ಮೆದುಳು ಜ್ವರ ನಿಯಂತ್ರಣಕ್ಕೆ ಸಹಕರಿಸಲು ಮನವಿ: ಡಾ. ಶಶಿಧರ್

ರಾಮನಗರ, ಮೇ 22: ಮೆದುಳು ಜ್ವರವು ವೈರಾಣುವಿನಿಂದ ಬರುವ ರೋಗವಾಗಿದ್ದು ಹೆಚ್ಚಾಗಿ ಮಕ್ಕಳು ಈ ರೋಗಕ್ಕೆ ತುತ್ತಾಗುತ್ತಾರೆ. ಕೆಲವರಿಗೆ ನರ ದೌರ್ಬಲ್ಯ ಮತ್ತು ಬುದ್ಧಿಮಾಂದ್ಯತೆ ಉಂಟಾಗುತ್ತದೆ. ಆದ್ದರಿಂದ ಸಮುದಾಯದಲ್ಲಿ ಮೆದುಳು ಜ್ವರದಿಂದ ಉಂಟಾಗುವ ಸಾವು-ನೋವುಗಳನ್ನು ತಪ್ಪಿಸಬೇಕಾದರೆ. ತಾವೆಲ್ಲರೂ ಮಾಹಿತಿಯನ್ನು ತಿಳಿದುಕೊಂಡು ಅನುಸರಿಸುವ ಮೂಲಕ ಮೆದುಳು ಜ್ವರ ನಿಯಂತ್ರಣಕ್ಕೆ ಸಹಕರಿಸಬೇಕೆಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಶಶಿಧರ್ ಅವರು ತಿಳಿಸಿದರು.
ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿ, ವಿವಿಧ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸ್ವಯಂ ಸೇವಾ ಸಂಸ್ಥೆಗಳು, ರಾಮನಗರ ತಾಲ್ಲೂಕು, ಪ್ರಾಥಮಿಕ ಆರೋಗ್ಯ ಕೇಂದ್ರ ಲಕ್ಷ್ಮಿಪುರ ಇವರ ಸಂಯುಕ್ತ ಆಶ್ರಯದಲ್ಲಿ ಲಕ್ಷ್ಮಿಪುರ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಮೆದುಳು ಜ್ವರ ನಿಯಂತ್ರಣ ಕುರಿತು ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಇಂದು ಜಿಲ್ಲಾ ಮಟ್ಟದ ಮೆದುಳು ಜ್ವರ ನಿಯಂತ್ರಣ ಕುರಿತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಸಮುದಾಯದಲ್ಲಿ ಮೆದುಳು ಜ್ವರದಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವುದು ಇದರ ಮುಖ್ಯ ಉದ್ದೇಶ ಎಂದು ತಿಳಿಸಿದರು.
ವೈದ್ಯಾಧಿಕಾರಿ ಡಾ. ಶ್ವೇತಾ ಅವರು ಮಾತನಾಡಿ, ಮೆದುಳು ಜ್ವರದ ರೋಗಾಣುಗಳನ್ನು ಹೊಂದಿದ ಹಂದಿ ಮತ್ತು ಕೊಕ್ಕರೆಯನ್ನು ಕಚ್ಚಿದ ಕ್ಯೂಲೆಕ್ಸ್ ಜಾತಿಯ ಸೊಳ್ಳೆಗಳು ಮನುಷ್ಯರಿಗೆ ಕಚ್ಚುವುದರಿಂದ ಈ ರೋಗವು ಒಬ್ಬರಿಂದ ಮತೊಬ್ಬರಿಗೆ ಹರಡುತ್ತದೆ. ಪ್ರಾರಂಭದಲ್ಲಿ ವಿಪರೀತ ಜ್ವರ, ತಲೆನೂವು, ಕತ್ತಿನ ಬಿಗಿತ, ತಲೆ ಸುತ್ತುವಿಕೆ, ಮೈನಡುಕ, ಮತ್ತು ಜ್ಞಾನ ತಪ್ಪುವುದು, ಈ ರೋಗದ ಮುಖ್ಯ ಲಕ್ಷಣಗಳಾಗಿದ್ದು ಇಂತಹ ಲಕ್ಷಣಗಳು ಕಂಡ ತಕ್ಷಣ ವೈದ್ಯರನ್ನು ಸಂಪರ್ಕಿಸುವಂತೆ ತಿಳಿಸಿದರು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಎಸ್. ಗಂಗಾಧರ್ ಅವರು ಮಾತನಾಡಿ, ಮೆದುಳು ಜ್ವರ ನಿಯಂತ್ರಿಸುವ ಸಲುವಾಗಿ ಈಗಾಗಲೆ 1 ರಿಂದ 15 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಜೆ.ಇ ಲಸಿಕಾ ಅಭಿಯಾನದಡಿಯಲ್ಲಿ ಲಸಿಕೆಯನ್ನು ನೀಡಲಾಗಿದ್ದು. ಜೊತೆಗೆ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಡಿಯಲ್ಲಿ ಅರ್ಹ ಮಕ್ಕಳಿಗೆ ಜೆ.ಇ. ಲಸಿಕೆಯನ್ನು ನೀಡಲಾಗುತ್ತಿದ್ದು, ಪೋಷಕರು ಮಕ್ಕಳಿಗೆ ಲಸಿಕೆ ಹಾಕಿಸುವಂತೆ ತಿಳಿಸಿದರು ಹಾಗೂ ಮೆದುಳು ಜ್ವರವನ್ನು ತಡೆಗಟ್ಟಲು ಜನರು ವಾಸಿಸುವ ಸ್ಥಳದಿಂದ ಕನಿಷ್ಠ 3 ಕಿ.ಮೀ ವ್ಯಾಪ್ತಿಯಲ್ಲಿ ಹಂದಿಸಾಕಣೆ ಮಾಡಬಾರದು ಈ ರೋಗ ಕಾಣಿಸಿಕೊಂಡ ಸ್ಥಳಗಳಲ್ಲಿ ಹೊರಾಂಗಣ ಕೀಟನಾಶಕ ಧೂಮೀಕರಣ ಮಾಡಲಾಗುವುದು. ಹಂದಿ ಸಾಕಾಣಿಕಾ ಕೇಂದ್ರಗಳಿಗೆ ಕಾಲ-ಕಾಲಕ್ಕೆ ಕೀಟನಾಶಕ ಸಿಂಪಡಣೆ ಮಾಡುವುದು ಜೊತೆಗೆ ಸೊಳ್ಳೆ ನಿರೋಧಕ ಜಾಲರಿಗಳನ್ನು ಅಳವಡಿಸುವುದು ಸೂಕ್ತ, ಮನೆಯ ಸುತ್ತ-ಮುತ್ತ ಸ್ವಚ್ಛತೆ ಕಾಪಾಡಿಕೊಳ್ಳುವುದು ಹಾಗೂ ನೀರಿನ ತಾಣಗಳಲ್ಲಿ ಸೊಳ್ಳೆ ಉತ್ಪತ್ತಿಯಾಗದಂತೆ ಗಮನಹರಿಸಬೇಕು. ವಿಶೇಷವಾಗಿ ಮಕ್ಕಳು ಮೈ ತುಂಬ ಬಟ್ಟೆ ಧರಿಸಬೇಕು ಹಾಗೂ ಸೊಳ್ಳೆ ಪರದೆಗಳನ್ನು ಉಪಯೋಗಿಸುವ ಮೂಲಕ ಸೊಳ್ಳೆ ಕಡಿತಗಳಿಂದ ಪಾರಾಗಿ ಮೆದುಳು ಜ್ವರ ಬಾರದಂತೆ ರಕ್ಷಣೆ ಪಡೆಯಬುದೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಸರಿತಾ, ಪಿ.ಡಿ.ಓ ಶಿವಕುಮಾರ್, ಸದಸ್ಯರಾದ ಶಿಲ್ಪ, ಮಹದೇವು, ಬಸವರಾಜು, ತ್ರಿವೇಣಿ, ಮಾಜಿ ಸದಸ್ಯರಾದ ವಿಶ್ವನಾಥ್, ಪಶುವೈದ್ಯ ಡಾ. ವೆಂಕಟೇಶ್, ಕೀಟ ಶಾಸ್ತ್ರಜ್ಞೆ ಸೌಮ್ಯ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ವಿನಯ್ ಕುಮಾರ್, ರಾಜೇಂದ್ರ, ವಿಠಲ್, ದಾಸಪ್ಪ, ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in health »

ಹೊಂಗನೂರು, ಕೋಡಂಬಳ್ಳಿ ಗ್ರಾಮದಲ್ಲಿ ಪರವಾನಗಿ ಇಲ್ಲದ ಖಾಸಗಿ ಆಸ್ಪತ್ರೆಗಳಿಗೆ ಬೀಗ ಜಡಿದ ಟಿಹೆಚ್‌ಓ
ಚನ್ನಪಟ್ಟಣ: ತಾಲ್ಲೂಕಿನ ಹೊಂಗನೂರು ಗ್ರಾಮದಲ್ಲಿ ಗೋಪಿ ಕ್ಲಿನಿಕ್ ಎಂಬ ಖಾಸಗಿ ಆಸ್ಪತ್ರೆ ಇದ್ದು, ಗೋಪಿ ಎಂಬುವವರು ವೈದ್ಯರಾಗಿ ಸೇವೆ ನಿರ್ವಹಿಸುತ್ತಿದ್ದಾರ

ಉತ್ತಮ ಆರೋಗ್ಯಕ್ಕೆ ಆಯುರ್ವೇದವೇ ದಿವ್ಯ ಔಷಧ ಡಾ ಸಹನಾ ಕೃಷ್ಣ
ಚನ್ನಪಟ್ಟಣ: ಪುರಾಣೇತೀಹಾಸದಿಂದಲೂ ಪ್ರಖ್ಯಾತವಾಗಿರುವ ಔಷಧ ಎಂದರೆ ಅದು ಆಯುರ್ವೇದ ಔಷಧ, ಜಗತ್ತಿನ ಅತ್ಯಂತ ಪ್ರಾಚೀನ ಔಷಧವೂ ಹೌದು, ನಮ್ಮ ಪ್ರಕೃತಿ ಹೇಗೆ ಸಮ

ದೊಡ್ಡಮಳೂರು ಗ್ರಾಮದಲ್ಲಿ ದೀರ್ಘಾಯು ವೆಲ್ ನೆಸ್ ಆಯುರ್ವೇದ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ಶಿಬಿರ
ಚನ್ನಪಟ್ಟಣ: ತಾಲ್ಲೂಕಿನ ದೊಡ್ಡಮಳೂರು ಗ್ರಾಮದ ದೇವಸ್ಥಾನದ ಬೀದಿಯಲ್ಲಿರುವ ದೀರ್ಘಾಯು ವೆಲ್ ನೆಸ್ ಸೆಂಟರ್ ಇವರ ವತಿಯಿಂದ ನಾಳೆ (ಭಾನುವಾರ) ಬೆಳಿ

ಕ್ರಿಯೇಟಿವ್ ಅಸೋಸಿಯೇಷನ್ ಹಾಗೂ ಸೊಸೈಟಿ ವತಿಯಿಂದ ಶನಿವಾರ ನಗರದಲ್ಲಿ ಬೃಹತ್ ಉಚಿತ ಆರೋಗ್ಯ ಶಿಬಿರ
ಚನ್ನಪಟ್ಟಣ : ತಾಲ್ಲೂಕಿನಿಂದ ಬೆಂಗಳೂರಿಗೆ ಹೋಗಿ, ಜೀವನ ಕಟ್ಟಿಕೊಂಡು ತಾಲ್ಲೂಕಿಗೆ ಏನಾದರೂ ಕೊಡುಗೆ ನೀಡಬೇಕೆಂಬ ಹಂಬಲದಿಂದ ಕ್ರಿಯೇಟಿವ್ ಅಸೋಸಿಯೇಷನ್ ಮತ್ತ

ದುಶ್ಚಟದಿಂದ ದೂರವಿರಿ, ಆರೋಗ್ಯ ಕಾಪಾಡಿಕೊಳ್ಳಿ : ಪ್ರತಿಮಾ ಕೆ.ವಿ
ರಾಮನಗರ, ಜೂ. 17: ಇತ್ತೀಚೆಗೆ ಅತಿ ಹೆಚ್ಚು ಹಲವಾರು ದುಶ್ಚಟಗಳು ಮನುಷ್ಯನನ್ನು ಆವರಸಿಕೊಂಡಿವೆ. ಇದರಿಂದಾಗಿ ನೂರಾರು ಖಾಯಿಲೆಗಳು ದೇಹ ಹೊಕ್ಕು ನಿತ್ಯ ಸಾ

ಫ್ಲೋರೋಸಿಸ್ ನಿಯಂತ್ರಿಸಿ ಉತ್ತಮ ಜೀವನ ನಡೆಸುವಂತೆ ಸಲಹೆ - ಡಾ.ಅನಿಲ್
ರಾಮನಗರ, ಜೂ. 15: ಫ್ಲೋರೈಡ್ ನಮ್ಮ ದೇಹಕ್ಕೆ ಬೇಕಾದ ಒಂದು ಖನಿಜಾಂಶ ನಾವು ಸೇವಿಸುವ ಆಹಾರ ಮತ್ತು ಕುಡಿಯುವ ನೀರಿನಲ್ಲಿ ಅವಶ್ಯಕತೆಗಿಂತ ಹೆಚ್ಚು ಫ್ಲೋರೈಡ

ಆರೋಗ್ಯ ಕೇಂದ್ರದಲ್ಲಿ ದೊರೆಯುವ ಸೇವೆಗಳನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದ ಬಿ.ಎಸ್.ಗಂಗಾಧರ್.
ರಾಮನಗರ: ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಕೆ.ಕರೇನಹಳ್ಳಿ ಇವರ ಸಂಯುಕ್ತ ಆಶ್ರ

ಶ್ರೀಗಿರಿಪುರ ಗ್ರಾಪಂ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆದ ಆರೋಗ್ಯ ತಪಾಸಣಾ ಶಿಬಿರ
ರಾಮನಗರ, ಜೂ. 07: ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಾತ್ಮಗಾಂಧಿ ನರೇಗಾ ಉದ್ಯೋಗ ಖಾತ್ರಿ ಯೋಜನೆ ಹಾಗೂ ಕುದೂರು ಪ್ರ

ಆರೋಗ್ಯ ತಪಾಸಣೆ ನಿಮ್ಮ ಗ್ರಾಮಗಳ ಕಡೆ: ಡಾ.ಚೈತ್ರಗೌಡ
ಚನ್ನಪಟ್ಟಣ: ಆಸ್ಪತ್ರೆಗಳಿಗೆ ಹೋಗಿ ಆರೋಗ್ಯ ತಪಾಸಣೆ ಮಾಡಿಕೊಳ್ಳುವ ಬದಲು ನೀವಿರುವ ಗ್ರಾಮಗಳಿಗೆ ಬಂದು ಆರೋಗ್ಯ ತಪಾಸಣೆಯನ್ನು ಮಾಡಲಾಗುತ್ತಿದೆ ಇದನ್ನು ಎಲ

ಮೆದುಳು ಜ್ವರ ನಿಯಂತ್ರಣಕ್ಕೆ ಸಹಕರಿಸಲು ಮನವಿ: ಡಾ. ಶಶಿಧರ್
ರಾಮನಗರ, ಮೇ 22: ಮೆದುಳು ಜ್ವರವು ವೈರಾಣುವಿನಿಂದ ಬರುವ ರೋಗವಾಗಿದ್ದು ಹೆಚ್ಚಾಗಿ ಮಕ್ಕಳು ಈ ರೋಗಕ್ಕೆ ತುತ್ತಾಗುತ್ತಾರೆ. ಕೆಲವರಿಗೆ ನರ ದೌರ್ಬಲ್ಯ
ಪ್ರತಿಕ್ರಿಯೆಗಳು