ಅಂಚೆ ಮತದಾನ ಮಾಡಲು ಬಂದ ಅಧಿಕಾರಿಗೆ ಕುಮಾರಸ್ವಾಮಿ ಆಪ್ತ ಸಹಾಯಕನಿಂದ ಗಾಳ
ಚನ್ನಪಟ್ಟಣ: ನಗರದ ತಾಲ್ಲೂಕು ಕಛೇರಿಯಲ್ಲಿರುವ ಚುನಾವಣಾಧಿಕಾರಿ ಕಛೇರಿಗೆ ಅಂಚೆಮತದಾನ ಮಾಡಲು ತಾಲೂಕು ಕಚೇರಿಗೆ ಆಗಮಿಸಿದ ಸರ್ಕಾರಿ ಅಧಿಕಾರಿಯೊಬ್ಬರ ಮತಪತ್ರಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ಆಪ್ತ ಸಹಾಯಕ ಕೆಂಚೇಗೌಡ ಎಂಬುವವರು ಗುರುತು ಹಾಕಿ ನೀಡಿದ್ದಾರೆ ಎನ್ನಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಸಂಬಂಧ ಬಿಜೆಪಿ ಪಕ್ಷದ ಅಭ್ಯರ್ಥಿ ಯ ಚುನಾವಣಾ ಏಜೆಂಟ್ ದಿಲೀಪ್ ರವರು ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ.
ತಾಲ್ಲೂಕಿನಾದ್ಯಂತ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಶಿಕ್ಷಕರು ಮತ್ತು ಇನ್ನಿತರ ಸಿಬ್ಬಂದಿಗಳಿಗೆ ಮತದಾನಕ್ಕೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಅಂಚೆ ಮತದಾನಕ್ಕೆ ಅವಕಾಶ ನೀಡಲಾಗಿದೆ. ಅದರಂತೆ ಬುಧವಾರ ಅಂಚೆಮತದಾನ ಮಾಡಲು ಬಂದ ಅಧಿಕಾರಿಯೊಬ್ಬರ ಮತಪತ್ರವನ್ನು ಕುಮಾರಸ್ವಾಮಿ ಅವರ ಆಪ್ತ ಸಹಾಯಕ ಕೆಂಚೇಗೌಡ ಎಂಬುವರು ಪಡೆದುಕೊಂಡು ಅದಕ್ಕೆ ಗುರುತುಹಾಕಿ ನೀಡುತ್ತಿರುವ ವಿಡಿಯೋ ಒಂದು ವೈರಲ್ ಆಗಿದೆ. ಸರಿಸುಮಾರು ಎರಡು ನಿಮಿಷಗಳಿಗೂ ಹೆಚ್ಚು ಕಾಲ ಅವರಿಬ್ಬರು ಚರ್ಚಿಸಿ, ಲೇಖನಿ ಮತ್ತು ಮತಪತ್ರ ಪಡೆದು ಗುರುತು ಹಾಕುತ್ತಿರುವುದು ವೀಡಿಯೋ ದಲ್ಲಿ ಕಂಡುಬರುತ್ತಿದೆ.
ತಾಲೂಕು ಕಚೇರಿ ಮಹಡಿಯ ಮುಂಭಾಗದ ಪೋರ್ಟಿಕೋ ಮೇಲೆ ನಿಂತುಕೊಂಡೇ ಕೆಂಚೇಗೌಡ ಎಂಬುವವರು ಅಧಿಕಾರಿಯ ಮತಪತ್ರವನ್ನು ಪಡೆದುಕೊಂಡು ಅದರಲ್ಲಿ ಗುರುತುಮಾಡಿ ನೀಡಿದ್ದಾರೆ. ಇವರಿಬ್ಬರು ತಾಲೂಕು ಕಚೇರಿಯ ಮೇಲೆ ನಿಂತುಕೊಂಡಿರುವ ವಿಡಿಯೋದ ತುಣುಕನ್ನು ದೂರದಿಂದ ಸೆರೆಹಿಡಿಯಲಾಗಿದೆ. ತದನಂತರ ಹೊರಬಂದ ಅಧಿಕಾರಿಯನ್ನು ತಾವು ಯಾವ ಇಲಾಖೆ ಎಂದು ಬಿಜೆಪಿ ಕಾರ್ಯಕರ್ತರು ಪ್ರಶ್ನಿಸಿದ್ದಾರೆ. ಅವರ ಗುರುತಿನ ಚೀಟಿಯನ್ನು ಸಹ ಸೆರೆಹಿಡಿದಿರುವ ಮುಖಂಡರು ಅವರು ತೂಕ ಮತ್ತು ಅಳತೆಯ ಜಿಲ್ಲಾ ಜಿಲ್ಲಾ ಮಟ್ಟದ ಅಧಿಕಾರಿ ರಾಮಚಂದ್ರ ಟಿ ಎನ್ ಎಂಬುದಾಗಿ ಗುರುತಾಗಿದೆ.
ಈ ಸಂಬಂಧ ಚುನಾವಣಾಧಿಕಾರಿಗೆ ಬಿಜೆಪಿ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಅವರ ಚುನಾವಣಾ ಏಜೆಂಟ್ ದಿಲೀಪ್ ಎಂಬುವವರು ದೂರು ನೀಡಿದ್ದು, ಕೆಂಚೇಗೌಡರಿಗೆ ನೋಟೀಸ್ ಜಾರಿ ಮಾಡಿದ್ದಾರೆ ಎಂದು ಖಚಿತ ಮಾಹಿತಿಗಳು ಮಾಹಿತಿ ನೀಡಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in education »
ಅಂದು ಶಾಲೆ ಕಲಿಯಲು ಪಡಿಪಾಟಲು ಪಡಬೇಕಾಗಿತ್ತು. ಅಪ್ಪಗೆರೆ ತಿಮ್ಮರಾಜು
ಚನ್ನಪಟ್ಟಣ: ನಾವು ನಮ್ಮ ಕಾಲದಲ್ಲಿ ಶಾಲೆಗೆ ಹೋಗಿ ವಿದ್ಯೆ ಕಲಿಯಲು ಪಡಿಪಾಟಲು ಪಡಬೇಕಾಗಿತ್ತು. ಹಲವಾರು ಸಮಸ್ಯೆಗಳು ನಮ್ಮ ಎದುರಿಗಿದ್ದವು. ಆದರೆ, ಈಗ ಅಂತಹ
ಪ್ರತಿ ವಿದ್ಯಾರ್ಥಿಗಳು ಕೌಶಲ್ಯ ರೂಢಿಸಿಕೊಳ್ಳಬೇಕು: ಶಿಕ್ಷಣಾಧಿಕಾರಿ ಮರಿಗೌಡ
ಚನ್ನಪಟ್ಟಣ: ಶಾಲಾ ವಿದ್ಯಾರ್ಥಿಗಳು ಕೇವಲ ಪಾಠ ಮತ್ತು ಆಟಕ್ಕೆ ಸೀಮಿತವಾಗದೆ ವಿವಿಧ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು. ಕೌಶಲ್ಯ ಕಲಿತ ಮಕ್ಕಳ ಪ್ರತಿಭೆಯನ್ನ
ಪ್ರತಿ ಸರ್ಕಾರಗಳು ಪದವೀಧರರ ಜೊತೆ ಚೆಲ್ಲಾಟವಾಡುತ್ತಿವೆ, ಉದಯ್ ಸಿಂಗ್
ಚನ್ನಪಟ್ಟಣ: ಪ್ರತಿ ವರ್ಷವೂ ಲಕ್ಷಾಂತರ ಯುವಕ ಯುವತಿಯರು ಪದವಿಯೊಂದಿಗೆ ಹೊರಬರುತ್ತಾರೆ. ವಿಶ್ವ ವಿದ್ಯಾಲಯಗಳಿಂದ ಪದವಿಯೊಂದಿಗೆ ಬರುವವರಿಗೆ ಸೂಕ್ತ ಉದ್ಯೋಗ
ದಿವ್ಯಚೇತನ ಇಂಗ್ಲಿಷ್ ಶಾಲೆಯಲ್ಲಿ ಮೇಳೈಸಿದ ಮಿನಿ ವಿಜ್ಞಾನ ಮೇಳ
ಚನ್ನಪಟ್ಟಣ: ಅಗಸ್ತ್ಯ ಅಂತರಾಷ್ಟ್ರೀಯ ಪ್ರತಿಷ್ಠಾನ ಬ್ರಾಡ್ಕಾಂ ವಿಜ್ಞಾನ ಕೇಂದ್ರ ಚನ್ನಪಟ್ಟಣ ಇವರ ವತಿಯಿಂದ ನಗರದ ದಿವ್ಯ ಚೇತನ ಇಂಗ್ಲಿಷ್ ಪ್ರೌಢಶಾಲೆಯಲ್ಲ
ಪಾಠದ ಜೊತೆಗೆ ಆಟದಲ್ಲಿಯೂ ಮುಂಚೂಣಿಗೆ ಬರಬೇಕು. ವಿ ಬಾಲಸುಬ್ರಹ್ಮಣ್ಯಂ
ಚನ್ನಪಟ್ಟಣ,: ಪ್ರತಿಯೊಬ್ಬ ವಿದ್ಯಾರ್ಥಿಯು ಶಿಕ್ಷಣದ ಜೊತೆಯಲ್ಲಿ ಕ್ರೀಡಾಮನೋಭಾವನೆ ಬೆಳಸಿಕೊಳ್ಳಬೇಕು. ಮನಸ್ಸು ಉಲ್ಲಸಿತವಾಗಲು ಕ್ರೀಡೆ ಸಹಕಾರಿ ಎಂದು ಬಾಲು
ಉಪನ್ಯಾಸಕರ ಧರಣಿ, ಕಲಿಕೆಗೆ ತೊಂದರೆ, ಎಬಿವಿಪಿ ಯಿಂದ ಪ್ರತಿಭಟನೆ
ಚನ್ನಪಟ್ಟಣ: ಸರ್ಕಾರಿ ಕಾಲೇಜುಗಳ ಉಪನ್ಯಾಸಕರು ಧರಣಿ ನಿರತರಾಗಿರುವುದರಿಂದ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆಯಿದೆ. ಇದರಿಂದ ಶೈಕ್ಷಣಿಕ ವರ್ಷದ ಕಲಿಕೆಗೆ ತೊ
ಆರೋಗ್ಯ, ಆಯಸ್ಸು ಹೆಚ್ಚಿಸುವ ವೈದ್ಯರು ಆರೋಗ್ಯ ಕಾಪಾಡಿಕೊಳ್ಳಬೇಕು. ಚಾಮುಂಡೇಶ್ವರಿ ಆಸ್ಪತ್ರೆ ಉದ್ಘಾಟನೆಯಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ
ಚನ್ನಪಟ್ಟಣ:bಆಸ್ಪತ್ರೆಗೆ ಬರುವ ರೋಗಿಗಳ ಅರೋಗ್ಯ ತಪಾಸಿಸಿ, ರೋಗ ವಾಸಿ ಮಾಡಿ, ಅವರ ಆರೋಗ್ಯ ದ ಜೊತೆಗೆ ಆಯಸ್ಸನ್ನು ಹೆಚ್ಚಿಸುವಲ್ಲಿ ನಿಷ್ಣಾತರಾದ ವೈದ್ಯರು
ಪೆಟ್ಟಾ ಸರ್ಕಾರಿ ಶಾಲಾ ಆವರಣದಲ್ಲಿ ನಗರಸಭೆಯ ಕಸದ ರಾಶಿ, ಅಲ್ಲಗಳೆದ ಪೌರಾಯುಕ್ತ
ಆರ್ಥಿಕವಾಗಿ ಬೆಳೆದವರೆಲ್ಲರೂ ವಿದ್ಯಾರ್ಜನೆಗೆ ಮುಂದಡಿಯಿಡಬೇಕು, ಸಚಿವ ಮಧುಬಂಗಾರಪ್ಪ
ಚನ್ನಪಟ್ಟಣ: ಬಡತನದ ಬೇಗೆಯಲ್ಲಿ ಬೆಂದು, ಉನ್ನತ ಶಿಕ್ಷಣ ಪಡೆದು, ಉತ್ತಮ ಸ್ಥಾನಮಾನದ ಜೊತೆಗೆ ಆರ್ಥಿಕವಾಗಿ ಸದೃಢವಾದ ನಂತರ ತನ್ನ ಜನ್ಮದಾತರಿಗೆ, ಹುಟ್ಡಿದೂರ
ಕಾವೇರಿ ಕಿಚ್ಚು, ರಾಮನಗರ ಜಿಲ್ಲೆ ಬಂದ್, ಶಾಲಾ-ಕಾಲೇಜಿಗೆ ರಜೆ, ಸರ್ಕಾರಿ ಕಛೇರಿ ರಜೆಗಾಗಿ ಕಾಯುತ್ತಿರುವ ನೌಕರರು
ರಾಮನಗರ: ನಮ್ಮ ರಾಜ್ಯದ ಕೆಲ ಭಾಗಗಳಿಗೆ ಕುಡಿಯುವ ನೀರಿಗೆ ತತ್ವಾರವಾಗಿದೆ, ಮಂಡ್ಯ, ಮೈಸೂರು ಭಾಗದ ರೈತರಿಗೆ ಬೆಳೆ ಬೆಳೆಯಲು ನೀರಿಲ್ಲಾ, ಇಂತಹ ಸಂಕಷ್ಟದ ಸಮಯ
ಪ್ರತಿಕ್ರಿಯೆಗಳು