Tel: 7676775624 | Mail: info@yellowandred.in

Language: EN KAN

    Follow us :

ಆಯುರ್ವೇದ ಔಷಧ ರೋಗಿಗಳಿಗೆ ರಾಮಬಾಣ ಸಿ ಪುಟ್ಟಸ್ವಾಮಿ

Posted date: 07 Mar, 2020

Powered by:     Yellow and Red

ಆಯುರ್ವೇದ ಔಷಧ ರೋಗಿಗಳಿಗೆ ರಾಮಬಾಣ ಸಿ ಪುಟ್ಟಸ್ವಾಮಿ

ಚನ್ನಪಟ್ಟಣ: ಪೌರಾಣಿಕ ಹಾಗೂ ಇತಿಹಾಸದ ಹಿನ್ನೆಲೆಯ ಪಾರಂಪರಿಕ ಮತ್ತು ಆಯುರ್ವೇದ ಔಷಧವೂ ರೋಗಿಗಳ ಕಾಯಿಲೆಗಳಿಗೆ ರಾಮಬಾಣವಾಗಿದ್ದು, ಆಧುನಿಕ ಇಂಗ್ಲಿಷ್ ಔಷಧ ಗಳ ಗುಣಮಟ್ಟವನ್ನು ಮೆಟ್ಟಿ ತನ್ನದೇ ಮಹತ್ವವನ್ನು ಉಳಿಸಿಕೊಂಡಿದೆ ಎಂದು ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ ಅಭಿಪ್ರಾಯ ಪಟ್ಟರು.

ಅವರು ತಾಲ್ಲೂಕಿನ ಅರಳಾಳುಸಂದ್ರ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಬೆಂಗಳೂರು ಮತ್ತು ಕರ್ನಾಟಕ ನಗರ ಮತ್ತು ಗ್ರಾಮೀಣ ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ ಹಾಗೂ ಕೈಗಾರಿಕಾ ಅಭಿವೃದ್ಧಿ ಸಂಸ್ಥೆಯು ಜಂಟಿಯಾಗಿ ಆಯೋಜಿಸಿದ್ದ ಉಚಿತ ಆಯುರ್ವೇದ ವೈದ್ಯಕೀಯ ಚಿಕಿತ್ಸಾ ಶಿಬಿರ ಹಾಗೂ ಔಷಧ ವಿತರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ವೈದ್ಯಕೀಯ ಕ್ಷೇತ್ರದಲ್ಲಿ ಬದಲಾವಣೆ ಆಗುತ್ತಿದ್ದರೂ ಕಾಯಿಲೆಗಳನ್ನು ಗುಣಪಡಿಸುವ ಔಷಧ ದ ಗುಣಮಟ್ಟವು ಇನ್ನೂ ಸುಧಾರಣೆಯಾಗಿಲ್ಲ. ಆದರೆ ಪುರಾತನ ಆಯುರ್ವೇದ ಔಷಧವು ರೋಗಿಗಳ ಖಾಯಿಲೆಗಳನ್ನು ಗುಣಪಡಿಸುವ ಮೂಲಕ ಆಧುನಿಕ ಯುಗದಲ್ಲಿಯೂ ತನ್ನ ತನವನ್ನು ಉಳಿಸಿಕೊಂಡಿದೆ ಎಂದು ಬಣ್ಣಿಸಿದರು.

ಎಸ್ ಸಿ ಪಿ ಟಿ ಎಸ್ ಪಿ ಮತ್ತು ಎನ್ ಎಸ್ ಎಸ್ ಘಟಕದ ಯೋಜಾಧಿಕಾರಿ ಡಾ ಶ್ರೀನಿವಾಸ ಯಾದವ್ ರವರು ಆಯುರ್ವೇದ ಔಷಧದಿಂದ ವಾಸಿಯಾಗುವ ಖಾಯಿಲೆಗಳ ವಿವರ, ಔಷಧಗಳ  ಕಿರುಪರಿಚಯವನ್ನು ಮಾಡಿಕೊಟ್ಟರು.

ಸಂಸ್ಥೆಯ ಮುಖ್ಯಸ್ಥರಾದ ಮೋಹನಕುಮಾರಿ ಯವರು ಮಾತನಾಡಿ ಆಯುರ್ವೇದ ನಮ್ಮ ಪೂರ್ವಜರ ಅನುಭವದ ಕೊಡುಗೆಯಾಗಿದ್ದು ಅದನ್ನು ಉಳಿಸಿ ಬೆಳೆಸುವ ಮೂಲಕ ಮುಂದಿನ ಪೀಳಿಗೆಗೆ ಉಳಿಸಬೇಕಾದದ್ದು ನಮ್ಮ ಕರ್ತವ್ಯವಾಗಿದೆ.

ಕಾಡುಗಳನ್ನು ಉಳಿಸುವ ಮೂಲಕ ಜೀವವೈವಿಧ್ಯತೆಯ ಜೊತೆಗೆ ಅನೇಕ ಔಷಧೀಯ ಗುಣಗಳುಳ್ಳ ಸಸ್ಯ ಪ್ರಬೇಧಗಳನ್ನು ಉಳಿಸಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸಕ್ಕರೆ ಖಾಯಿಲೆ, ರಕ್ತದೊತ್ತಡ, ಗ್ಯಾಸ್ಟ್ರಿಕ್‌, ಅಸ್ತಮಾ, ಮಂಡಿನೋವು, ಕೈಕಾಲು ನೋವು, ಕಿವಿ, ಮೂಗು, ಗಂಟಲು, ಚರ್ಮರೋಗ, ಮನೋರೋಗ, ಸ್ತ್ರೀ ರೋಗ ಹಾಗೂ ಮಕ್ಕಳ ತಜ್ಞರು ಆಗಮಿಸಿದ್ದು ಸುಮಾರು ಐದುನೂರಕ್ಕೂ ಹೆಚ್ಚು ರೋಗಿಗಳು ಉಪಯೋಗ ಪಡೆದುಕೊಂಡರು.

ಶಿಬಿರದಲ್ಲಿ ಶಿಕ್ಷಕ ಸುರೇಶ್ ಮತ್ತು ಸಹ ಶಿಕ್ಷಕರು ಹಾಗೂ ವೈದ್ಯಕೀಯ ಮಹಾವಿದ್ಯಾಲಯ ದ ಡಾ ರವಿರಾಜ್, ಡಾ ಸಂತೋಷ್ ಶಿವಣ್ಣನವರ್, ಡಾ ಮೇಘ, ಡಾ ಚಂದ್ರಕಲಾ, ಡಾ ಸತೀಶ್, ಡಾ ಅವಿನಾಶ್ ರಾಜೇಶ್ವರಿ, ಷಡಕ್ಷರಿ, ಮೂರ್ತಿ, ನಾಗೇಗೌಡ, ಶಿವಣ್ಣ ಮತ್ತು ಮೂರನೇ ಸೆಮಿಸ್ಟರ್ ನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in health »

ವ್ಯವಹಾರಕ್ಕಾಗಿ ಆಸ್ಪತ್ರೆಯಲ್ಲಾ, ಸೇವೆಗಾಗಿ ನಮ್ಮ ಆಸ್ಪತ್ರೆ. ಕಾಂಗರೂ ಆಸ್ಪತ್ರೆಯ ಸಂಸ್ಥಾಪಕ ಡಾ ಶೇಖರ್ ಸುಬ್ಬಯ್ಯ
ವ್ಯವಹಾರಕ್ಕಾಗಿ ಆಸ್ಪತ್ರೆಯಲ್ಲಾ, ಸೇವೆಗಾಗಿ ನಮ್ಮ ಆಸ್ಪತ್ರೆ. ಕಾಂಗರೂ ಆಸ್ಪತ್ರೆಯ ಸಂಸ್ಥಾಪಕ ಡಾ ಶೇಖರ್ ಸುಬ್ಬಯ್ಯ

ರಾಮನಗರ: ನಾವು ಹಣಕ್ಕಾಗಿ ಆಸ್ಪತ್ರೆ ನಡೆಸುವುದಿಲ್ಲ, ಇದೊಂದು ಸೇವೆ ಎಂದು ಪರಿಗಣಿಸಿ ಆಸ್ಪತ್ರೆ ನಡೆಸುತ್ತಿದ್ದೇವೆ. ಬೆಂಗಳೂರು ಮೈಸೂರು ಸೇರಿದಂತೆ ನಾಲ್ಕು

೪೬ ವರ್ಷದ ಮಹಿಳೆಯ ಹೊಟ್ಟೆಯಲ್ಲಿದ್ದ ೧೦ ಕಿಲೋ ಕ್ಯಾನ್ಸರ್ ಗಡ್ಡೆ ಹೊರತೆಗೆದ ಬಾಲು ಆಸ್ಪತ್ರೆಯ ವೈದ್ಯರು
೪೬ ವರ್ಷದ ಮಹಿಳೆಯ ಹೊಟ್ಟೆಯಲ್ಲಿದ್ದ ೧೦ ಕಿಲೋ ಕ್ಯಾನ್ಸರ್ ಗಡ್ಡೆ ಹೊರತೆಗೆದ ಬಾಲು ಆಸ್ಪತ್ರೆಯ ವೈದ್ಯರು

ಚನ್ನಪಟ್ಟಣ: ತಾಲ್ಲೂಕಿನ ಗ್ರಾಮವೊಂದರ ೪೬ ವರ್ಷದ ಮಹಿಳೆಯೊಬ್ಬರ ಗರ್ಭ (ಅಂಡಾಶಯ) ದಲ್ಲಿದ್ದ ಬರೋಬ್ಬರಿ ೧೦ ಕಿಲೋ ೩೦೦ ಗ್ರಾಂ ತೂಕದ ಕ್ಯಾನ್ಸರ್ ಗಡ್ಡೆ ಯನ್ನ

ಹೊಂಗನೂರು, ಕೋಡಂಬಳ್ಳಿ ಗ್ರಾಮದಲ್ಲಿ ಪರವಾನಗಿ ಇಲ್ಲದ ಖಾಸಗಿ ಆಸ್ಪತ್ರೆಗಳಿಗೆ ಬೀಗ ಜಡಿದ ಟಿಹೆಚ್‌ಓ
ಹೊಂಗನೂರು, ಕೋಡಂಬಳ್ಳಿ ಗ್ರಾಮದಲ್ಲಿ ಪರವಾನಗಿ ಇಲ್ಲದ ಖಾಸಗಿ ಆಸ್ಪತ್ರೆಗಳಿಗೆ ಬೀಗ ಜಡಿದ ಟಿಹೆಚ್‌ಓ

ಚನ್ನಪಟ್ಟಣ: ತಾಲ್ಲೂಕಿನ ಹೊಂಗನೂರು ಗ್ರಾಮದಲ್ಲಿ ಗೋಪಿ ಕ್ಲಿನಿಕ್ ಎಂಬ ಖಾಸಗಿ ಆಸ್ಪತ್ರೆ ಇದ್ದು, ಗೋಪಿ ಎಂಬುವವರು ವೈದ್ಯರಾಗಿ ಸೇವೆ ನಿರ್ವಹಿಸುತ್ತಿದ್ದಾರ

ಉತ್ತಮ ಆರೋಗ್ಯಕ್ಕೆ ಆಯುರ್ವೇದವೇ ದಿವ್ಯ ಔಷಧ ಡಾ ಸಹನಾ ಕೃಷ್ಣ
ಉತ್ತಮ ಆರೋಗ್ಯಕ್ಕೆ ಆಯುರ್ವೇದವೇ ದಿವ್ಯ ಔಷಧ ಡಾ ಸಹನಾ ಕೃಷ್ಣ

ಚನ್ನಪಟ್ಟಣ: ಪುರಾಣೇತೀಹಾಸದಿಂದಲೂ ಪ್ರಖ್ಯಾತವಾಗಿರುವ ಔಷಧ ಎಂದರೆ ಅದು ಆಯುರ್ವೇದ ಔಷಧ, ಜಗತ್ತಿನ ಅತ್ಯಂತ ಪ್ರಾಚೀನ ಔಷಧವೂ ಹೌದು, ನಮ್ಮ ಪ್ರಕೃತಿ ಹೇಗೆ ಸಮ

ದೊಡ್ಡಮಳೂರು ಗ್ರಾಮದಲ್ಲಿ ದೀರ್ಘಾಯು ವೆಲ್ ನೆಸ್ ಆಯುರ್ವೇದ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ಶಿಬಿರ
ದೊಡ್ಡಮಳೂರು ಗ್ರಾಮದಲ್ಲಿ ದೀರ್ಘಾಯು ವೆಲ್ ನೆಸ್ ಆಯುರ್ವೇದ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ಶಿಬಿರ

ಚನ್ನಪಟ್ಟಣ: ತಾಲ್ಲೂಕಿನ ದೊಡ್ಡಮಳೂರು ಗ್ರಾಮದ ದೇವಸ್ಥಾನದ ಬೀದಿಯಲ್ಲಿರುವ ದೀರ್ಘಾಯು ವೆಲ್ ನೆಸ್ ಸೆಂಟರ್ ಇವರ ವತಿಯಿಂದ ನಾಳೆ (ಭಾನುವಾರ) ಬೆಳಿ

ಕ್ರಿಯೇಟಿವ್ ಅಸೋಸಿಯೇಷನ್ ಹಾಗೂ ಸೊಸೈಟಿ ವತಿಯಿಂದ ಶನಿವಾರ ನಗರದಲ್ಲಿ ಬೃಹತ್ ಉಚಿತ ಆರೋಗ್ಯ ಶಿಬಿರ
ಕ್ರಿಯೇಟಿವ್ ಅಸೋಸಿಯೇಷನ್ ಹಾಗೂ ಸೊಸೈಟಿ ವತಿಯಿಂದ ಶನಿವಾರ ನಗರದಲ್ಲಿ ಬೃಹತ್ ಉಚಿತ ಆರೋಗ್ಯ ಶಿಬಿರ

ಚನ್ನಪಟ್ಟಣ : ತಾಲ್ಲೂಕಿನಿಂದ ಬೆಂಗಳೂರಿಗೆ ಹೋಗಿ, ಜೀವನ ಕಟ್ಟಿಕೊಂಡು ತಾಲ್ಲೂಕಿಗೆ ಏನಾದರೂ ಕೊಡುಗೆ ನೀಡಬೇಕೆಂಬ ಹಂಬಲದಿಂದ ಕ್ರಿಯೇಟಿವ್ ಅಸೋಸಿಯೇಷನ್ ಮತ್ತ

ದುಶ್ಚಟದಿಂದ ದೂರವಿರಿ, ಆರೋಗ್ಯ ಕಾಪಾಡಿಕೊಳ್ಳಿ : ಪ್ರತಿಮಾ ಕೆ.ವಿ
ದುಶ್ಚಟದಿಂದ ದೂರವಿರಿ, ಆರೋಗ್ಯ ಕಾಪಾಡಿಕೊಳ್ಳಿ : ಪ್ರತಿಮಾ ಕೆ.ವಿ

ರಾಮನಗರ, ಜೂ. 17:   ಇತ್ತೀಚೆಗೆ ಅತಿ ಹೆಚ್ಚು ಹಲವಾರು ದುಶ್ಚಟಗಳು ಮನುಷ್ಯನನ್ನು ಆವರಸಿಕೊಂಡಿವೆ. ಇದರಿಂದಾಗಿ ನೂರಾರು ಖಾಯಿಲೆಗಳು ದೇಹ ಹೊಕ್ಕು ನಿತ್ಯ ಸಾ

ಫ್ಲೋರೋಸಿಸ್ ನಿಯಂತ್ರಿಸಿ ಉತ್ತಮ ಜೀವನ ನಡೆಸುವಂತೆ ಸಲಹೆ - ಡಾ.ಅನಿಲ್
ಫ್ಲೋರೋಸಿಸ್ ನಿಯಂತ್ರಿಸಿ ಉತ್ತಮ ಜೀವನ ನಡೆಸುವಂತೆ ಸಲಹೆ - ಡಾ.ಅನಿಲ್

ರಾಮನಗರ, ಜೂ. 15:   ಫ್ಲೋರೈಡ್ ನಮ್ಮ ದೇಹಕ್ಕೆ ಬೇಕಾದ ಒಂದು ಖನಿಜಾಂಶ ನಾವು ಸೇವಿಸುವ ಆಹಾರ ಮತ್ತು ಕುಡಿಯುವ ನೀರಿನಲ್ಲಿ ಅವಶ್ಯಕತೆಗಿಂತ ಹೆಚ್ಚು ಫ್ಲೋರೈಡ

ಆರೋಗ್ಯ ಕೇಂದ್ರದಲ್ಲಿ ದೊರೆಯುವ ಸೇವೆಗಳನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದ ಬಿ.ಎಸ್.ಗಂಗಾಧರ್.
ಆರೋಗ್ಯ ಕೇಂದ್ರದಲ್ಲಿ ದೊರೆಯುವ ಸೇವೆಗಳನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದ ಬಿ.ಎಸ್.ಗಂಗಾಧರ್.

ರಾಮನಗರ: ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಕೆ.ಕರೇನಹಳ್ಳಿ ಇವರ ಸಂಯುಕ್ತ ಆಶ್ರ

ಶ್ರೀಗಿರಿಪುರ ಗ್ರಾಪಂ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆದ ಆರೋಗ್ಯ ತಪಾಸಣಾ ಶಿಬಿರ
ಶ್ರೀಗಿರಿಪುರ ಗ್ರಾಪಂ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆದ ಆರೋಗ್ಯ ತಪಾಸಣಾ ಶಿಬಿರ

ರಾಮನಗರ, ಜೂ. 07:   ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಾತ್ಮಗಾಂಧಿ ನರೇಗಾ ಉದ್ಯೋಗ ಖಾತ್ರಿ ಯೋಜನೆ ಹಾಗೂ ಕುದೂರು ಪ್ರ

Top Stories »  

Top ↑