ಆರೋಗ್ಯ ತಪಾಸಣೆ ನಿಮ್ಮ ಗ್ರಾಮಗಳ ಕಡೆ: ಡಾ.ಚೈತ್ರಗೌಡ

ಚನ್ನಪಟ್ಟಣ: ಆಸ್ಪತ್ರೆಗಳಿಗೆ ಹೋಗಿ ಆರೋಗ್ಯ ತಪಾಸಣೆ ಮಾಡಿಕೊಳ್ಳುವ ಬದಲು ನೀವಿರುವ ಗ್ರಾಮಗಳಿಗೆ ಬಂದು ಆರೋಗ್ಯ ತಪಾಸಣೆಯನ್ನು ಮಾಡಲಾಗುತ್ತಿದೆ ಇದನ್ನು ಎಲ್ಲರೂ ಸದುಪಯೋಗ ಪಡೆಸಿಕೊಳ್ಳಬೇಕು ಎಂದು ಮೈಲನಾಯಕನ ಹೊಸಹಳ್ಳಿ ವೈದ್ಯೆ ಡಾ.ಚೈತ್ರಾನಿಂಗೆಗೌಡ ಅವರು ತಿಳಿಸಿದರು.
ಅವರು ಇಂದು ಚನ್ನಪಟ್ಟಣ ತಾಲ್ಲೂಕಿನ ಮಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೈರಾಪಟ್ಟಣ ಗ್ರಾಮದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಮೈಲನಾಯಕನ ಹೊಸಹಳ್ಳಿ ಸಹಕಾರದೊಂದಿಗೆ ನರೇಗಾ ಕೂಲಿ ಕಾರ್ಮಿಕರಿಗೆ ಆರೋಗ್ಯ ತಪಾಸಣಾ ಶಿಭಿರವನ್ನು ಕುರಿತು ಮಾತನಾಡಿದರು.
ಹೆಣ್ಣು ಮಕ್ಕಳಲ್ಲಿ ಹೆಚ್ಚು ಕಾಣಿಸಿಕೊಳ್ಳುವ ಸಮಸ್ಯೆ ರಕ್ತಹೀನತೆ ಅದನ್ನು ನಿಯಂತ್ರಿಸಿಕೊಳ್ಳುವುದು ಅವರ ಕೈಯಲ್ಲೆ ಇರುತ್ತದೆ. ದಿನನಿತ್ಯ ಸಮತೋಲನ ಆಹಾರ ಸೇವನೆಯಿಂದ ರಕ್ತಹೀನತೆಯನ್ನು ನಿಯಂತ್ರಿಸಬಹುದಾಗಿದೆ ಎಂದು ತಿಳಿಸಿದರು.
ತಪಾಶಣೆ ಸಮಯದಲ್ಲಿ 160/40 ಬಿ ಪಿ ಕಂಡುಬಂದ ವ್ಯಕ್ತಿಗೆ ಮಾತ್ರೆ ತೆಗೆದುಕೊಳ್ಳುವಂತೆ ತಿಳಿಸಲಾಗುತ್ತದೆ ಬಿ ಪಿ ಯನ್ನು ನಿರ್ಲಕ್ಷಿಸಿದರೆ ಲಕ್ವ ಹೊಡೆಯುವ ಸಾಧ್ಯತೆ ಹೆಚ್ಚು. ಆದ್ದರಿಂದ ಹೆಚ್ಚು ಗಮನ ವಹಿಸಿ ಚಿಕಿತ್ಸೆ ಪಡೆಯಬೇಕು ಹಾಗೂ ಮಧುಮೇಹಕ್ಕೆ ಸಂಬಂಧಿಸಿದಂತೆ 10 ರಲ್ಲಿ 8 ಜನಕ್ಕೆ ಮಧುಮೇಹ ಕಂಡು ಬರುತ್ತಿದೆ, ಮಧುಮೇಹದ ಲಕ್ಷಣಗಳೆಂದರೆ ಸುಸ್ತು, ತೂಕದಲ್ಲಿ ದೀಢೀರ್ ಇಳಿಕೆ, ಏರಿಕೆ ಕಂಡುಬರುತ್ತದೆ, ಬಾಯಿ ಒಣಗುವುದು ಇಂತ ಲಕ್ಷಣ ಗಳು ಕಂಡುಬಂದರೆ ವೈದ್ಯರನ್ನು ಸಂಪರ್ಕಿಸಿ ಖಚಿತ ಪಡೆಸಿಕೊಂಡು ಹೆಚ್ಚಾಗದಂತೆ ಕ್ರಮ ಕೈಗೊಳ್ಳ ಬಹುದಾಗಿರುತ್ತದೆ ಎಂದು ತಿಳಿಸಿದರು.
ನಂತರ ಇದೆ ದಿನ ತಾಲ್ಲೂಕಿನ ಸುಳ್ಳೇರಿ ಗ್ರಾಮ ಪಂಚಾಯಿತಿಯಲ್ಲಿ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.
ಉಚಿತ ಆರೋಗ್ಯ ಶಿಭಿರದಲ್ಲಿ ನರೇಗಾ ಕೂಲಿಕಾರ್ಮಿಕರಿಗೆ ರಕ್ತದೊತ್ತಡ, ಮಧುಮೇಹ, ರಕ್ತಹೀನತೆ, ಕ್ಷಯ, ಕ್ಯಾನ್ಸರ್ ಇನ್ನಿತರ ಸಮಸ್ಯೆಗಳ ತಪಾಸಣೆ ಮಾಡಲಾಯಿತು...
ಈ ಸಂದರ್ಭದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಸ್ವಾಮಿ, ಎಂ ಎನ್ ಹೊಸಹಳ್ಳಿ ವೈದ್ಯಾದಿಕಾರಿಗಳಾದ ಚೈತ್ರಾ ನಿಂಗೆಗೌಡ, ಆರೋಗ್ಯ ನಿರೀಕ್ಷಣಾಧಿಕಾರಿ ಪೂಜಾ, ಆರೋಗ್ಯ ಸುರಕ್ಷಿತಾಧಿಕಾರಿತಾಧಿಕಾರಿಗಳಾದ ಧರಣಿ, ಗೀತಾ, ಲ್ಯಾಬ್ ಟೆಕ್ನಿಷಿಯನ್ ಸರಸ್ವತಿ, ತಾಲ್ಲೂಕು ಐಇಸಿ ಸಂಯೋಜಕರಾದ ಭವ್ಯ, ಗ್ರಾಮ ಪಂಚಾಯಿತಿ ಜಿಕೆಎಂ, ಬಿಎಫ್ಟಿ, ಸೇರಿದಂತೆ ಆಶಾಕಾರ್ಯಕರ್ತೆಯರು ಉಪಸ್ಥಿತರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in health »

೪೬ ವರ್ಷದ ಮಹಿಳೆಯ ಹೊಟ್ಟೆಯಲ್ಲಿದ್ದ ೧೦ ಕಿಲೋ ಕ್ಯಾನ್ಸರ್ ಗಡ್ಡೆ ಹೊರತೆಗೆದ ಬಾಲು ಆಸ್ಪತ್ರೆಯ ವೈದ್ಯರು
ಚನ್ನಪಟ್ಟಣ: ತಾಲ್ಲೂಕಿನ ಗ್ರಾಮವೊಂದರ ೪೬ ವರ್ಷದ ಮಹಿಳೆಯೊಬ್ಬರ ಗರ್ಭ (ಅಂಡಾಶಯ) ದಲ್ಲಿದ್ದ ಬರೋಬ್ಬರಿ ೧೦ ಕಿಲೋ ೩೦೦ ಗ್ರಾಂ ತೂಕದ ಕ್ಯಾನ್ಸರ್ ಗಡ್ಡೆ ಯನ್ನ

ಹೊಂಗನೂರು, ಕೋಡಂಬಳ್ಳಿ ಗ್ರಾಮದಲ್ಲಿ ಪರವಾನಗಿ ಇಲ್ಲದ ಖಾಸಗಿ ಆಸ್ಪತ್ರೆಗಳಿಗೆ ಬೀಗ ಜಡಿದ ಟಿಹೆಚ್‌ಓ
ಚನ್ನಪಟ್ಟಣ: ತಾಲ್ಲೂಕಿನ ಹೊಂಗನೂರು ಗ್ರಾಮದಲ್ಲಿ ಗೋಪಿ ಕ್ಲಿನಿಕ್ ಎಂಬ ಖಾಸಗಿ ಆಸ್ಪತ್ರೆ ಇದ್ದು, ಗೋಪಿ ಎಂಬುವವರು ವೈದ್ಯರಾಗಿ ಸೇವೆ ನಿರ್ವಹಿಸುತ್ತಿದ್ದಾರ

ಉತ್ತಮ ಆರೋಗ್ಯಕ್ಕೆ ಆಯುರ್ವೇದವೇ ದಿವ್ಯ ಔಷಧ ಡಾ ಸಹನಾ ಕೃಷ್ಣ
ಚನ್ನಪಟ್ಟಣ: ಪುರಾಣೇತೀಹಾಸದಿಂದಲೂ ಪ್ರಖ್ಯಾತವಾಗಿರುವ ಔಷಧ ಎಂದರೆ ಅದು ಆಯುರ್ವೇದ ಔಷಧ, ಜಗತ್ತಿನ ಅತ್ಯಂತ ಪ್ರಾಚೀನ ಔಷಧವೂ ಹೌದು, ನಮ್ಮ ಪ್ರಕೃತಿ ಹೇಗೆ ಸಮ

ದೊಡ್ಡಮಳೂರು ಗ್ರಾಮದಲ್ಲಿ ದೀರ್ಘಾಯು ವೆಲ್ ನೆಸ್ ಆಯುರ್ವೇದ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ಶಿಬಿರ
ಚನ್ನಪಟ್ಟಣ: ತಾಲ್ಲೂಕಿನ ದೊಡ್ಡಮಳೂರು ಗ್ರಾಮದ ದೇವಸ್ಥಾನದ ಬೀದಿಯಲ್ಲಿರುವ ದೀರ್ಘಾಯು ವೆಲ್ ನೆಸ್ ಸೆಂಟರ್ ಇವರ ವತಿಯಿಂದ ನಾಳೆ (ಭಾನುವಾರ) ಬೆಳಿ

ಕ್ರಿಯೇಟಿವ್ ಅಸೋಸಿಯೇಷನ್ ಹಾಗೂ ಸೊಸೈಟಿ ವತಿಯಿಂದ ಶನಿವಾರ ನಗರದಲ್ಲಿ ಬೃಹತ್ ಉಚಿತ ಆರೋಗ್ಯ ಶಿಬಿರ
ಚನ್ನಪಟ್ಟಣ : ತಾಲ್ಲೂಕಿನಿಂದ ಬೆಂಗಳೂರಿಗೆ ಹೋಗಿ, ಜೀವನ ಕಟ್ಟಿಕೊಂಡು ತಾಲ್ಲೂಕಿಗೆ ಏನಾದರೂ ಕೊಡುಗೆ ನೀಡಬೇಕೆಂಬ ಹಂಬಲದಿಂದ ಕ್ರಿಯೇಟಿವ್ ಅಸೋಸಿಯೇಷನ್ ಮತ್ತ

ದುಶ್ಚಟದಿಂದ ದೂರವಿರಿ, ಆರೋಗ್ಯ ಕಾಪಾಡಿಕೊಳ್ಳಿ : ಪ್ರತಿಮಾ ಕೆ.ವಿ
ರಾಮನಗರ, ಜೂ. 17: ಇತ್ತೀಚೆಗೆ ಅತಿ ಹೆಚ್ಚು ಹಲವಾರು ದುಶ್ಚಟಗಳು ಮನುಷ್ಯನನ್ನು ಆವರಸಿಕೊಂಡಿವೆ. ಇದರಿಂದಾಗಿ ನೂರಾರು ಖಾಯಿಲೆಗಳು ದೇಹ ಹೊಕ್ಕು ನಿತ್ಯ ಸಾ

ಫ್ಲೋರೋಸಿಸ್ ನಿಯಂತ್ರಿಸಿ ಉತ್ತಮ ಜೀವನ ನಡೆಸುವಂತೆ ಸಲಹೆ - ಡಾ.ಅನಿಲ್
ರಾಮನಗರ, ಜೂ. 15: ಫ್ಲೋರೈಡ್ ನಮ್ಮ ದೇಹಕ್ಕೆ ಬೇಕಾದ ಒಂದು ಖನಿಜಾಂಶ ನಾವು ಸೇವಿಸುವ ಆಹಾರ ಮತ್ತು ಕುಡಿಯುವ ನೀರಿನಲ್ಲಿ ಅವಶ್ಯಕತೆಗಿಂತ ಹೆಚ್ಚು ಫ್ಲೋರೈಡ

ಆರೋಗ್ಯ ಕೇಂದ್ರದಲ್ಲಿ ದೊರೆಯುವ ಸೇವೆಗಳನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದ ಬಿ.ಎಸ್.ಗಂಗಾಧರ್.
ರಾಮನಗರ: ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಕೆ.ಕರೇನಹಳ್ಳಿ ಇವರ ಸಂಯುಕ್ತ ಆಶ್ರ

ಶ್ರೀಗಿರಿಪುರ ಗ್ರಾಪಂ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆದ ಆರೋಗ್ಯ ತಪಾಸಣಾ ಶಿಬಿರ
ರಾಮನಗರ, ಜೂ. 07: ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಾತ್ಮಗಾಂಧಿ ನರೇಗಾ ಉದ್ಯೋಗ ಖಾತ್ರಿ ಯೋಜನೆ ಹಾಗೂ ಕುದೂರು ಪ್ರ

ಆರೋಗ್ಯ ತಪಾಸಣೆ ನಿಮ್ಮ ಗ್ರಾಮಗಳ ಕಡೆ: ಡಾ.ಚೈತ್ರಗೌಡ
ಚನ್ನಪಟ್ಟಣ: ಆಸ್ಪತ್ರೆಗಳಿಗೆ ಹೋಗಿ ಆರೋಗ್ಯ ತಪಾಸಣೆ ಮಾಡಿಕೊಳ್ಳುವ ಬದಲು ನೀವಿರುವ ಗ್ರಾಮಗಳಿಗೆ ಬಂದು ಆರೋಗ್ಯ ತಪಾಸಣೆಯನ್ನು ಮಾಡಲಾಗುತ್ತಿದೆ ಇದನ್ನು ಎಲ
ಪ್ರತಿಕ್ರಿಯೆಗಳು