Tel: 7676775624 | Mail: info@yellowandred.in

Language: EN KAN

    Follow us :


ಶಾಸಕ ಬಾಲಕೃಷ್ಣ ಅವರಿಂದ ಒಳ್ಳೆಯ ಮಾತುಗಳನ್ನು ನಿರೀಕ್ಷಿಸಲು ಸಾಧ್ಯವಿಲ್ಲ : ಕುಮಾರಸ್ವಾಮಿ

Posted date: 02 Mar, 2018

Powered by:     Yellow and Red

ಶಾಸಕ ಬಾಲಕೃಷ್ಣ ಅವರಿಂದ ಒಳ್ಳೆಯ ಮಾತುಗಳನ್ನು ನಿರೀಕ್ಷಿಸಲು ಸಾಧ್ಯವಿಲ್ಲ : ಕುಮಾರಸ್ವಾಮಿ

ರಾಮನಗರ : ಶಾಸಕ ಎಚ್.ಸಿ.ಬಾಲಕೃಷ್ಣ ಅವರದು ಲಂಗು ಲಗಾಮಿಲ್ಲದ ನಾಲಿಗೆ. ಅವರಿಂದ ಒಳ್ಳೆಯ ಮಾತುಗಳನ್ನು ನಿರೀಕ್ಷೆ ಮಾಡಲು ಸಾಧ್ಯವಿಲ್ಲ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಶಾಸಕ ಬಾಲಕೃಷ್ಣ ಅವರು ತಾಲ್ಲೂಕು ಪಂಚಾಯಿತಿ ಸದಸ್ಯರಿಗೆ ಮೊಬೈಲ್ ಸಂಭಾಷಣೆಯಲ್ಲಿ ವಾಚಾಮಗೋಚರವಾಗಿ ನಿಂದಿಸಿರುವ ಕುರಿತು ಕೇಳಿದ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು. ಬಾಲಕೃಷ್ಣ ಅವರು ನನ್ನ ಹಳೆ ಸ್ನೇಹಿತರು. ಅವರ ನಡವಳಿಕೆ ಏನೆಂಬುದು ನನಗೆ ಚೆನ್ನಾಗಿ ಗೊತ್ತು. ಅವರು ಈ ಹಿಂದೆಯೂ ಹಲವಾರು ಬಾರಿ ಇದೇ ರೀತಿ ಮಾತನಾಡಿ ವಿವಾದ ಎಬ್ಬಿಸಿದ್ದರು ಎಂದು ತಿಳಿಸಿದರು.

ಶಾಸಕರಾಗಿ ಬಾಲಕೃಷ್ಣ ಅವರಿಗೆ ಎಷ್ಟು ಗೌರವ ಇದೆಯೋ ಒಬ್ಬ ತಾಲ್ಲೂಕು ಪಂಚಾಯಿತಿ ಸದಸ್ಯರಿಗೂ ಕೂಡ ಅಷ್ಟೆ ಗೌರವವಿರುತ್ತದೆ. ಸಾಂವಿಧಾನತ್ಮಕ ಹುದ್ದೆಗಳಿಗೆ ಬೆಲೆ ನೀಡಬೇಕು ಎಂಬುದು ನನ್ನ ಅಭಿಪ್ರಾಯ. ಅವರು ಕೇವಲ ಒಬ್ಬ ಜನಪ್ರತಿನಿಧಿಗೆ ಮಾತ್ರವಲ್ಲ ರಾಮನಗರ ಎಲ್ಲ ಕಾರ್ಯಕರ್ತರಿಗೆ ಮಾಡಿರುವ ಅವಮಾನ ಎಂದು ಬೇಸರ ವ್ಯಕ್ತಪಡಿಸಿದರು.

ಒಬ್ಬ ಜನಪ್ರತಿನಿಧಿ ಆಗಿರುವವರು ಮಾತನಾಡುವ ಮುನ್ನ ಹತ್ತು ಬಾರಿ ಯೋಚನೆ ಮಾಡಬೇಕು. ನಾವು ಬಳಸುವ ಪದಗಳಿಂದ ಆಗಬಹುದಾದ ಅನಾಹುತವನ್ನು ಅರಿತಿರಬೇಕು. ತಪ್ಪಿದಲ್ಲಿ ಅದಕ್ಕೆ ಭಾರಿ ಬೆಲೆ ತೆರಬೇಕಾಗುತ್ತದೆ ಎಂದು ಅವರು ಹೇಳಿದರು.

ಹಿನ್ನೆಲೆ : ಶಾಸಕ ಎಚ್.ಸಿ.ಬಾಲಕೃಷ್ಣ ಅವರು ಪಿಡಿಒ ವರ್ಗಾವಣೆಗೆ ಸಂಬಂಧಿಸಿದಂತೆ ಮಧ್ಯವರ್ತಿ ಬಳಿ ಮೊಬೈಲ್‍ ನಲ್ಲಿ ಮಾತನಾಡುತ್ತಿರುವ ವೇಳೆ ತಾಲ್ಲೂಕು ಪಂಚಾಯಿತಿ  ಸದಸ್ಯ ಎಸ್. ಪಿ. ಜಗದೀಶ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಆ ಸಂಭಾಷಣೆಯನ್ನು ರೆಕಾರ್ಡ್ ಮಾಡಿಕೊಂಡಿದ್ದ ವ್ಯಕ್ತಿ ಅದನ್ನು ಸಾಮಾಜಿಕ ಜಾಲತಾಣಕ್ಕೆ ಹರಿಯಬಿಟ್ಟಿದ್ದರು. ನಂತರ ಆ ಸಂಭಾಷಣೆ ಜಿಲ್ಲೆಯಲ್ಲಿ ವೈರಲ್ ಆಗಿತ್ತು. ಅಂತೆಯೇ ಸೊಂಟದ ಕೆಳಗಿನ ಪದ ಬಳಸಿ ಮಾತನಾಡಿರುವ ಶಾಸಕ ಬಾಲಕೃಷ್ಣ ವಿರುದ್ಧ ಬಾರಿ ಜನಾಕ್ರೋಶ ವ್ಯಕ್ತವಾಗಿತ್ತು. 

 

 

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in karnataka »

ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ

ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ

ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ

ರಾಮನಗರ, ಫೆ. 02  :  ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು

ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ

ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ

ಸಂವಿಧಾನ ಜಾಗೃತಿ ಜಾಥಾ

ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ

ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ

ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ

ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,

ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ

ರಾಮನಗರ:  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ

ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ

ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ  ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ

೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ

ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ  ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ

ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್

ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ

ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ

ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ

Top Stories »  


Top ↑