Tel: 7676775624 | Mail: info@yellowandred.in

Language: EN KAN

    Follow us :


ಮಹಿಳಾ ಮತದಾರರ ಅನುಪಾತ ಕಳೆದ 5 ವರ್ಷಗಳಲ್ಲಿ ಅತ್ಯಂತ ಹೆಚ್ಚು

Posted date: 09 Mar, 2018

Powered by:     Yellow and Red

ಮಹಿಳಾ ಮತದಾರರ ಅನುಪಾತ ಕಳೆದ 5 ವರ್ಷಗಳಲ್ಲಿ ಅತ್ಯಂತ ಹೆಚ್ಚು

ಬೆಂಗಳೂರು : ಮಾರತ್‍ಹಳ್ಳಿಯ ಬರ್ಥ್‍ರೈಟ್ ಬೈ ರೈನ್‍ಬೋ ಚಿಲ್ಡ್ರನ್ಸ್ ಹಾಸ್ಪಿಟಲ್ ಆಯೋಜಿಸಿದ್ದ ವಾಕಥಾನ್‍ಗೆ ಮುಖ್ಯ ಚುನಾವಣಾಧಿಕಾರಿ ಶ್ರೀ ಸಂಜೀವ್ ಕುಮಾರ್ ಚಾಲನೆ ನೀಡಿದರು. ಈ ವಾಕಥಾನ್ ಬೆಂಗಳೂರಿನಲ್ಲಿ ಸುರಕ್ಷಿತ ಮತ್ತು ಭದ್ರತೆಯ ಪರಿಸರವನ್ನು ಮಹಿಳೆಯರಿಗೆ ಸೃಷ್ಟಿಸುವ ಕುರಿತು ಅರಿವನ್ನು ಉಂಟು ಮಾಡಲು ಆಯೋಜಿಸಲಾಗಿತ್ತು. 

ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಸಂಜೀವ್ ಕುಮಾರ್, ಮುಂದಿನ ವಿಧಾನಸಭೆಯ ಚುನಾವಣೆಗೆ ಮಹಿಳೆಯರು ದೊಡ್ಡ ಸಂಖ್ಯೆಯಲ್ಲಿ ಆಗಮಿಸಿ ಮತದಾನ ಮಾಡಬೇಕೆಂದು ಹೇಳಿದರು. 2018ರ ಪರಿಷ್ಕøತ ಮತದಾರರ ಪಟ್ಟಿಯ ಪ್ರಕಾರ ಕರ್ನಾಟಕದಲ್ಲಿ 4,95,56,059 ಮತದಾರರಿದ್ದು ಅವರಲ್ಲಿ ಮಹಿಳೆಯರು 2,44,72,288 ಮಂದಿ ಮಹಿಳೆಯರೇ ಇದ್ದಾರೆ. ಬೆಂಗಳೂರಿನಲ್ಲಿ 41,92,706 ಮಹಿಳಾ ಮತದಾರರಿದ್ದಾರೆ. 46,04,190 ಪುರುಷ ಮತದಾರರಿದ್ದಾರೆ. 

2013ರ ಮತದಾರರ ಪಟ್ಟಿಗೆ ಹೋಲಿಸಿದರೆ ಈ ಸಲದ ಪಟ್ಟಿಯ ಪರಿಷ್ಕರಣೆಯಲ್ಲಿ ಮಹಿಳಾ ಮತದಾರರ ನೋಂದಣಿ ಪ್ರಮಾಣದಲ್ಲಿ ಶೇ.13ರಷ್ಟು ಹೆಚ್ಚಾಗಿದೆ ಎಂದು ಶ್ರೀ ಸಂಜೀವ್ ಕುಮಾರ್ ಹೇಳಿದರು. `18-19ರ ವಯೋಮಾನದ 7.72 ಲಕ್ಷ ಯುವ ಮತದಾರರು ಈ ವಿಶೇಷ ಪರಿಷ್ಕರಣೆ ಸಮಯದಲ್ಲಿ ನೋಂದಣಿ ಮಾಡಿಕೊಂಡಿದ್ದು ಒಟ್ಟು 15.42 ಲಕ್ಷ ಮತದಾರರು ಸೇರ್ಪಡೆಯಾಗಿದ್ದಾರೆ. 2013ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿನ ಲಿಂಗಾನುಪಾತ 958 ಇದ್ದು ಈಗ 972ಕ್ಕೆ ಏರಿಕೆಯಾಗಿದೆ ಎಂದರು. 

ಹಿಂದಿನ ಮತದಾರರ ಪಟ್ಟಿಯ ಪರಿಷ್ಕರಣೆ ಅನ್ವಯ ಮತದಾರರ ಲಿಂಗಾನುಪಾತ ಹೀಗಿದೆ: 

 

ಪರಿಷ್ಕರಣೆಯ ವರ್ಷ ಲಿಂಗಾನುಪಾತ

2013 ರ ವಿಧಾನಸಭಾ ಚುನಾವಣೆ 958

2014 ಲೋಕಸಭೆ ಚುನಾವಣೆ         960

2015 ಅಂತ್ಯಕ್ಕೆ                                 963

2016 ಅಂತ್ಯಕ್ಕೆ                                 969

2017 ಅಂತ್ಯಕ್ಕೆ                                  969

2018 ಕರಡು                                 971

2018 ಅಂತಿಮ                                  972

 

ಹಿಂದಿನ ಚುನಾವಣೆಗಳಲ್ಲಿ ಒಟ್ಟು ಮತದಾನ ಮಾಡಿದ ಮತದಾರರಲ್ಲಿ ಶೇಕಡಾವಾರು ಮಹಿಳಾ ಮತದಾರರ ಪ್ರಮಾಣ:

 

ಪರಿಷ್ಕರಣೆಯ ವರ್ಷ % ಮಹಿಳೆಯರು %ಪುರುಷರು %ಇತರರು

2013ರ ವಿಧಾನಸಭೆ ಚುನಾವಣೆ 70.47             72.40           2

2014ರ ಲೋಕಸಭೆ ಚುನಾವಣೆ 65.54              67           7

 

18 ವರ್ಷ ವಯೋಮಾನದ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರು ಮತದಾರರ ಪಟ್ಟಿಯಲ್ಲಿ ನೋಂದಣಿಯಾಗದೇ ಇದ್ದರೆ ನಾಮಪತ್ರಗಳನ್ನು ಸಲ್ಲಿಸುವ ಕೊನೆಯ ದಿನಾಂಕದವರೆಗೆ ಮತದಾರರು ತಮ್ಮ ಹೆಸರನ್ನು ಪಟ್ಟಿಯಲ್ಲಿ ಸೇರಿಸಬಹುದು ಎಂದರು. 

ರೈನ್‍ಬೋ ಚಿಲ್ಡ್ರನ್ಸ್ ಹಾಸ್ಪಿಟಲ್‍ನ ಕ್ಲಸ್ಟರ್ ಹೆಡ್ ಮತ್ತು ಉಪಾಧ್ಯಕ್ಷ ನೀರಜ್ ಲಾಲ್, ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಅರ್ಥಪೂರ್ಣ ರೀತಿಯಲ್ಲಿ ಆಚರಿಸಬೇಕೆಂದು ಬಯಸಿದ್ದೆವು. ಆದ್ದರುಂದ ರಾಜ್ಯ ಚುನಾವಣಾ ಆಯೋಗದ ಅಧಿಕಾರಿಗಳನ್ನು ಆಹ್ವಾನಿಸುವ ಮೂಲಕ ಮಹಿಳಾ ಮತದಾರರನ್ನು ಉತ್ತೇಜಿಸುವ ಮತ್ತು ಸಂದೇಶ ಪಸರಿಸುವ ಪ್ರಯತ್ನ ನಡೆಸಲಾಯಿತು ಎಂದರು. 

 

 ಮಿಸೆಸ್ ಇಂಡಿಯಾ 2017 ತೃಪ್ತಿ ಅರವಿಂದ್ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದು ವಾಕಥಾನ್ ನೇತೃತ್ವ ವಹಿಸಿದ್ದರು. 

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in karnataka »

ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ

ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ

ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ

ರಾಮನಗರ, ಫೆ. 02  :  ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು

ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ

ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ

ಸಂವಿಧಾನ ಜಾಗೃತಿ ಜಾಥಾ

ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ

ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ

ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ

ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,

ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ

ರಾಮನಗರ:  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ

ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ

ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ  ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ

೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ

ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ  ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ

ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್

ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ

ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ

ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ

Top Stories »  


Top ↑