ಸ್ತನ್ಯಪಾನ ತಾಯಿ-ಮಗುವಿನ ಭಾವನಾತ್ಮಕ ಸಂಬಂಧವನ್ನು ಗಟ್ಟಿಗೊಳಿಸುತ್ತದೆ: ಡಾ. ಚಂದ್ರಶೇಖರಯ್ಯ

Breastfeeding strengthens mother-child emotional bond: Dr. Chandrasekharaiah
ರಾಮನಗರ, ಆ.04: ಎದೆ ಹಾಲಿನ ಮಹತ್ವ, ಹಾಲುಣಿಸುವಿಕೆ ಮತ್ತು ಮಕ್ಕಳ ಆರೈಕೆ ಕುರಿತು ಜಾಗೃತಿಯನ್ನು ಮೂಡಿಸುತ್ತಿದ್ದು, ತಾವೆಲ್ಲರೂ ಮಾಹಿತಿಯನ್ನು ತಿಳಿದುಕೊಂಡು ಮಕ್ಕಳಿಗೆ ಸರಿಯಾದ ಕ್ರಮದಲ್ಲಿ ಹಾಲುಣಿಸುವುದರ ಮೂಲಕ ಸ್ತನ್ಯಪಾನ ತಾಯಿ-ಮಗುವಿನ ಭಾವನಾತ್ಮಕ ಸಂಬಂಧವನ್ನು ಗಟ್ಟಿಗೊಳಿಸುತ್ತದೆ ಎಂದು ತಾಲೂಕು ಆರೋಗ್ಯ ಅಧಿಕಾರಿ ಡಾ. ಚಂದ್ರಶೇಖರಯ್ಯ ಅವರು ತಿಳಿಸಿದರು.
ಅವರು ಇಂದು ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಎಸ್.ಬಿ.ಸಿ.ಸಿ ಘಟಕ, ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಮಾಗಡಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಸಂಕೀಘಟ್ಟ ಇವರ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆದ "ವಿಶ್ವ ಸ್ತನ್ಯಪಾನ ಸಪ್ತಾಹ"ದ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಸಂಕೀಘಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ. ಶರ್ಮಿಳಾ ಅವರು ಮಾತನಾಡಿ ಆಗಸ್ಟ್ 1-7ರವರೆಗೆ ವಿಶ್ವಸ್ಥನ್ಯಪಾನ ಸಪ್ತಾಹವನ್ನು ಆಚರಿಸಲಾಗುತ್ತಿದ್ದು, 1991ರಲ್ಲಿ ವಿಶ್ವ ಆರೋಗ್ಯ ಸಂಸ್ಥೆಯು ಎಲ್ಲಾ ದೇಶಗಳ ಸರಕಾರ ಹಾಗೂ ಇತರ ಕೆಲವು ಸಂಘಟನೆಗಳ ಸಹಯೋಗದಲ್ಲಿ ಇದನ್ನು ಆರಂಭಿಸಿತು. ತಾಯಿ ಹಾಗೂ ಮಗುವಿನ ಆರೋಗ್ಯಕ್ಕೆ ಬುನಾದಿಯಾಗಿರುವ ಎದೆಹಾಲು ಕುಡಿಸುವ ಮಹತ್ವ ಹಾಗೂ ಸತ್ವಗಳ ಬಗ್ಗೆ ಎಲ್ಲರಿಗೂ ಅರಿವು ಮೂಡಿಸಲು "ಸ್ತನ್ಯಪಾನ ಸಪ್ತಾಹ" ಆಚರಣೆಯನ್ನು ಜಾರಿಗೆ ತರಲಾಗಿದೆ.
ಎದೆಹಾಲು ಎಂಬುದು ನವಜಾತ ಶಿಶುವಿಗೆ ಒಂದು ಪರಿಪೂರ್ಣ ಆಹಾರ. ಎದೆ ಹಾಲು ಕೊಡುವ ಪ್ರಕ್ರಿಯೆಗೆ ಮೊಲೆಯುಣಿಸುವುದು ಎಂದೂ ಹೆಸರಿದೆ, ಇದು ಪ್ರಕೃತಿ ನಿಯಮ. ಒಂದು ಮಹಿಳೆ ಹೆರಿಗೆ ನಂತರ ಜನಿಸಿದ ಮಗುವಿಗೆ ಎದೆಹಾಲು ಕೊಡುವುದು ಮಗುವಿಗೆ ಆರೋಗ್ಯಕ್ಕೆ ಒಳ್ಳೆಯದು. ತಾಯಿಯ ಮೊದಲ ಎದೆ ಹಾಲಿನಲ್ಲಿ ರೋಗನಿರೋಧಕ ಶಕ್ತಿ ಹೆಚ್ಚು ಇರುತ್ತದೆ ಹಾಗೂ ತಾಯಿಯ ಮೊದಲಿನ ಹಾಲು ಮಂದವಾಗಿ ಹಳದಿ ಬಣ್ಣದಲ್ಲಿ ಇರುವುದಲ್ಲದೆ ಇದನ್ನು ಕೊಲಸ್ಟ್ರಮ್ ಎಂದು ಕರೆಯುತ್ತಾರೆ. ವೈಜ್ಞಾನಿಕ ದೃಷ್ಠಿಯಿಂದಲೂ ಮಗು ಹುಟ್ಟಿದ ಕೂಡಲೆ ತಾಯಿಯ ಎದೆಯ ಮೇಲೆ ಬರಿ ಮೈಯಲ್ಲಿ ಮಗುವನ್ನು ಮಲಗಿಸಿ ಮೊಲೆಯುಣಿಸಿದರೆ ಬಾಂಧವ್ಯ ಬೆಸೆಯುತ್ತದೆ. ಅದಲ್ಲದೆ ತಾಯಿಯ ಎದೆ ಬಡಿತವನ್ನು ಮಗು ಗುರುತಿಸುವುದರೊಂದಿಗೆ ಬೇರೆಯವರ ಸಹಾಯವಿಲ್ಲದೆ ತಾನೆ ಚೀಪುವುದನ್ನು ಅಭ್ಯಾಸ ಮಾಡಿಕೊಳ್ಳುತ್ತದೆ. ಹಾರ್ಮೋನ್ ಗಳಾದ ಎಸ್ಟ್ರೋಜನ್ಗಳು, ಪ್ರೊಜೆಸ್ಟರಾನ್, ಮತ್ತು ಪ್ರೋಲ್ಯಾಕ್ಟಿನ್ ಸ್ರವಿಸುವಿಕೆಗೆ ಹಾಲೂಡುವಿಕೆ ಪ್ರಯೋಜನಕಾರಿಯಾಗಿದೆ ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಎಸ್ ಗಂಗಾಧರ್ ಅವರು ಮಾತನಾಡಿ ಎದೆಹಾಲಿನ ಮಹತ್ವ ಹಾಗೂ ಸ್ತನ್ಯಪಾನಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಜನ ಜಾಗೃತಿ ಮೂಡಿಸುವ ಹಾಗೂ ಕ್ರಮಬದ್ಧಗೊಳಿಸುವ ಜಾಗತಿಕ ಅಭಿಯಾನವಾಗಿದೆ. ಪ್ರತೀ ವರ್ಷವೂ ಒಂದೊಂದು ಘೋಷಣೆಯೊಂದಿಗೆ ಆಚರಿಸಲ್ಪಡುವ ಈ ಕಾರ್ಯಕ್ರಮವು ಈ ವರ್ಷದ ಘೋಷಣೆ “ಶಿಕ್ಷಣ ಮತ್ತು ಬೆಂಬಲದೊಂದಿಗೆ ಸ್ತನ್ಯಪಾನ ವೃದ್ಧಿ” ಎಂಬುದಾಗಿದ್ದು, ಸಮುದಾಯದಲ್ಲಿ ಅರಿವು ಮೂಡಿಸುವುದು ಎಲ್ಲರ ಜವಾಬ್ಧಾರಿಯಾಗಿದೆ ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಎಸ್ಬಿಸಿಸಿ ಸಂಯೋಜಕ ಸುರೇಶ್ ಬಾಬು, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ರಂಗನಾಥ್, ಮುಖ್ಯ ಶಿಕ್ಷಕರಾದ ಆಸಿನ್ ತಾಜ್, ಆರೋಗ್ಯ ನಿರೀಕ್ಷಣಾಧಿಕಾರಿ ಅಣ್ಣೇಗೌಡ, ಶಿವಕುಮಾರ್, ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಣಾಧಿಕಾರಿ ಯಲ್ಲಮ್ಮ, ಪ್ರಾಥಮಿಕ ಆರೋಗ್ಯ ಕೇಂದ್ರದ ಸುರಕ್ಷಾಣಾಧಿಕಾರಿ ಗಂಗಮ್ಮ, ಆರೋಗ್ಯ ಸಿಬ್ಬಂದಿ ಆಶಾ -ಅಂಗನವಾಡಿ ಕಾರ್ಯಕರ್ತೆಯರು, ಗರ್ಭಿಣಿ-ಬಾಣಂತಿಯರು ಹಾಗೂ ಇತರರು ಉಪಸ್ಥಿತರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in health »

ಸ್ತನ್ಯಪಾನ ತಾಯಿ-ಮಗುವಿನ ಭಾವನಾತ್ಮಕ ಸಂಬಂಧವನ್ನು ಗಟ್ಟಿಗೊಳಿಸುತ್ತದೆ: ಡಾ. ಚಂದ್ರಶೇಖರಯ್ಯ
ರಾಮನಗರ, ಆ.04: ಎದೆ ಹಾಲಿನ ಮಹತ್ವ, ಹಾಲುಣಿಸುವಿಕೆ ಮತ್ತು ಮಕ್ಕಳ ಆರೈಕೆ ಕುರಿತು ಜಾಗೃತಿಯನ್ನು ಮೂಡಿಸುತ್ತಿದ್ದು, ತಾವೆಲ್ಲರೂ ಮಾಹಿತಿಯನ್ನು

ಚಂದ್ರು ಡಯಾಗ್ನೋಷಟಿಕ್ ನಿಂದ ಜಿಲ್ಲೆಯಲ್ಲೇ ಪ್ರಪ್ರಥಮ ಬಾರಿಗೆ ನೂತನ ತಂತ್ರಜ್ಞಾನದ ಎಂಆರ್ಐ ಸ್ಯ್ಕಾನಿಂಗ್
ಚನ್ನಪಟ್ಟಣ.ಆ.೦೨: ಜಿಲ್ಲೆಯಲ್ಲಿ ಕಳೆದ ೨೫ ವರ್ಷಗಳಿಂದ ಗುಣಮಟ್ಟದ ಪ್ರಯೋಗಲಾಯ ಸೇವೆ ನೀಡುತ್ತಿರುವ ಚಂದ್ರ ಡಯಾಗ್ನೋಷ್ಟಿಕ್ ಸೆಂಟರ್ ವತಿಯಿಂದ ಜ

ಹೆಂಗಸರಲ್ಲೇ ವಿಶೇಷವಾಗಿ ಯುವತಿಯರಲ್ಲೇ ಸ್ಥೂಲಕಾಯ ಹೆಚ್ಚು ಡಾ ಪುನೀತ್
ಚನ್ನಪಟ್ಟಣ: ದೇಶದಲ್ಲಿ ಪುರುಷರಿಗಿಂತ ಮಹಿಳೆಯರಲ್ಲೇ ಸ್ಥೂಲಕಾಯ ಹೆಚ್ಚಾಗಿದ್ದು, ವಿಶೇಷವಾಗಿ ಯುವತಿಯರಲ್ಲಿ ಹೆಚ್ಚಾಗುತ್ತಿದೆ ಎಂದು ನಗರದ ಸಾರ್ವ

ಜಿಲ್ಲೆಯಲ್ಲಿ ಕ್ಷಯ ರೋಗ ನಿರ್ಮೂಲನೆ ಮಾಡಲು ಸೂಕ್ತ ಕ್ರಮ ವಹಿಸಿ: ಚಿಕ್ಕಸುಬ್ಬಯ್ಯ
ರಾಮನಗರ, ಮೇ೨೧: ಕ್ಷಯರೋಗದಿಂದ ಆರೋಗ್ಯ, ಸಾಮಾಜಿಕ ಮತ್ತು ಆರ್ಥಿಕ ವಿನಾಶಕಾರಿ ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕ್ಷಯ ಸಾಂಕ್ರಾಮಿಕ ರೋಗವನ್ನು ಕೊನೆಗೊಳಿಸುವ ಪ್ರಯತ್ನಗಳು

ಮಾ.16 ರಂದು 12 ರಿಂದ 14 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ
ರಾಮನಗರ ಮಾ.15: ರಾಮನಗರ ಜಿಲ್ಲಾ ಆಸ್ಪತ್ರೆಯಲ್ಲಿ 12 ರಿಂದ 14 ವರ್ಷದೊಳಗಿನ ಮಕ್ಕಳಿಗೆ ಕೋರ್ಬಿವ್ಯಾಕ್ಸ್ ಲಸಿಕಾ ಅಭಿಯಾನದಡಿಯಲ್ಲಿ ಕೋವಿ

ಸಮರ್ಥನಂ ಸಂಸ್ಥೆಯ ಸೇವೆ ಶ್ಲಾಘನೀಯ ಡಾ. ವೇಣುಗೋಪಾಲ್
ಚನ್ನಪಟ್ಟಣ ತಾಲ್ಲೂಕು, ಬಿ.ವಿ.ಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾ ಎಸ್.ಬಿ.ಸಿ.ಸಿ ಘಟಕ ಮತ್ತು ಸಮರ್ಥನಂ ಅಂಗವಿಕಲರ ಸಂಸ್ಥೆ ವತಿಯಿಂದ ಜಾಗೃತಿ ಕಾರ್ಯಕ್ರಮ ಮತ್ತು ಆರೋಗ್ಯ ಪರಿಕರ ವಿತರಣ

ಜನವರಿ 10 ರಿಂದ 60 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಬೂಸ್ಟರ್ ಡೋಸ್
ಆರೋಗ್ಯ ಇಲಾಖೆ ವತಿಯಿಂದ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ ಮೇಲ್ಪಟ್ಟ ಸಹ ಅಸ್ವಸ್ಥತೆ ಹೊಂದಿರುವ ಫಲಾನುಭವಿಗಳಿಗೆ ಜನವರಿ 10 ರಿಂದ ಹಂತ ಹಂತವಾಗಿ ಕೋವಿಡ್-19 ಮುನ್ನೆಚ್ಚ

ವಿದ್ಯಾರ್ಥಿಗಳಿಗೆ ಏಡ್ಸ್ ಮುಕ್ತ ಸಮಾಜ ನಿರ್ಮಿಸಲು ಸಲಹೆ - ಡಾ. ಕುಮಾರ್
ರಾಮನಗರ, ಡಿ:22/21. ಜಿಲ್ಲಾಡಳಿತ ಜಿಲ್ಲಾ ಪಂಚಾಯತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿಗಳ

ವಿದ್ಯಾರ್ಥಿಗಳಿಗೆ ಏಡ್ಸ್ ಮುಕ್ತ ಸಮಾಜ ನಿರ್ಮಿಸಲು ಸಲಹೆ - ಡಾ. ಕುಮಾರ್
ರಾಮನಗರ, ಡಿ:22/21. ಜಿಲ್ಲಾಡಳಿತ ಜಿಲ್ಲಾ ಪಂಚಾಯತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿಗಳ

ಪರಿಸರ ಉಳಿದರೆ ಮನು ಸಂಕುಲ ಉಳಿಯಲು ಸಾಧ್ಯ. ಸಚಿವ ಸಿ ಪಿ ಯೋಗೇಶ್ವರ್
ನಮ್ಮ ಪೂರ್ವಜರು ಪರಿಸರಕ್ಕೆ ಬಹಳ ಒತ್ತು ನೀಡಿದ್ದರು. ಅವರ ಜಮೀನಿನ ಜೊತೆಗೆ ರಸ್ತೆ ಬದಿಯಲ್ಲಿಯೂ ಸಹ ಗಿಡಗಳನ್ನು ನೆಟ್ಟು ಪೋಷಿಸಿತ್ತಿದ್ದರು. ಎಲ್ಲಿ ಒಂದು ಆಲದ ಮರ ಕಡಿದರೂ ಸಹ, ಅದೇ ಆಲದ ಮರದ ಹತ್ತಾರ
ಪ್ರತಿಕ್ರಿಯೆಗಳು