Tel: 7676775624 | Mail: info@yellowandred.in

Language: EN KAN

    Follow us :

ಶಿಸ್ತು ಮತ್ತು ಶ್ರದ್ಧೆ ಇದ್ದರೆ ಅಸಾಧ್ಯವಾದುದನ್ನು ಸಾಧಿಸಬಹುದು. ಸಾಹಿತಿ ವಿಜಯ್ ರಾಂಪುರ

Posted date: 18 May, 2023

Powered by:     Yellow and Red

ಶಿಸ್ತು ಮತ್ತು ಶ್ರದ್ಧೆ ಇದ್ದರೆ ಅಸಾಧ್ಯವಾದುದನ್ನು ಸಾಧಿಸಬಹುದು. ಸಾಹಿತಿ ವಿಜಯ್ ರಾಂಪುರ

ಚನ್ನಪಟ್ಟಣ :ಪ್ರತಿ ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಅವಧಿಯಲ್ಲಿ ಶಿಸ್ತು ಮತ್ತು ಶ್ರದ್ಧೆಯ ಜೊತೆಗೆ ಸಮಯ ಪಾಲನೆ ರೂಢಿಸಿಕೊಂಡಲ್ಲಿ, ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಮೂಲಾಗ್ರ ಬದಲಾವಣೆ ಕಂಡುಕೊಳ್ಳಲು ಸಾಧ್ಯ ಎಂದು ಸಾಹಿತಿ ವಿಜಯ್ ರಾಂಪುರ ತಿಳಿಸಿದರು.

ಅವರು ಪಟ್ಟಣದ ರಾಜಾಕೆಂಪೇಗೌಡ ಬಡಾವಣೆಯಲ್ಲಿ ರಾಂಪುರದ ನೇಗಿಲಯೋಗಿ ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ, ಪವಿತ್ರ ಮತ್ತು ಶಿಕ್ಷಕ ಸಿದ್ದರಾಜು ಅವರ ಪುತ್ರಿ ಕುಮಾರಿ ಎಂ.ಎಸ್. ತಶ್ವಿನಿ ಅವರನ್ನು ಸನ್ಮಾನಿಸಿ ಮಾತನಾಡಿದರು.

ತಶ್ವಿನಿ ಅವರು ಹತ್ತನೇ ತರಗತಿ ಪರೀಕ್ಷೆಯಲ್ಲಿ 625ಕ್ಕೆ 606 ಅಂಕಗಳನ್ನು ಗಳಿಸುವ ಮೂಲಕ ತಾಲ್ಲೂಕಿಗೆ ಕೀರ್ತಿ ತಂದಿದ್ದಾಳೆ. ಎಳವೆಯಿಂದಲೂ ವಾಚನಾಭಿರುಚಿಯ ಜೊತೆಗೆ ಕಲೆ, ಸಾಹಿತ್ಯ ಮತ್ತು ಸಂಗೀತದಲ್ಲಿ ಸಹ ವಿಶೇಷ ಅಭಿರುಚಿ ಬೆಳೆಸಿಕೊಂಡಿದ್ದಾಳೆ.

ಇಂತಹ ಬಹುಮುಖ ಪ್ರತಿಭೆಗಳನ್ನು ಎಳವೆಯಲ್ಲಿಯೇ ಗುರುತಿಸಿ ಪ್ರೋತ್ಸಾಹಿಸುವ ಕಾರ್ಯವನ್ನು ನೇಗಿಲಯೋಗಿ ಸಾಂಸ್ಕೃತಿಕ ಟ್ರಸ್ಟ್ ಹಲವಾರು ವರ್ಷಗಳಿಂದ ನಿರಂತರವಾಗಿ ನಡೆಸಿಕೊಂಡು ಬರುತ್ತಿದೆ ಎಂದರು.

ವಿದ್ಯಾರ್ಥಿ ಜೀವನ ಅತ್ಯಮೂಲ್ಯವಾದುದು. ವಿದ್ಯೆಯಿಂದ ಸಕಲವನ್ನೂ ಗಳಿಸಿ, ಸಾಮಾಜಿಕ ಗೌರವಕ್ಕೆ ಪಾತ್ರರಾಗಬಹುದು. ಕುಮಾರಿ ತಶ್ವಿನಿ ಅವರ ಸಾಧನೆ, ಕಿರಿಯರಿಗೆ ಮಾದರಿಯಾಗಿದೆ ಎಂದರು.

ಈ ಸಂದರ್ಭದಲ್ಲಿ ಹಿರಿಯ ಜಾನಪದ ಕಲಾವಿದ‌ ಚೌ.ಪು. ಸ್ವಾಮಿ, ಟ್ರಸ್ಟ್ ಖಜಾಂಚಿ ಅನಿತಾ ವಿಜಯ್, ಅಚಲ ಆರ್.ವಿ., ಶಿಕ್ಷಕ ಮೊಗೇನಹಳ್ಳಿ ಸಿದ್ದರಾಜು, ಪವಿತ್ರ ಮತ್ತಿತರರು ಉಪಸ್ಥಿತರಿದ್ದರು.

ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in education »

ಎನ್.ಎಸ್.ಎಸ್. ಶಿಬಿರಾರ್ಥಿಗಳಿಗೆ ಸಮೀಕ್ಷೆವೇಳೆ ಅಪೌಷ್ಠಿಕತೆ ನಿಯಂತ್ರಣ ಕುರಿತು ಜಾಗೃತಿ ಮೂಡಿಸಲು ಸಲಹೆ - ಡಾ. ಶಶಿಕಲಾ
ಎನ್.ಎಸ್.ಎಸ್. ಶಿಬಿರಾರ್ಥಿಗಳಿಗೆ ಸಮೀಕ್ಷೆವೇಳೆ ಅಪೌಷ್ಠಿಕತೆ ನಿಯಂತ್ರಣ ಕುರಿತು ಜಾಗೃತಿ ಮೂಡಿಸಲು ಸಲಹೆ - ಡಾ. ಶಶಿಕಲಾ

ರಾಮನಗರ, ಮೇ 2: ಅಪೌಷ್ಠಿಕತೆ ಮುಖ್ಯವಾದ ಆರೋಗ್ಯ ಸಮಸ್ಯೆಯಾಗಿದ್ದು. ಅಪೌಷ್ಠಿಕತೆ ಎಲ್ಲಾ ವಯಸ್ಸಿನಲ್ಲಿಯೂ ಕಂಡು ಬರುತ್ತದೆ. ಅಪೌಷ್ಠಿಕತೆ ನಿವಾರಿಸಲು ತಾಯಿ

ಶಿಸ್ತು ಮತ್ತು ಶ್ರದ್ಧೆ ಇದ್ದರೆ ಅಸಾಧ್ಯವಾದುದನ್ನು ಸಾಧಿಸಬಹುದು. ಸಾಹಿತಿ ವಿಜಯ್ ರಾಂಪುರ
ಶಿಸ್ತು ಮತ್ತು ಶ್ರದ್ಧೆ ಇದ್ದರೆ ಅಸಾಧ್ಯವಾದುದನ್ನು ಸಾಧಿಸಬಹುದು. ಸಾಹಿತಿ ವಿಜಯ್ ರಾಂಪುರ

ಚನ್ನಪಟ್ಟಣ :ಪ್ರತಿ ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಅವಧಿಯಲ್ಲಿ ಶಿಸ್ತು ಮತ್ತು ಶ್ರದ್ಧೆಯ ಜೊತೆಗೆ ಸಮಯ ಪಾಲನೆ ರೂಢಿಸಿಕೊಂಡಲ್ಲಿ, ವಿದ್ಯಾರ್ಥಿಗಳು ತಮ್ಮ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಅಕ್ರಮ: ಹೆಚ್ಚಿನ ವಿಚಾರಣೆಗಾಗಿ ಮೂವರು ಪೊಲೀಸರ ವಶಕ್ಕೆ: ಏಳು ಆರೋಪಿಗಳು ನ್ಯಾಯಾಂಗ ಬಂಧನಕ್ಕೆ
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಅಕ್ರಮ: ಹೆಚ್ಚಿನ ವಿಚಾರಣೆಗಾಗಿ ಮೂವರು ಪೊಲೀಸರ ವಶಕ್ಕೆ: ಏಳು ಆರೋಪಿಗಳು ನ್ಯಾಯಾಂಗ ಬಂಧನಕ್ಕೆ

ರಾಮನಗರ: 2022-23 ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ಹತ್ತು ಆರೋಪಿಗಳನ್ನು ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ಇವರಲ್ಲಿ ಮೂವರನ್ನು‌ ಹೆಚ್ಚಿನ ವಿಚಾರಣೆಗಾ

ಎಸ್ಎಸ್ಎಲ್ಸಿ ಯಲ್ಲಿ ತಾಲ್ಲೂಕಿನಲ್ಲಿ ಶೇ 95.46 ಫಲಿತಾಂಶ
ಎಸ್ಎಸ್ಎಲ್ಸಿ ಯಲ್ಲಿ ತಾಲ್ಲೂಕಿನಲ್ಲಿ ಶೇ 95.46 ಫಲಿತಾಂಶ

ಚನ್ನಪಟ್ಟಣ: ತಾಲೂಕಿನಲ್ಲಿ ಈ ಬಾರಿ  ಒಟ್ಟು 2821 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಗೆ  ಬರೆದಿದ್ದು,  ಅದರಲ್ಲಿ 269

ರಾಮನಗರ, ಚನ್ನಪಟ್ಟಣ, ಕನಕಪುರ ತಾ.ಗಳಲ್ಲೂ ಸದ್ಯದಲ್ಲೇ ಮಾದರಿ ಪಬ್ಲಿಕ್ ಶಾಲೆ ಆರಂಭ
ರಾಮನಗರ, ಚನ್ನಪಟ್ಟಣ, ಕನಕಪುರ ತಾ.ಗಳಲ್ಲೂ ಸದ್ಯದಲ್ಲೇ ಮಾದರಿ ಪಬ್ಲಿಕ್ ಶಾಲೆ ಆರಂಭ

ಮಾಗಡಿ: ಸರಕಾರದ ಪ್ರತೀ ಗ್ರಾಮ ಪಂಚಾಯಿತಿಗೊಂದು ಮಾದರಿ ಪಬ್ಲಿಕ್ ಶಾಲೆ’ ಯೋಜನೆಯಡಿ ಅಭಿವೃದ್ಧಿಪಡಿಸಿರುವ ಸಂಕೀಘಟ್ಟ ಶಾಲೆಯನ್ನು ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್

ಪ್ರಾಥಮಿಕ ಶಾಲಾ ಪದವೀಧರ  ಸಮಸ್ಯೆ ಬಗೆಹರಿಸುವಂತೆ ಮನವಿ
ಪ್ರಾಥಮಿಕ ಶಾಲಾ ಪದವೀಧರ ಸಮಸ್ಯೆ ಬಗೆಹರಿಸುವಂತೆ ಮನವಿ

ರಾಮನಗರ: ಸೇವಾ ನಿರತ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಕ್ರಮವಹಿಸಬೇಕು ಎಂದು ಡಿಡಿಪಿಐ ಹಾಗೂ ಡಯಟ್ ಪ್ರಾಂಶುಪಾಲರಿಗೆ ರಾಮನಗರ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿ

ಶಿಕ್ಷಣ ವ್ಯಾಪಾರೀಕರಣವಾಗುತ್ತಿರುವುದು ಒಳ್ಳೆಯ ಬೆಳವಣಿಗೆ ಅಲ್ಲ: ಡಾ ಮುನಿರಾಜಪ್ಪ
ಶಿಕ್ಷಣ ವ್ಯಾಪಾರೀಕರಣವಾಗುತ್ತಿರುವುದು ಒಳ್ಳೆಯ ಬೆಳವಣಿಗೆ ಅಲ್ಲ: ಡಾ ಮುನಿರಾಜಪ್ಪ

ರಾಮನಗರ: ಜಾಗತೀಕರಣ, ಉದಾರೀಕರಣದಿಂದಾಗಿ ಪ್ರಸ್ತುತ ಶಿಕ್ಷಣ ಕ್ಷೇತ್ರವು ಹಣ ಮಾಡುವ ವ್ಯಾಪಾರವಾಗಿದೆ ಎಂದು ಹಿರಿಯ ಸಂಶೋಧಕ ಡಾ. ಮುನಿರಾಜಪ್ಪ ಬೇಸರ ವ್ಯಕ್ತಪಡಿಸಿದರು.

ಇಲ್ಲಿನ ಜಾನಪದ ಲ

ಮತ್ತೀಕೆರೆ ಶ್ವೇತಾರಾಣಿ ಗೆ ಚಿನ್ನದ ಪದಕ
ಮತ್ತೀಕೆರೆ ಶ್ವೇತಾರಾಣಿ ಗೆ ಚಿನ್ನದ ಪದಕ

ಚನ್ನಪಟ್ಟಣ: ತಾಲೂಕಿನ ಮತ್ತೀಕೆರೆ ಗ್ರಾಮದ ಚಿಕ್ಕತಾಯಮ್ಮ ಮತ್ತು ಲೇಟ್ ತಿಮ್ಮೇಗೌಡ ಅವರ ಮೊಮ್ಮಗಳು ವಿ.ಶ್ವೇತಾರಾಣಿ ಮೈಸೂರು ವಿಶ್ವವಿದ್ಯಾಲಯದ 1

ಸೋರುತಿಹುದು ಪೆಟ್ಟಾ ಶಾಲೆಯ ಮಾಳಿಗಿ. ವಿದ್ಯಾರ್ಥಿಗಳ ತಲೆಯ ಮೇಲೆ ತೂಗುಗತ್ತಿ
ಸೋರುತಿಹುದು ಪೆಟ್ಟಾ ಶಾಲೆಯ ಮಾಳಿಗಿ. ವಿದ್ಯಾರ್ಥಿಗಳ ತಲೆಯ ಮೇಲೆ ತೂಗುಗತ್ತಿ

ಚನ್ನಪಟ್ಟಣ, ಸೆ.೦೬: ನಗರದಲ್ಲಿನ ಸುವರ್ಣ ಮಹೋತ್ಸವ ಆಚರಣೆಯ ಹೊಸ್ತಿಲಲ್ಲಿರುವ ಪಟ್ಟಣದ ಸರ್ಕಾರಿ ಶಾಲೆಯಲ್ಲಿ ಹೆಚ್ಚು ಪ್ರಸಿದ್ದಿ ಪಡೆದಿರುವ ಪಟ್ಟಣದ ಐದು ದ

ನಗರದ ಪ್ರಥಮ ದರ್ಜೆ ಕಾಲೇಜಿಗೆ ಉತ್ತಮ ಹೆಸರಿದೆ. ನ್ಯಾಕ್ ಸಮಿತಿ ಉತ್ತಮ ವರದಿ ನೀಡುವ ವಿಶ್ವಾಸವಿದೆ. ಹೆಚ್ಡಿಕೆ
ನಗರದ ಪ್ರಥಮ ದರ್ಜೆ ಕಾಲೇಜಿಗೆ ಉತ್ತಮ ಹೆಸರಿದೆ. ನ್ಯಾಕ್ ಸಮಿತಿ ಉತ್ತಮ ವರದಿ ನೀಡುವ ವಿಶ್ವಾಸವಿದೆ. ಹೆಚ್ಡಿಕೆ

ಚನ್ನಪಟ್ಟಣ, ಆ. 27:  ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ನ್ಯಾಕ್ ಸಮಿತಿ ಭೇಟಿ ನೀಡಿದ್ದು ಕಾಲೇಜಿನ ಪರವಾಗಿ ಉತ್ತಮ ವರದಿ ನೀಡುವ ವಿಶ್ವಾಸ ಇದೆ ಎಂದು ಮಾಜಿ ಮುಖ್ಯಮಂತ್ರಿಗಳು ಕ್ಷೇತ್ರದ

Top Stories »  

Top ↑