Tel: 7676775624 | Mail: info@yellowandred.in

Language: EN KAN

    Follow us :


ತಾಲ್ಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ ಚುನಾವಣೆ ಅಕ್ರಮ ವಸಂತಕುಮಾರ್ ಆರೋಪ

Posted date: 16 Jul, 2022

Powered by:     Yellow and Red

ತಾಲ್ಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ ಚುನಾವಣೆ ಅಕ್ರಮ ವಸಂತಕುಮಾರ್ ಆರೋಪ

Channapatna: Vasantakumar accused of illegal election of taluk high school co-teachers association

ಚನ್ನಪಟ್ಟಣ: ತಾಲ್ಲೂಕಿನ ಪ್ರೌಢಶಾಲೆ ಸಹಶಿಕ್ಷಕರ ಸಂಘದ ಚುನಾವಣೆಯಲ್ಲಿ ನನ್ನಂಥ ಹಲವಾರು ಮಂದಿ ಪ್ರೌಢಶಾಲಾ ಸಹಶಿಕ್ಷಕರ ಹೆಸರನ್ನು ಕೈಬಿಟ್ಟು, ತಮಗೆ ಇಷ್ಟಬಂದವರನ್ನು ಸಂಘದ ಸದಸ್ಯರನ್ನಾಗಿ ಮಾಡಿಕೊಂಡು ಅಕ್ರಮವಾಗಿ ಚುನಾವಣೆ ನಡೆಸಲಾಗಿದೆ ಎಂದು  ಸೋಗಾಲ ಸರ್ಕಾರಿ ಪ್ರೌಢಶಾಲೆಯ ಸಹಶಿಕ್ಷಕ ವಸಂತ್ ಕುಮಾರ್ ಆರೋಪಿಸಿದ್ದಾರೆ.

ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಕಳೆದ ಹದಿನೈದು ವರ್ಷಗಳಿಂದ ಪ್ರೌಢಶಾಲಾ ಸಹಶಿಕ್ಷಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಪ್ರಸ್ತುತ ಸೋಗಾಲ ಸರ್ಕಾರಿ  ಪ್ರೌಢಶಾಲೆಯಲ್ಲಿ ಕನ್ನಡ ಭಾಷಾಶಿಕ್ಷಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಆದರೆ ಈ ಬಾರಿ ನಡೆದ ಚುನಾವಣೆಯಲ್ಲಿ ನನ್ನ ಸ್ಪರ್ಧೆಯನ್ನು ತಡೆಯಬೇಕು ಎಂಬ ಉದ್ದೇಶದಿಂದ ನನ್ನ ಹೆಸರನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ದೂರಿದರು.


ನಮ್ಮ ಶಾಲೆಯ ಉಳಿದ ಶಿಕ್ಷಕರನ್ನು ಮತದಾರರ ಪಟ್ಟಿಗೆ ಸೇರಿಸಿಕೊಂಡಿದ್ದಾರೆ. ಕಳೆದ ವರ್ಷ ಬಡ್ತಿ ಮುಖಾಂತರ ಪ್ರೌಢಶಾಲಾ ಶಿಕ್ಷಕರಾದ ಶಿಕ್ಷಕರನ್ನು ಹಾಗೂ ಕಳೆದ 6 ತಿಂಗಳಲ್ಲಿ ತಾಲ್ಲೂಕಿಗೆ ವರ್ಗಾವಣೆಗೊಂಡು ಬಂದ ಶಿಕ್ಷಕರನ್ನೂ ಕೂಡ ಮತದಾರರ  ಪಟ್ಟಿಯಲ್ಲಿ ಸೇರಿಸಿದ್ದಾರೆ. ಆದರೆ ಅರ್ಹರಿದ್ದ ಶಿಕ್ಷಕರನ್ನು ಕೈಬಿಟ್ಟು ವಂಚಿಸಿದ್ದಾರೆ ಎಂದು ಆರೋಪಿಸಿದರು.


ಪ್ರೌಢಶಾಲಾ ಸಹಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ರಾಜಶೇಖರ್ ಮತ್ತು ತಾಲೂಕು ಕಾರ್ಯದರ್ಶಿ ಸ್ವಾಮಿ ಸಂಘದಲ್ಲಿ ನಿರಂತರವಾಗಿ ಮುಂದುವರಿಯಬೇಕು ಎಂಬ ಉದ್ದೇಶದಿಂದ ಚುನಾವಣೆಯಲ್ಲಿ ತಮ್ಮಿಷ್ಟದಂತೆ ನಡೆಸಿದ್ದಾರೆ. ನಾನು ಸೇರಿದಂತೆ ಕೆಲವರು ಸ್ಪರ್ಧಿಸಬಾರದೆಂಬ ಉದ್ದೇಶದಿಂದಲೇ ನಮ್ಮ ಹೆಸರನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.


ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಸುಮಾರು 264 ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ, 194ಮಂದಿಯನ್ನು ಮಾತ್ರ ಮತದಾರರ ಪಟ್ಟಿಯಲ್ಲಿ ಸೇರಿಸಿ ಮಿಕ್ಕವರನ್ನು ಹೊರಗಿಟ್ಟು ಚುನಾವಣೆ ನಡೆಸಲಾಗಿದೆ. ಸಂಘ ಸದಾ ತಮ್ಮ ಹಿಡತದಲ್ಲೆ ಇರಬೇಕೆಂಬ ಉದ್ದೇಶದಿಂದ ರಾಜಶೇಖರ್ ಮತ್ತು ಸ್ವಾಮಿ ಸದಾ ಹುನ್ನಾರಗಳನ್ನು ನಡೆಸುತ್ತಾ ಬರುತ್ತಿದ್ದಾರೆ ಎಂದು ಆರೋಪಿಸಿದರು.


ಅಧಿಕಾರ ಯಾವಾಗಲೂ  ತಮ್ಮ ಕೈಯಲ್ಲೇ ಇರಬೇಕೆಂಬ ಮನೋಧೋರಣೆ ಹೊಂದಿರುವ ಶಿಕ್ಷಕರ ಈ ಗುಂಪು ಕಳೆದ ಇಪ್ಪತ್ತು ವರ್ಷಗಳಿಂದ ಇದೇ ರೀತಿ ತಾವೇ ತಮ್ಮ ಕೈಯಿಂದ ಸಂಘದ ಸದಸ್ಯರ  ಸದಸ್ಯತ್ವದ ಹಣವನ್ನು ಕಟ್ಟಿಕೊಂಡು, ತಮಗೆ ಬೇಕಾದವರನ್ನು ಸಂಘದ ಸದಸ್ಯರನ್ನಾಗಿ ಮಾಡಿಕೊಂಡು ಚುನಾವಣೆ ನಡೆಸಿಕೊಂಡು ಬರುತ್ತಿದೆ ಎಂದು ಕಿಡಿಕಾರಿದರು.


ಪ್ರೌಢಶಾಲಾ ಸಹಶಿಕ್ಷಕರ ಸಂಘದ ಚುನಾವಣೆಯನ್ನು ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ಅಕ್ರಮವಾಗಿ ಚುನಾವಣೆ ನಡೆಸಲಾಗಿದೆ. ಶಿಕ್ಷಕರ ಹಿತ ಕಾಯಬೇಕಾದ ಶಿಕ್ಷಕರ ಸಂಘವನ್ನು ಸ್ವಹಿತಕ್ಕಾಗಿ ಬಳಸಿಕೊಳ್ಳಲಾಗುತ್ತಿದೆ. ಅರ್ಹ ಶಿಕ್ಷಕರನ್ನು ಮತದಾನದಿಂದ ವಂಚಿಸಿ ತಮಗೆ ಮತ ನೀಡುವವರಿಗೆ ಮಾತ್ರ ಮಣೆ ಹಾಕುತ್ತಿದ್ದು, ಇವರ ಈ ಷಡ್ಯಂತ್ರಗಳನ್ನು ಮುಂದಿನ ದಿನಗಳಲ್ಲಿ ಬಯಲು ಮಾಡುವುದಾಗಿ ಘೋಷಿಸಿದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in education »

NEET UG 2022 ಫಲಿತಾಂಶ ಪ್ರಕಟ: ಕರ್ನಾಟಕದ ಹೃಷಿಕೇಶ್​​​ಗೆ 3ನೇ ಸ್ಥಾನ
NEET UG 2022 ಫಲಿತಾಂಶ ಪ್ರಕಟ: ಕರ್ನಾಟಕದ ಹೃಷಿಕೇಶ್​​​ಗೆ 3ನೇ ಸ್ಥಾನ

ನವದೆಹಲಿ: 2022ನೇ ಸಾಲಿನ ನೀಟ್​ ಯುಜಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ. ಕರ್ನಾಟಕದ ಇಬ್ಬರು ವಿದ್ಯಾರ್ಥಿಗಳು 3 ಹಾಗೂ 4ನೇ ಸ್ಥಾನ ಗಿಟ್ಟಿಸಿ

ಸ್ಪರ್ಧಾತ್ಮಕ ಯುಗದಲ್ಲಿ ಡಿಜಿಟಲ್ ಗ್ರಂಥಾಲಯ ಸಹಕಾರಿಯಾಗಲಿದೆ; ಉಮಾ ಮಹದೇವನ್
ಸ್ಪರ್ಧಾತ್ಮಕ ಯುಗದಲ್ಲಿ ಡಿಜಿಟಲ್ ಗ್ರಂಥಾಲಯ ಸಹಕಾರಿಯಾಗಲಿದೆ; ಉಮಾ ಮಹದೇವನ್

ರಾಮನಗರ, ಆ.04: ಪ್ರತೀ ಗ್ರಾಮ ಪಚಾಯಿತಿಗಳಲ್ಲಿ ಡಿಜಿಟಲ್ ಗ್ರಂಥಾಲಯ ತೆರೆಯುವುದರಿಂದ ಗ್ರಾಮೀಣ ಭಾಗದ ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಮತ್ತು

ತಾಲ್ಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ ಚುನಾವಣೆ ಅಕ್ರಮ ವಸಂತಕುಮಾರ್ ಆರೋಪ
ತಾಲ್ಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ ಚುನಾವಣೆ ಅಕ್ರಮ ವಸಂತಕುಮಾರ್ ಆರೋಪ

ಚನ್ನಪಟ್ಟಣ: ತಾಲ್ಲೂಕಿನ ಪ್ರೌಢಶಾಲೆ ಸಹಶಿಕ್ಷಕರ ಸಂಘದ ಚುನಾವಣೆಯಲ್ಲಿ ನನ್ನಂಥ ಹಲವಾರು ಮಂದಿ ಪ್ರೌಢಶಾಲಾ ಸಹಶಿಕ್ಷಕರ ಹೆಸರನ್ನು ಕೈಬಿಟ್ಟು, ತಮ

ಬಡ ವಿದ್ಯಾರ್ಥಿಗಳಿಗೆ ವಿದ್ಯೆ ಹೊರೆಯಾಗಬಾರದು ಟಿ ಕೆ ಯೋಗೇಶ್
ಬಡ ವಿದ್ಯಾರ್ಥಿಗಳಿಗೆ ವಿದ್ಯೆ ಹೊರೆಯಾಗಬಾರದು ಟಿ ಕೆ ಯೋಗೇಶ್

ಚನ್ನಪಟ್ಟಣ: ಬಡ ಹಾಗೂ ಮಧ್ಯಮ ವರ್ಗದ ಮಕ್ಕಳಿಗೆ ಯಾವುದೇ ಹೊರೆ ಆಗದಂತೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ನಮ್ಮ ಸಂಸ್ಥೆ ನಿರಂತರವಾಗಿ ಶ್ರಮಿಸುತ್

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಅಕ್ರಮ: ಹೆಚ್ಚಿನ ವಿಚಾರಣೆಗಾಗಿ ಮೂವರು ಪೊಲೀಸರ ವಶಕ್ಕೆ: ಏಳು ಆರೋಪಿಗಳು ನ್ಯಾಯಾಂಗ ಬಂಧನಕ್ಕೆ
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಅಕ್ರಮ: ಹೆಚ್ಚಿನ ವಿಚಾರಣೆಗಾಗಿ ಮೂವರು ಪೊಲೀಸರ ವಶಕ್ಕೆ: ಏಳು ಆರೋಪಿಗಳು ನ್ಯಾಯಾಂಗ ಬಂಧನಕ್ಕೆ

ರಾಮನಗರ: 2022-23 ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ಹತ್ತು ಆರೋಪಿಗಳನ್ನು ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ಇವರಲ್ಲಿ ಮೂವರನ್ನು‌ ಹೆಚ್ಚಿನ ವಿಚಾರಣೆಗಾ

ಎಸ್ಎಸ್ಎಲ್ಸಿ ಯಲ್ಲಿ ತಾಲ್ಲೂಕಿನಲ್ಲಿ ಶೇ 95.46 ಫಲಿತಾಂಶ
ಎಸ್ಎಸ್ಎಲ್ಸಿ ಯಲ್ಲಿ ತಾಲ್ಲೂಕಿನಲ್ಲಿ ಶೇ 95.46 ಫಲಿತಾಂಶ

ಚನ್ನಪಟ್ಟಣ: ತಾಲೂಕಿನಲ್ಲಿ ಈ ಬಾರಿ  ಒಟ್ಟು 2821 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಗೆ  ಬರೆದಿದ್ದು,  ಅದರಲ್ಲಿ 269

ರಾಮನಗರ, ಚನ್ನಪಟ್ಟಣ, ಕನಕಪುರ ತಾ.ಗಳಲ್ಲೂ ಸದ್ಯದಲ್ಲೇ ಮಾದರಿ ಪಬ್ಲಿಕ್ ಶಾಲೆ ಆರಂಭ
ರಾಮನಗರ, ಚನ್ನಪಟ್ಟಣ, ಕನಕಪುರ ತಾ.ಗಳಲ್ಲೂ ಸದ್ಯದಲ್ಲೇ ಮಾದರಿ ಪಬ್ಲಿಕ್ ಶಾಲೆ ಆರಂಭ

ಮಾಗಡಿ: ಸರಕಾರದ ಪ್ರತೀ ಗ್ರಾಮ ಪಂಚಾಯಿತಿಗೊಂದು ಮಾದರಿ ಪಬ್ಲಿಕ್ ಶಾಲೆ’ ಯೋಜನೆಯಡಿ ಅಭಿವೃದ್ಧಿಪಡಿಸಿರುವ ಸಂಕೀಘಟ್ಟ ಶಾಲೆಯನ್ನು ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್

ಪ್ರಾಥಮಿಕ ಶಾಲಾ ಪದವೀಧರ  ಸಮಸ್ಯೆ ಬಗೆಹರಿಸುವಂತೆ ಮನವಿ
ಪ್ರಾಥಮಿಕ ಶಾಲಾ ಪದವೀಧರ ಸಮಸ್ಯೆ ಬಗೆಹರಿಸುವಂತೆ ಮನವಿ

ರಾಮನಗರ: ಸೇವಾ ನಿರತ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಕ್ರಮವಹಿಸಬೇಕು ಎಂದು ಡಿಡಿಪಿಐ ಹಾಗೂ ಡಯಟ್ ಪ್ರಾಂಶುಪಾಲರಿಗೆ ರಾಮನಗರ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿ

ಶಿಕ್ಷಣ ವ್ಯಾಪಾರೀಕರಣವಾಗುತ್ತಿರುವುದು ಒಳ್ಳೆಯ ಬೆಳವಣಿಗೆ ಅಲ್ಲ: ಡಾ ಮುನಿರಾಜಪ್ಪ
ಶಿಕ್ಷಣ ವ್ಯಾಪಾರೀಕರಣವಾಗುತ್ತಿರುವುದು ಒಳ್ಳೆಯ ಬೆಳವಣಿಗೆ ಅಲ್ಲ: ಡಾ ಮುನಿರಾಜಪ್ಪ

ರಾಮನಗರ: ಜಾಗತೀಕರಣ, ಉದಾರೀಕರಣದಿಂದಾಗಿ ಪ್ರಸ್ತುತ ಶಿಕ್ಷಣ ಕ್ಷೇತ್ರವು ಹಣ ಮಾಡುವ ವ್ಯಾಪಾರವಾಗಿದೆ ಎಂದು ಹಿರಿಯ ಸಂಶೋಧಕ ಡಾ. ಮುನಿರಾಜಪ್ಪ ಬೇಸರ ವ್ಯಕ್ತಪಡಿಸಿದರು.

ಇಲ್ಲಿನ ಜಾನಪದ ಲ

ಮತ್ತೀಕೆರೆ ಶ್ವೇತಾರಾಣಿ ಗೆ ಚಿನ್ನದ ಪದಕ
ಮತ್ತೀಕೆರೆ ಶ್ವೇತಾರಾಣಿ ಗೆ ಚಿನ್ನದ ಪದಕ

ಚನ್ನಪಟ್ಟಣ: ತಾಲೂಕಿನ ಮತ್ತೀಕೆರೆ ಗ್ರಾಮದ ಚಿಕ್ಕತಾಯಮ್ಮ ಮತ್ತು ಲೇಟ್ ತಿಮ್ಮೇಗೌಡ ಅವರ ಮೊಮ್ಮಗಳು ವಿ.ಶ್ವೇತಾರಾಣಿ ಮೈಸೂರು ವಿಶ್ವವಿದ್ಯಾಲಯದ 1

Top Stories »  


Top ↑