Tel: 7676775624 | Mail: info@yellowandred.in

Language: EN KAN

    Follow us :


ಆರೋಗ್ಯ ಕೇಂದ್ರದಲ್ಲಿ ದೊರೆಯುವ ಸೇವೆಗಳನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದ ಬಿ.ಎಸ್.ಗಂಗಾಧರ್.

Posted date: 12 Jun, 2023

Powered by:     Yellow and Red

ಆರೋಗ್ಯ ಕೇಂದ್ರದಲ್ಲಿ ದೊರೆಯುವ ಸೇವೆಗಳನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದ ಬಿ.ಎಸ್.ಗಂಗಾಧರ್.

ರಾಮನಗರ: ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಕೆ.ಕರೇನಹಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಆಸ್ಪತ್ರೆಯ ಸಭಾಂಗಣದಲ್ಲಿ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳು / ಯೋಜನೆಗಳು / ಸೇವಾ ಸೌಲಭ್ಯಗಳ ಕುರಿತು  ಇಂದು ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.


ಬಿ.ಎಸ್.ಗಂಗಾಧರ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಮಾತನಾಡುತ್ತಾ ಪ್ರಾಥಮಿಕ ಆರೋಗ್ಯ ಕೇಂದ್ರದ ಮಟ್ಟದಲ್ಲಿ ತಾಯಿ ಮತ್ತು ಮಕ್ಕಳ ಆರೋಗ್ಯ ಸೇವೆ, ಗರ್ಭಿಣಿ ತಪಾಸಣೆ, ಮಕ್ಕಳ ಲಸಿಕಾ ಕಾರ್ಯಕ್ರಮ, ಕುಟುಂಬ ಕಲ್ಯಾಣ ಯೋಜನೆ, ಸಾಂಕ್ರಾಮಿಕ ರೋಗಗಳಾದ ಕ್ಷಯ, ಕುಷ್ಠ, ಮಲೇರಿಯಾ, ಡೆಂಗಿ, ಚಿಕುನ್ ಗುನ್ಯಾ ರೋಗಗಳು ಮತ್ತು ಅಸಾಂಕ್ರಾಮಿಕ ರೋಗಗಳಾದ ಮಧುಮೇಹ, ರಕ್ತದೊತ್ತಡ ಇನ್ನಿತರೇ ರೋಗಗಳನ್ನು ಪತ್ತೆಮಾಡಿ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತದೆ.  ಹಾಗೂ ಹಾವು ಕಡಿತ, ನಾಯಿ ಕಡಿತ ಸಂದರ್ಭಗಳಲ್ಲಿ ಉಚಿತವಾಗಿ ಲಸಿಕೆ ನೀಡಲಾಗುವುದು. ಈ ಎಲ್ಲಾ ಸೇವಾ ಸೌಲಭ್ಯಗಳನ್ನು ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ನೀಡಲಾಗುತ್ತಿದ್ದು ಸಾರ್ವಜನಿಕರು ಆರೋಗ್ಯ ಕೇಂದ್ರದಲ್ಲಿ ದೊರೆಯುವ ಸೇವಾ-ಸೌಲಭ್ಯ ಬಳಸಿಕೊಳ್ಳಬೇಕೆಂದು ಸಲಹೆ ನೀಡಿದರು. 

 

ವೈದ್ಯಾಧಿಕಾರಿ ಡಾ. ಅನಘಾ ಮಾತನಾಡುತ್ತಾ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಲೇರಿಯಾ ನಿಯಂತ್ರಿಸಲು ಎಲ್ಲಾ ಜ್ವರದ ಪ್ರಕರಣಗಳಿಗೆ ರಕ್ತ ಲೇಪನ ಸಂಗ್ರಹ ಮಾಡಲಾಗುತ್ತಿದೆ. ಎರಡು ವಾರಕ್ಕೂ ಹೆಚ್ಚು ಕೆಮ್ಮು, ಸಂಜೆಯ ವೇಳೆ ಜ್ವರ, ಬೆವರುವಿಕೆ, ಹಸಿವಾಗದೆ ಇರುವುದು, ಇಂತಹ ಲಕ್ಷಣಗಳಿರುವವರಿಗೆ ಕ್ಷಯ ರೋಗ ನಿಯಂತ್ರಿಸುವ ಸಲುವಾಗಿ, ಕಫ ಪರೀಕ್ಷೆ, ಪ್ರತಿ ಬುಧವಾರ ಗರ್ಭಿಣಿ ಪರೀಕ್ಷೆ, ಗುರುವಾರ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮ, ಪ್ರತಿ ತಂಗಳು 9ನೇ ತಾರೀಖಿನಂದು ಗರ್ಭಿಣಿಯರ ಆರೋಗ್ಯ ತಪಾಸಣೆ ಇತ್ಯಾದಿ ಸೇವೆಗಳನ್ನು ನೀಡಲಾಗುತ್ತಿದ್ದು ಸಾರ್ವಜನಿಕರು ಪ್ರಾರಂಭಿಕ ಹಂತದಲ್ಲಿಯೇ ಎಲ್ಲಾ ಆರೋಗ್ಯ ಸಮಸ್ಯೆಗಳಿಗೂ ಚಿಕಿತ್ಸೆ ಪಡೆದುಕೊಳ್ಳುವಂತೆ ಸಲಹೆ ನೀಡಿದರು.


ಈ ಕಾರ್ಯಕ್ರಮದಲ್ಲಿ  ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿ ವಾಣಿ, ನಿವೃತ್ತ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಶಂಭುಲಿಂಗಯ್ಯ, ರಮೇಶ್, ಆಶಾ ಕಾರ್ಯಕರ್ತೆಯರಾದ ಉಮಾ, ಅನ್ನಪೂರ್ಣ, ಆಶಾ, ಆರೋಗ್ಯ ಸಿಬ್ಬಂದಿ ಹಾಗೂ ಸಾರ್ವಜನಿಕರು ಹಾಜರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in health »

ವ್ಯವಹಾರಕ್ಕಾಗಿ ಆಸ್ಪತ್ರೆಯಲ್ಲಾ, ಸೇವೆಗಾಗಿ ನಮ್ಮ ಆಸ್ಪತ್ರೆ. ಕಾಂಗರೂ ಆಸ್ಪತ್ರೆಯ ಸಂಸ್ಥಾಪಕ ಡಾ ಶೇಖರ್ ಸುಬ್ಬಯ್ಯ
ವ್ಯವಹಾರಕ್ಕಾಗಿ ಆಸ್ಪತ್ರೆಯಲ್ಲಾ, ಸೇವೆಗಾಗಿ ನಮ್ಮ ಆಸ್ಪತ್ರೆ. ಕಾಂಗರೂ ಆಸ್ಪತ್ರೆಯ ಸಂಸ್ಥಾಪಕ ಡಾ ಶೇಖರ್ ಸುಬ್ಬಯ್ಯ

ರಾಮನಗರ: ನಾವು ಹಣಕ್ಕಾಗಿ ಆಸ್ಪತ್ರೆ ನಡೆಸುವುದಿಲ್ಲ, ಇದೊಂದು ಸೇವೆ ಎಂದು ಪರಿಗಣಿಸಿ ಆಸ್ಪತ್ರೆ ನಡೆಸುತ್ತಿದ್ದೇವೆ. ಬೆಂಗಳೂರು ಮೈಸೂರು ಸೇರಿದಂತೆ ನಾಲ್ಕು

೪೬ ವರ್ಷದ ಮಹಿಳೆಯ ಹೊಟ್ಟೆಯಲ್ಲಿದ್ದ ೧೦ ಕಿಲೋ ಕ್ಯಾನ್ಸರ್ ಗಡ್ಡೆ ಹೊರತೆಗೆದ ಬಾಲು ಆಸ್ಪತ್ರೆಯ ವೈದ್ಯರು
೪೬ ವರ್ಷದ ಮಹಿಳೆಯ ಹೊಟ್ಟೆಯಲ್ಲಿದ್ದ ೧೦ ಕಿಲೋ ಕ್ಯಾನ್ಸರ್ ಗಡ್ಡೆ ಹೊರತೆಗೆದ ಬಾಲು ಆಸ್ಪತ್ರೆಯ ವೈದ್ಯರು

ಚನ್ನಪಟ್ಟಣ: ತಾಲ್ಲೂಕಿನ ಗ್ರಾಮವೊಂದರ ೪೬ ವರ್ಷದ ಮಹಿಳೆಯೊಬ್ಬರ ಗರ್ಭ (ಅಂಡಾಶಯ) ದಲ್ಲಿದ್ದ ಬರೋಬ್ಬರಿ ೧೦ ಕಿಲೋ ೩೦೦ ಗ್ರಾಂ ತೂಕದ ಕ್ಯಾನ್ಸರ್ ಗಡ್ಡೆ ಯನ್ನ

ಹೊಂಗನೂರು, ಕೋಡಂಬಳ್ಳಿ ಗ್ರಾಮದಲ್ಲಿ ಪರವಾನಗಿ ಇಲ್ಲದ ಖಾಸಗಿ ಆಸ್ಪತ್ರೆಗಳಿಗೆ ಬೀಗ ಜಡಿದ ಟಿಹೆಚ್‌ಓ
ಹೊಂಗನೂರು, ಕೋಡಂಬಳ್ಳಿ ಗ್ರಾಮದಲ್ಲಿ ಪರವಾನಗಿ ಇಲ್ಲದ ಖಾಸಗಿ ಆಸ್ಪತ್ರೆಗಳಿಗೆ ಬೀಗ ಜಡಿದ ಟಿಹೆಚ್‌ಓ

ಚನ್ನಪಟ್ಟಣ: ತಾಲ್ಲೂಕಿನ ಹೊಂಗನೂರು ಗ್ರಾಮದಲ್ಲಿ ಗೋಪಿ ಕ್ಲಿನಿಕ್ ಎಂಬ ಖಾಸಗಿ ಆಸ್ಪತ್ರೆ ಇದ್ದು, ಗೋಪಿ ಎಂಬುವವರು ವೈದ್ಯರಾಗಿ ಸೇವೆ ನಿರ್ವಹಿಸುತ್ತಿದ್ದಾರ

ಉತ್ತಮ ಆರೋಗ್ಯಕ್ಕೆ ಆಯುರ್ವೇದವೇ ದಿವ್ಯ ಔಷಧ ಡಾ ಸಹನಾ ಕೃಷ್ಣ
ಉತ್ತಮ ಆರೋಗ್ಯಕ್ಕೆ ಆಯುರ್ವೇದವೇ ದಿವ್ಯ ಔಷಧ ಡಾ ಸಹನಾ ಕೃಷ್ಣ

ಚನ್ನಪಟ್ಟಣ: ಪುರಾಣೇತೀಹಾಸದಿಂದಲೂ ಪ್ರಖ್ಯಾತವಾಗಿರುವ ಔಷಧ ಎಂದರೆ ಅದು ಆಯುರ್ವೇದ ಔಷಧ, ಜಗತ್ತಿನ ಅತ್ಯಂತ ಪ್ರಾಚೀನ ಔಷಧವೂ ಹೌದು, ನಮ್ಮ ಪ್ರಕೃತಿ ಹೇಗೆ ಸಮ

ದೊಡ್ಡಮಳೂರು ಗ್ರಾಮದಲ್ಲಿ ದೀರ್ಘಾಯು ವೆಲ್ ನೆಸ್ ಆಯುರ್ವೇದ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ಶಿಬಿರ
ದೊಡ್ಡಮಳೂರು ಗ್ರಾಮದಲ್ಲಿ ದೀರ್ಘಾಯು ವೆಲ್ ನೆಸ್ ಆಯುರ್ವೇದ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ಶಿಬಿರ

ಚನ್ನಪಟ್ಟಣ: ತಾಲ್ಲೂಕಿನ ದೊಡ್ಡಮಳೂರು ಗ್ರಾಮದ ದೇವಸ್ಥಾನದ ಬೀದಿಯಲ್ಲಿರುವ ದೀರ್ಘಾಯು ವೆಲ್ ನೆಸ್ ಸೆಂಟರ್ ಇವರ ವತಿಯಿಂದ ನಾಳೆ (ಭಾನುವಾರ) ಬೆಳಿ

ಕ್ರಿಯೇಟಿವ್ ಅಸೋಸಿಯೇಷನ್ ಹಾಗೂ ಸೊಸೈಟಿ ವತಿಯಿಂದ ಶನಿವಾರ ನಗರದಲ್ಲಿ ಬೃಹತ್ ಉಚಿತ ಆರೋಗ್ಯ ಶಿಬಿರ
ಕ್ರಿಯೇಟಿವ್ ಅಸೋಸಿಯೇಷನ್ ಹಾಗೂ ಸೊಸೈಟಿ ವತಿಯಿಂದ ಶನಿವಾರ ನಗರದಲ್ಲಿ ಬೃಹತ್ ಉಚಿತ ಆರೋಗ್ಯ ಶಿಬಿರ

ಚನ್ನಪಟ್ಟಣ : ತಾಲ್ಲೂಕಿನಿಂದ ಬೆಂಗಳೂರಿಗೆ ಹೋಗಿ, ಜೀವನ ಕಟ್ಟಿಕೊಂಡು ತಾಲ್ಲೂಕಿಗೆ ಏನಾದರೂ ಕೊಡುಗೆ ನೀಡಬೇಕೆಂಬ ಹಂಬಲದಿಂದ ಕ್ರಿಯೇಟಿವ್ ಅಸೋಸಿಯೇಷನ್ ಮತ್ತ

ದುಶ್ಚಟದಿಂದ ದೂರವಿರಿ, ಆರೋಗ್ಯ ಕಾಪಾಡಿಕೊಳ್ಳಿ : ಪ್ರತಿಮಾ ಕೆ.ವಿ
ದುಶ್ಚಟದಿಂದ ದೂರವಿರಿ, ಆರೋಗ್ಯ ಕಾಪಾಡಿಕೊಳ್ಳಿ : ಪ್ರತಿಮಾ ಕೆ.ವಿ

ರಾಮನಗರ, ಜೂ. 17:   ಇತ್ತೀಚೆಗೆ ಅತಿ ಹೆಚ್ಚು ಹಲವಾರು ದುಶ್ಚಟಗಳು ಮನುಷ್ಯನನ್ನು ಆವರಸಿಕೊಂಡಿವೆ. ಇದರಿಂದಾಗಿ ನೂರಾರು ಖಾಯಿಲೆಗಳು ದೇಹ ಹೊಕ್ಕು ನಿತ್ಯ ಸಾ

ಫ್ಲೋರೋಸಿಸ್ ನಿಯಂತ್ರಿಸಿ ಉತ್ತಮ ಜೀವನ ನಡೆಸುವಂತೆ ಸಲಹೆ - ಡಾ.ಅನಿಲ್
ಫ್ಲೋರೋಸಿಸ್ ನಿಯಂತ್ರಿಸಿ ಉತ್ತಮ ಜೀವನ ನಡೆಸುವಂತೆ ಸಲಹೆ - ಡಾ.ಅನಿಲ್

ರಾಮನಗರ, ಜೂ. 15:   ಫ್ಲೋರೈಡ್ ನಮ್ಮ ದೇಹಕ್ಕೆ ಬೇಕಾದ ಒಂದು ಖನಿಜಾಂಶ ನಾವು ಸೇವಿಸುವ ಆಹಾರ ಮತ್ತು ಕುಡಿಯುವ ನೀರಿನಲ್ಲಿ ಅವಶ್ಯಕತೆಗಿಂತ ಹೆಚ್ಚು ಫ್ಲೋರೈಡ

ಆರೋಗ್ಯ ಕೇಂದ್ರದಲ್ಲಿ ದೊರೆಯುವ ಸೇವೆಗಳನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದ ಬಿ.ಎಸ್.ಗಂಗಾಧರ್.
ಆರೋಗ್ಯ ಕೇಂದ್ರದಲ್ಲಿ ದೊರೆಯುವ ಸೇವೆಗಳನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದ ಬಿ.ಎಸ್.ಗಂಗಾಧರ್.

ರಾಮನಗರ: ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಕೆ.ಕರೇನಹಳ್ಳಿ ಇವರ ಸಂಯುಕ್ತ ಆಶ್ರ

ಶ್ರೀಗಿರಿಪುರ ಗ್ರಾಪಂ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆದ ಆರೋಗ್ಯ ತಪಾಸಣಾ ಶಿಬಿರ
ಶ್ರೀಗಿರಿಪುರ ಗ್ರಾಪಂ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆದ ಆರೋಗ್ಯ ತಪಾಸಣಾ ಶಿಬಿರ

ರಾಮನಗರ, ಜೂ. 07:   ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಾತ್ಮಗಾಂಧಿ ನರೇಗಾ ಉದ್ಯೋಗ ಖಾತ್ರಿ ಯೋಜನೆ ಹಾಗೂ ಕುದೂರು ಪ್ರ

Top Stories »  


Top ↑