Tel: 7676775624 | Mail: info@yellowandred.in

Language: EN KAN

    Follow us :


ಸೆ.30 ರವರೆಗೆ ಬೆಳಿಗ್ಗೆ 8 ರಿಂದ ರಾತ್ರಿ 8 ರವರೆಗೆ ಉಪನೋಂದಣಾಧಿಕಾರಿಗಳ ಕಚೇರಿ ಕಾರ್ಯನಿರ್ವಹಣೆ

Posted date: 23 Sep, 2023

Powered by:     Yellow and Red

ಸೆ.30 ರವರೆಗೆ ಬೆಳಿಗ್ಗೆ 8 ರಿಂದ ರಾತ್ರಿ 8 ರವರೆಗೆ ಉಪನೋಂದಣಾಧಿಕಾರಿಗಳ ಕಚೇರಿ ಕಾರ್ಯನಿರ್ವಹಣೆ

ಬೆಂಗಳೂರು:ಸೆ.22: ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕೇಂದ್ರ ಮೌಲ್ಯ ಮಾಪನ ಸಮಿತಿಯ ( Valuation Committee) 2023-24ನೇ ಸಾಲಿನಲ್ಲಿ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯ ಮಾರ್ಗಸೂಚಿ ದರಗಳನ್ನು ಪರಿಷ್ಕರಣೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ನೋಂದಣಿಗೆ ಹಾಜರುಪಡಿಸುವ ದಸ್ತಾವೇಜುಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳು ಇರುತ್ತವೆ,  ಸಾರ್ವಜನಿಕ ಹಿತದೃಷ್ಟಿಯಿಂದ ರಾಜ್ಯದ ಎಲ್ಲಾ ಉಪನೋಂದಣಿ ಕಛೇರಿಗಳ ಕೆಲಸದ ಅವಧಿಯನ್ನು ಸೆ.23  ರಿಂದ ಜಾರಿಗೆ ಬರುವಂತೆ ಬೆಳಿಗ್ಗೆ 8  ಗಂಟೆಯಿಂದ ರಾತ್ರಿ 8  ಗಂಟೆವರೆಗೆ ಕಾರ್ಯ ನಿರ್ವಹಿಸಲು ಕಛೇರಿ ಅವಧಿಯನ್ನು ವಿಸ್ತರಿಸಿ ಆದೇಶಿಸಲಾಗಿದೆ.


 ಸೆಪ್ಟೆಂಬರ್ 23 ನಾಲ್ಕನೇ ಶನಿವಾರವದಂದೂ  ಕೂಡ ಈ ಅವಧಿಯಲ್ಲಿ ಕಾರ್ಯ ನಿರ್ವಹಿಸಲಾಗುವುದು. ಈ ಕೆಲಸದ ಅವಧಿಯು ಸೆ.30 ರವರೆಗೆ ಮಾತ್ರ ಜಾರಿಯಲ್ಲಿರುತ್ತದೆ. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದು ಕೊಳ್ಳಬಹುದು ಎಂದು ನೋಂದಣಿ ಮಹಾಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತರಾದ ಬಿ.ಆರ್.ಮಮತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in kanakapura »

ಡಾ. ಶ್ರೀ ಶ್ರೀ ಮುಮ್ಮಡಿ ನಿರ್ವಾಣ ಮಹಾಸ್ವಾಮಿಗಳ ನೇತೃತ್ವದಲ್ಲಿ ಗುರು ಕೋರಣ್ಯ
ಡಾ. ಶ್ರೀ ಶ್ರೀ ಮುಮ್ಮಡಿ ನಿರ್ವಾಣ ಮಹಾಸ್ವಾಮಿಗಳ ನೇತೃತ್ವದಲ್ಲಿ ಗುರು ಕೋರಣ್ಯ

ಕನಕಪುರ: ಪರಮಪೂಜ್ಯ ಶ್ರೀಡಾ. ಶ್ರೀ ಮುಮ್ಮಡಿ ನಿರ್ವಾಣ ಮಹಾಸ್ವ

ಜೂ. 17ರಂದು ವಿದ್ಯುತ್ ಅದಾಲತ್ ಸಭೆ
ಜೂ. 17ರಂದು ವಿದ್ಯುತ್ ಅದಾಲತ್ ಸಭೆ

ರಾಮನಗರ, ಜೂ. 15:   ಕನಕಪುರ ತಾಲ್ಲೂಕಿನ ಕನಕಪುರ ವಿಭಾಗದ ವ್ಯಾಪ್ತಿಗೆ ಒಳಪಡುವ ಗ್ರಾಮಗಳಲ್ಲಿ ಜೂ. 17 ರಂದು ಬೆಳಿಗ್ಗೆ 11 ಗಂಟೆಗೆ ವಿದ್

Top Stories »  


Top ↑