Tel: 7676775624 | Mail: info@yellowandred.in

Language: EN KAN

    Follow us :


ಟಿಎಪಿಸಿಎಂಎಸ್ ಚುನಾವಣೆ ರದ್ದು ದುರುದ್ದೇಶ, ದಿನಾಂಕ ಘೋಷಿಸುವಂತೆ ಆಗ್ರಹಿಸಿ ಪ್ರತಿಭಟನೆ

Posted date: 06 Dec, 2023

Powered by:     Yellow and Red

ಟಿಎಪಿಸಿಎಂಎಸ್ ಚುನಾವಣೆ ರದ್ದು ದುರುದ್ದೇಶ, ದಿನಾಂಕ ಘೋಷಿಸುವಂತೆ ಆಗ್ರಹಿಸಿ ಪ್ರತಿಭಟನೆ

ಚನ್ನಪಟ್ಟಣ: ತಾಲೂಕು ವ್ಯವಸಾಯೋತ್ಪನ್ನ ಸಹಕಾರ ಸಂಘದ ಚುನಾವಣೆಯನ್ನು ರಾತ್ರೋರಾತ್ರಿ ಹಠಾತ್ತಾಗಿ ಮುಂದೂಡಿದ ಕ್ರಮ ಖಂಡಿಸಿ ಹಾಗೂ ಇದಕ್ಕೆ ಕಾರಣಕರ್ತರಾದ ಅಧಿಕಾರಿಗಳನ್ನು ಅಮಾನತ್ತುಗೊಳಿಸುವಂತೆ ಆಗ್ರಹಿಸಿ ನಗರದ ಡಿವೈಎಸ್‍ಪಿ ಕಚೇರಿ ಎದುರು ಜೆಡಿಎಸ್ ತಾಲೂಕು ಘಟಕದಿಂದ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದರು.


ನಗರದ ಡಿವೈಎಸ್‍ಪಿ ಕಚೇರಿ ಮಂದೆ ಜಮಾಯಿಸಿದ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು, ಬಿಜೆಪಿ ಪಕ್ಷದ ಅಭ್ಯರ್ಥಿ ಪರವಾಗಿ ಕೆಲವರು ಸೇರಿದಂತೆ ಹಲವಾರು ಮಂದಿ ಜಮಾಯಿಸಿ ಪ್ರತಿಭಟಿಸಿದರು. 


ಟಿಎಪಿಸಿಎಂಎಸ್ ಚುನಾವಣೆ ನಡೆದರೆ ಕಾನೂನು ವ್ಯವಸ್ಥೆಗೆ ಧಕ್ಕೆಯಾಗುವ ಕುರಿತು ವರದಿ ನೀಡಿದ ಪೋಲೀಸ್ ಇಲಾಖೆ ಹಾಗೂ ಚುನಾವಣೆಯನ್ನು ಮುಂದೂಡಿದ ಚುನಾವಣಾಧಿಕಾರಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.


ಟಿಎಪಿಸಿಎಂಎಸ್ ಆಡಳಿತ ಮಂಡಳಿಯ ಆಯ್ಕೆಗೆ ಡಿ.3ರಂದು ಚುನಾವಣೆ ನಿಗದಿಯಾಗಿತ್ತು. ಆದರೆ, ಶನಿವಾರ ರಾತ್ರಿ ಸುಮಾರು 10 ಗಂಟೆ ವೇಳೆಗೆ ಚುನಾವಣೆ ಮುಂದೂಡಿಕೆಯಾಗಿರುವ ನೋಟಿಸ್ ಅನ್ನು ಸಂಘ ಗೋಡೆಗೆ ಚುನಾವಣಾಧಿಕಾರಿಗಳು ಅಂಟಿಸಿ ಹೋಗಿದ್ದಾರೆ. ವಿನಾಕರಣ ಚುನಾವಣೆಯನ್ನು ಮುಂದೂಡಿಕೆ ಮಾಡಿರುವುದು ಖಂಡನೀಯ. ಇಂದೇ ಟಿಎಪಿಸಿಎಂಎಸ್ ಚುನಾವಣೆಗೆ ದಿನಾಂಕ ಘೋಷಿಸಬೇಕು ಎಂದು ಆಗ್ರಹಿಸಿದರು.


ಚುನಾವಣೆಗೆ ಸಂಬಂಧಿಸಿದಂತೆ ಎಲ್ಲಾ ತಯಾರಿ ನಡೆಸಲಾಗಿತ್ತು. ಚುನಾವಣೆಗೆ ಸೂಕ್ತ ಭದ್ರತೆ ಒದಗಿಸುವಂತೆ ಪೊಲೀಸ್ ಇಲಾಖೆ ಮುಂಚಿತವಾಗಿಯೇ ಮನವಿ ಸಲ್ಲಿಸಲಾಗಿತ್ತು. ಪೊಲೀಸ್ ಇಲಾಖೆಯ ಸೂಚನೆಯಂತೆ ಚುನಾವಣೆ ನಡೆಯುವ ಸ್ಥಳದಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ ಸೇರಿದಂತೆ ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಆದರೆ, ಇಲ್ಲಸಲ್ಲದ ಕಾರಣ ಸೃಷ್ಟಿಸಿ ಚುನಾವಣೆಯನ್ನು ಮುಂದೂಡಿಕೆ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.


ಪ್ರತಿಭಟನೆ ನಡೆಯುತ್ತಿರುವ ಸ್ಥಳಕ್ಕೆ ಆಗಮಿಸಿದ ಚುನಾವಣಾಧಿಕಾರಿಗೆ ಇಂದೇ ಟಿಎಪಿಸಿಎಂಎಸ್ ಆಡಳಿತ ಮಂಡಳಿಯ ಚುನಾವಣೆಯ ದಿನಾಂಕವನ್ನು ಘೋಷಿಸಬೇಕು. ಅಲ್ಲಿಯವರೆಗೆ ಈ ಜಾಗದಿಂದ ಯಾವುದೇ ಕಾರಣಕ್ಕೂ ಕದಲುವುದಿಲ್ಲ ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದರು.

 

ಪ್ರತಿಭಟನಾನಿರತ ಸ್ಥಳಕ್ಕೆ ಆಗಮಿಸಿದ ಚುನಾವಣಾಧಿಕಾರಿ ಉಮೇಶ್, ಟಿಎಪಿಸಿಎಂಎಸ್ ಚುನಾವಣೆಯ ಕುರಿತಂತೆ ಪೊಲೀಸ್ ಇಲಾಖೆ ವರದಿಯನ್ನು ಸಹಕಾರ ಚುನಾವಣಾ ಪ್ರಾಧಿಕಾರದ ಆಯುಕ್ತರ ಗಮನಕ್ಕೆ ತಂದು, ಅವರ ಸೂಚನೆಯಂತೆ ಚುನಾವಣೆ ಮುಂದೂಡಿದೆ. ಈಗಾಗಲೇ ಸಹಕಾರ ಚುನಾವಣಾ ಪ್ರಾಧಿಕಾರಕ್ಕೆ ಪತ್ರ ಬರೆದಿದ್ದು, ಅವರ ಸೂಚನೆಯಂತೆ ನೂತನ ಚುನಾವಣಾ ದಿನಾಂಕ ಘೋಷಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು  ಸಮಜಾಯಿಷಿ ನೀಡಿದರು.


ಇದಕ್ಕೆ ಒಪ್ಪದ ಪ್ರತಿಭಟನಾನಿರತರು ಚುನಾವಣಾಧಿಕಾರಿ ವಿರುದ್ಧ ಗರಂ ಆದರು. ಚುನಾವಣಾಧಿಕಾರಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.  ನಂತರ ಡಿವೈಎಸ್‍ಪಿ ಕಚೇರಿ ಒಳಗೆ ಜೆಡಿಎಸ್ ಮುಖಂಡರಾದ ಎಚ್.ಸಿ.ಜಯಮುತ್ತು, ಕುಕ್ಕೂರುದೊಡ್ಡಿ ಜಯರಾಮು, ಚುನಾವಣಾಧಿಕಾರಿ ಉಮೇಶ್ ಕೆಲಹೊತ್ತು ಮಾತುಕತೆ ನಡೆಸಿದರು. ಈ ವೇಳೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿದ ಉಮೇಶ್ ಸಂಜೆಯೊಳಗೆ ಚುನಾವಣಾ ದಿನಾಂಕ ಘೋಷಣೆ ಮಾಡುವ ಭರವಸೆ ನೀಡಿದ ಬಳಿಕ ಜೆಡಿಎಸ್ ಮುಖಂಡರು ಪ್ರತಿಭಟನೆಯನ್ನು ಹಿಂಪಡೆದರು. 


ಪ್ರತಿಭಟನೆಯಲ್ಲಿ ಜೆಡಿಎಸ್ ತಾಲೂಕು ಅಧ್ಯಕ್ಷ ಹೆಚ್.ಸಿ.ಜಯಮುತ್ತು, ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ ಗೋವಿಂದಹಳ್ಳಿ ನಾಗರಾಜು, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಕುಕ್ಕೂರದೊಡ್ಡಿ ಜಯರಾಮು, ಒಕ್ಕಲಿಗರ ಸಂಘದ ನಿರ್ದೇಶಕ ಹಾಪ್‍ಕಾಮ್ಸ್ ದೇವರಾಜು, ಮುಖಂಡರಾದ  ಇ.ತಿ. ಶ್ರೀನಿವಾಸ್, ಮೆಹರೀಶ್, ಮಾಗನೂರು ಗಂಗರಾಜು ಇತರರು ಉಪಸ್ಥಿತರಿದ್ದರು.


 ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in kanakapura »

ಡಾ. ಶ್ರೀ ಶ್ರೀ ಮುಮ್ಮಡಿ ನಿರ್ವಾಣ ಮಹಾಸ್ವಾಮಿಗಳ ನೇತೃತ್ವದಲ್ಲಿ ಗುರು ಕೋರಣ್ಯ
ಡಾ. ಶ್ರೀ ಶ್ರೀ ಮುಮ್ಮಡಿ ನಿರ್ವಾಣ ಮಹಾಸ್ವಾಮಿಗಳ ನೇತೃತ್ವದಲ್ಲಿ ಗುರು ಕೋರಣ್ಯ

ಕನಕಪುರ: ಪರಮಪೂಜ್ಯ ಶ್ರೀಡಾ. ಶ್ರೀ ಮುಮ್ಮಡಿ ನಿರ್ವಾಣ ಮಹಾಸ್ವ

ಜೂ. 17ರಂದು ವಿದ್ಯುತ್ ಅದಾಲತ್ ಸಭೆ
ಜೂ. 17ರಂದು ವಿದ್ಯುತ್ ಅದಾಲತ್ ಸಭೆ

ರಾಮನಗರ, ಜೂ. 15:   ಕನಕಪುರ ತಾಲ್ಲೂಕಿನ ಕನಕಪುರ ವಿಭಾಗದ ವ್ಯಾಪ್ತಿಗೆ ಒಳಪಡುವ ಗ್ರಾಮಗಳಲ್ಲಿ ಜೂ. 17 ರಂದು ಬೆಳಿಗ್ಗೆ 11 ಗಂಟೆಗೆ ವಿದ್

Top Stories »  


Top ↑