ಪೋಲೀಸ್ ಇಲಾಖೆಯಲ್ಲಿ ಕೆಲಸಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು.ಸೆ.೧೫:ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (ಸಾಮಾನ್ಯ ಪುರುಷ ಮತ್ತು ಪುರುಷ ತೃತೀಯಲಿಂಗ) (ಸಿಎಆರ್ / ಡಿಎಆರ್)-೩೦೬೪ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸೆಪ್ಟಂಬರ್ ೧೯ರಿಂದ ಆನ್ಲೈನ್ ಮೂಲಕ ಅರ್ಜಿ ಪಡೆದು ಅಕ್ಟೋಬರ್ ೩೧ರ ಒಳಗೆ ಸಲ್ಲಿಸಬಹುದಾಗಿದೆ. ಅರ್ಜಿ ಶುಲ್ಕವನ್ನು ಪಾವತಿಸಲು ನವೆಂಬರ್ ೩ ಕೊನೆಯ ದಿನಾಂಕವಾಗಿದೆ.
ಅರ್ಜಿಗಳನ್ನು ಇಲಾಖೆಯ ಅಧಿಕೃತ ವೆಬ್ಸೈಟ್ https://ksp.karnataka.gov.in/ or https://ksp-recruitment.in/ ನಲ್ಲಿ ಆನ್-ಲೈನ್ (On-line) (ಎಲೆಕ್ಟ್ರಾನಿಕ್ ಮಾರ್ಗ) ಮುಖಾಂತರ ಮಾತ್ರ ಸಲ್ಲಿಸತಕ್ಕದ್ದು, ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ.
ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕವಾಗಿದೆ.
ಮುಕ್ತಾಯವಾದ ನಂತರ ೧೦ ದಿನಗಳ ಕಾಲಾವಕಾಶ ನೀಡಲಾಗುತ್ತಿದ್ದು, ಸದರಿ ದಿನಾಂಕದೊಳಗಾಗಿ ಅಭ್ಯರ್ಥಿಯು ತಾನು ಸಲ್ಲಿಸಿರುವ ಅರ್ಜಿಯಲ್ಲಿ ಹೆಸರು, ಜನ್ಮ ದಿನಾಂಕ, ಕೋರಿರುವ ಮೀಸಲಾತಿ ಹಾಗೂ ಇತರೇ ಯಾವುದೇ ಅಂಶಗಳ ಬದಲಾವಣೆ ಮಾಡಬೇಕಾದಲ್ಲಿ ಖುದ್ದಾಗಿ / ಅಂಚೆ ಮೂಲಕ ಸಂಬಂಧಪಟ್ಟ ದೃಢೀಕೃತ ದಾಖಲೆಗಳೊಂದಿಗೆ ಡೈರೆಕ್ಟರ್ ಜನರಲ್ ಆಫ್ ಪೊಲೀಸ್, ನೇಮಕಾತಿ, ಕಾರ್ಲಟನ್ ಭವನ, ಅರಮನೆ ರಸ್ತೆ, ಬೆಂಗಳೂರು ರವರ ಕಛೇರಿಗೆ ಸಲ್ಲಿಸತಕ್ಕದ್ದು.
ನಿಗದಿಪಡಿಸಿದ ಕೊನೆಯ ದಿನಾಂಕದ ನಂತರ ಸಲ್ಲಿಸುವ ಯಾವುದೇ ಮನವಿಗಳನ್ನು ಪರಿಗಣಿಸಲಾಗುವುದಿಲ್ಲ. ಅರ್ಹ ಅಭ್ಯರ್ಥಿಗಳು “ಅನುಬಂಧ-ಅ” ರಲ್ಲಿ ನೀಡಲಾಗಿರುವ ಖಾಲಿ ಹುದ್ದೆಗಳ ವರ್ಗೀಕರಣವನ್ನು ನೋಡಿ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.
ಗೋ ರಾ ಶ್ರೀನಿವಾಸ...
ಮೊ:9845856139.
ಸನ್ಮಿತ್ರದಿಂದ ಇನ್ನಷ್ಟು ಸುದ್ದಿ ವೀಡಿಯೊಗಳು
Recent news in jobs »

ಅ.12 ರಂದು ನೇರಸಂದರ್ಶನ
ರಾಮನಗರ-ಅ.10: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಅಕ್ಟೋಬರ್ 12ರಂದು ಬೆಳಗ್ಗೆ 10.30.ಕ್ಕೆ ಜಿಲ್ಲಾ ಕೌಶಲ್ಯ ಕೇಂದ್ರ/ಜಿಲ್ಲಾ

ಪೋಲೀಸ್ ಇಲಾಖೆಯಲ್ಲಿ ಕೆಲಸಕ್ಕಾಗಿ ಅರ್ಜಿ ಆಹ್ವಾನ
ಬೆಂಗಳೂರು.ಸೆ.೧೫:ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (ಸಾಮಾನ್ಯ ಪುರುಷ ಮತ್ತು ಪುರುಷ ತೃತೀಯಲಿಂಗ) (

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಕಾನೂನು ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ
ಬೆಂಗಳೂರು: ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಕಾನೂನು ಅಧಿಕಾರಿ ಹುದ್ದೆಗೆ ಅರ್ಹ ವಕೀಲರಿಂದ ಅರ್ಜಿ ಆಹ್ವಾನಿಸಲಾಗಿದೆ.&nbs

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ 919 ಓತ್ ಕಮಿಷನರ್ ಹುದ್ದೆ; ನೇಮಕಾತಿಗೆ ಅಧಿಸೂಚನೆ ಪ್ರಕಟ
ಬೆಂಗಳೂರು:
ರಾಜ್ಯದಲ್ಲಿ ವಿವಿಧ ಜಿಲ್ಲೆಗಳ ನ್ಯಾಯಾಲಯಗಳಲ್ಲಿ ಖಾಲಿ ಇರುವ Oath commissioner ಸ್ಥಾನಗಳನ್ನು ತುಂಬಲು ಯುವ ವಕೀಲರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 29

ಉಚಿತ ಸೆಲ್ ಫೋನ್ ರಿಪೇರಿ ಮತ್ತು ಸರ್ವಿಸಿಂಗ್ ತರಬೇತಿಗೆ ಅರ್ಜಿ ಆಹ್ವಾನ
ರಾಮನಗರ:ಅ/31/20/ಶನಿವಾರ.
ಬಿಡದಿ ಬಳಿಯ ಕೆನರಾ ಬ್ಯಾಂಕ್ ನ ಎ.ಡಿ.ಪೈ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವಕರಿಗಾಗಿ 30 ದಿನಗಳ ಉಚಿತ ಸೆಲ್ ಫೋನ್ ರಿಪೇರಿ ಮತ್ತು ಸರ್ವಿಸಿಂಗ್. ತರಬೇತಿಯನ್ನು

ಉಚಿತ ಎಲೆಕ್ಟ್ರಿಕಲ್ ಮೋಟರ್ ರೀವೈಂಡಿಗ್ ಅಂಡ್ ಪಂಪ್ ಸೆಟ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ
ರಾಮನಗರ:ಅ/11/20/ಭಾನುವಾರ. ಬಿಡದಿ ಬಳಿಯ ಕೆನರಾ ಬ್ಯಾಂಕ್ ನ ಎ.ಡಿ.ಪೈ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವಕರಿಗಾಗಿ

ನರೇಗಾ ಅಕೌಂಟ್ಸ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ
ರಾಮನಗರ:ಆ/08/20/ಶನಿವಾರ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ (ನರೇಗಾ) ಸಮರ್ಪಕ ಅನುಷ್ಠಾನಕ್ಕಾಗಿ ರಾಮನಗರ ಜಿಲ್ಲಾ ಪಂಚಾಯತಿ ವ್

ಅಗ್ನಿಶಾಮಕ ಇಲಾಖೆಯಿಂದ ೧೫೬೭ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು: ಜೂ:೨೦/೨೦/ಶನಿವಾರ. ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು ಅಗ್ನಿಶಾಮಕ ಸಿಬ್ಬಂದಿಯ ೧೫೬೭ ವಿವಿಧ ವೃಂದಗಳ ಹು

ಗುತ್ತಿಗೆ ಆಧಾರದ ಮೇಲೆ ವೈದ್ಯರನ್ನು ನೇಮಕ ಮಾಡಿಕೊಳ್ಳಲು ಸಂದರ್ಶನ
ರಾಮನಗರ:ಏ/೦೩/೨೦/ಶುಕ್ರವಾರ. ರಾಜ್ಯಾದ್ಯಂತ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖ
ಸೇನೆ ಹುದ್ದೆಗೆ ಅರ್ಜಿ ಹಾಕಿ
ಹೊಸದಿಲ್ಲಿ: ಭಾರತೀಯ ಸೇನೆಯ ವಿವಿಧ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸಶಸ್ತ್ರ ಪಡೆಯ ತಳಮಟ್ಟದಲ್ಲಿ ಹೋರಾಟ ನಡೆಸುವ ಘಟಕದ 175 ವಿವಿಧ ಶ್ರೇಣಿಯ ಹುದ್ದೆಗಳನ್ನು ತುಂಬಲಾಗುತ್ತದೆ. ಮಹ
ಪ್ರತಿಕ್ರಿಯೆಗಳು