Tel: 7676775624 | Mail: info@yellowandred.in

Language: EN KAN

    Follow us :


ರಾಜ್ಯದಲ್ಲಿನ ಕೊರೊನಾ‌ ಸ್ಥಿತಿಗತಿಯ ಕುರಿತಂತೆ ಸಚಿವ ಸುರೇಶ್ ಕುಮಾರ್‌‌ ಮಾಹಿತಿ

Posted date: 17 Apr, 2020

Powered by:     Yellow and Red

ರಾಜ್ಯದಲ್ಲಿನ ಕೊರೊನಾ‌ ಸ್ಥಿತಿಗತಿಯ ಕುರಿತಂತೆ ಸಚಿವ ಸುರೇಶ್ ಕುಮಾರ್‌‌ ಮಾಹಿತಿ

ಇದುವರೆಗೆ ರಾಜ್ಯದಲ್ಲಿ ಒಟ್ಟಾರೆ ೩೫೯ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಇಂದು ಸಂಜೆ ೦೫:೦೦ ರ ಮಾಹಿತಿಯಂತೆ ೧೩ ಜನ ಸಾವನ್ನಪ್ಪಿದ್ದು, ೮೮ ಮಂದಿ ಗುಣಮುಖರಾಗಿ ಹಿಂತಿರುಗಿದ್ದಾರೆಂದು‌ ಸಚಿವರು ವಿವರಿಸಿದರು. ಉಳಿದ ೨೫೮ ಪ್ರಕರಣಗಳಲ್ಲಿ ೨೫೫ ಜನರನ್ನು ಆಸ್ಪತ್ರೆಗಳಲ್ಲಿ ಪ್ರತ್ಯೇಕಿಸಲಾಗಿದೆಯೆಂಬ ಮಾಹಿತಿ ನೀಡಿದ ಸಚಿವರು ೦೩ ಜನರನ್ನು ತೀವ್ರ ನಿಗಾ ಘಟಕಗಳಲ್ಲಿರಿಸಲಾಗಿದೆಯೆಂದರು. 


ನೆನ್ನೆಯ ಸಂಜೆ ೦೫:೦೦ ಕ್ಕೆ ಹೋಲಿಸಿದಲ್ಲಿ ಇಂದು ಒಟ್ಟಾರೆ‌ ೪೪ ಹೊಸ ಪ್ರಕರಣಗಳು ಸೇರ್ಪಡೆಯಾಗಿರುವ ಬಗ್ಗೆ ಸಚಿವರು ಮಾಹಿತಿ‌ ನೀಡಿದರು. 


*ಈ ೪೪ ಪ್ರಕರಣಗಳಲ್ಲಿ, ಬೆಂಗಳೂರಿನಿಂದ ೧೦ ಮೈಸೂರಿನಿಂದ ೧೨, ಬೆಳಗಾವಿಯಿಂದ ೦೫, ಬಳ್ಳಾರಿಯಿಂದ ೦೭, ಮಂಡ್ಯದಿಂದ ೦೩ ಪ್ರಕರಣಗಳು ವರದಿಯಾಗಿವೆ*‌ ಎಂದು ಸಚಿವರು ವಿವರಿಸಿದರು. ಜಿಲ್ಲಾಡಳಿತಗಳು‌ ಪ್ರಕರಣಗಳ‌ ಬಗ್ಗೆ ತೀವ್ರ ನಿಗಾ ವಹಿಸಿ ನಿಯಂತ್ರಣಾ ಕ್ರಮಗಳನ್ನು ಅನುಸರಿಸುತ್ತಿವೆ ಎಂದರು. 


ರಾಜ್ಯಾದ್ಯಂತ ಒಟ್ಟು ೧೩,೩೧೩ ವ್ಯಕ್ತಿಗಳನ್ನು ನಿಗಾವಣೆಯಲ್ಲಿಡಲಾಗಿದೆ ಯೆಂದು ಹೇಳಿದರು. 

ರಾಜ್ಯದಲ್ಲಿ ಪರೀಕ್ಷಿಸಲಾಗಿರುವ ೧೭೫೯೪ ಮಾದರಿಗಳ ಪೈಕಿ ೩೫೯ ಮಾದರಿಗಳು ಖಚಿತಗೊಂಡಿವೆ ಎಂದು ಸಚಿವರು ಹೇಳಿದರು. 


ಇಂದು ಮಾನ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ‌ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಕೆಳಕಂಡ ಅಂಶಗಳ ಬಗ್ಗೆ ಚರ್ಚೆ ಮಾಡಿ ನಿರ್ಣಯಿಸಲಾಗಿರುವ ಅಂಶಗಳನ್ನು ಸಹ ವಿವರಿಸಿದರು. 


೦೧. ಈ ಸಂದರ್ಭದಲ್ಲಿ ವೈದ್ಯರು ಪ್ರಕರಣಗಳು ಪ್ರಾರಂಭದಲ್ಲಿಯೇ ವರದಿಯಾದಲ್ಲಿ ಚಿಕಿತ್ಸೆ ಹಾಗೂ ಜೀವ ಉಳಿಸುವ ನಿಟ್ಟಿನಲ್ಲಿ ಸಹಕಾರಿಯಾಗುವುದು.


೦೨. ಚಿಕಿತ್ಸೆ ವಿಧಿ-ವಿಧಾನಗಳಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಯಿತು.


೦೩. ರೋಗಿಗಳು ರೋಗ ಲಕ್ಷಣ ಕಂಡು ಬಂದ ಮೇಲೆಯೂ ಸರಾಸರಿ ೦೪ ದಿನದ ನಂತರ ಬರುತ್ತಿದ್ದಾರೆ.

ಆದ್ದರಿಂದ ಜನರು ರೋಗ ಲಕ್ಷಣ ಕಾಣಿಸಿಕೊಂಡ ಕೂಡಲೇ ವೈದ್ಯರನ್ನು ಸಂಪರ್ಕಿಸುವಂತೆ ಮುಖ್ಯಮಂತ್ರಿಗಳ ಪರವಾಗಿ ಸಚಿವರು ಮನವಿ ಮಾಡಿದರು.


೦೪. ಐಸಿಯು ನಲ್ಲಿರುವ ವ್ಯಕ್ತಿಗಳ ಚಿಕಿತ್ಸೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲು ಹಾಗೂ ಅವರಿಗೆ ಕೆಲವು ವಿಶೇಷ ಪರೀಕ್ಷೆಗಳನ್ನು ನಡೆಸಲು ತೀರ್ಮಾನಿಸಲಾಗಿದೆ.


೦೫. ಜೊತೆಗೆ ಕೋವಿಡ್-೧೯ ಚಿಕಿತ್ಸೆಗೆ ಸೂಕ್ತ ಮಾರ್ಗಸೂಚಿಯನ್ನು ಅನುಸರಿಸಲು ಸಹ ತೀರ್ಮಾನಿಸಲಾಯಿತು.


೦೬. ಪ್ಲಾಸ್ಮಾ ಚಿಕಿತ್ಸೆಗೆ ಐಸಿಎಂಆರ್ ಅನುಮತಿಗೆ ಕಾಯಲಾಗುತ್ತಿದೆ. ಜ್ವರ, ಶೀತ, ಉಸಿರಾಟದ ತೊಂದರೆ ಇರುವವರು ಕೂಡಲೇ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವ ಅಗತ್ಯವಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿರುವುದಾಗಿ ಸಚಿವರು ವಿವರಣೆ‌ ನೀಡಿದರು. ಇದಕ್ಕಾಗಿ ಪ್ರತ್ಯೇಕ ಆಪ್ ಅಭಿವೃದ್ಧಿ ಪಡಿಸಲಾಗುತ್ತಿರುವ ಬಗ್ಗೆ ಸಭೆ ಅವಲೋಕಿಸಿರುವ ವಿಷಯವನ್ನು ಸಚಿವರು‌ ಹೇಳಿದರು. 


೦೭. ಯಾವುದೇ ಪ್ರಕರಣ ವರದಿಯಾಗದೆ ಇರುವ ಜಿಲ್ಲೆಗಳಲ್ಲಿಯೂ ಈ ರೋಗ ಲಕ್ಷಣಗಳಿರುವ ವ್ಯಕ್ತಿಗಳ ಪರೀಕ್ಷೆ ನಡೆಸುವಂತೆ ಸೂಚಿಸಲಾಗಿದೆ.


೦೮. ಪ್ರತಿ ಜಿಲ್ಲೆಯಲ್ಲಿ ಎರಡು ಹಾಗೂ ಪ್ರತಿ ವೈದ್ಯಕೀಯ ಕಾಲೇಜುಗಳಲ್ಲಿ ಒಂದು ಪರೀಕ್ಷಾ ಕೇಂದ್ರ ಸ್ಥಾಪಿಸುವಂತೆ ಐಸಿಎಂಆರ್ ಮಾರ್ಗಸೂಚಿ ಹೊರಡಿಸಿದ್ದು, ಈ ನಿಟ್ಟಿನಲ್ಲಿ ಏಪ್ರಿಲ್ ಅಂತ್ಯದೊಳಗೆ ಇನ್ನೂ ೧೦ ಪ್ರಯೋಗಾಲಯಗಳನ್ನು ಸ್ಥಾಪಿಸಲು ಕ್ರಮ ವಹಿಸಲಾಗುತ್ತಿದೆ.

ಲಾಕ್ ಡೌನ್ ಸಡಿಲಗೊಳಿಸಿದ ನಂತರ ಪ್ರಕರಣಗಳ ಸಂಖ್ಯೆ ಹೆಚ್ಚಾದಲ್ಲಿ ಅವುಗಳನ್ನು ನಿಭಾಯಿಸುವ ಸಿದ್ಧತೆ ಮಾಡಿಕೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಯಿತು.


೧೦. ಜೊತೆಗೆ, ವಿವಿಧ ಕಂಪೆನಿಗಳಲ್ಲಿ ಲಾಕ್ ಡೌನ್ ಸಡಿಲಗೊಳಿಸುವ ಸಂದರ್ಭದಲ್ಲಿ ಥರ್ಮಲ್ ಸ್ಕಾನರ್ ಮತ್ತಿತರ ಸರಳ ಪರೀಕ್ಷಾ ಪರಿಕರಗಳ ಮೂಲಕ ತಮ್ಮ ಸಿಬ್ಬಂದಿಯಲ್ಲಿ ರೋಗ ಲಕ್ಷಣವಿದೆಯೇ ಎಂದು ಪ್ರತಿ ದಿನ ಪರೀಕ್ಷೆ ಮಾಡುವ ಅಗತ್ಯವಿದೆ ಎಂದು ತಜ್ಞರು ಅಭಿಪ್ರಾಯಪಟ್ಟರು.


೧೧. ಏಪ್ರಿಲ್ ೨೧ ರಂದು ಮತ್ತೆ ಸಭೆ ಸೇರಿ, ಪರಿಸ್ಥಿತಿ ಅವಲೋಕಿಸಿ ಮುಂದಿನ ತೀರ್ಮಾನ ಕೈಗೊಳ್ಳಲು ತೀರ್ಮಾನಿಸಲಾಯಿತು.


೧೨. ಈ ವರೆಗೆ ೧೭ ಸಾವಿರಕ್ಕೂ ಹೆಚ್ಚು ಪರೀಕ್ಷೆ ನಡೆಸಲಾಗಿದೆ. ಪ್ರಾರಂಭದಲ್ಲಿ ದಿನಕ್ಕೆ ೫೦೦ ಪರೀಕ್ಷೆ ನಡೆಸಲಾಗುತ್ತಿತ್ತು ಈಗ ದಿನಕ್ಕೆ ೨,೦೦೦ ಪರೀಕ್ಷೆ ನಡೆಸಲಾಗುತ್ತಿದೆ.


೧೩. ಪರೀಕ್ಷೆಯಲ್ಲಿ ರಾಜ್ಯವು ದೇಶಕ್ಕೆ ಎರಡನೇ ಸ್ಥಾನದಲ್ಲಿದೆ. ಸರಾಸರಿ ೪೩.೫೬ ಪರೀಕ್ಷೆಗಳಲ್ಲಿ ಒಂದು ಪಾಸಿಟಿವ್ ಪ್ರಕರಣ ವರದಿಯಾಗುತ್ತಿದೆ. ಮೊದಲ ಸ್ಥಾನದಲ್ಲಿರುವ ಕೇರಳದಲ್ಲಿ ೪೪.೧೬ ಪರೀಕ್ಷೆಗಳಲ್ಲಿ ಒಂದು ಪಾಸಿಟಿವ್ ಪ್ರಕರಣ ವರದಿಯಾಗುತ್ತಿದೆ.



ಇದಲ್ಲದೇ, 

ಕೇಂದ್ರ ಸರ್ಕಾರದ Indian Council for Medical Research ೬.೫ ಲಕ್ಷ rapid test ಕಿಟ್ ಗಳನ್ನು ಖರೀದಿಸಿದ್ದು, ಕರ್ನಾಟಕಕ್ಕೆ ಇಂದು ೧೨,೪೦೦ ಕಿಟ್ ಗಳನ್ನು ಪೂರೈಸಲಾಗುತ್ತಿದೆಯಂಬ ಅಂಶವನ್ನು ಸಚಿವರು ಹೇಳಿದರು. 


ಸರ್ಕಾರದಿಂದ ಖಾಸಗಿ ಆರೋಗ್ಯ ಪ್ರಯೋಗಾಲಯಗಳಲ್ಲಿ ಕೋವಿಡ್ ಪರೀಕ್ಷೆಗೆ ಸ್ಯಾಂಪಲ್‌ ಕಳುಹಿಸಿದ ಸಂದರ್ಭದಲ್ಲಿ ಪ್ರತಿ ಸ್ಯಾಂಪಲ್ ಗೆ ರೂ.೨,೨೫೦ ಗರಿಷ್ಟ ದರವನ್ನು ವಿಧಿಸಬೇಕು ಎಂಬ ಮಾರ್ಗದರ್ಶಿ ‌ಆದೇಶವನ್ನು ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಾರಿ ಮಾಡಿರುವ ಬಗ್ಗೆ ಸಚಿವರು ಹೇಳಿದರು. 


೧೬.೦೪.೨೦೨೦ ರಂದು ೨೧೮೭ ಸಂಖ್ಯೆಯ ಆಪ್ತ ಸಮಾಲೋಚನಾ ಕಾರ್ಯ ನಿರ್ವಹಿಸಲಾಗಿದೆಯೆಂದು ವಿವರಿಸಿದ ಸಚಿವರು ಇಲ್ಲಿಯವರೆಗೆ ಒಟ್ಟಾರೆ ೪೦೩೯೩ ವ್ಯಕ್ತಿಗಳಿಗೆ ಆಪ್ತ ಸಮಾಲೋಚನಾ ಸೇವೆಗಳನ್ನು ನೀಡಲಾಗಿದೆಯೆಂದರು. 


ಉದಾರ ದೇಣಿಗೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಕೋವಿಡ್ ಪರಿಹಾರ ನಿಧಿಗೆ ಇಂದು ರೂ.೧.೪೮ ಕೋಟಿ ಸ್ವೀಕೃತವಾಗಿದ್ದು, ಒಟ್ಟಾರೆ ೧೪೨.೮೧ ಕೋಟಿ ರೂಗಳು ಇಲ್ಲಿಯವರೆಗೆ ಸ್ವೀಕೃತವಾಗಿದೆ ಎಂಬ ವಿಷಯವನ್ನು ಸಚಿವರು ವಿವರಿಸಿದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in karnataka »

ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ

ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ

ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ

ರಾಮನಗರ, ಫೆ. 02  :  ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು

ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ

ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ

ಸಂವಿಧಾನ ಜಾಗೃತಿ ಜಾಥಾ

ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ

ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ

ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ

ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,

ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ

ರಾಮನಗರ:  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ

ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ

ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ  ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ

೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ

ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ  ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ

ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್

ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ

ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ

ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ

Top Stories »  


Top ↑