Tel: 7676775624 | Mail: info@yellowandred.in

Language: EN KAN

    Follow us :


ದೇಶದಲ್ಲೇ ಪ್ರಥಮ, ಕನಕಪುರದಲ್ಲಿ ಮಹಿಳಾ ಕೈಗಾರಿಕಾ ಪಾರ್ಕ್ 

Posted date: 06 Feb, 2018

Powered by:     Yellow and Red

ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನಲ್ಲಿ ದೇಶದ ಮೊದಲ ಮಹಿಳಾ ಕೈಗಾರಿಕಾ ಪಾರ್ಕ್ ಪ್ರಾರಂಭವಾಗಲಿದೆ. ಈ ಕೈಗಾರಿಕಾ ಪಾರ್ಕ್ ಹಾರೋಹಳ್ಳಿ ಕೈಗಾರಿಕಾ ವಲಯದಲ್ಲಿ ಪ್ರಾರಂಭವಾಗಲಿದೆ. ಇದು ಮಹಿಳೆಯರಿಗೆ ಮೀಸಲಾದ ಮೊದಲ ಕೈಗಾರಿಕಾ ಪಾರ್ಕ್ ಆಗಿದ್ದು 105 ಮಹಿಳಾ ಉದ್ಯಮಿಗಳು ಅರ್ಜಿ ಸಲ್ಲಿಸಿದ್ದಾರೆ ಮತ್ತು ಅವರಿಗೆ ಭೂಮೀ ನೀಡುವ ಪ್ರಕ್ರಿಯೆ ಚಾಲನೆಯಲ್ಲಿದೆ. ಮುಖ್ಯಮಂತ್ರಿ  ಸಿದ್ದರಾಮಯ್ಯ ಈ ಕೈಗಾರಿಕಾ ಪಾರ್ಕ್ ಉದ್ಘಾಟಿಸಲಿದ್ದಾರೆ.

ಈ ಪರಿಕಲ್ಪನೆಯನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶ್ರೀಮತಿ ರತ್ನ ಪ್ರಭಾ ಅವರು ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದಾಗ ರೂಪಿಸಿದ್ದು ಇದನ್ನು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಕೆಐಎಡಿಬಿ ಅಡಿಯಲ್ಲಿ ಯೋಜಿಸಲಾಯಿತು. 

ಇದು ಹಾರೋಹಳ್ಳಿ ಕೈಗಾರಿಕಾ ಪಾರ್ಕ್‍ನ ಮೂರನೇ ಹಂತದಲ್ಲಿದ್ದು 1,366 ಎಕರೆಗಳ ವಿಸ್ತೀರ್ಣ ಹೊಂದಿದೆ. ಇದರಲ್ಲಿ 106 ಎಕರೆಗಳನ್ನು ಮಹಿಳೆಯರಿಗೆ ಮೀಸಲಾಗಿರಿಸಲಾಗಿದೆ. ರಸ್ತೆಗಳು, ಒಳಚರಂಡಿ ಮತ್ತು ಕುಡಿಯುವ ನೀರಿನ ಸೌಲಭ್ಯಗಳನ್ನು ಪ್ರಾರಂಭಿಸಲಾಗುತ್ತಿದೆ. ರಾಜ್ಯ ಸರ್ಕಾರ ಈ ಯೋಜನೆಗೆ 37 ಕೋಟಿ ರೂ. ವ್ಯಯಿಸುತ್ತಿದೆ. ಈ ಕೇಂದ್ರಕ್ಕೆ ಎಂಎಸ್‍ಸಿ ಸಿಡಿಪಿಸಿ ಯೋಜನೆಯಡಿ 7.5 ಕೋಟಿ ರೂ. ಅನುದಾನ ನೀಡಲಾಗುತ್ತಿದೆ.

ಪ್ರಸ್ತುತ ರಾಜ್ಯದಲ್ಲಿ ಮಹಿಳಾ ಉದ್ಯಮಿಗಳ ಸಂಖ್ಯೆ ಬಹಳ ಕಡಿಮೆ ಇದೆ. ಈಗಾಗಲೇ ಮಹಿಳೆಯರ ಗುಂಪುಗಳು ಮತ್ತು ಮಹಿಳಾ ಉದ್ಯಮಿಗಳಿಂದ ಬೇಡಿಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಕೈಗಾರಿಕಾ ಉದ್ಯಾನ ಪೂರ್ಣಗೊಂಡ ನಂತರ ಮಹಿಳಾ ಉದ್ಯಮಿಗಳ ಸಂಖ್ಯೆ ಹೆಚ್ಚಾಗಲಿದೆ ಎಂದು ಸರ್ಕಾರ ಭರವಸೆ ಹೊಂದಿದೆ. 

ಮಹಿಳೆಯರನ್ನು ಯಶಸ್ವಿ ಉದ್ಯಮಿಗಳನ್ನಾಗಿಸಬೇಕು ಎಂದು ರಾಜ್ಯ ಸರ್ಕಾರ ಗುರಿ ಹೊಂದಿದೆ. ಹಾರೋಹಳ್ಳಿ ರಾಜಧಾನಿಗೂ ಬಹಳ ಹತ್ತಿರದಲ್ಲಿದೆ. 

ಬಿಡಬ್ಲ್ಯೂಎಸ್‍ಎಸ್‍ಬಿ ಮತ್ತು ಬೆಸ್ಕಾಂಗಳು ನೀರು ಮತ್ತು ವಿದ್ಯುಚ್ಛಕ್ತಿ ಪೂರೈಕೆ ಮಾಡಲಿವೆ. ಕೆಐಎಡಿಬಿ ಪ್ರತಿ ಎಕರೆಗೆ 1.4 ಕೋಟಿ ರೂ. ಬೆಲೆ ನಿಗದಿಪಡಿಸಿದೆ. ಮಹಿಳೆಯರಿಗೆ 10 ಲಕ್ಷ ರೂ. ರಿಯಾಯಿತಿಯನ್ನು ದೊರೆಯಲಿವೆ. 10 ಗುಂಟೆಗಳಿಂದ 2 ಎಕರೆಗಳವರೆಗೆ ಜಮೀನು ವಿಂಗಡಿಸಲಾಗಿದೆ. ಸಣ್ಣ ಕೈಗಾರಿಕೆಗಳ ಹಲವು ಉದ್ಯಮಿಗಳು ಇದರ ಪ್ರಯೋಜನ ಪಡೆಯಲಿದ್ದಾರೆ. 

ರಾಜ್ಯ ಸರ್ಕಾರ ಎಲ್ಲ ಅರ್ಜಿಗಳೂ ಏಕಗವಾಕ್ಷಿ ವಿಲೇವಾರಿ ವ್ಯವಸ್ಥೆಯ ಅನ್ವಯ ಇರಬೇಕು ಮತ್ತು ಅರ್ಜಿ ಸಲ್ಲಿಸಿದವರಲ್ಲಿ ಶೇ.25ರಷ್ಟು ಮಂದಿ ಮೊದಲ ಬಾರಿಗೆ ಉದ್ಯಮಿಗಳಾಗುತ್ತಿದ್ದಾರೆ ಎನ್ನುವುದು ಗಮನಾರ್ಹ. ಹಲವು ಮಂದಿ ನಗರದ ವಿವಿಧ ಪ್ರದೇಶಗಳಲ್ಲಿ ಸಣ್ಣ ಸ್ಥಳಗಳಲ್ಲಿ ಉತ್ಪಾದನಾ ಘಟಕ ನಡೆಸುತ್ತಿದ್ದಾರೆ ಮತ್ತು ಈ ಹೊಸ ಕೈಗಾರಿಕಾ ಉದ್ಯಾನಕ್ಕೆ ವರ್ಗಾಯಿಸಿಕೊಳ್ಳಲು ಉತ್ಸುಕರಾಗಿದ್ದಾರೆ. 

ಉಡುಪು, ಆಹಾರ ಸಂಸ್ಕರಣೆ, ಅಡುಗೆ ಉಪಕರಣಗಳು, ರಾಸಾಯನಿಕಗಳು,ವಾಹ ಬಿಡಿ ಭಾಗಗಳು ಮತ್ತಿತರೆ ಘಟಕಗಳು ಇಲ್ಲಿವೆ. ಈ ವಿಶೇಷ ಮಹಿಳಾ ಕೈಗಾರಿಕಾ ಉದ್ಯಾನ 5,000ಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಸಲಿದೆ.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in karnataka »

ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ

ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ

ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ

ರಾಮನಗರ, ಫೆ. 02  :  ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು

ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ

ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ

ಸಂವಿಧಾನ ಜಾಗೃತಿ ಜಾಥಾ

ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ

ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ

ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ

ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,

ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ

ರಾಮನಗರ:  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ

ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ

ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ  ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ

೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ

ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ  ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ

ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್

ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ

ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ

ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ

Top Stories »  


Top ↑