Tel: 7676775624 | Mail: info@yellowandred.in

Language: EN KAN

    Follow us :


ಮೊಬೈಲ್ ಎಸ್.ಎಂ.ಎಸ್ ಆ್ಯಪ್ ಮೂಲಕ ಮತಗಟ್ಟೆಗಳ ವಿವರ: ಬಿ.ಶರತ್ 

Posted date: 05 Mar, 2018

Powered by:     Yellow and Red

ಮೊಬೈಲ್ ಎಸ್.ಎಂ.ಎಸ್ ಆ್ಯಪ್ ಮೂಲಕ ಮತಗಟ್ಟೆಗಳ ವಿವರ: ಬಿ.ಶರತ್ 

ಮಂಡ್ಯ : ವಿಧಾನಸಭಾ ಕ್ಷೇತ್ರವಾರು ಮತಗಟ್ಟೆ ಸಂಖ್ಯೆ ಹಾಗೂ ಇನ್ನಿತರೆ ಮಾಹಿತಿ ಬಗ್ಗೆ ಖಚಿತ ಪಡಿಸಿಕೊಳ್ಳಲು ಭಾರತ ಚುನಾವಣಾ ಆಯೋಗ ಮೊಬೈಲ್ ಎಸ್.ಎಂ.ಎಸ್ ಆ್ಯಪ್ ಮೂಲಕ ಪ್ರಾರಂಭಿಸಿದ್ದು, ಮಂಡ್ಯ ಜಿಲ್ಲೆಯ ಮತದಾರರು ಇದರ ಸದುಪಯೋಗ ಪಡಿಸಿಕೊಳ್ಳಬಹುದು ಎಂದು ಮಂಡ್ಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷರಾದ ಬಿ.ಶರತ್ ಅವರು ತಿಳಿಸಿದರು. 
ಇಂದು ಜಿಲ್ಲಾಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆದ ಮತದಾರರಿಗೆ ವ್ಯವಸ್ಥಿತ ಶಿಕ್ಷಣ ಹಾಗೂ ಮತದಾರರ ಸಹಭಾಗಿತ್ವ (ಸ್ವೀಪ್) ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು ಮತದಾರರು ತಮ್ಮ ಮೊಬೈನಲ್ಲಿಯೇ ವಿಧಾನಸಭಾ ಕ್ಷೇತ್ರವಾರು ಮತಗಟ್ಟಿ ಸಂಖ್ಯೆ ಹಾಗೂ ಇತರೆ ಮಾಹಿತಿ ತಿಳಿದುಕೊಳ್ಳಲು ಭಾರತ ಚುನಾವಣಾ ಆಯೋಗ ಅವಕಾಶ ಕಲ್ಪಿಸಿದೆ ಎಂದು ಹೇಳಿದ ಅವರು ಮೊಬೈಲ್ ಎಸ್.ಎಂ.ಎಸ್ ಆ್ಯಪ್ ಮಹತ್ವ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದರು.
ಮೊಬೈಲ್ ಸಂಖ್ಯೆ 9731979899 ಗೆ ಎಸ್.ಎಂ.ಎಸ್ ಮುಖಾಂತರ ಏಂಇPIಅ ಸ್ಪೇಸ್ ಮತದಾರರ ಗುರುತಿನ ಚೀಟಿ ಸಂಖ್ಯೆಯನ್ನು ಟೈಪ್ ಮಾಡಿ ಕಳುಹಿಸಿದರೆ ಮತದಾರರು ತಮ್ಮ ವಿಧಾನಸಭಾ ಕ್ಷೇತ್ರವಾರು ಮತಗಟ್ಟೆ ಸಂಖ್ಯೆ ಹಾಗೂ ಇತರೆ ಮಾಹಿತಿಯನ್ನು ತಿಳಿದುಕೊಳ್ಳಬಹುದು. ಭಾರತ ಚುನಾವಣಾ ಆಯೋಗದ ಈ ವಿನೂತನ ಪ್ರಯೋಗವು ಮತದಾರರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.
ಜಿಲ್ಲಾ ಮತದಾರರ ವ್ಯವಸ್ಥಿತ ಶಿಕ್ಷಣ ಹಾಗೂ ಮತದಾರರ ಸಹಭಾಗಿತ್ವ (ಸ್ವೀಪ್) ಸಮಿತಿಯಿಂದ ಮತದಾನದ ಸಂದೇಶ ಸಾರುವ ರಬ್ಬರ್ ಸೀಲ್ ಮಾಡಲಾಗಿದ್ದು, ಕಚೇರಿಯ ಪತ್ರ ವ್ಯವಹಾರ ಹಾಗೂ ಬರುವಂತಹ ಪತ್ರಗಳಿಗೆ ರಬ್ಬರ್ ಸೀಲ್ ಬಳಸಬೇಕು. ಅಲ್ಲದೇ ಸರ್ಕಾರಿ ಕಚೇರಿಗಳಿಗೆ ಬರುವ ಸಾರ್ವಜನಿಕರಿಗೆ ನೈತಿಕ ಮತದಾನದ ಸಂದೇಶ ಸಾರುವ ಕರಪತ್ರಗಳನ್ನು ವಿತರಿಸಲು ಕ್ರಮವಹಿಸಬೇಕು ಎಂದು ಹೇಳಿದರು.
ಭಾರತ ಚುನಾವಣಾ ಆಯೋಗ ಮತದಾರರಲ್ಲಿ ಅರಿವು ಮೂಡಿಸಲು ಸಂದೇಶವಿರುವ ಹಲವು ವಿನ್ಯಾಸವನ್ನು ಕಳುಹಿಸಿದ್ದು, ಅಧಿಕಾರಿಗಳು ಅದನ್ನು ಮುದ್ರಿಸಿ ತಮ್ಮ ಕಚೇರಿಗಳಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದ ಅವರು ಎಲ್ಲಾ ಇಲಾಖೆಗಳು ಮತದಾರರ ಜಾಗೃತಿ ಕಾರ್ಯಕ್ರಮಗಳ ಬಗ್ಗೆ ವೇಳಾಪಟ್ಟಿಯನ್ನು ಸಿದ್ದ ಪಡಿಸಿ ತಮ್ಮ ವ್ಯಾಪ್ತಿಯಲ್ಲಿ ಕಾರ್ಯಕ್ರಮಗಳನ್ನು ಪರಿಣಾಮಕಾರಿ ಹಮ್ಮಿಕೊಳ್ಳಬೇಕು ಎಂದು ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಮಂಡ್ಯ ನಗರದ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ದೊಡ್ಡಮಟ್ಟದಲ್ಲಿ ಮಾರ್ಚ್ 8 ರಂದು ಅಂತರಾಷ್ಟ್ರೀಯ ಮಹಿಳಾ ದಿನಚಾರಣೆ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದ್ದು, ಮತದಾರರ ಜಾಗೃತಿ ಬಗ್ಗೆ ಅಲ್ಲಿಯೂ ಸಹ ನೈತಿಕ ಹಾಗೂ ನ್ಯಾಯ ಸಮ್ಮತ ಮತದಾನದ ಸಂದೇಶವುಳ್ಳ ವಿಷಯಗಳ ಕಾಲೇಜು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ಕ್ರಮಕೈಗೊಳ್ಳಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿಗಳಾದ ಪ್ರೇಮ್‍ಕುಮಾರ್, ಕೃಷ್ಟರಾಜು, ಮುಖ್ಯ ಲೆಕ್ಕಾಧಿಕಾರಿ ರವಿಕುಮಾರ್, ಅಬಕಾರಿ ಇಲಾಖೆ ಉಪ ಆಯುಕ್ತರಾದ ಮಹದೇಶ್ ಹಾಗೂ ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದರು.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in karnataka »

ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ

ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ

ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ

ರಾಮನಗರ, ಫೆ. 02  :  ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು

ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ

ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ

ಸಂವಿಧಾನ ಜಾಗೃತಿ ಜಾಥಾ

ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ

ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ

ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ

ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,

ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ

ರಾಮನಗರ:  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ

ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ

ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ  ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ

೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ

ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ  ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ

ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್

ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ

ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ

ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ

Top Stories »  


Top ↑