Tel: 7676775624 | Mail: info@yellowandred.in

Language: EN KAN

    Follow us :


88ನೇ ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ರಾಷ್ಟ್ರಪತಿ ಅವರಿಂದ ವಿದ್ಯುಕ್ತ ಚಾಲನೆ

Posted date: 07 Feb, 2018

Powered by:     Yellow and Red

88ನೇ ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ರಾಷ್ಟ್ರಪತಿ ಅವರಿಂದ ವಿದ್ಯುಕ್ತ ಚಾಲನೆ

ಶ್ರವಣಬೆಳಗೊಳ :  ಕರ್ನಾಟಕದ ಮೇಲೆ ನನಗೆ ವಿಶೇಷ ಪ್ರೀತಿ ಇದೇ. ನಾನು ಪದೇ ಪದೇ ಕರ್ನಾಟಕಕ್ಕೆ ಬರುವಂತಾಗಿದೆ ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿಯ ಕಾರಣದಿಂದ ಈ ನೆಲಕ್ಕೆ ಹೆಚ್ಚಿನ ಮನ್ನಣೆ ಹಾಗೂ ಗೌರವ ದೊರೆತಿದೆ ಎಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಹೇಳಿದರು.

ಶ್ರವಣಬೆಳಗೊಳದ ಪಂಚಕಲ್ಯಾಣ ನಗರದ ಚಾವುಂಡರಾಯ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ 88ನೇ ಮಹಾಮಸ್ತಕಾಭಿಷೇಕ ಮಹೋತ್ಸವ 2018ಕ್ಕೆ ವಿದ್ಯುಕ್ತ ಚಾಲನೆ ನೀಡಿ ಮಾತನಾಡಿದ ಅವರು ಪ್ರಸ್ತುತ ವಿಶ್ವಶಾಂತಿ ಅಗತ್ಯ ಮಹಾಮಸ್ತಕಾಭಿಷೇಕ ಕಲ್ಯಾಣ ಕಾರ್ಯಕ್ರಮದಿಂದ ಜಾಗತ್ತಗೆ ಶಾಂತಿ ಸಂದೇಶ ಸಾರಬಹುದಾಗಿದೆ. ಎಲ್ಲಾ ಜನ ವರ್ಗದ ಪ್ರೀತಿ ಹಾಗೂ ಸಹಬಾಳ್ವೆ ಮಾಡಬೇಕಿದೆ ಅತಿಯಾದ ಆಸೆ, ಸ್ವಾರ್ಥಗಳನ್ನು ಬಿಟ್ಟು ಬದುಕಬೇಕಿದೆ ಎಂದರು.

ತ್ಯಾಗ, ಕರುಣೆ, ಮಾನವೀಯತೆ, ಮಾನವ ಕಲ್ಯಾಣದ ಸಂದೇಶ ಸಾರಿರುವ ಧರ್ಮ ಜೈನ ಧರ್ಮ ಎಂದ ಅವರು ಶಾಂತಿ, ಕರುಣೆ, ಮಾನವೀಯತೆ, ಸಹೋದರತ್ವ, ಅಹಿಂಸೆಯ ಪ್ರತೀಕವಾಗಿರುವ ಶ್ರೀ ಬಾಹುಬಲಿ ಭವ್ಯ ಪ್ರತಿಮೆ ನೋಡಿ ನಾನು ಕೃತಾರ್ಥನಾಗಿದ್ಧೇನೆಂದ ಅವರು ಬಾಹುಬಲಿ ಸ್ವಾಮಿ ನೀಡಿರುವ ಸಂದೇಶ ಮಾನವ ಕಲ್ಯಾಣದ ಸಂದೇಶವಾಗಿದೆ ಎಂದರು.

ಬಾಹುಬಲಿ ವಿಶೇಷ ಪ್ರತಿಮೆ ಭಾರತೀಯ ಕಲೆ, ಮತ್ತು ವಾಸ್ತು ಕಲೆ ಹಿರಿಮೆಗೆ ಒಂದು ಉದಾಹರಣೆ ಎಂದ ಅವರು ಸಾವಿರ ವರ್ಷದ ಹಿಂದೆ ಕೆತ್ತಿದ ಶಿಲ್ಪದ ಮೂರ್ತಿಗೆ ಶಿಲ್ಪಿಗಳು ಶಾಂತಿ, ಕರುಣೆ, ಅಹಿಂಸೆಯ ಜೀವ ತುಂಬಿ ನಿರ್ಜಿವ ಶಿಲೆಗೆ ಶಾಂತಿಯ ಜೀವ ತುಂಬಿದ್ದಾರೆಂದು ಬಣ್ಣಿಸಿದರು.

ಮಹಾರಾಜ ಚಂದ್ರಗುಪ್ತ ಮೌರ್ಯ ಕೂಡ ತಮ್ಮ ಸಂಸ್ಥಾನವನ್ನು ತ್ಯಾಗಮಾಡಿ ಚಂದ್ರಗಿರಿಯಲ್ಲಿ ತ್ಯಾಗಿಗಳಾಗಿ ದೀಕ್ಷೆ ಸ್ವೀಕರಿಸಿ ಅಲ್ಲಿಯೇ ಸಲ್ಲೇಖನ ವೃತ ಸ್ವೀಕರಿಸಿದ್ದನ್ನು ಸ್ಮರಿಸಿದ ರಾಷ್ಟ್ರಪತಿ ಅವರು ಜೈನ ಧರ್ಮದಲ್ಲಿ ಪ್ರಕೃತಿಯ ಸಂರಕ್ಷಣೆಯ ವಿಶೇಷವಿದೆ. ಪ್ರತಿಯೊಬ್ಬರು ಜೈನ ಮುನಿಗಳು, ಮಾತೆಯರ ಸಂದೇಶವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸಮಾಜದಲ್ಲಿ ಶಾಂತಿ ಕಾಪಾಡುವಂತೆ ಕರೆ ನೀಡಿದರು.

ರಾಜ್ಯಪಾಲರಾದ ವಾಜುಬಾಯಿ ವಾಲಾ ಅವರು ಮಾತನಾಡಿ ಜೈನ ಸಮಾಜ ಸೇರಿದಂತೆ ಸಮಾಜದಲ್ಲಿನ ಉಳ್ಳವರು ತಮ್ಮಲ್ಲಿರುವ ಸಂಪತ್ತಿನಲ್ಲಿ ಸಮಾಜಕ್ಕಾಗಿ ಒಂದು ಪ್ರಮಾಣದ ತ್ಯಾಗ ಮಾಡುವ ಗುಣ ಬೆಳೆಸಿಕೊಳ್ಳುವ ಮೂಲಕ ಭಗವಾನ್ ಬಾಹುಬಲಿ ಸಂದೇಶವನ್ನು ಮೈಗೂಡಿಸಿಕೊಳ್ಳುವಂತೆ ಕರೆ ನೀಡಿದರು.

ಗೊಮ್ಮಟೇಶ್ವರನ ಪ್ರತಿಮೆಯ ದರ್ಶನ ಮಾಡುವುದರ ಜೊತೆಗೆ ಬಾಹುಬಲಿ ಆದರ್ಶವನ್ನು ಪಾಲಿಸುವಂತೆ ಹೇಳಿದ ಅವರು ವೈರಾಗ್ಯ ಮೂರ್ತಿ ಸತ್ಯ, ಅಹಿಂಸೆ, ಬ್ರಹ್ಮಚಾರ್ಯ, ಕರುಣೆಯ ಚೈತನ್ಯ ಪ್ರತಿಮೆಯಾಗಿದ್ದು ಈ ಮೌಲ್ಯವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಬದುಕು ರೂಪಿಸಿಕೊಳ್ಳುವಂತೆ ಅವರು ತಿಳಿಸಿದರು.

ಸಮಾಜದಲ್ಲಿ ಸಂಸ್ಕಾರ ಉಳಿಯಬೇಕಾದರೆ ಆಧ್ಯಾತ್ಮದ ಶಕ್ತಿ ಬೇಕು. ಅದು ತ್ಯಾಗ, ಶಾಂತಿ, ಅಹಿಂಸೆಯಿಂದ ಮಾತ್ರ ಸಾಧ್ಯವೆಂದ ಅವರು ಜೀವನದಲ್ಲಿ ತ್ಯಾಗವೇ ದೊಡ್ಡದು, ಪ್ರತಿಯೊಬ್ಬರು ತ್ಯಾಗದ ಮನೋಭಾವನೆ ಬೆಳೆಸಿಕೊಳ್ಳುವ ಮೂಲಕ ಬಾಹುಬಲಿ ಸ್ವಾಮಿಗೆ ಗೌರವ ನೀಡಿ ಅದೇ ನೀವು ಭಗವಂತನಿಗೆ ನೀಡುವ ಭಕ್ತಿ ಎಂದರು.

ಮಾನ್ಯ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯ ಅವರು ಮಾತನಾಡಿ ಜಗತ್ ಪ್ರಸಿದ್ಧಿ ಹೊಂದಿರುವ ಜೈನ ಕಾಶಿ ಶ್ರವಣಬೆಳಗೊಳದಲ್ಲಿ ನೆಲೆಸಿರುವ ಭಗವಾನ್ ಬಾಹುಬಲಿ ಸ್ವಾಮಿಗೆ ಪ್ರತಿ 12 ವರ್ಷಕೊಮ್ಮೆ ನಡೆಯುವ ಮಹಾಮಸ್ತಕಾಭಿಷೇಕ ಇಡೀ ದೇಶದ ಗಮನ ಸೆಳೆಯುವಂತೆ ಸಕಲ ಸಿದ್ದತೆ ಮಾಡಿಕೊಳ್ಳುವುದರ ಮೂಲಕ ಮಹೋತ್ಸವವನ್ನು ಯಶಸ್ವಿಯಾಗಿ ತಮ್ಮ ಅಣತಿಯಂತೆ ಜಿಲ್ಲಾಡಳಿತ ಕ್ರಮ ಕೈಗೊಂಡಿದೆ ಎಂದು ಅವರು ಹೇಳಿದರು.

ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ಯಾವುದೇ ಕೊರತೆ ಉಂಟಾಗದಂತೆ ಅಚ್ಚುಕಟ್ಟಾಗಿ ನಡೆಯಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೆ ಎಂದರಲ್ಲದೆ, ಅದೇ ರೀತಿ ಎಲ್ಲ ರೀತಿಯ ಮೂಲಭೂತ ಸೌಕಾರ್ಯಕ್ಕೆ ಕ್ರಮವಹಿಸಿದ್ದಾರೆ ಎಂದರು.

ಈ ಕಾರ್ಯಕ್ರಮದ ಯಶಸ್ವಿಗಾಗಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿ ವೃಂದದವರು ಶ್ರಮಿಸುತ್ತಿರುವ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದರು. ಇಂತಹ ಮಹೋತ್ಸವ ನೋಡುತ್ತಿರುವುದು ನಮ್ಮೆಲ್ಲರ ಪುಣ್ಯ ಎಂದ ಮುಖ್ಯಮಂತ್ರಿ ಅವರು ಸ್ವಾಮಿಜೀಯವರೊಂದಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ದೊರೆತಿರುವುದು ನಮ್ಮ ಸೌಭಾಗ್ಯ ಎಂದರು.

ದೇಶದ ಇತಿಹಾಸ ಗಮನಿಸಿದಾಗ ಅನೇಕ ಮಹಾ ಪುರುಷರು, ಸಂತರು, ಮುನಿವರ್ಯರು, ಸಮಾಜ ಸುಧಾರಕರು, ದಾರ್ಶನಿಕರು, ಸೂಫಿಗಳು ಸಮಾಜದ ಅಂಕು-ಡೊಂಕಗಳನ್ನು ತಿದ್ದುವುದನ್ನು ಅನಾದಿಕಾಲದಿಂದ ಮಾಡಿಕೊಂಡು ಬಂದಿರುವುದು ಕಂಡುಬರುತ್ತದೆ ಎಂದರು.

ಬಾಹುಬಾಲಿ ಸ್ವಾಮಿ ಅಹಿಂಸೆಯ ಪ್ರತೀಕ, ಶಾಂತಿಯ ಪ್ರತಿಬಿಂಬ, ಮನುಕುಲದಲ್ಲಿ ಶಾಂತಿ ನೆಲೆಸಲು “ಅಹಿಂಸೆಯಿಂದ- ಸುಖ, ತ್ಯಾಗದಿಂದ- ಶಾಂತಿ, ಮೈತ್ರಿಯಿಂದ- ಪ್ರಗತಿ. ಧ್ಯಾನದಿಂದ ಸಿದ್ದಿ” ಎಂಬ ಬಾಹುಬಲಿ ಸಂದೇಶವನ್ನು ಬದುಕಿನಲ್ಲಿ ಅಳವಡಿಸಿಕೊಂಡಲಿ ಬಾಹುಬಲಿಗೆ ನಿಜವಾದ ಗೌರವ ಸಲ್ಲಿಸಿದಂತೆ ಎಂದ ಅವರು ಈ ನಿಟ್ಟಿನಲ್ಲಿ ಪ್ರಮಾಣಿಕ ಪ್ರಯತ್ನಕ್ಕೆ ಮುಂದಾಗಬೇಕು ಎಂದರು.

ಜಾತಿ ಜಾತಿಗಳ ನಡುವೆ, ಧರ್ಮ ಧರ್ಮಗಳ ನಡುವೆ ಸಂಘರ್ಷಗಳು ನಡೆಯುತ್ತಿದ್ದು, ಸಮಾಜದಲ್ಲಿ ಶಾಂತಿ ನೆಲೆಸಲು ಸ್ವಾರ್ಥ, ದುರಾಸೆ, ಬಿಡದ ಹೊರತು ದೇಶದಲ್ಲಿ ನೆಮ್ಮದಿ ಸಾಧ್ಯವಿಲ್ಲವೆಂದ ಅವರು ಪ್ರತಿಯೊಂದು ಧರ್ಮವೂ ತಮ್ಮ ಧರ್ಮವನ್ನು ಗೌರವಿಸಿ ಪರ ಧರ್ಮದೊಂದಿಗೆ ಸಹಿಷ್ಣುತೆ ಬೆಳಸಿಕೊಳ್ಳಬೇಕು ತಿಳಿಸಿದರು.

ಕುವೆಂಪು ರಚಿತ ನಾಡಗೀತೆಯ ಸಾಲುಗಳನ್ನು ಉಲ್ಲೇಖಿಸಿ ಮಾತನಾಡಿದ ಮುಖ್ಯಮಂತ್ರಿ ಅವರು ಕಿಂಚಿತ್ತದರು ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಳ್ಳುವ ಮೂಲಕ ಮನುಕುಲಕ್ಕೆ ಕೊಡುಗೆ ಕೊಡುವುದರ ಜೊತೆಗೆ ಬಲಿಷ್ಠ ರಾಷ್ಟ್ರ ಕಟ್ಟುವ ಪ್ರಯತ್ನ ಮಾಡೋಣ ಎಂದರು.

ಶತಮಾನದ ಎರಡನೇ ಮಹಾಮಸ್ತಕಾಭಿಷೇಕಕ್ಕೆ ಇಂದು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಪರಿವಾರ ಸಮೇತ ಉದ್ಘಾಟನೆ ಮಾಡಿರುವುದು ಶ್ರೀ ಕ್ಷೇತ್ರ ಶ್ರವಣಬೆಳಗೊಳದಲ್ಲಿ ಈ ದಿನವನ್ನು ಇತಿಹಾಸದ ಸುವರ್ಣಾಕ್ಷರದಲ್ಲಿ ಬರೆದಿಡಬಹುದಾದ ದಿನವಾಗಿದೆ ಎಂದು ಶ್ರೀ ಕ್ಷೇತ್ರದ ಸ್ವಸ್ತೀಶ್ರೀ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ ಬಣ್ಣಿಸಿದರು.

ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಆಶಿರ್ವಚನ ನೀಡಿದ ಅವರು ರಾಜ ಮಹಾರಾಜರ ಕಾಲದಿಂದಲೂ ರಾಜ ಮನೆತನಗಳು ನಡೆಸಿಕೊಂಡು ಬರುತ್ತಿದ್ದ ಮಹಾ ಮಸ್ತಕಾಭಿಷೇಕ ಕಾರ್ಯವನ್ನು ಕಳೆದ ನಾಲ್ಕು ಮಹಾಮಸ್ತಕಾಭಿಷೇಕಗಳನ್ನು ಸಹ ರಾಷ್ಟಪತಿಗಳು ಚಾಲನೆ ನೀಡಿದ್ದು ಇಂದು ಸಹ ಅದೇ ಪ್ರತೀತಿ ಮುಂದುವರೆದಿದೆ. ಎಂದರಲ್ಲದೆ. ಹಿಂದಿನ ರಾಷ್ಟ್ರಪತಿಗಳಾದ ಶಂಕರ್ ದಯಾಳ್ ಶರ್ಮ, ಅಬ್ದುಲ್ ಕಲಾಂ ಅವರುಗಳು ಮಹಾ ಮಸ್ತಕಾಭಿಷೇಕ ಉದ್ಘಾಟಿಸಿದ್ದನ್ನು ಸ್ಮರಿಸಿದರು.

ಶ್ರವಣಬೆಳಗೊಳದಲ್ಲಿ ಮಹಾಮಸ್ತಕಾಭಿಷೇಕ ಕಾರ್ಯಕ್ರಮ ಯಶಸ್ವಿಗೆ ಶ್ರಮಿಸುತ್ತಿರುವ ರಾಜ್ಯ ಸರ್ಕಾರಕ್ಕೆ ಹಾಗು ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದ ಅವರು ಇದಕ್ಕಾಗಿ ಶ್ರಮಿಸಿದ ಎಲ್ಲಾ ನೌಕರ ವರ್ಗಕ್ಕೆ, ಜನ ಪ್ರತಿನಿಧಿಗಳಿಗೆ ಧನ್ಯವಾದ ಅರ್ಪಿಸಿದರು.
ಹಾಗೇಯೇ ಮಾಜಿ ಪ್ರಧಾನಿ ದೇವೇಗೌಡರ ಇಚ್ಚಾ ಶಕ್ತಿಯಿಂದಾಗಿ ಶ್ರೀ ಕ್ಷೇತ್ರದಲ್ಲಿ ರೈಲು ಸಂಚಾರ ಆರಂಭಗೊಂಡಿದೆ ಎಂದು ಹೇಳಿದ ಅವರು ಮಹಾಮಸ್ತಕಾಭಿಷೇಕ ಕಾರ್ಯವೂ ದೇಶದ ಶಾಂತಿ, ಸಂಕೇತವಾಗಿದೆ ಎಂದರು.

ಇದಕ್ಕೂ ಮೊದಲು ಭಗವಾನ್ ಬಾಹುಬಲಿ ಸ್ವಾಮಿಯ ಮೂರ್ತಿಯನ್ನು ಅನಾವರಣಗೊಳಿಸಿ ಪುಷ್ಪಾರ್ಚನೆ ಮಾಡುವ ಮೂಲಕ 88ನೇ ಮಹಾಮಸ್ತಕಾಭಿಷೇಕ-2018ಕ್ಕೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಚಾಲನೆ ನೀಡಿದರು.

ಸಮಾರಂಭದಲ್ಲಿ ರಾಷ್ಟ್ರಪತಿ ಅವರ ಧರ್ಮಪತ್ನಿ ದೇಶದ ಪ್ರಥಮ ಮಹಿಳೆ ಸವಿತಾ ಕೋವಿಂದ್, ಮಾಜಿ ಪ್ರಧಾನಿ ಹಾಗೂ ಲೋಕಸಭಾ ಸದಸ್ಯರಾದ ಹೆಚ್.ಡಿ.ದೇವೇಗೌಡರು, ಡಾ.ವೀರೇಂದ್ರ ಹೆಗ್ಗಡೆ, ರಾಜ್ಯ ಪಶು ಸಂಗೋಪನಾ ಹಾಗು ರೇಷ್ಮೇ ಖಾತೆ ಸಚಿವರಾದ ಎ.ಮಂಜು, ಮಹಾ ಮಸ್ತಕಾಭಿಷೇಕ ಸಮಿತಿಯ ರಾಷ್ಟ್ರ ಅಧ್ಯಕ್ಷರಾದ ಶ್ರೀಮತಿ ಸರಿತಾ ಜೈನ್, ಸಹ ಅಧ್ಯಕ್ಷರಾದ ಅಭಯಚಂದ್ರ ಜೈನ್, 108 ವರ್ಧಮಾನ ಸಾಗರ ಮುನಿ ಮಹಾರಾಜರು, ಶಾಸಕರುಗಳಾದ ಹೆಚ್.ಡಿ ರೇವಣ್ಣ, ಸಿ.ಎನ್.ಬಾಲಕೃಷ್ಣ, ಹೆಚ್.ಎಸ್. ಪ್ರಕಾಶ್, ಕೆ.ಎಂ.ಶಿವಲಿಂಗೇಗೌಡ, ವಿಧಾನ ಪರಿಷತ್ ಸದಸ್ಯರಾದ ಎಂ.ಎ.ಗೋಪಾಲಸ್ವಾಮಿ, ಕೆ.ಟಿ ಶ್ರೀಕಂಠೇಗೌಡ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶ್ವೇತಾ ದೇವರಾಜ್, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗು ತ್ಯಾಗಿಗಳು, ಮಾತಾಜಿಗಳು ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in karnataka »

ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ

ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ

ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ

ರಾಮನಗರ, ಫೆ. 02  :  ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು

ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ

ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ

ಸಂವಿಧಾನ ಜಾಗೃತಿ ಜಾಥಾ

ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ

ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ

ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ

ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,

ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ

ರಾಮನಗರ:  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ

ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ

ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ  ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ

೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ

ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ  ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ

ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್

ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ

ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ

ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ

Top Stories »  


Top ↑