Tel: 7676775624 | Mail: info@yellowandred.in

Language: EN KAN

    Follow us :


ಹತ್ತು ಸಾವಿರ ಉದ್ಯೋಗ ಅವಕಾಶ

Posted date: 08 Mar, 2018

Powered by:     Yellow and Red

ಹತ್ತು ಸಾವಿರ ಉದ್ಯೋಗ ಅವಕಾಶ

ಮೈಸೂರು : ಮೈಸೂರು ವಿಭಾಗ ಮಟ್ಟದ ಉದ್ಯೋಗ ಮೇಳದಲ್ಲಿ 10 ಸಾವಿರ ಉದ್ಯೋಗಳನ್ನು 150 ಕ್ಕೂ ವಿವಿಧ ಅಧಿಕ ಕಂಪನಿಗಳಿಂದ ಉದ್ಯೋಗಾಂಕ್ಷಿಗಳಿಗೆ ಉದ್ಯೋಗ ದೊರೆಯಲಿದೆ. ಉದ್ಯೋಗ ಸಿಗದವರು ಚಿಂತಿಸಬೇಕಿಲ್ಲ ಅವರಿಗೆ ಇನ್ನೂ ಉತ್ತಮ ಉದ್ಯೋಗ ಪಡೆಯಲು ಅವಕಾಶ ಲಭಿಸುವುದು ಎಂದು ಸಕ್ಕರೆ ಮತ್ತು ಸಣ್ಣ ಕೈಗಾರಿಕೆ ಸಚಿವೆ ಎಂ.ಸಿ.ಮೋಹನಕುಮಾರಿ ಉ|| ಗೀತಾ ಮಹದೇವಪ್ರಸಾದ್ ಅವರು ಹೇಳಿದರು.
ಮಹಾರಾಜು ಕಾಲೇಜು ಮೈದಾನದಲಿ ಶನಿವಾರ ಕಾರ್ಮಿಕ ಉದ್ಯೋಗ ಮತ್ತು ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಮತ್ತು ಜಿಲ್ಲಾಡಳಿತದ ಸಹಯೋಗದಲ್ಲಿ ಆಯೋಜಿಸಲಾಗಿದ್ದ “ಪ್ರಾದೇಶಿಕ ಉದ್ಯೋಗ ಮೇಳ”ವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯ ಸರ್ಕಾರವು ಉದ್ಯೋಗ ಕಲ್ಪಿಸಲು ಹಲವು ಕಾರ್ಯಕ್ರಮಗಳನ್ನು ರೂಪಿಸಿ, ಉದ್ಯೋಗ ಬಯಸುವ ಅಭ್ಯರ್ಥಿಗಳಿಗೆ ಉದ್ಯೋಗಕ್ಕೆ ಸೇರಲು ಬೇಕಾದಂತಹ ತರಬೇತಿಯನ್ನು ನೀಡಲು ಸರ್ಕಾರ ಕೌಶಲ್ಯ ಅಭಿವೃದ್ಧಿ ನಿಗಮ ಸ್ಥಾಪಿಸಿ ಅವರುಗಳಿಗೆ ತರಭೇತಿ ನೀಡುತ್ತಿದೆ ಎಂದರು. ಮುಂದಿನ ಒಂದು ವರ್ಷದಲ್ಲಿ 2.5 ಲಕ್ಷ ಉದ್ಯೋಗ ಸೃಷ್ಠಿಸುವ ಗುರಿಯನ್ನು ಹೊಂದಿದೆ. ರಾಜ್ಯದಲ್ಲಿ ಸಣ್ಣ, ಮಧ್ಯಮ ಹಾಗೂ ಬೃಹತ್ ಕೈಗಾರಿಕೆಗಳಲ್ಲಿ 13.5 ಲಕ್ಷ ಉದ್ಯೋಗ ಸೃಷ್ಠಿಸಿದೆ. ಸಣ್ಣ ಹಾಗೂ ಅತೀ ಸಣ್ಣ 6 ಲಕ್ಷ ಕೈಗಾರಿಕೆಗಳಿದ್ದು 35 ಲಕ್ಷ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ ಎಂದರು.
ಶಾಸಕ ಎಂ.ಕೆ.ಸೋಮಶೇಖರ್ ಮಾತನಾಡಿ ಮೈಸೂರು ಜಿಲ್ಲೆಯಲ್ಲಿ ಸರ್ಕಾರದ ವತಿಯಿಂದ ನಡೆಸುತ್ತಿರುವ 3ನೇ ಉದ್ಯೋಗ ಮೇಳವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನೇಕ ಯೋಜನೆಗಳನ್ನು ತಂದು ಇತಿಹಾಸ ಸೃಷ್ಠಿಸಿದ್ದಾರೆ. ಯುವಕ/ಯುವತಿಯರಿಗೆ ಉದ್ಯೋಗ ಕಲ್ಪಿಸಲು ಇನ್ವೆಸ್ಟ್‍ಮೆಂಟ್ ಕರ್ನಾಟಕ ಎಂಬ ಕಾರ್ಯಕ್ರಮವನ್ನು ರೂಪಿಸಿದ್ದಾರೆ ಎಂದರು.
ವಿವಿಧ ಕ್ಷೇತ್ರಗಳಲ್ಲಿ ಸಾಕಷ್ಟು ಉದ್ಯೋಗಗಳಿವೆ ಅದಕ್ಕೆ ಪೂರಕವಾಗಿ ಸಿದ್ಧತೆಯ ಅರ್ಹ ಅಭ್ಯರ್ಥಿಗಳ ಇಲ್ಲ. ಜೀವನದಲ್ಲಿ ಪ್ರತಿಯೊಬ್ಬರಿಗೂ ಶ್ರಮ ಮತ್ತು ಗುರಿಯ ಕಡೆಗೆ ಸಾಗಲು ಸಿದ್ಧತೆ ನಡೆಸುವ ಅಭ್ಯರ್ಥಿಗಳಿಗೆ ಉದ್ಯೋಗ ಪಡೆಯಲು ಅವಕಾಶ ಇದೆ ಎಂದರು.
ಉದ್ಯೋಗಾಂಕ್ಷಿಗಳು ತಾವು ಕೆಲಸ ಬಯಸುವ ಕ್ಷೇತ್ರದಲ್ಲಿ ಕೌಶಲ್ಯವನ್ನು ಪಡೆದು ಕಂಪ್ಯೂಟರ್ ಹಾಗೂ ಇಂಗ್ಲೀಷ್ ಭಾಷೆಯನ್ನು ಕಲಿಯಬೇಕು. ಭಾಷೆ ಕಲಿಯಲು ತಪ್ಪಾದರು ಮಾತನಾಡುತ್ತಿರಬೇಕು ಕಿವಿಯ ಮೇಲೆ ಶಬ್ಧಗಳ ಕೇಲಿದಾಗ ಮಾತ್ರ ಭಾಷೆ ಕಲಿಯಲು ಸಾಧ್ಯ ಎಂದು ಅವರು ತಿಳಿಸಿದರು. 
ಕಾರ್ಯಕ್ರಮದಲ್ಲಿ ಶಾಸಕ ವಾಸು, ಮಹಾಪೌರರಾದ ಬಿ.ಭಾಗ್ಯವತಿ, ಡಾ.ಯತೀಂದ್ರ ಸಿದ್ದರಾಮಯ್ಯ, ಮಾಜಿ ಶಾಸಕ ಬಾಲರಾಜ್, ಪಾಲಿಕೆ ಸದ್ಯರುಗಳಾದ ಎಂ.ರಮೇಶ್, ಶಿವಮಾದು, ಪ್ರಕಾಶ್ ಕುಮಾರ್ ಹಾಗೂ ಅಪರ ಜಿಲ್ಲಾಧಿಕಾರಿ ಟಿ.ಯೋಗೇಶ ಮತ್ತಿರ ಗಣ್ಯ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in karnataka »

ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ

ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ

ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ

ರಾಮನಗರ, ಫೆ. 02  :  ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು

ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ

ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ

ಸಂವಿಧಾನ ಜಾಗೃತಿ ಜಾಥಾ

ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ

ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ

ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ

ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,

ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ

ರಾಮನಗರ:  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ

ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ

ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ  ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ

೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ

ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ  ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ

ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್

ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ

ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ

ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ

Top Stories »  


Top ↑