Tel: 7676775624 | Mail: info@yellowandred.in

Language: EN KAN

    Follow us :

ಕ್ರಿಯೇಟಿವ್ ಅಸೋಸಿಯೇಷನ್ ಹಾಗೂ ಸೊಸೈಟಿ ವತಿಯಿಂದ ಶನಿವಾರ ನಗರದಲ್ಲಿ ಬೃಹತ್ ಉಚಿತ ಆರೋಗ್ಯ ಶಿಬಿರ

Posted date: 25 Jul, 2023

Powered by:     Yellow and Red

ಕ್ರಿಯೇಟಿವ್ ಅಸೋಸಿಯೇಷನ್ ಹಾಗೂ ಸೊಸೈಟಿ ವತಿಯಿಂದ ಶನಿವಾರ ನಗರದಲ್ಲಿ ಬೃಹತ್ ಉಚಿತ ಆರೋಗ್ಯ ಶಿಬಿರ

ಚನ್ನಪಟ್ಟಣ : ತಾಲ್ಲೂಕಿನಿಂದ ಬೆಂಗಳೂರಿಗೆ ಹೋಗಿ, ಜೀವನ ಕಟ್ಟಿಕೊಂಡು ತಾಲ್ಲೂಕಿಗೆ ಏನಾದರೂ ಕೊಡುಗೆ ನೀಡಬೇಕೆಂಬ ಹಂಬಲದಿಂದ ಕ್ರಿಯೇಟಿವ್ ಅಸೋಸಿಯೇಷನ್ ಮತ್ತು ಕೋ-ಆಪರೇಟಿವ್ ಸೊಸೈಟಿ ಸ್ಥಾಪಿಸಿ ಅದರ ಮೂಲಕ ತಾಲ್ಲೂಕಿನ ಜನತೆಗೆ ಹಲವಾರು ಕಾರ್ಯಕ್ರಮಗಳನ್ನು ನೀಡಿ, ಇದೇ ಶನಿವಾರವೂ ಸಹ ಬೆಂಗಳೂರಿನ ಕ್ರಿಯೇಟಿವ್ ಅಸೋಸಿಯೇಷನ್ ಹಾಗೂ ಕ್ರಿಯೇಟಿವ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 25ನೇ ವರ್ಷದ ಬೆಳ್ಳಿ ಹಬ್ಬದ ಪ್ರಯುಕ್ತ ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಜು.29ರ ಶನಿವಾರ ಬೃಹತ್ ಆರೋಗ್ಯ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಕ್ರಿಯೇಟಿವ್ ಕ್ರೆಡಿಟ್ ಕೋ-ಆಪರೇಟೀವ್ ಸೊಸೈಟಿ ಅಧ್ಯಕ್ಷ ಸೋಗಾಲ ಪುಟ್ಟಸ್ವಾಮಿ ತಿಳಿಸಿದ್ದಾರೆ.

ನಗರದ ಒಕ್ಕಲಿಗ ಸಾರ್ವಜನಿಕ ವಿದ್ಯಾಸಂಸ್ಥೆ ಆವರಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 25ವರ್ಷದ ಹಿಂದೆ ತಾಲೂಕಿನವರೆಲ್ಲಾ ಸೇರಿ ಆರಂಭಿಸಿದ ಕ್ರಿಯೇಟಿವ್ ಅಸೋಷಿಯೇಷನ್ ಹಲವಾರು ಸಾಮಾಜಿಕ ಕಾರ್ಯಗಳನ್ನು ಆಯೋಜಿಸಿಕೊಂಡು ಬರುತ್ತಿದೆ. ಅದರಂತೆ ಈ ಬಾರಿ ಚನ್ನಪಟ್ಟಣದಲ್ಲಿ ಬೃಹತ್ ಆರೋಗ್ಯ ಶಿಬಿರ ಏರ್ಪಡಿಸಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಅಸೋಸಿಯೇಷನ್‍ನಿಂದ ಹಲವಾರು ಶಾಲೆಗಳಲ್ಲಿ ಶೌಚಾಲಯ ನಿರ್ಮಿಸಲಾಗಿದೆ. ಇದಲ್ಲದೇ ಹಲವಾರು ಶಾಲೆಗಳಿಗೆ ಕಂಪ್ಯೂಟರ್ ಸೇರಿದಂತೆ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಕಲ್ಪಿಸುವ ಸಾಮಗ್ರಿಗಳನ್ನು ನೀಡಲಾಗಿದೆ. ಈ ಹಿಂದೆಯೂ ಸಹ ಚನ್ನಪಟ್ಟಣದ ಅರಳಾಳುಸಂದ್ರ ಗ್ರಾಮ ಸೇರಿದಂತೆ ಕೆಲವು ಗ್ರಾಮಗಳಲ್ಲಿ ಆರೋಗ್ಯ ಶಿಬಿರ ಏರ್ಪಡಿಸಲಾಗಿದ್ದು, ಸಂಸ್ಥೆ ಸದಾ ಸಾಮಾಜಿಕ ಕಾರ್ಯಗಳಲ್ಲಿ ಮಂಚೂಣಿಯಲ್ಲಿದೆ ಎಂದು ತಿಳಿಸಿದರು.

ಅಸೋಸಿಯೇಷನ್ ಗೌರವಾಧ್ಯಕ್ಷ ರವಿರಾಜೆ ಅರಸ್ ಮಾತನಾಡಿ, ಆರೋಗ್ಯ ಶಿಬಿರದಲ್ಲಿ ನರರೋಗ, ಮಧುಮೇಹ, ಮೂಳೆ ವಿಭಾಗ, ಕಣ್ಣಿನ ವಿಭಾಗ, ಸ್ತ್ರೀರೋಗ, ಕ್ಯಾನ್ಸರ್ ಸೇರಿದಂತೆ ಎಲ್ಲಾ ರೋಗಳಿಗೆ ಸಂಬಂಧಿಸಿದ ಪರೀಕ್ಷೆ ನಡೆಸಲಾಗುವುದು. ಬೆಂಗಳೂರಿನ ಕೆಂಪೇಗೌಡ ವೈದ್ಯಕೀಯ ಮಹಾ ವಿಶ್ವವಿದ್ಯಾಲಯ, ಸಪ್ತಗಿರಿ ವೈದ್ಯಕೀಯ ಮಹಾ ವಿದ್ಯಾಲಯ, ಈಸ್ಟ್ ಪಾಯಿಂಟ್ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆ, ಕಿದ್ವಾಯಿ ಆಸ್ಪತ್ರೆಯ ನುರಿತ ವೈದ್ಯರು ಶಿಬಿರದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಆರೋಗ್ಯ ಶಿಬಿರದಲ್ಲಿ ಪರೀಕ್ಷೆ ನಡೆಸಿದ ನಂತರ ಅಗತ್ಯ ಕಂಡುಬಂದ ರೋಗಿಗಳಿಗೆ ಶಸ್ತ್ರಚಿಕಿತ್ಸೆಯನ್ನು ಉಚಿತವಾಗಿ ಮಾಡಲಾಗುವುದು. ಕಣ್ಣಿನ ದೋಷವಿರುವವರಿಗೆ ಉಚಿತವಾಗಿ ಕನ್ನಡಕ ವಿತರಿಸಲಾಗುವುದು. ಪರೀಕ್ಷೆ ನಡೆಸಿದ ನಂತರ ರೋಗಿಗಳಲ್ಲಿ ಎಲ್ಲಾ ಔಷಧವನ್ನು ಉಚಿತವಾಗಿ ವಿತರಿಸಲಾಗುವುದು. ಯಾರಿಂದಲೂ ಯಾವುದೇ ರೀತಿಯ ಶುಲ್ಕ ಪಡೆಯದೇ ಎಲ್ಲ ಅಗತ್ಯ ಚಿಕಿತ್ಸೆಯನ್ನು ಉಚಿತವಾಗಿ ಕಲ್ಪಿಸಲಾಗುವುದು ಎಂದು ಮಾಹಿತಿ ನೀಡಿದರು.

ಕ್ರಿಯೇಟಿವ್ ಕ್ರೆಡಿಟ್ ಕೋ-ಆಪರೇಟೀವ್ ಸೊಸೈಟಿ ಉಪಾಧ್ಯಕ್ಷ ಹಾಗೂ ಒಕ್ಕಲಿಗರ ಸಂಘದ ನಿರ್ದೇಶಕ ಚಕ್ಕರೆ ವೆಂಕಟರಾಮೇಗೌಡ  ಮಾತನಾಡಿ, ಸಮಾಜಕ್ಕೆ ಏನಾದರೂ ಕೊಡುಗೆ ನೀಡಬೇಕು ಎಂಬ ಉದ್ದೇಶದಿಂದ 25ವರ್ಷದ ಹಿಂದೆ ಬೆಂಗಳೂರಿನಲ್ಲಿ ಕ್ರಿಯೇಟಿವ್ ಅಸೋಸಿಯೇಷನ್ ಆರಂಭಿಸಲಾಯಿತು. ಅಂದಿನಿಂದ ಸಂಸ್ಥೆ ಸಾಕಷ್ಟು ಸಮಾಜಮುಖಿ ಕಾರ್ಯಗಳನ್ನು ನಡೆಸಿಕೊಂಡು ಬರುತ್ತಿದೆ. ಇಂದಿನ ದಿನಮಾನದಲ್ಲಿ ವೈದ್ಯಕೀಯ ವೆಚ್ಚಗಳು ದುಬಾರಿಯಾಗಿದ್ದು, ಇದಕ್ಕೆ ಹೆದರಿ ಜನ ತಮ್ಮ ನೋವುಗಳನ್ನು ನುಂಗಿಕೊಂಡು ಜೀವನ ನಡೆಸುತ್ತಿದ್ದಾರೆ. ಇವರಿಗೆ ನೆರವಾಗಬೇಕೆಂಬ ಉದ್ದೇಶದಿಂದ ಹೆಚ್ಚು ಹೆಚ್ಚು ಆರೋಗ್ಯ ಶಿಬಿರಗಳನ್ನು  ಎಲ್ಲೆಡೆ ಏರ್ಪಡಿಸಲಾಗುತ್ತಿದ್ದು, ಜನ ಇದನ್ನು ಸದುಪಯೋಗಪಡಿಸಿಕೊಂಡು ತಮ್ಮ ಆರೋಗ್ಯ ಸಮಸ್ಯೆಯನ್ನು ಪರಿಹರಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಕ್ರಿಯೇಟಿವ್ ಅಸೋಸಿಯೇಷನ್ ಅಧ್ಯಕ್ಷ ಶಿವನಂಜಯ್ಯ, ಕಾರ್ಯದರ್ಶಿ ಸಂದೇಶ್ ಆರ್. ಶೆಟ್ಟಿ, ಉಪಾಧ್ಯಕ್ಷರಾದ ಚಂದ್ರಶೇಖರ್, ಕೊಮಾರಿಗೌಡ, ವರದರಾಜು, ಗಂಗಾಧರ್, ಲೋಕೇಶ್ ಇತರರು ಉಪಸ್ಥಿತರಿದ್ದರು.

ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in health »

ವ್ಯವಹಾರಕ್ಕಾಗಿ ಆಸ್ಪತ್ರೆಯಲ್ಲಾ, ಸೇವೆಗಾಗಿ ನಮ್ಮ ಆಸ್ಪತ್ರೆ. ಕಾಂಗರೂ ಆಸ್ಪತ್ರೆಯ ಸಂಸ್ಥಾಪಕ ಡಾ ಶೇಖರ್ ಸುಬ್ಬಯ್ಯ
ವ್ಯವಹಾರಕ್ಕಾಗಿ ಆಸ್ಪತ್ರೆಯಲ್ಲಾ, ಸೇವೆಗಾಗಿ ನಮ್ಮ ಆಸ್ಪತ್ರೆ. ಕಾಂಗರೂ ಆಸ್ಪತ್ರೆಯ ಸಂಸ್ಥಾಪಕ ಡಾ ಶೇಖರ್ ಸುಬ್ಬಯ್ಯ

ರಾಮನಗರ: ನಾವು ಹಣಕ್ಕಾಗಿ ಆಸ್ಪತ್ರೆ ನಡೆಸುವುದಿಲ್ಲ, ಇದೊಂದು ಸೇವೆ ಎಂದು ಪರಿಗಣಿಸಿ ಆಸ್ಪತ್ರೆ ನಡೆಸುತ್ತಿದ್ದೇವೆ. ಬೆಂಗಳೂರು ಮೈಸೂರು ಸೇರಿದಂತೆ ನಾಲ್ಕು

೪೬ ವರ್ಷದ ಮಹಿಳೆಯ ಹೊಟ್ಟೆಯಲ್ಲಿದ್ದ ೧೦ ಕಿಲೋ ಕ್ಯಾನ್ಸರ್ ಗಡ್ಡೆ ಹೊರತೆಗೆದ ಬಾಲು ಆಸ್ಪತ್ರೆಯ ವೈದ್ಯರು
೪೬ ವರ್ಷದ ಮಹಿಳೆಯ ಹೊಟ್ಟೆಯಲ್ಲಿದ್ದ ೧೦ ಕಿಲೋ ಕ್ಯಾನ್ಸರ್ ಗಡ್ಡೆ ಹೊರತೆಗೆದ ಬಾಲು ಆಸ್ಪತ್ರೆಯ ವೈದ್ಯರು

ಚನ್ನಪಟ್ಟಣ: ತಾಲ್ಲೂಕಿನ ಗ್ರಾಮವೊಂದರ ೪೬ ವರ್ಷದ ಮಹಿಳೆಯೊಬ್ಬರ ಗರ್ಭ (ಅಂಡಾಶಯ) ದಲ್ಲಿದ್ದ ಬರೋಬ್ಬರಿ ೧೦ ಕಿಲೋ ೩೦೦ ಗ್ರಾಂ ತೂಕದ ಕ್ಯಾನ್ಸರ್ ಗಡ್ಡೆ ಯನ್ನ

ಹೊಂಗನೂರು, ಕೋಡಂಬಳ್ಳಿ ಗ್ರಾಮದಲ್ಲಿ ಪರವಾನಗಿ ಇಲ್ಲದ ಖಾಸಗಿ ಆಸ್ಪತ್ರೆಗಳಿಗೆ ಬೀಗ ಜಡಿದ ಟಿಹೆಚ್‌ಓ
ಹೊಂಗನೂರು, ಕೋಡಂಬಳ್ಳಿ ಗ್ರಾಮದಲ್ಲಿ ಪರವಾನಗಿ ಇಲ್ಲದ ಖಾಸಗಿ ಆಸ್ಪತ್ರೆಗಳಿಗೆ ಬೀಗ ಜಡಿದ ಟಿಹೆಚ್‌ಓ

ಚನ್ನಪಟ್ಟಣ: ತಾಲ್ಲೂಕಿನ ಹೊಂಗನೂರು ಗ್ರಾಮದಲ್ಲಿ ಗೋಪಿ ಕ್ಲಿನಿಕ್ ಎಂಬ ಖಾಸಗಿ ಆಸ್ಪತ್ರೆ ಇದ್ದು, ಗೋಪಿ ಎಂಬುವವರು ವೈದ್ಯರಾಗಿ ಸೇವೆ ನಿರ್ವಹಿಸುತ್ತಿದ್ದಾರ

ಉತ್ತಮ ಆರೋಗ್ಯಕ್ಕೆ ಆಯುರ್ವೇದವೇ ದಿವ್ಯ ಔಷಧ ಡಾ ಸಹನಾ ಕೃಷ್ಣ
ಉತ್ತಮ ಆರೋಗ್ಯಕ್ಕೆ ಆಯುರ್ವೇದವೇ ದಿವ್ಯ ಔಷಧ ಡಾ ಸಹನಾ ಕೃಷ್ಣ

ಚನ್ನಪಟ್ಟಣ: ಪುರಾಣೇತೀಹಾಸದಿಂದಲೂ ಪ್ರಖ್ಯಾತವಾಗಿರುವ ಔಷಧ ಎಂದರೆ ಅದು ಆಯುರ್ವೇದ ಔಷಧ, ಜಗತ್ತಿನ ಅತ್ಯಂತ ಪ್ರಾಚೀನ ಔಷಧವೂ ಹೌದು, ನಮ್ಮ ಪ್ರಕೃತಿ ಹೇಗೆ ಸಮ

ದೊಡ್ಡಮಳೂರು ಗ್ರಾಮದಲ್ಲಿ ದೀರ್ಘಾಯು ವೆಲ್ ನೆಸ್ ಆಯುರ್ವೇದ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ಶಿಬಿರ
ದೊಡ್ಡಮಳೂರು ಗ್ರಾಮದಲ್ಲಿ ದೀರ್ಘಾಯು ವೆಲ್ ನೆಸ್ ಆಯುರ್ವೇದ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ಶಿಬಿರ

ಚನ್ನಪಟ್ಟಣ: ತಾಲ್ಲೂಕಿನ ದೊಡ್ಡಮಳೂರು ಗ್ರಾಮದ ದೇವಸ್ಥಾನದ ಬೀದಿಯಲ್ಲಿರುವ ದೀರ್ಘಾಯು ವೆಲ್ ನೆಸ್ ಸೆಂಟರ್ ಇವರ ವತಿಯಿಂದ ನಾಳೆ (ಭಾನುವಾರ) ಬೆಳಿ

ಕ್ರಿಯೇಟಿವ್ ಅಸೋಸಿಯೇಷನ್ ಹಾಗೂ ಸೊಸೈಟಿ ವತಿಯಿಂದ ಶನಿವಾರ ನಗರದಲ್ಲಿ ಬೃಹತ್ ಉಚಿತ ಆರೋಗ್ಯ ಶಿಬಿರ
ಕ್ರಿಯೇಟಿವ್ ಅಸೋಸಿಯೇಷನ್ ಹಾಗೂ ಸೊಸೈಟಿ ವತಿಯಿಂದ ಶನಿವಾರ ನಗರದಲ್ಲಿ ಬೃಹತ್ ಉಚಿತ ಆರೋಗ್ಯ ಶಿಬಿರ

ಚನ್ನಪಟ್ಟಣ : ತಾಲ್ಲೂಕಿನಿಂದ ಬೆಂಗಳೂರಿಗೆ ಹೋಗಿ, ಜೀವನ ಕಟ್ಟಿಕೊಂಡು ತಾಲ್ಲೂಕಿಗೆ ಏನಾದರೂ ಕೊಡುಗೆ ನೀಡಬೇಕೆಂಬ ಹಂಬಲದಿಂದ ಕ್ರಿಯೇಟಿವ್ ಅಸೋಸಿಯೇಷನ್ ಮತ್ತ

ದುಶ್ಚಟದಿಂದ ದೂರವಿರಿ, ಆರೋಗ್ಯ ಕಾಪಾಡಿಕೊಳ್ಳಿ : ಪ್ರತಿಮಾ ಕೆ.ವಿ
ದುಶ್ಚಟದಿಂದ ದೂರವಿರಿ, ಆರೋಗ್ಯ ಕಾಪಾಡಿಕೊಳ್ಳಿ : ಪ್ರತಿಮಾ ಕೆ.ವಿ

ರಾಮನಗರ, ಜೂ. 17:   ಇತ್ತೀಚೆಗೆ ಅತಿ ಹೆಚ್ಚು ಹಲವಾರು ದುಶ್ಚಟಗಳು ಮನುಷ್ಯನನ್ನು ಆವರಸಿಕೊಂಡಿವೆ. ಇದರಿಂದಾಗಿ ನೂರಾರು ಖಾಯಿಲೆಗಳು ದೇಹ ಹೊಕ್ಕು ನಿತ್ಯ ಸಾ

ಫ್ಲೋರೋಸಿಸ್ ನಿಯಂತ್ರಿಸಿ ಉತ್ತಮ ಜೀವನ ನಡೆಸುವಂತೆ ಸಲಹೆ - ಡಾ.ಅನಿಲ್
ಫ್ಲೋರೋಸಿಸ್ ನಿಯಂತ್ರಿಸಿ ಉತ್ತಮ ಜೀವನ ನಡೆಸುವಂತೆ ಸಲಹೆ - ಡಾ.ಅನಿಲ್

ರಾಮನಗರ, ಜೂ. 15:   ಫ್ಲೋರೈಡ್ ನಮ್ಮ ದೇಹಕ್ಕೆ ಬೇಕಾದ ಒಂದು ಖನಿಜಾಂಶ ನಾವು ಸೇವಿಸುವ ಆಹಾರ ಮತ್ತು ಕುಡಿಯುವ ನೀರಿನಲ್ಲಿ ಅವಶ್ಯಕತೆಗಿಂತ ಹೆಚ್ಚು ಫ್ಲೋರೈಡ

ಆರೋಗ್ಯ ಕೇಂದ್ರದಲ್ಲಿ ದೊರೆಯುವ ಸೇವೆಗಳನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದ ಬಿ.ಎಸ್.ಗಂಗಾಧರ್.
ಆರೋಗ್ಯ ಕೇಂದ್ರದಲ್ಲಿ ದೊರೆಯುವ ಸೇವೆಗಳನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದ ಬಿ.ಎಸ್.ಗಂಗಾಧರ್.

ರಾಮನಗರ: ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಕೆ.ಕರೇನಹಳ್ಳಿ ಇವರ ಸಂಯುಕ್ತ ಆಶ್ರ

ಶ್ರೀಗಿರಿಪುರ ಗ್ರಾಪಂ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆದ ಆರೋಗ್ಯ ತಪಾಸಣಾ ಶಿಬಿರ
ಶ್ರೀಗಿರಿಪುರ ಗ್ರಾಪಂ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆದ ಆರೋಗ್ಯ ತಪಾಸಣಾ ಶಿಬಿರ

ರಾಮನಗರ, ಜೂ. 07:   ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಾತ್ಮಗಾಂಧಿ ನರೇಗಾ ಉದ್ಯೋಗ ಖಾತ್ರಿ ಯೋಜನೆ ಹಾಗೂ ಕುದೂರು ಪ್ರ

Top Stories »  

Top ↑