Tel: 7676775624 | Mail: info@yellowandred.in

Language: EN KAN

    Follow us :


21 ರಿಂದ ಶ್ರೀ ವೈರಮುಡಿ ಬ್ರಹ್ಮ ರಥೋತ್ಸವ

Posted date: 07 Mar, 2018

Powered by:     Yellow and Red

21 ರಿಂದ ಶ್ರೀ ವೈರಮುಡಿ ಬ್ರಹ್ಮ ರಥೋತ್ಸವ

ಮಂಡ್ಯ : ಮೇಲುಕೋಟೆ ಶ್ರೀ ಕ್ಷೇತ್ರದಲ್ಲಿ ನಡೆಯಲಿರುವ ಶ್ರೀ ವೈರಮುಡಿ ಬ್ರಹ್ಮೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸುವ ಭಕ್ತಾಧಿಗಳಿಗೆ ಮೂಲಭೂತ ಸೌಕರ್ಯ ಒದಗಿಸಲು ವ್ಯವಸ್ಥಿತವಾಗಿ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಎನ್.ಮಂಜುಶ್ರೀ ಅವರು ತಿಳಿಸಿದರು.
  ಇಂದು ಮೇಲುಕೋಟೆ ಪ್ರವಾಸಿ ಮಂದಿರದಲ್ಲಿ ನಡೆದ ಶ್ರೀ ವೈರಮುಡಿ ಬ್ರಹ್ಮೋತ್ಸವ ಆಚರಣೆ ಸಂಬಂಧ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ರಾಜ್ಯ ಹಾಗೂ ದೇಶದ ಇತರೆ ಭಾಗಗಳಿಂದ ಭಕ್ತಾಧಿಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಮೂಲಭೂತ ಸೌಕರ್ಯಗಳಾದ ಕುಡಿಯಲು ಶುದ್ಧ ನೀರು, ಶೌಚಾಲಯ ವ್ಯವಸ್ಥೆ ಸೇರಿದಂತೆ ಯಾವುದೇ ಸಮಸ್ಯೆ ಭಕ್ತಾಧಿಗಳಿಗೆ ಎದುರಾಗಬಾರದು. ಈ ನಿಟ್ಟಿನಲ್ಲಿ ಸಂಬಂಧಟ್ಟ ಅಧಿಕಾರಿಗಳು ಬಹಳ ಎಚ್ಚರಿಕೆಯಿಂದ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು. 
 ಮೇಲುಕೋಟೆ ಶ್ರೀಕ್ಷೇತ್ರದ ಪ್ರಮುಖ ಸ್ಥಳಗಳಲ್ಲಿ ಟ್ಯಾಂಕರ್‍ಗಳ ಮೂಲಕ ಕುಡಿಯಲು ಶುದ್ಧ ನೀರಿನ ವ್ಯವಸ್ಥೆಯಾಗಬೇಕು. ಮಹಿಳೆಯರಿಗೆ ಹಾಗೂ ಪುರುಷರಿಗೆ ಪ್ರತ್ಯೇಕವಾಗಿ ತಾತ್ಕಾಲಿಕ ಶೌಚಾಲಯ ಹಾಗೂ ಕಲ್ಯಾಣಿಯ ಬಳಿ ಭಕ್ತಾಧಿಗಳಿಗೆ ಬಟ್ಟೆ ಬದಲಾಯಿಸಲು ತಾತ್ಕಾಲಿಕ ಕೊಠಡಿಗಳ ನಿರ್ಮಾಣವಾಗಬೇಕು. ಆರೋಗ್ಯ ಸೇವೆಗಳು ಭಕ್ತಾಧಿಗಳಿಗೆ ಲಭ್ಯವಾಗುವ ರೀತಿಯಲ್ಲಿ ಆರೋಗ್ಯ ಇಲಾಖೆಯಿಂದ ವ್ಯವಸ್ಥೆ ಮಾಡÀಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.
 ಶ್ರೀ ವೈರಮುಡಿ ಬ್ರಹ್ಮೋತ್ಸವ ಕಾರ್ಯಕ್ರಮ ಮಾರ್ಚ್ 21 ರಿಂದ ಏಪ್ರಿಲ್ 2ರವರೆಗೆ ನಡೆಯಲಿದ್ದು, ಮೇಲುಕೋಟೆ ಶ್ರೀ ಕ್ಷೇತ್ರದಲ್ಲಿ ಸ್ವಚ್ಛ ವಾತಾವರಣ ಕಾಪಾಡಬೇಕು. ಈ ನಿಟ್ಟಿನಲ್ಲಿ ದಿನದಲ್ಲಿ ಎರಡು ಬಾರಿ ಸ್ವಚ್ಛತಾ ಕಾರ್ಯವನ್ನು ತಪ್ಪದೆ ಹಮ್ಮಿಕೊಳ್ಳಬೇಕು. ರಥ ಬೀದಿ ಸೇರಿದಂತೆ ಮುಖ್ಯ ರಸ್ತೆಗಳು ಶೀಘ್ರ ದುರಸ್ತಿಯಾಗಬೇಕು. ವಾಹನ ಪಾರ್ಕಿಂಗ್‍ಗೆ ಸೂಕ್ತ ವ್ಯವಸ್ಥೆಯಾಗಬೇಕು. ಸುಗಮ ಸಂಚಾರ, ವಾಹನ ನಿಯಂತ್ರಣ ಹಾಗೂ ಭದ್ರತಾ ವ್ಯವಸ್ಥೆಗೆ ಪೊಲೀಸ್ ಇಲಾಖೆ ಕ್ರಮವಹಿಸಬೇಕು ಎಂದು ತಿಳಿಸಿದರು.
 ಭಕ್ತಾಧಿಗಳ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು 90 ಬಸ್‍ಗಳ ಸೌಲಭ್ಯ ಕಲ್ಪಿಸಲು ಮುಂದಾಗಿದ್ದು, ಶ್ರೀ ವೈರಮುಡಿ ಬ್ರಹ್ಮೋತ್ಸವ ವಿಶೇಷ ಬಸ್ ಸಂಚಾರ ಮಾಡುವ ಬಸ್ ನಿಲ್ದಾಣಗಳಲ್ಲಿ ಭಕ್ತಾಧಿಗಳ ಮಾಹಿತಿಗಾಗಿ ಫಲಕಗಳನ್ನು ಅಳವಡಿಸಲು ಕ್ರಮವಹಿಸಬೇಕು ಎಂದು ಹೇಳಿದ ಜಿಲ್ಲಾಧಿಕಾರಿಯವರು ಮೇಲುಕೋಟೆ ಗ್ರಾಮ, ದೇವಾಲಯದ ರಾಜಬೀದಿಗಳ ವಿದ್ಯುತ್ ಕಂಬಗಳ ಪರಿಶೀಲನೆ ಸಮರ್ಪಕವಾಗಿ ಆಗಬೇಕು. ವಿಶೇಷ ದೀಪಾಲಂಕಾರದ ಸಂದರ್ಭದಲ್ಲಿ ವಿದ್ಯುತ್ ಅವಘಡಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ದೀಪಾಲಂಕಾರ ಮಾಡಿರುವ ಸ್ಥಳಗಳನ್ನು ಲೈನ್ ಮನ್‍ಗಳ ಮೂಲಕ ಆಗಾಗ್ಗೆ ಪರಿಶೀಲನೆ ಮಾಡಲು ಚೆಸ್ಕಾಂ ಕ್ರಮವಹಿಸಬೇಕು ಎಂದು ತಿಳಿಸಿದರು.
 ಮೇಲುಕೋಟೆ ಶ್ರೀ ಕ್ಷೇತ್ರದಲ್ಲಿ ಭಕ್ತಾಧಿಗಳ ಮಾಹಿತಿಗಾಗಿ ದೇವಸ್ಥಾನ, ವಾಹನ ಪಾರ್ಕಿಂಗ್ ಸ್ಥಳಗಳು ಸೇರಿದಂತೆ ಇತರೆ ಸೌಲಭ್ಯ ಕುರಿತು ಪೂರ್ಣ ಮಾಹಿತಿ ಇರುವ ಫಲಕಗಳನ್ನು ಪ್ರಮುಖ ಸ್ಥಳಗಳಲ್ಲಿ ಅಳವಡಿಸಬೇಕು. ತೇರು ಸ್ಥಿತಿಗತಿ ಬಗ್ಗೆ ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಅಭಿಯಂತರರು ಶೀಘ್ರ ದೃಢೀಕರಣ ನೀಡಬೇಕು. ತೆಪ್ಪವನ್ನು ಪ್ರಾಯೋಗಿಕವಾಗಿ ಚಲಿಸಿ ಪರಿಶೀಲಿಸಬೇಕು. ಮುಡಿಗಳನ್ನು ಮಂಡ್ಯ ಖಜಾನೆಯಿಂದ ದೇವಾಲಯಕ್ಕೆ ತರುವಾಗ ಮತ್ತು ಹಿಂದಿರುಗುವಾಗ ಸೂಕ್ತ ಪೊಲೀಸ್ ಬಂದೋಬಸ್ತ್‍ಗೆ ವ್ಯವಸ್ಥೆಯಾಗಬೇಕು ಎಂದು ಹೇಳಿದರು.
  ವಾಹನ ಪಾರ್ಕಿಂಗ್ ಸ್ಥಳಗಳಲ್ಲಿ ತಾತ್ಕಾಲಿಕ ಲೈಟ್‍ಗಳ ಅಳವಡಿಕೆ. ಅಗ್ನಿಶಾಮಕ ವಾಹನವನ್ನು ಮುಂಜಾಗೃತಾ ಕ್ರಮವಾಗಿ ನಿಯೋಜಿಸಬೇಕು. ವೈರಮುಡಿ ಆಮಂತ್ರಣ ಪತ್ರಿಕೆಗಳನ್ನು ಗಣ್ಯರಿಗೆ ತಲುಪಿಸುವ ವ್ಯವಸ್ಥೆಯಾಗಬೇಕು. ಮೇಲುಕೋಟೆ ಶ್ರೀ ಕ್ಷೇತ್ರದಲ್ಲಿ ತಾತ್ಕಾಲಿಕ ಸಿಸಿ ಕ್ಯಾಮರಾ ಅಳವಡಿಕೆಯಾಗಬೇಕು. ಶ್ರೀದೇವಾಲಯದ ಧಾರ್ಮಿಕ ಕಾರ್ಯಕ್ರಮಗಳ ಸಿದ್ಧತೆಗಳನ್ನು ಸಮರ್ಪಕವಾಗಿ ಆಯೋಜಿಸಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಎನ್.ಮಂಜುಶ್ರೀ ತಿಳಿಸಿದರು.
  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಧಿಕಾ, ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವರಾಜು, ಪಾಂಡವಪುರ ಉಪ ವಿಭಾಗಾಧಿಕಾರಿ ಯಶೋಧಾ, ಡಿವೈ ಎಸ್ಪಿ ಯೋಗೇಂದರನಾಥ್ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ  ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದರು.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in karnataka »

ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ

ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ

ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ

ರಾಮನಗರ, ಫೆ. 02  :  ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು

ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ

ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ

ಸಂವಿಧಾನ ಜಾಗೃತಿ ಜಾಥಾ

ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ

ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ

ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ

ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,

ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ

ರಾಮನಗರ:  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ

ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ

ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ  ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ

೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ

ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ  ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ

ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್

ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ

ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ

ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ

Top Stories »  


Top ↑