Tel: 7676775624 | Mail: info@yellowandred.in

Language: EN KAN

    Follow us :


ನಿಮ್ಮ ಆರೋಗ್ಯ ನಿಮ್ಮ ಕೈಯಲ್ಲಿದೆ. ಮನೆಯಿಂದ ಹೊರಬರಬೇಡಿ ಸಚಿವ ಶ್ರೀರಾಮುಲು

Posted date: 28 Mar, 2020

Powered by:     Yellow and Red

ನಿಮ್ಮ ಆರೋಗ್ಯ ನಿಮ್ಮ ಕೈಯಲ್ಲಿದೆ. ಮನೆಯಿಂದ ಹೊರಬರಬೇಡಿ ಸಚಿವ ಶ್ರೀರಾಮುಲು

ರಾಮನಗರ: ಕೋವಿಡ್-೧೯ ಕೊರೋನಾ ವೈರಸ್ ಹರಡುತ್ತಿರುವ ಹಿನ್ನಲೆಯಲ್ಲಿ ಸಾರ್ವಜನಿಕರ ಆರೋಗ್ಯ ಕಾಪಾಡುವ ದೃಷ್ಠಿಯಿಂದ ೨೧ ದಿನಗಳು ಮನೆಯ ಒಳಗೆ ಇರುವಂತೆ ತಿಳಿಸಲಾಗಿದೆ. ಸಾರ್ವಜನಿಕರು ಮನೆಯಲ್ಲಿಯೇ ಇದ್ದು ಆರೋಗ್ಯ ಕಾಪಾಡಿಕೊಳ್ಳಿ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಬಿ. ಶ್ರೀರಾಮುಲು ಅವರು ತಿಳಿಸಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದರು.


ಕೋವಿಡ್ -೧೯ ಹರಡಂತೆ ನೋಡಿಕೊಳ್ಳಲು ಜಿಲ್ಲಾಡಳಿತ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಅವರು ಪ್ರತಿ ದಿನ ಶ್ರಮ ಪಡುತ್ತಿದ್ದಾರೆ. ಅವರ ಶ್ರಮವನ್ನು ಅರ್ಥ ಮಾಡಿಕೊಳ್ಳಿ. ಅತಿ ಜರೂರು ಕೆಲಸ ಇದ್ದರೆ ಮಾತ್ರ ಮನೆಯಿಂದ ಹೊರಗೆ ಬನ್ನಿ.

ಕೊರೋನಾ ವೈರಸ್ ಸೋಂಕಿಗೆ ಯಾವುದೇ ಔಷಧಿ ಇಲ್ಲ ಸಾಮಾಜಿಕ ಅಂತರ ಕಾಯ್ದುಕೊಂಡು, ರೋಗ ತಡೆಗಟ್ಟಬಹುದು. ಜಿಲ್ಲೆಯಲ್ಲಿ ಕೋವಿಡ್ ೧೯ ಕ್ಕೆ ಸಂಬಂಧಿಸಿದಂತೆ ೧೩೪ ಮಂದಿಯ ಮೇಲೆ ನಿಗಾ ವಹಿಸಲಾಗಿದೆ. ೭೧ ಜನ ೧೪ ದಿನಗಳ ಕಾಲ ಅವಲೋಕನ ಅವಧಿಯನ್ನು ಪೂರ್ಣಗೊಳಿಸಿರುತ್ತಾರೆ ಎಂದರು.


ಜಿಲ್ಲೆಯಲ್ಲಿ ಕೋವಿಡ್-೧೯ ಆಸ್ಪತ್ರೆಯನ್ನು ಕಂದಾಯ ಭವನದಲ್ಲಿ ಸಿದ್ಧಪಡಿಸಲಾಗಿದ್ದು, ೮೦ ಹಾಸಿಗೆಯನ್ನು ಆಸ್ಪತ್ರೆಯಲ್ಲಿ ಸಿದ್ಧಪಡಿಸಲಾಗಿದೆ. ಮುಂದುವರೆದಂತೆ ಇನ್ನೂ ೧೦೦ ಹಾಸಿಗೆಯನ್ನು ಸಿದ್ಧಪಡಿಸಲಾಗುವುದು. ತೀವ್ರ ನಿಗಾ ಘಟಕದಲ್ಲಿ ಕಾರ್ಯನಿರ್ವಹಿಸಲು ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿಗಳಿಗೆ ತರಬೇತಿ ನೀಡಲು ನುರಿತ ವೈದ್ಯರ ತಂಡವನ್ನು ಕಳುಹಿಸಿಕೊಡಲಾಗುವುದು ಎಂದು ಮಾಹಿತಿ ನೀಡಿದರು.

ಸಂಸದರಾದ ಡಿ.ಕೆ. ಸುರೇಶ್ ಅವರು ಮಾತನಾಡಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕೋವಿಡ್-೧೯ ಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಪ್ರಚಾರ ಕೈಗೊಳ್ಳಬೇಕು. ಪ್ರತಿ ದಿನ ಆಟೋ ಮೂಲಕ ಪ್ರಚಾರ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.


ಜಿಲ್ಲೆಯಲ್ಲಿ ರೇಷ್ಮೆ ಬೆಳೆಗಾರರು ಬೆಳೆದಂತಹ ರೇಷ್ಮೆಯನ್ನು ರೀಲರ್‌ಗಳು ಖರೀದಿಸುತ್ತಿಲ್ಲ. ಇದರಿಂದ ರೇಷ್ಮೆ ಬೆಳೆಗಾರರಿಗೆ ತೊಂದರೆಯಾಗುತ್ತಿದೆ ಎಂದು ಸಚಿವರ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ಜಿಲ್ಲಾಡಳಿತದಿಂದ ರೇಷ್ಮೆ ಬೆಳೆಗೆ ಸಂಬಂಧಿಸಿದಂತೆ ವರದಿ ನೀಡಿ ಮಾನ್ಯ ಮುಖ್ಯಮಂತ್ರಿ ಗಳೊಂದಿಗೆ ಚರ್ಚಿಸುವುದಾಗಿ ತಿಳಿಸಿದರು.


ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ಮಾತನಾಡಿ ಜಿಲ್ಲೆಯಲ್ಲಿ ಥರ್ಮಲ್ ಸ್ಕ್ಯಾನರ್ ಕೊರತೆ ಇದ್ದು, ಒದಗಿಸಿಕೊಡಬೇಕು. ಜಿಲ್ಲೆಯಲ್ಲೇ ಸ್ಯಾನಿಟೈಸರ್‌ನ್ನು ತಯಾರಿಸಲಾಗುತ್ತಿದ್ದು, ಪ್ರತಿ ಗ್ರಾಮ ಪಂಚಾಯಿತಿಗೂ ಒದಗಿಸಲಾಗುವುದು. ವಲಸೆ ಬಂದಿರುವ ಕಾರ್ಮಿಕರನ್ನು ಈ ಸಂದರ್ಭದಲ್ಲಿ ಪುನಃ ಅವರ ಜಿಲ್ಲೆಗಳಿಗೆ ಕಳುಹಿಸುವುದು ಕಷ್ಟಕರವಾಗಿರುತ್ತದೆ. ಅವರಿಗೆ ಬೇಕಿರುವ ಆಹಾರವನ್ನು ವ್ಯವಸ್ಥೆ ಮಾಡಲಾಗುವುದು ಎಂದರು.


ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಇಕ್ರಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪ್ ಶೆಟ್ಟಿ, ಅಪರ ಜಿಲ್ಲಾಧಿಕಾರಿ ಬಿ.ಪಿ. ವಿಜಯ್, ಉಪವಿಭಾಗಾಧಿಕಾರಿ ದಾಕ್ಷಾಯಿಣಿ, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ. ನಿರಂಜನ್, ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ. ಪದ್ಮಾ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in health »

ವ್ಯವಹಾರಕ್ಕಾಗಿ ಆಸ್ಪತ್ರೆಯಲ್ಲಾ, ಸೇವೆಗಾಗಿ ನಮ್ಮ ಆಸ್ಪತ್ರೆ. ಕಾಂಗರೂ ಆಸ್ಪತ್ರೆಯ ಸಂಸ್ಥಾಪಕ ಡಾ ಶೇಖರ್ ಸುಬ್ಬಯ್ಯ
ವ್ಯವಹಾರಕ್ಕಾಗಿ ಆಸ್ಪತ್ರೆಯಲ್ಲಾ, ಸೇವೆಗಾಗಿ ನಮ್ಮ ಆಸ್ಪತ್ರೆ. ಕಾಂಗರೂ ಆಸ್ಪತ್ರೆಯ ಸಂಸ್ಥಾಪಕ ಡಾ ಶೇಖರ್ ಸುಬ್ಬಯ್ಯ

ರಾಮನಗರ: ನಾವು ಹಣಕ್ಕಾಗಿ ಆಸ್ಪತ್ರೆ ನಡೆಸುವುದಿಲ್ಲ, ಇದೊಂದು ಸೇವೆ ಎಂದು ಪರಿಗಣಿಸಿ ಆಸ್ಪತ್ರೆ ನಡೆಸುತ್ತಿದ್ದೇವೆ. ಬೆಂಗಳೂರು ಮೈಸೂರು ಸೇರಿದಂತೆ ನಾಲ್ಕು

೪೬ ವರ್ಷದ ಮಹಿಳೆಯ ಹೊಟ್ಟೆಯಲ್ಲಿದ್ದ ೧೦ ಕಿಲೋ ಕ್ಯಾನ್ಸರ್ ಗಡ್ಡೆ ಹೊರತೆಗೆದ ಬಾಲು ಆಸ್ಪತ್ರೆಯ ವೈದ್ಯರು
೪೬ ವರ್ಷದ ಮಹಿಳೆಯ ಹೊಟ್ಟೆಯಲ್ಲಿದ್ದ ೧೦ ಕಿಲೋ ಕ್ಯಾನ್ಸರ್ ಗಡ್ಡೆ ಹೊರತೆಗೆದ ಬಾಲು ಆಸ್ಪತ್ರೆಯ ವೈದ್ಯರು

ಚನ್ನಪಟ್ಟಣ: ತಾಲ್ಲೂಕಿನ ಗ್ರಾಮವೊಂದರ ೪೬ ವರ್ಷದ ಮಹಿಳೆಯೊಬ್ಬರ ಗರ್ಭ (ಅಂಡಾಶಯ) ದಲ್ಲಿದ್ದ ಬರೋಬ್ಬರಿ ೧೦ ಕಿಲೋ ೩೦೦ ಗ್ರಾಂ ತೂಕದ ಕ್ಯಾನ್ಸರ್ ಗಡ್ಡೆ ಯನ್ನ

ಹೊಂಗನೂರು, ಕೋಡಂಬಳ್ಳಿ ಗ್ರಾಮದಲ್ಲಿ ಪರವಾನಗಿ ಇಲ್ಲದ ಖಾಸಗಿ ಆಸ್ಪತ್ರೆಗಳಿಗೆ ಬೀಗ ಜಡಿದ ಟಿಹೆಚ್‌ಓ
ಹೊಂಗನೂರು, ಕೋಡಂಬಳ್ಳಿ ಗ್ರಾಮದಲ್ಲಿ ಪರವಾನಗಿ ಇಲ್ಲದ ಖಾಸಗಿ ಆಸ್ಪತ್ರೆಗಳಿಗೆ ಬೀಗ ಜಡಿದ ಟಿಹೆಚ್‌ಓ

ಚನ್ನಪಟ್ಟಣ: ತಾಲ್ಲೂಕಿನ ಹೊಂಗನೂರು ಗ್ರಾಮದಲ್ಲಿ ಗೋಪಿ ಕ್ಲಿನಿಕ್ ಎಂಬ ಖಾಸಗಿ ಆಸ್ಪತ್ರೆ ಇದ್ದು, ಗೋಪಿ ಎಂಬುವವರು ವೈದ್ಯರಾಗಿ ಸೇವೆ ನಿರ್ವಹಿಸುತ್ತಿದ್ದಾರ

ಉತ್ತಮ ಆರೋಗ್ಯಕ್ಕೆ ಆಯುರ್ವೇದವೇ ದಿವ್ಯ ಔಷಧ ಡಾ ಸಹನಾ ಕೃಷ್ಣ
ಉತ್ತಮ ಆರೋಗ್ಯಕ್ಕೆ ಆಯುರ್ವೇದವೇ ದಿವ್ಯ ಔಷಧ ಡಾ ಸಹನಾ ಕೃಷ್ಣ

ಚನ್ನಪಟ್ಟಣ: ಪುರಾಣೇತೀಹಾಸದಿಂದಲೂ ಪ್ರಖ್ಯಾತವಾಗಿರುವ ಔಷಧ ಎಂದರೆ ಅದು ಆಯುರ್ವೇದ ಔಷಧ, ಜಗತ್ತಿನ ಅತ್ಯಂತ ಪ್ರಾಚೀನ ಔಷಧವೂ ಹೌದು, ನಮ್ಮ ಪ್ರಕೃತಿ ಹೇಗೆ ಸಮ

ದೊಡ್ಡಮಳೂರು ಗ್ರಾಮದಲ್ಲಿ ದೀರ್ಘಾಯು ವೆಲ್ ನೆಸ್ ಆಯುರ್ವೇದ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ಶಿಬಿರ
ದೊಡ್ಡಮಳೂರು ಗ್ರಾಮದಲ್ಲಿ ದೀರ್ಘಾಯು ವೆಲ್ ನೆಸ್ ಆಯುರ್ವೇದ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ಶಿಬಿರ

ಚನ್ನಪಟ್ಟಣ: ತಾಲ್ಲೂಕಿನ ದೊಡ್ಡಮಳೂರು ಗ್ರಾಮದ ದೇವಸ್ಥಾನದ ಬೀದಿಯಲ್ಲಿರುವ ದೀರ್ಘಾಯು ವೆಲ್ ನೆಸ್ ಸೆಂಟರ್ ಇವರ ವತಿಯಿಂದ ನಾಳೆ (ಭಾನುವಾರ) ಬೆಳಿ

ಕ್ರಿಯೇಟಿವ್ ಅಸೋಸಿಯೇಷನ್ ಹಾಗೂ ಸೊಸೈಟಿ ವತಿಯಿಂದ ಶನಿವಾರ ನಗರದಲ್ಲಿ ಬೃಹತ್ ಉಚಿತ ಆರೋಗ್ಯ ಶಿಬಿರ
ಕ್ರಿಯೇಟಿವ್ ಅಸೋಸಿಯೇಷನ್ ಹಾಗೂ ಸೊಸೈಟಿ ವತಿಯಿಂದ ಶನಿವಾರ ನಗರದಲ್ಲಿ ಬೃಹತ್ ಉಚಿತ ಆರೋಗ್ಯ ಶಿಬಿರ

ಚನ್ನಪಟ್ಟಣ : ತಾಲ್ಲೂಕಿನಿಂದ ಬೆಂಗಳೂರಿಗೆ ಹೋಗಿ, ಜೀವನ ಕಟ್ಟಿಕೊಂಡು ತಾಲ್ಲೂಕಿಗೆ ಏನಾದರೂ ಕೊಡುಗೆ ನೀಡಬೇಕೆಂಬ ಹಂಬಲದಿಂದ ಕ್ರಿಯೇಟಿವ್ ಅಸೋಸಿಯೇಷನ್ ಮತ್ತ

ದುಶ್ಚಟದಿಂದ ದೂರವಿರಿ, ಆರೋಗ್ಯ ಕಾಪಾಡಿಕೊಳ್ಳಿ : ಪ್ರತಿಮಾ ಕೆ.ವಿ
ದುಶ್ಚಟದಿಂದ ದೂರವಿರಿ, ಆರೋಗ್ಯ ಕಾಪಾಡಿಕೊಳ್ಳಿ : ಪ್ರತಿಮಾ ಕೆ.ವಿ

ರಾಮನಗರ, ಜೂ. 17:   ಇತ್ತೀಚೆಗೆ ಅತಿ ಹೆಚ್ಚು ಹಲವಾರು ದುಶ್ಚಟಗಳು ಮನುಷ್ಯನನ್ನು ಆವರಸಿಕೊಂಡಿವೆ. ಇದರಿಂದಾಗಿ ನೂರಾರು ಖಾಯಿಲೆಗಳು ದೇಹ ಹೊಕ್ಕು ನಿತ್ಯ ಸಾ

ಫ್ಲೋರೋಸಿಸ್ ನಿಯಂತ್ರಿಸಿ ಉತ್ತಮ ಜೀವನ ನಡೆಸುವಂತೆ ಸಲಹೆ - ಡಾ.ಅನಿಲ್
ಫ್ಲೋರೋಸಿಸ್ ನಿಯಂತ್ರಿಸಿ ಉತ್ತಮ ಜೀವನ ನಡೆಸುವಂತೆ ಸಲಹೆ - ಡಾ.ಅನಿಲ್

ರಾಮನಗರ, ಜೂ. 15:   ಫ್ಲೋರೈಡ್ ನಮ್ಮ ದೇಹಕ್ಕೆ ಬೇಕಾದ ಒಂದು ಖನಿಜಾಂಶ ನಾವು ಸೇವಿಸುವ ಆಹಾರ ಮತ್ತು ಕುಡಿಯುವ ನೀರಿನಲ್ಲಿ ಅವಶ್ಯಕತೆಗಿಂತ ಹೆಚ್ಚು ಫ್ಲೋರೈಡ

ಆರೋಗ್ಯ ಕೇಂದ್ರದಲ್ಲಿ ದೊರೆಯುವ ಸೇವೆಗಳನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದ ಬಿ.ಎಸ್.ಗಂಗಾಧರ್.
ಆರೋಗ್ಯ ಕೇಂದ್ರದಲ್ಲಿ ದೊರೆಯುವ ಸೇವೆಗಳನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದ ಬಿ.ಎಸ್.ಗಂಗಾಧರ್.

ರಾಮನಗರ: ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಕೆ.ಕರೇನಹಳ್ಳಿ ಇವರ ಸಂಯುಕ್ತ ಆಶ್ರ

ಶ್ರೀಗಿರಿಪುರ ಗ್ರಾಪಂ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆದ ಆರೋಗ್ಯ ತಪಾಸಣಾ ಶಿಬಿರ
ಶ್ರೀಗಿರಿಪುರ ಗ್ರಾಪಂ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆದ ಆರೋಗ್ಯ ತಪಾಸಣಾ ಶಿಬಿರ

ರಾಮನಗರ, ಜೂ. 07:   ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಾತ್ಮಗಾಂಧಿ ನರೇಗಾ ಉದ್ಯೋಗ ಖಾತ್ರಿ ಯೋಜನೆ ಹಾಗೂ ಕುದೂರು ಪ್ರ

Top Stories »  


Top ↑