Tel: 7676775624 | Mail: info@yellowandred.in

Language: EN KAN

    Follow us :


ಆದಿಚುಂಚನಗಿರಿ ಜಾತ್ರಾ ಮಹೋತ್ಸವ ಮತ್ತು ಮಹಾಕುಂಭಾಭಿಷೇಕ ಮಹೋತ್ಸವಕ್ಕೆ ಭಕ್ತವೃಂದ ಪಾಲ್ಗೊಳ್ಳುವಂತೆ ಸ್ವಾಮೀಜಿ ಕರೆ

Posted date: 27 Feb, 2020

Powered by:     Yellow and Red

ಆದಿಚುಂಚನಗಿರಿ ಜಾತ್ರಾ ಮಹೋತ್ಸವ ಮತ್ತು ಮಹಾಕುಂಭಾಭಿಷೇಕ ಮಹೋತ್ಸವಕ್ಕೆ ಭಕ್ತವೃಂದ ಪಾಲ್ಗೊಳ್ಳುವಂತೆ ಸ್ವಾಮೀಜಿ ಕರೆ

ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠ ವು ಪ್ರತಿ ವರ್ಷದಂತೆ ಈ ವರ್ಷವೂ ಜಾತ್ರಾ ಮಹೋತ್ಸವವನ್ನು ಹಮ್ಮಿಕೊಂಡಿದ್ದು ರಾಜ್ಯ ಮತ್ತು ಅಂತರರಾಜ್ಯಗಳಿಂದಲೂ ಭಕ್ತಾಧಿಗಳು ಆಗಮಿಸಲಿದ್ದು, ರಾಮನಗರ ಜಿಲ್ಲೆಯ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಅರ್ಚಕರಹಳ್ಳಿ ಶಾಖಾ ಮಠದ ಕಾರ್ಯದರ್ಶಿ ಶ್ರೀ ಅನ್ನದಾನೇಶ್ವರನಾಥ ಸ್ವಾಮೀಜಿ ಗಳು ಮನವಿ ಮಾಡಿದರು.

ಅವರು ಇಂದು ಶಾಖಾ ಮಠದಲ್ಲಿ ಜಾತ್ರಾಮಹೋತ್ಸವದ ಅಂಗವಾಗಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ದಿನಾಂಕ ೦೨/೦೩/೨೦ ರ ಬೆಳಿಗ್ಗೆ ೧೦:೩೦ ಕ್ಕೆ ಧರ್ಮಧ್ವಜ ಸ್ಥಾಪನೆ, ನಾಂದಿ ಪೂಜೆ, ಸಭಾ ಕಾರ್ಯಕ್ರಮ, ಮಹಾಕುಂಭಾಭಿಷೇಕ ಪೂಜಾ ಪ್ರಾರಂಭ ಹಾಗೂ ಸಂಗೀತೋತ್ಸವದೊಂದಿಗೆ ಆರಂಭವಾಗಿ ೧೦/೦೩/೨೦ ರ ಮಂಗಳವಾರ ಬಿಂದು ಸರೋವರದಲ್ಲಿ ಅವಭೃತ ಸ್ನಾನ ಹಾಗೂ ಮಹಾಭಿಷೇಕ, ಸಭಾಕಾರ್ಯಕ್ರಮ, ಧರ್ಮ ಧ್ವಜಾರೋಹಣದೊಂದಿಗೆ ಮುಕ್ತಾಯವಾಗಲಿದೆ. 

ಈ ನಡುವೆ, ಜೋಗಪ್ಪಗಳ ಸಮಾವೇಶ, ಚಂದ್ರಮೌಳೇಶ್ವರ ಉತ್ಸವ, ಮಲ್ಲೇಶ್ವರ ಸ್ವಾಮಿ ಉತ್ಸವ, ಸಾಮೂಹಿಕ ವಿವಾಹ, ಹಿರಿಯ ದಂಪತಿಗಳಿಗೆ ಸನ್ಮಾನ, ಸಿದ್ದೇಶ್ವರ ಸ್ವಾಮಿ ಉತ್ಸವ, ರಾಸುಗಳ ಪ್ರದರ್ಶನ, ಕಾಲಭೈರವೇಶ್ವರ ಸ್ವಾಮಿ ಹೂವಿನ ಪಾಲಕಿ, ಸ್ವಾಮೀಜಿ ಗಳ ಮುತ್ತಿನ ಪಾಲಕಿ ಹಾಗೂ ಇನ್ನಿತರ ದೇವರುಗಳ ವಿಶೇಷ ಪೂಜಾವಿಧಿವಿಧಾನಗಳು ನೆರವೇರಲಿವೆ ಎಂದರು.

*ಮಹಾ ಕುಂಭಾಭಿಷೇಕ*
ವಿಶೇಷವಾಗಿ ಶ್ರೀ ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿದ ದಕ್ಷಿಣ ಭಾರತದ ಅತ್ಯಂತ ಸುಂದರವಾದ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಾಲಯಕ್ಕೆ ಹನ್ನೆರಡು ವರ್ಷಗಳು ತುಂಬಿದ್ದರಿಂದ ಮಹಾಕುಂಭಾಭಿಷೇಕ ಜರುಗಲಿದೆ. ಈ ಸಮಾರಂಭವು ಸಾಧುಸಂತರು ಹಾಗೂ ಗಣ್ಯರ ಸಮ್ಮುಖದಲ್ಲಿ ನೆರವೇರಲಿದ್ದು ಈ ಸಮಾರಂಭಕ್ಕೆ ಭಕ್ತಾಧಿಗಳು ಸಾಕ್ಷಿಯಾಗಲಿದ್ದಾರೆ.
ಕುಂಭಾಭಿಷೇಕದಲ್ಲಿ ಕಲಶ ಹೊರುವ ದಂಪತಿಗಳು ಶಾಖಾ ಮಠದ ಶ್ರೀ ಅನ್ನದಾನೇಶ್ವರನಾಥ ಸ್ವಾಮೀಜಿಯವರನ್ನು ಖುದ್ದಾಗಿ ಭೇಟಿ ಮಾಡಿ ಹೆಸರು ನೋಂದಾಯಿಸಿಕೊಳ್ಳಬೇಕೆಂದು ತಿಳಿಸಿದರು.

*ಅರವಂಟಿಗೆ*
ಜಿಲ್ಲೆಯಿಂದ ಜಾತ್ರೆಗೆ ಹೊರಡುವ ಭಕ್ತಾದಿಗಳಿಗೆ ಅನುಕೂಲವಾಗಲೆಂದು ಬಿಜಿಎಸ್ ಭಕ್ತವೃಂದ ರಾಮನಗರ. ಬಿಜಿಎಸ್ ಸೇವಾಸಮಿತಿ ಬಿಡದಿ ಮತ್ತು ಕೆ ಎಸ್ ಆರ್ ಟಿ ಸಿ ನೌಕರರ ಬಳಗ ರಾಮನಗರ ವಿಭಾಗ ಇವರ ಸಂಯುಕ್ತಾಶ್ರಯದಲ್ಲಿ ೦೮/೦೩/೨೦ ರ ಭಾನುವಾರ ಬೆಳಿಗ್ಗೆ ೦೯:೦೦ ಗಂಟೆಯಿಂದ ಅರವಂಟಿಗೆ ಹೆಸರಿನಲ್ಲಿ ಪ್ರಸಾದ ಏರ್ಪಡಿಸಲಾಗಿದ್ದು ಭಕ್ತಾಧಿಗಳು ಪ್ರಸಾದ ಸ್ವೀಕರಿಸಿ ಜಾತ್ರೆಗೆ ತೆರಳುವಂತೆ ಸಮಿತಿಯ ಪದಾಧಿಕಾರಿಗಳು ಮನವಿ ಮಾಡಿದರು.

೦೯ ರ ಸೋಮವಾರ ದ ಜಾತ್ರೆಗೆ ೦೮ ರ ಭಾನುವಾರ ಬೆಳಿಗ್ಗೆ ೦೬:೦೦ ರಿಂದ ೦೯:೩೦ ರವರೆಗೆ ಪ್ರತಿ ೩೦ ನಿಮಿಷಕ್ಕೆ ಒಂದರಂತೆ ನೇರ ಬಸ್ ಸೌಕರ್ಯವನ್ನು ಒದಗಿಸಲಾಗಿದೆ. ೦೯ ರಂದು ರಾಮನಗರ ಕ್ಕೆ ವಾಪಸು ಬರಲು ಸಹ ವಿಶೇಷ ಬಸ್ ಸೌಲಭ್ಯವಿದ್ದು ಭಕ್ತಾಧಿಗಳು ಸದುಪಯೋಗ ಪಡಿಸಿಕೊಳ್ಳಬೇಕೆಂದು ಮನವಿ ಮಾಡಿದರು.

ಗೋ ರಾ ಶ್ರೀನಿವಾಸ...
ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in karnataka »

ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ

ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ

ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ

ರಾಮನಗರ, ಫೆ. 02  :  ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು

ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ

ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ

ಸಂವಿಧಾನ ಜಾಗೃತಿ ಜಾಥಾ

ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ

ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ

ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ

ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,

ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ

ರಾಮನಗರ:  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ

ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ

ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ  ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ

೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ

ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ  ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ

ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್

ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ

ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ

ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ

Top Stories »  


Top ↑