ವಿದ್ಯಾರ್ಥಿಗಳಿಗೆ ಏಡ್ಸ್ ಮುಕ್ತ ಸಮಾಜ ನಿರ್ಮಿಸಲು ಸಲಹೆ - ಡಾ. ಕುಮಾರ್

ರಾಮನಗರ, ಡಿ:22/21. ಜಿಲ್ಲಾಡಳಿತ ಜಿಲ್ಲಾ ಪಂಚಾಯತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿಗಳ ಕಛೇರಿ, ಜಿಲ್ಲಾ ನಿಯಂತ್ರಣ ಕೋಶ, ಜಿಲ್ಲಾ ಎಸ್ ಬಿ ಸಿ ಸಿ ಘಟಕ ರಾಮನಗರ ಇವರುಗಳ ಸಂಯುಕ್ತ ಆಶ್ರಯದಲ್ಲಿ ಬಿಡದಿ ಜ್ಞಾನ ವಿಕಾಸ್ ಇನ್ಸಿಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ ಎನ್ಎಸ್ಎಸ್. ವಿದ್ಯಾರ್ಥಿಗಳಿಗೆ ಏಡ್ಸ್ ನಿಯಂತ್ರಣ, ಕೋವಿಡ್ ನಿಯಂತ್ರಣ ಮತ್ತು ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಆಯೋಜಿಸಲಾಗಿತು.
ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ. ಕುಮಾರ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಹೆಚ್.ಐ.ವಿ / ಏಡ್ಸ್ ಕುರಿತು ಮಾತನಾಡುತ್ತಾ ಇದು ವೈರಸ್‌ನಿಂದ ಬರುವ ಖಾಯಿಲೆಯಾಗಿದ್ದು. ದೇಹದ ರೋಗ ನಿರೋಧಕ ಶಕ್ತಿಯನ್ನು ಕುಂಠಿತಗೊಳಿಸಿ ಅರ್ಜಿತ ರೋಗ ಲಕ್ಷಣಗಳ ಕೂಟವನ್ನು ಉಂಟುಮಾಡುತ್ತದೆ. ಇದು ಅಸುರಕ್ಷಿತ ಲೈಂಗಿಕ ಸಂಪರ್ಕ, ಪರೀಕ್ಷಿಸದೇ ಇರುವ ರಕ್ತ ಪಡೆಯುವುದು. ಸೋಂಕಿತ ತಾಯಿಯಿಂದ ಮಗುವಿಗೆ, ಸಂಸ್ಕರಿಸದ ಸೂಜಿ, ಸಿರಂಜ್ ಬಳಕೆಗಳಿಂದ ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತದೆ. ಸೋಂಕಿತ ವ್ಯಕ್ತಿಯಲ್ಲಿ ದೀರ್ಘಕಾಲದವರೆಗೆ ಕೆಮ್ಮು, ಜ್ವರ, ಭೇದಿ, ತೂಕದಲ್ಲಿ ಶೇ%10 ರಷ್ಟು ಇಳಿಕೆ, ಹಸಿವಾಗದಿರುವುದು, ನಿಶಕ್ತಿ, ಚರ್ಮದ ಸೋಂಕು ಇತ್ಯಾದಿ ಲಕ್ಷಣಗಳು ಕಂಡುಬರುತ್ತವೆ. ಸಾರ್ವಜನಿಕರು ಆತಂಕ ಪಡುವ ಅವಶ್ಯಕತೆಯಿರುವುದಿಲ್ಲ ಎಲ್ಲಾ ಸರ್ಕಾರಿ ಸಂಸ್ಥೆಗಳಲ್ಲಿ ಉಚಿತವಾಗಿ ಪರೀಕ್ಷೆ ಮಾಡಿ ಸೂಕ್ತ ಚಿಕಿತ್ಸೆಯನ್ನು ನೀಡಲಾಗುತ್ತದೆ. ಯುವ ಪೀಳಿಗೆ ಈ ರೋಗಕ್ಕೆ ಹೆಚ್ಚಾಗಿ ಬಲಿಯಾಗುತ್ತಿದ್ದು ಜಾಗೃತರಾಗಬೇಕಿದೆ ಜೊತೆಗೆ ಏಡ್ಸ್ ಮುಕ್ತ ಸಮಾಜ ನಿರ್ಮಿಸಲು ಸಹಕರಿಸುವಂತೆ ಸಲಹೆ ನೀಡಿದರು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಎಸ್. ಗಂಗಾಧರ್ ಮಾತನಾಡುತ್ತಾ ಕೋವಿಡ್-19 ರ 3 ಅಲೆ ನಿಯಂತ್ರಿಸ ಬೇಕಾದರೆ 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ 2 ಡೋಸ್ ಲಸಿಕೆ ಪಡೆಯಬೇಕು ಇದರಿಂದ ರೂಪಾಂತರಿ ಓಮೀಕ್ರಾನ್ ನಿಯಂತ್ರಿಸಲು ಸಾಧ್ಯವಾಗುತ್ತದೆ. ಜೊತೆಗೆ ಕೋವಿಡ್ ನಿಯಂತ್ರಿಸಬೇಕಾದರೆ ಮುಂಜಾಗೃತ ಕ್ರಮವಾಗಿ ಸಾಮಾಜಿಕ ಅಂತರ, ಮಾಸ್ಕ್ ಬಳಕೆ, ಕೈಗಳ ಸ್ವಚ್ಛತೆ, ವೈಯಕ್ತಿಕ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಸಂಯೋಜಕ ಚಂದ್ರಶೇಖರ್ ಮಾತನಾಡಿ ತಂಬಾಕು ಉತ್ಪನ್ನಗಳ ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಮಾತನಾಡುತ್ತಾ ಇತ್ತೀಚಿನ ದಿನಗಳಲ್ಲಿ ಯುವ ಪೀಳಿಗೆ ಹೆಚ್ಚಾಗಿ ತಂಬಾಕು ಉತ್ಪನ್ನಗಳ ಸೇವನೆ ಚಟಕ್ಕೆ ಬಲಿಯಾಗಿ ತಮ್ಮ ಉಜ್ವಲ ಭವಿಷ್ಯವನ್ನು ಹಾಳುಮಾಡಿಕೊಳ್ಳುತ್ತಿದ್ದಾರೆ. ಇದರಿಂದ ಜಾಗೃತರಾಗ ಬೇಕೆಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ರೂಪ, ಎ.ಬಿ.ಆರ್.ಕೆ ಜಿಲ್ಲಾ ಸಂಯೋಜಕರಾದ ಡಾ. ಸುಷ್ಮಾ, ಎನ್.ಎಸ್.ಎಸ್.ಸಂಯೋಜಕರಾದ ಶರತ್, ಜಿಲ್ಲಾ ಎಸ್.ಬಿ.ಸಿ.ಸಿ ಸಂಯೋಜಕರಾದ ಸುರೇಶ್ ಬಾಬು, ರೆಡ್‌ಕ್ರಾಸ್ ಸಂಯೋಜಕರಾದ ರಾಜು, ಆರೋಗ್ಯ ನಿರೀಕ್ಷಣಾಧಿಕಾರಿ ಅರುಣ್, ಆರೋಗ್ಯ ಸಿಬ್ಬಂದಿಗಳಾದ ಬಸವರಾಜು, ಕೃಷ್ಣ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in health »

೪೬ ವರ್ಷದ ಮಹಿಳೆಯ ಹೊಟ್ಟೆಯಲ್ಲಿದ್ದ ೧೦ ಕಿಲೋ ಕ್ಯಾನ್ಸರ್ ಗಡ್ಡೆ ಹೊರತೆಗೆದ ಬಾಲು ಆಸ್ಪತ್ರೆಯ ವೈದ್ಯರು
ಚನ್ನಪಟ್ಟಣ: ತಾಲ್ಲೂಕಿನ ಗ್ರಾಮವೊಂದರ ೪೬ ವರ್ಷದ ಮಹಿಳೆಯೊಬ್ಬರ ಗರ್ಭ (ಅಂಡಾಶಯ) ದಲ್ಲಿದ್ದ ಬರೋಬ್ಬರಿ ೧೦ ಕಿಲೋ ೩೦೦ ಗ್ರಾಂ ತೂಕದ ಕ್ಯಾನ್ಸರ್ ಗಡ್ಡೆ ಯನ್ನ

ಹೊಂಗನೂರು, ಕೋಡಂಬಳ್ಳಿ ಗ್ರಾಮದಲ್ಲಿ ಪರವಾನಗಿ ಇಲ್ಲದ ಖಾಸಗಿ ಆಸ್ಪತ್ರೆಗಳಿಗೆ ಬೀಗ ಜಡಿದ ಟಿಹೆಚ್‌ಓ
ಚನ್ನಪಟ್ಟಣ: ತಾಲ್ಲೂಕಿನ ಹೊಂಗನೂರು ಗ್ರಾಮದಲ್ಲಿ ಗೋಪಿ ಕ್ಲಿನಿಕ್ ಎಂಬ ಖಾಸಗಿ ಆಸ್ಪತ್ರೆ ಇದ್ದು, ಗೋಪಿ ಎಂಬುವವರು ವೈದ್ಯರಾಗಿ ಸೇವೆ ನಿರ್ವಹಿಸುತ್ತಿದ್ದಾರ

ಉತ್ತಮ ಆರೋಗ್ಯಕ್ಕೆ ಆಯುರ್ವೇದವೇ ದಿವ್ಯ ಔಷಧ ಡಾ ಸಹನಾ ಕೃಷ್ಣ
ಚನ್ನಪಟ್ಟಣ: ಪುರಾಣೇತೀಹಾಸದಿಂದಲೂ ಪ್ರಖ್ಯಾತವಾಗಿರುವ ಔಷಧ ಎಂದರೆ ಅದು ಆಯುರ್ವೇದ ಔಷಧ, ಜಗತ್ತಿನ ಅತ್ಯಂತ ಪ್ರಾಚೀನ ಔಷಧವೂ ಹೌದು, ನಮ್ಮ ಪ್ರಕೃತಿ ಹೇಗೆ ಸಮ

ದೊಡ್ಡಮಳೂರು ಗ್ರಾಮದಲ್ಲಿ ದೀರ್ಘಾಯು ವೆಲ್ ನೆಸ್ ಆಯುರ್ವೇದ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ಶಿಬಿರ
ಚನ್ನಪಟ್ಟಣ: ತಾಲ್ಲೂಕಿನ ದೊಡ್ಡಮಳೂರು ಗ್ರಾಮದ ದೇವಸ್ಥಾನದ ಬೀದಿಯಲ್ಲಿರುವ ದೀರ್ಘಾಯು ವೆಲ್ ನೆಸ್ ಸೆಂಟರ್ ಇವರ ವತಿಯಿಂದ ನಾಳೆ (ಭಾನುವಾರ) ಬೆಳಿ

ಕ್ರಿಯೇಟಿವ್ ಅಸೋಸಿಯೇಷನ್ ಹಾಗೂ ಸೊಸೈಟಿ ವತಿಯಿಂದ ಶನಿವಾರ ನಗರದಲ್ಲಿ ಬೃಹತ್ ಉಚಿತ ಆರೋಗ್ಯ ಶಿಬಿರ
ಚನ್ನಪಟ್ಟಣ : ತಾಲ್ಲೂಕಿನಿಂದ ಬೆಂಗಳೂರಿಗೆ ಹೋಗಿ, ಜೀವನ ಕಟ್ಟಿಕೊಂಡು ತಾಲ್ಲೂಕಿಗೆ ಏನಾದರೂ ಕೊಡುಗೆ ನೀಡಬೇಕೆಂಬ ಹಂಬಲದಿಂದ ಕ್ರಿಯೇಟಿವ್ ಅಸೋಸಿಯೇಷನ್ ಮತ್ತ

ದುಶ್ಚಟದಿಂದ ದೂರವಿರಿ, ಆರೋಗ್ಯ ಕಾಪಾಡಿಕೊಳ್ಳಿ : ಪ್ರತಿಮಾ ಕೆ.ವಿ
ರಾಮನಗರ, ಜೂ. 17: ಇತ್ತೀಚೆಗೆ ಅತಿ ಹೆಚ್ಚು ಹಲವಾರು ದುಶ್ಚಟಗಳು ಮನುಷ್ಯನನ್ನು ಆವರಸಿಕೊಂಡಿವೆ. ಇದರಿಂದಾಗಿ ನೂರಾರು ಖಾಯಿಲೆಗಳು ದೇಹ ಹೊಕ್ಕು ನಿತ್ಯ ಸಾ

ಫ್ಲೋರೋಸಿಸ್ ನಿಯಂತ್ರಿಸಿ ಉತ್ತಮ ಜೀವನ ನಡೆಸುವಂತೆ ಸಲಹೆ - ಡಾ.ಅನಿಲ್
ರಾಮನಗರ, ಜೂ. 15: ಫ್ಲೋರೈಡ್ ನಮ್ಮ ದೇಹಕ್ಕೆ ಬೇಕಾದ ಒಂದು ಖನಿಜಾಂಶ ನಾವು ಸೇವಿಸುವ ಆಹಾರ ಮತ್ತು ಕುಡಿಯುವ ನೀರಿನಲ್ಲಿ ಅವಶ್ಯಕತೆಗಿಂತ ಹೆಚ್ಚು ಫ್ಲೋರೈಡ

ಆರೋಗ್ಯ ಕೇಂದ್ರದಲ್ಲಿ ದೊರೆಯುವ ಸೇವೆಗಳನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದ ಬಿ.ಎಸ್.ಗಂಗಾಧರ್.
ರಾಮನಗರ: ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಕೆ.ಕರೇನಹಳ್ಳಿ ಇವರ ಸಂಯುಕ್ತ ಆಶ್ರ

ಶ್ರೀಗಿರಿಪುರ ಗ್ರಾಪಂ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆದ ಆರೋಗ್ಯ ತಪಾಸಣಾ ಶಿಬಿರ
ರಾಮನಗರ, ಜೂ. 07: ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಾತ್ಮಗಾಂಧಿ ನರೇಗಾ ಉದ್ಯೋಗ ಖಾತ್ರಿ ಯೋಜನೆ ಹಾಗೂ ಕುದೂರು ಪ್ರ

ಆರೋಗ್ಯ ತಪಾಸಣೆ ನಿಮ್ಮ ಗ್ರಾಮಗಳ ಕಡೆ: ಡಾ.ಚೈತ್ರಗೌಡ
ಚನ್ನಪಟ್ಟಣ: ಆಸ್ಪತ್ರೆಗಳಿಗೆ ಹೋಗಿ ಆರೋಗ್ಯ ತಪಾಸಣೆ ಮಾಡಿಕೊಳ್ಳುವ ಬದಲು ನೀವಿರುವ ಗ್ರಾಮಗಳಿಗೆ ಬಂದು ಆರೋಗ್ಯ ತಪಾಸಣೆಯನ್ನು ಮಾಡಲಾಗುತ್ತಿದೆ ಇದನ್ನು ಎಲ
ಪ್ರತಿಕ್ರಿಯೆಗಳು