Tel: 7676775624 | Mail: info@yellowandred.in

Language: EN KAN

    Follow us :


ಬಿಜೆಪಿಯವರು ಸತ್ಯಹರಿಶ್ಚಂದ್ರರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

Posted date: 02 Mar, 2018

Powered by:     Yellow and Red

ಬಿಜೆಪಿಯವರು ಸತ್ಯಹರಿಶ್ಚಂದ್ರರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

ಕನಕಪುರ: ರಾಜ್ಯದಲ್ಲಿ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷ ಪ್ರಣಾಳಿಕೆಯಲ್ಲಿ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸಿದ ತೃಪ್ತಿಯಿದೆ. ರೈತರ ಸಾಲಮನ್ನಾದಿಂದ ಹಿಡಿದು ಹತ್ತಾರು ಜನಪರ ಕಾರ್ಯಕ್ರಮಗಳನ್ನು ಜನರಿಗೆ ನೇರವಾಗಿ ತಲುಪಿಸಿದ್ದೇನೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ತಾಲ್ಲೂಕಿನ ಶಿವನಹಳ್ಳಿ ಸಮೀಪದ ಐವತ್ತು ಎಕರೆ ವಿಸ್ತೀರ್ಣದಲ್ಲಿ 500 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಹಂತದಲ್ಲಿರುವ ಮೆಗಾಡೈರಿ ಉದ್ಘಾಟಿಸಿ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿ ರೈತರ ಬದುಕು ಹಸನಾಗಲು ಕೃಷಿಕ್ಷೇತ್ರಕ್ಕೆ ಮತ್ತು ನೀರಾವರಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಅದೇರೀತಿ ಅಂತರ್ಜಲ ವೃದ್ಧಿಸಲು ಕೃಷಿಹೊಂಡ, ಚೆಕ್‍ಡ್ಯಾಂ ನಿರ್ಮಿಸಿ ಬತ್ತಿಹೋದ ಕೆರೆಗಳಿಗೆ ಪುನರ್‍ಜೀವ ತುಂಬಲು ಕೆರೆಗಳನ್ನು ತುಂಬಿಸುವ ಕಾಯಕಲ್ಪಕ್ಕೆ ಸಹಸ್ರಾರು ಕೋಟಿ ರೂ. ಹಣ ಖರ್ಚು ಮಾಡಲಾಗಿದೆ. 

ಹೈನುಗಾರಿಕೆ ಒತ್ತು: ರಾಜ್ಯದ ಹಾಲು ಉತ್ಪಾದಕರ ಸಹಕಾರ ಸಂಘದ ಮೂಲಕ ರೈತರಿಗೆ ಹೆಚ್ಚಿನ ಪ್ರೋತ್ಸಾಹ ಧನವನ್ನು ನೀಡಲಾಗಿದೆ. ಹಿಂದಿನ ಸರ್ಕಾರಗಳು ಇಂತಹ ಯೋಜನೆಗಳನ್ನು ಏಕೆ ಮಾಡಲಿಲ್ಲ? ಕಳೆದ ಐದು ವರ್ಷಗಳಲ್ಲಿ ಬಜೆಟ್‍ನಲ್ಲಿ ಮೀಸಲಿಟ್ಟ ಹಣದಲ್ಲಿ ಹಿಂದುಳಿದ, ಅಲ್ಪಸಂಖ್ಯಾತ, ದಲಿತರ ಮೀಸಲು ಹಣವನ್ನು ಶೇ.100 ರಷ್ಟು ಜನಾಂಗದ ಕಲ್ಯಾಣಕ್ಕಾಗಿ ವೆಚ್ಚ ಮಾಡಲಾಗಿದೆ. ನಾವು ಕೈಗೊಂಡಿರುವ ಜನಪರ ಕಾರ್ಯಕ್ರಮಗಳನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಳ್ಳಲಾಗದ ಬಿಜೆಪಿ ಮುಖಂಡರು ಹೊರಗಡೆ ಬಂದು ನಾವು ಏನೂ ಮಾಡಿಲ್ಲ ಎಂದು ಬೊಬ್ಬೆ ಹೊಡೆಯುತ್ತಿದ್ದಾರೆ. 

ಬೇರೆಲ್ಲೂ ಇಲ್ಲ: ರಾಜ್ಯ ಸರ್ಕಾರ 1.10 ಕೋಟಿ ಬಡಕುಟುಂಬಗಳಿಗೆ ಅನ್ನಭಾಗ್ಯ ಯೋಜನೆಯಡಿಯಲ್ಲಿ ಉಚಿತ ಅಕ್ಕಿ ನೀಡುತ್ತಿದ್ದೇವೆ. ಇದನ್ನು ಸಹಿಸದ ವಿರೋಧಿಗಳು ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಹಣ ನೀಡುತ್ತಿದೆ ಎಂದು ಅಪಪ್ರಚಾರ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರ ನಮಗೆ ಮಾತ್ರ ಅಕ್ಕಿಕೊಟ್ಟು ದಕ್ಷಿಣ ಮತ್ತು ಉತ್ತರ ಭಾರತದ ಯಾವುದೇ ರಾಜ್ಯಗಳಿಗೆ ಉಚಿತ ಅಕ್ಕಿಯನ್ನು ಏಕೆ ನೀಡುತ್ತಿಲ್ಲ? ದೊಡ್ಡದೊಡ್ಡ ಉದ್ಯಮಿಗಳಿಗೆ ಉದಾರವಾಗಿ ಸಾಲ ನೀಡುತ್ತಿರುವ, ಮನ್ನಮಾಡುವ ಕೇಂದ್ರ ಸರ್ಕಾರ ರಾಜ್ಯದಲ್ಲಿ ರೈತರ ಸಾಲಮನ್ನ ಏಕೆ ಮಾಡಲು ಮುಂದಾಗಿಲ್ಲ ಎಂದು ಪ್ರಶ್ನಿಸಿದರು.

ಬಿಜೆಪಿಯವರು ಸತ್ಯಹರಿಶ್ಚಂದ್ರರೇ?: ನರೇಂದ್ರ ಮೋದಿಯವರ ಕೇಂದ್ರ ಸರ್ಕಾರ ಸಿಬಿಐ ಮತ್ತು ಐಟಿ ಸಂಸ್ಥೆಗಳನ್ನು ಮುಂದಿಟ್ಟುಕೊಂಡು ಅಧಿಕಾರ ಬಂದಾಗಿನಿಂದಲೂ ಕಾಂಗ್ರೆಸ್ ಮುಖಂಡರ ಮನೆಗಳ ಮೇಲೆ ಧಾಳಿ ನಡೆಸುವುದು ಮತ್ತು ಪ್ರಕರಣಗಳನ್ನು ದಾಖಲಿಸುವ ಮೂಲಕ ಭಯ ತುಂಬುವ ಯತ್ನ ಮಾಡುತ್ತಿದ್ದಾರೆ. ಆದರೆ ಬಿಜೆಪಯ ಮುಖಂಡರ ಮನೆಗಳ ಮೇಲೆ ಏಕೆ ಧಾಳಿ ನಡೆಸುತ್ತಿಲ್ಲ? ಅವರೇನು ಸತ್ಯ ಹರಿಶ್ಚಂದ್ರರೇ?

ಹಾರೋಹಳ್ಳಿ ಪ್ರಗತಿ: ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಚಿವ ಶಿವಕುಮಾರ್ ಹಗಲಿರುಳು ದುಡಿಯುವ ಮೂಲಕ ಜಿಲ್ಲೆಯ ಪ್ರಗತಿಗೆ ದುಡಿಯುತ್ತಿದ್ದಾರೆ. ಅದೇರೀತಿ ರಾಮನಗರ ಕ್ಷೇತ್ರದ ಹಾರೋಹಳ್ಳಿ ಪ್ರಗತಿಗೆ ಕಾವೇರಿ ಕುಡಿಯುವ ನೀರು ಮತ್ತು ಬಿಡದಿಯಿಂದ ಕೈಗಾರಿಕಾ ಕ್ಷೇತ್ರದ ಮೂಲಕವಾಗಿ ಹಾರೋಹಳ್ಳಿ-ಜಿಗಣಿ ಮೂಲಕ ಏರ್‍ಪೋರ್ಟ್‍ವರೆಗೂ ರಸ್ತೆ ನಿರ್ಮಾಣಕ್ಕೆ ಹತ್ತಾರು ಕೋಟಿ ರೂ.ಗಳನ್ನು ಮಂಜೂರು ಮಾಡಲಾಗಿದೆ. ಇಂತಹ ಪ್ರಗತಿ ಕೆಲಸಗಳನ್ನು ಹಿಂದೆ ಇದ್ದಂತಹ ಮಹಾನುಭಾವರು ಏಕೆ ಮಾಡಲು ಮನಸ್ಸು ಮಾಡಲಿಲ್ಲ ಎಂದು ಕುಟುಕಿದರು.

ಗಂಡೆದೆಯ ಗಿರಾಕಿಗಳಿಲ್ಲ: ಕನಕಪುರ ವಿಧಾನಸಭಾ ಕ್ಷೇತ್ರದ ಶಿವಕುಮಾರ್ ಜನಪ್ರಿಯ ಶಾಸಕನಾಗಿ, ಮಂತ್ರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಾಗರೋಪಾದಿಯಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದಾರೆ. ರಾಜ್ಯದ ಯಾವುದೇ ಒಬ್ಬ ಶಾಸಕ ಮಾಡದ ಪ್ರಗತಿಯನ್ನು ಇಲ್ಲಿ ಮಾಡಿದ್ದಾರೆ. ಇಂತಹ ಶಿವಕುಮಾರರನ್ನು ಸೋಲಿಸುವ ಗಂಡೆದೆಯ ಗಿರಾಕಿಗಳು ಇಲ್ಲದೇ ಇರುವುದರಿಂದ ನಮ್ಮ ಅಭ್ಯರ್ಥಿಯ ಗೆಲುವು ಖಚಿತವಾಗಿದೆ ಎಂದರು.

ಸಚಿವ ಡಿ.ಕೆ.ಶಿವಕುಮಾರ್ ಮತ್ತು ಸಂಸದ ಡಿ.ಕೆ.ಸುರೇಶ್ ಮಾತನಾಡಿ ನೀರಾವರಿ ಒಂದೇ ಯೋಜನೆಗೆ ಸಾವಿರ ಕೋಟಿ ರೂ., ವಿದ್ಯುತ್ ಕ್ಷೇತ್ರದಲ್ಲಿ ಪ್ರಗತಿಪರ ಕ್ರಾಂತಿ, ವಸತಿಹೀನರಿಗೆ ಸಾವಿರಾರು ಮನೆ ಮಂಜೂರು ಹಾಗು 1372 ಕೋಟಿ ರೂ.ಗಳ ವೆಚ್ಚದಲ್ಲಿ ಇಂದು ಹತ್ತಾರು ಪ್ರಗತಿಪರ ಅಭಿವೃದ್ಧಿಗಳಿಗೆ ಚಾಲನೆ ನೀಡಲಾಗಿದೆ. 

ಆರುಬಾರಿ ತಾಲ್ಲೂಕಿನ ಜನ ನನ್ನನ್ನು ಶಾಸಕನನ್ನಾಗಿ ಮಾಡಿದ್ದಾರೆ. ಅವರ ಋಣ ತೀರಿಸುವ ಜವಾಬ್ದಾರಿ ನಮ್ಮ ಮೇಲಿರುವುದರಿಂದ ನಾವು ಅವರ ಆಸೆ ಈಡೇರಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ. ಜಿಲ್ಲೆಯ ರಾಮನಗರ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೂ ತಾರತಮ್ಯ ಮಾಡದೇ ಅಭಿವೃದ್ಧಿ ಕೆಲಸಗಳಿಗೆ ಹಣ ಮಂಜೂರು ಮಾಡಲಾಗಿದೆ ಎಂದರು.

ಕಾನೂನು ಸಚಿವ ಜಯಚಂದ್ರ, ಸಚಿವ ಎ.ಮಂಜು, ಶಾಸಕರಾದ ಎಸ್.ರವಿ, ಸಿ.ಎಂ.ಲಿಂಗಪ್ಪ, ನಗರಸಭಾಧ್ಯಕ್ಷ ದಿಲೀಪ್, ಬೆಂಗಳೂರು ಡೈರಿ ಅಧ್ಯಕ್ಷ ಅಪ್ಪಯ್ಯಣ್ಣ, ಎಂ.ಡಿ.ರಾಕೇಶ್‍ಸಿಂಗ್, ವ್ಯವಸ್ಥಾಪಕ ನಾಗರಾಜಯ್ಯ, ಜಿಲ್ಲಾಧಿಕಾರಿ ಡಾ.ಮಮತಾ ಸೇರಿದಂತೆ ವಿವಿಧ ಸರ್ಕಾರಿ ಇಲಾಖೆಯ ಅಧಿಕಾರಿಗಳು, ರಾಜಕೀಯ ಪಕ್ಷದ ಮುಖಂಡರು ಪಾಲ್ಗೊಂಡಿದ್ದರು.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in karnataka »

ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ

ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ

ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ

ರಾಮನಗರ, ಫೆ. 02  :  ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು

ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ

ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ

ಸಂವಿಧಾನ ಜಾಗೃತಿ ಜಾಥಾ

ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ

ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ

ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ

ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,

ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ

ರಾಮನಗರ:  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ

ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ

ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ  ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ

೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ

ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ  ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ

ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್

ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ

ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ

ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ

Top Stories »  


Top ↑