೆಹರಿಸುವಂತೆ ಮನವಿ
ರಾಮನಗರ: ಸೇವಾ ನಿರತ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಕ್ರಮವಹಿಸಬೇಕು ಎಂದು ಡಿಡಿಪಿಐ ಹಾಗೂ ಡಯಟ್ ಪ್ರಾಂಶುಪಾಲರಿಗೆ ರಾಮನಗರ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿ

ಶಿಕ್ಷಣ ವ್ಯಾಪಾರೀಕರಣವಾಗುತ್ತಿರುವುದು ಒಳ್ಳೆಯ ಬೆಳವಣಿಗೆ ಅಲ್ಲ: ಡಾ ಮುನಿರಾಜಪ್ಪ
ರಾಮನಗರ: ಜಾಗತೀಕರಣ, ಉದಾರೀಕರಣದಿಂದಾಗಿ ಪ್ರಸ್ತುತ ಶಿಕ್ಷಣ ಕ್ಷೇತ್ರವು ಹಣ ಮಾಡುವ ವ್ಯಾಪಾರವಾಗಿದೆ ಎಂದು ಹಿರಿಯ ಸಂಶೋಧಕ ಡಾ. ಮುನಿರಾಜಪ್ಪ ಬೇಸರ ವ್ಯಕ್ತಪಡಿಸಿದರು.
ಇಲ್ಲಿನ ಜಾನಪದ ಲ

ಮತ್ತೀಕೆರೆ ಶ್ವೇತಾರಾಣಿ ಗೆ ಚಿನ್ನದ ಪದಕ
ಚನ್ನಪಟ್ಟಣ: ತಾಲೂಕಿನ ಮತ್ತೀಕೆರೆ ಗ್ರಾಮದ ಚಿಕ್ಕತಾಯಮ್ಮ ಮತ್ತು ಲೇಟ್ ತಿಮ್ಮೇಗೌಡ ಅವರ ಮೊಮ್ಮಗಳು ವಿ.ಶ್ವೇತಾರಾಣಿ ಮೈಸೂರು ವಿಶ್ವವಿದ್ಯಾಲಯದ 1

ಸೋರುತಿಹುದು ಪೆಟ್ಟಾ ಶಾಲೆಯ ಮಾಳಿಗಿ. ವಿದ್ಯಾರ್ಥಿಗಳ ತಲೆಯ ಮೇಲೆ ತೂಗುಗತ್ತಿ
ಚನ್ನಪಟ್ಟಣ, ಸೆ.೦೬: ನಗರದಲ್ಲಿನ ಸುವರ್ಣ ಮಹೋತ್ಸವ ಆಚರಣೆಯ ಹೊಸ್ತಿಲಲ್ಲಿರುವ ಪಟ್ಟಣದ ಸರ್ಕಾರಿ ಶಾಲೆಯಲ್ಲಿ ಹೆಚ್ಚು ಪ್ರಸಿದ್ದಿ ಪಡೆದಿರುವ ಪಟ್ಟಣದ ಐದು ದ
ಪ್ರತಿಕ್ರಿಯೆಗಳು