Tel: 7676775624 | Mail: info@yellowandred.in

Language: EN KAN

    Follow us :


ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಇನ್ನೂ ಹೆಚ್ಚು ಆಚರಣೆಗೆ ತರಬೇಕಿದೆ: ಡಾ|| ಟಿ. ರಂಗಸ್ವಾಮಿ

Posted date: 08 Mar, 2018

Powered by:     Yellow and Red

ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಇನ್ನೂ ಹೆಚ್ಚು ಆಚರಣೆಗೆ ತರಬೇಕಿದೆ: ಡಾ|| ಟಿ. ರಂಗಸ್ವಾಮಿ

ಹಾಸನ : ನಮ್ಮ ಪೂರ್ವಿಕರು ಹಬ್ಬ ಹರಿದಿನಗಳಲ್ಲಿ ಹಳ್ಳಿ ಸೊಗಡು ತುಂಬಿರುವಂತಹ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದರು ಇವುಗಳನ್ನು ನೋಡಿ ಆನಂದದಿಂದ ಮೈ ಮರೆಯುತ್ತಿದ್ದೆವು, ಇಂತಹ ಮನೋರಮಣಿಯ ದೃಶ್ಯಗಳನ್ನು ನಮ್ಮ ಮುಂದಿನ ಪೀಳಿಗೆಯು ಸಹ ನೋಡಿ ಆನಂದಿಸಲು ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಇನ್ನೂ ಹೆಚ್ಚು ಆಚರಣೆಗೆ ತರಬೇಕಿದೆ ಎಂದು ಇಂಜಿನಿಯರಿಂಗ್ ಕಾಲೇಜು ಪ್ರಾಂಶುಪಾಲರಾದ ಡಾ|| ಟಿ. ರಂಗಸ್ವಾಮಿ ಅವರು ಹೇಳಿದರು. 
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಗಿರಿಜನ ಉತ್ಸವ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಅವರು ನಾಡ ಸಂಸ್ಕøತಿಗೆ ಸಂಬಂಧಪಟ್ಟ ಇಂತಹ ಒಂದು ಕಾರ್ಯಕ್ರಮ ನಮ್ಮ ಕಾಲೇಜಿನಲ್ಲಿ ನೆಡೆಯಲು ಆವಕಾಶ ಮಾಡಿಕೊಟ್ಟ ಎಲ್ಲರಿಗೂ ಧನ್ಯವಾದಗಳನ್ನು ತಿಳಿಸಿದರು.
ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶ್ರೀಧರ್ ಅವರು ಮಾತನಾಡಿ ನಮ್ಮ ಪೂರ್ವಿಕರು ನಮಗಾಗಿ ಹಲವಾರು ವಿಶೇಷ ಆಚಾರ ವಿಚಾರ, ಉಡುಗೆ ತೊಡುಗೆಗಳನ್ನು ಬಿಟ್ಟುಹೋಗಿದ್ದಾರೆ ಇವುಗಳಲ್ಲಿರುವ ವಿಶೇಷತೆಯೆ ಸಾಂಸ್ಕøತಿಕವಾಗಿ ನಮ್ಮನು ಮನೊರಂಜನೆಗೊಳಿಸುತ್ತಿದೆ ಹಾಗೂ ಇಂತಹ ಸಂಸ್ಕøತಿಯನ್ನು ಎತ್ತಿ ಇಡಿಯುವಂತಹ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದಕ್ಕೆ ನಮ್ಮ ಕನ್ನಡ ಸಂಸ್ಕøತಿ ಇಲಾಖೆಗೆ ಅಭಿನಂದನೆಗಳು ಎಂದು ಅವರು ಹೇಳಿದರು.
ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಹೆಚ್.ಎಂ ಶಿವಣ್ಣ ಅವರು ಮಾತನಾಡಿ ಗಿರಿಜನ ಉತ್ಸವವು ಒಂದು ಅಪರೂಪದ ಕಾರ್ಯಕ್ರಮವಾಗಿದೆ ನಮ್ಮ ಹಾಸನ ಸಾಂಸ್ಕøತಿಕ ನೆಲೆಗಟ್ಟಾಗಿದ್ದು ಇಂತಹ ನಾಡಿನಲ್ಲಿ ಈ ಕಾರ್ಯಕ್ರಮಗಳು ನಡೆಯುತ್ತಿರುವುದು ಖುಷಿಪಡುವ ವಿಷಯವಾಗಿದೆ, ಇಂತಹ ನೆಲೆಗಟ್ಟಾಗಿರುವ ಕಾರ್ಯಕ್ರಮಗಳನ್ನು ಪರಿಚಯಿಸುತ್ತಿರುವ ನಮ್ಮ ಕಲಾತಂಡಗಳ ಸೇವೆ ಅವಿಸ್ಮರಣೀಯ ಎಂದು ಅವರು ಹೇಳಿದರು.
2017-18 ನೇ ಸಾಲಿನಲ್ಲಿ ಗಿರಿಜನ ಉತ್ಸವ ಎಲ್ಲೆಡೆ ಉತ್ತಮವಾಗಿ ಮೂಡಿಬರುತ್ತಿದೆ ಇತಂಹ ಕಾರ್ಯಕ್ರಮಗಳನ್ನು ನೆಡೆಸಿಕೊಡುವಂತಹ ನಮ್ಮ ಸರ್ಕಾರಕ್ಕೆ ಅಭಿನಂದನೆಗಳು ಎಂದ ಅವರು ಸ್ವತಹ ಯಾವವ್ಯಕ್ತಿ ತನ್ನ ಅನ್ನವನ್ನು ಶ್ರಮದಿಂದ ತಾನೆ ದುಡಿದು ತಿನ್ನುತ್ತಾನೆ ಅವನೇ ಶ್ರೇಷ್ಠ ಇದು ಪ್ರಕೃತಿ ನಿಯಮ ಎಂದು ಅವರು ಶ್ರಮದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.
ಮೆರವಣಿಗೆಗೆ ಚಾಲನೆ: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಗಿರಿಜನ ಉತ್ಸವ ಮೆರವಣಿಗೆಗೆ ಅಪರ ಜಿಲ್ಲಾಧಿಕಾರಿ ಪೂಣಿಮ ಅವರು ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಸಹಾಯಕ ಪ್ರಾಧ್ಯಾಪಕರಾದ ಡಾ|| ಎಲ್ ತಿಮ್ಮೇಶ್, ಡಾ|| ಕೆ.ಸಿ. ರವಿಶಂಕರ್, ಮಹಂತಪ್ಪ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮುಖಂಡರುಗಳಾದ ಶೇಕರಪ್ಪ, ಧರ್ಮೇಶ್ ಮತ್ತಿತರ ಉಪಸ್ಥಿತರು ಹಾಜರಿದ್ದರು.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in karnataka »

ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ

ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ

ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ

ರಾಮನಗರ, ಫೆ. 02  :  ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು

ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ

ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ

ಸಂವಿಧಾನ ಜಾಗೃತಿ ಜಾಥಾ

ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ

ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ

ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ

ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,

ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ

ರಾಮನಗರ:  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ

ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ

ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ  ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ

೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ

ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ  ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ

ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್

ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ

ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ

ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ

Top Stories »  


Top ↑