Tel: 7676775624 | Mail: info@yellowandred.in

Language: EN KAN

    Follow us :


ಹಿಂದಿನ ಸರ್ಕಾರಗಳು ಹಮ್ಮಿಕೊಂಡ ಯೋಜನೆಗಳಿಂದ ದೇಶ ಮುಂದು: ಡಾ. ಮಲ್ಲಿಕಾರ್ಜುನ ಖರ್ಗೆ

Posted date: 10 Mar, 2018

Powered by:     Yellow and Red

ಹಿಂದಿನ ಸರ್ಕಾರಗಳು ಹಮ್ಮಿಕೊಂಡ ಯೋಜನೆಗಳಿಂದ ದೇಶ ಮುಂದು: ಡಾ. ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ : ದೇಶಕ್ಕೆ ಸ್ವಾತಂತ್ರ್ಯ ದೊರೆತ ನಂತರದ 70 ವರ್ಷಗಳಲ್ಲಿ ಸರ್ಕಾರಗಳು ನೀರಾವರಿ, ರಸ್ತೆ, ಶಿಕ್ಷಣ, ಆರೋಗ್ಯ, ವಸತಿಗಳಂತಹ ಹಲವಾರು ಕ್ಷೇತ್ರಗಳಲ್ಲಿ ಪಂಚವಾರ್ಷಿಕ ಯೋಜನೆಗಳನ್ನು ಹಮ್ಮಿಕೊಂಡು ಅಭಿವೃದ್ಧಿ ಮಾಡಿದ ಪ್ರತಿಫಲ ಇಂದು ದೇಶ ಮುಂದುವರೆಯಲು ಸಾಧ್ಯವಾಗಿದೆ ಎಂದು ಕಲಬುರಗಿ ಲೋಕಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು. 
ಅವರು ಶನಿವಾರ ಚಿಂಚೋಳಿ ತಾಲೂಕಿನ ನಾಗರಾಳ ಆಣೆಕಟ್ಟಿ ಆವರಣದಲ್ಲಿ ಕರ್ನಾಟಕ ನೀರಾವರಿ ನಿಗಮ ನಿಯಮಿತದಿಂದ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಕೆಳದಂಡೆ ಮುಲ್ಲಾಮಾರಿ ಯೋಜನೆಯ ಬಲದಂಡೆ ಕಾಲುವೆ ಹಾಗೂ ಕಾಲುವೆ ಜಾಲದ ಆಧುನೀಕರಣ ಕಾಮಗಾರಿ ಮತ್ತು ಆಣೆಕಟ್ಟು ಪುನಶ್ಚೇತನ ಹಾಗೂ ಬಲವರ್ಧನದ ಅಡಿಯಲ್ಲಿನ ಶಕ್ತಿ ಶಾಮಕ (ಸ್ಟಿಲಿಂಗ್ ಬೇಸಿನ್) ನಿರ್ಮಾಣದ ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. 
ಬಡವರು ಹಸಿವು, ಶಿಕ್ಷಣ, ಆರೋಗ್ಯದಿಂದ ವಂಚಿತರಾಗಬಾರದೆಂದು ರಾಜ್ಯ ಸರ್ಕಾರವು ಅನ್ನಭಾಗ್ಯ, ಕ್ಷೀರಭಾಗ್ಯ, ಆರೋಗ್ಯ ಭಾಗ್ಯ, ಕೃಷಿ ಭಾಗ್ಯಗಳಂತಹ ಯೋಜನೆಗಳನ್ನು ಜಾರಿಗೊಳಿಸಿದೆ. ಸರ್ಕಾರವು ನೀರಾವರಿ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದು, 1974ರಿಂದ ಪ್ರಾರಂಭವಾದ ಕೆಳದಂಡೆ ಮುಲ್ಲಾಮಾರಿ ಯೋಜನೆಯ ಆಣೆಕಟ್ಟಿನಲ್ಲಿ ನೀರು ಸಂಗ್ರಹವಾಗಿದೆ. ಈ ನೀರನ್ನು ರೈತರ ಹೊಲಗಳಿಗೆ ಸಮರ್ಪಕವಾಗಿ ವಿತರಣೆ ಮಾಡಲು ಸರ್ಕಾರವು ಯೋಜನೆಯ ಕಾಲುವೆ ಜಾಲದ ಆಧುನೀಕರಣಕ್ಕೆ 126 ಕೋಟಿ ರೂ. ನೀಡುವ ಮೂಲಕ ರೈತರಿಗೆ ಸಹಾಯ ಮಾಡುತ್ತಿದೆ ಎಂದರು. 
ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ|| ಶರಣಪ್ರಕಾಶ ಪಾಟೀಲ ಮಾತನಾಡಿ, ಚಿಂಚೋಳಿ ಮತಕ್ಷೇತ್ರದ ಬಹುದಿನದ ಬೇಡಿಕೆಯಾಗಿದ್ದ ಕೆಳದಂಡೆ ಮುಲ್ಲಾಮಾರಿ ಯೋಜನೆಯ ಕಾಲುವೆ ನವೀಕರಣ ಕಾಮಗಾರಿಗೆ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ. ಯೋಜನೆಯ 80 ಕಿ.ಮೀ. ಬಲದಂಡೆ ಕಾಲುವೆ ಹಾಗೂ ಉಪ ಕಾಲುವೆಗಳನ್ನು 12 ತಿಂಗಳುಗಳಲ್ಲಿ ನವೀಕರಿಸಿ, ನವೀಕರಣ ಕಾಮಗಾರಿ ಪೂರ್ಣಗೊಳಿಸಿ, ರೈತರಿಗೆ ನೀರು ಹರಿಸಬೇಕೆಂದು ತಿಳಿಸಿದರು. 
ಕೆಳದಂಡೆ ಮುಲ್ಲಾಮಾರಿ ಯೋಜನೆಯ ಪುನರ್ವಸತಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಸರ್ಕಾರವು 19 ಕೋಟಿ ರೂ.ಗಳ ವಿಶೇಷ ಪ್ಯಾಕೇಜ್‍ನ್ನು ಈ ಬಾರಿಯ ಆಯವ್ಯಯದಲ್ಲಿ ಮಂಜೂರಾತಿ ನೀಡಿದೆ. ಹೈ.ಕ. ಭಾಗದಲ್ಲಿ ಬಹುದಿನಗಳಿಂದ ನೆನೆಗುದ್ದಿಗೆ ಬಿದಿದ್ದ ನೀರಾವರಿ ಯೋಜನೆಗಳಿಗೆ ಶಾಶ್ವತ ಪರಿಹಾರ ಸರ್ಕಾರ ಕಲ್ಪಿಸಿದೆ. ಕಾರಂಜಾ ಯೋಜನೆಗೆ 100 ಕೋಟಿ ರೂ., ಯು.ಕೆ.ಪಿ.ಗೆ 3000 ಕೋಟಿ ರೂ., ಬೆಣ್ಣೆತೋರಾ ಯೋಜನೆಗೆ 117 ಕೋಟಿ ರೂ., ಭೀಮಾ ಏತ ನೀರಾವರಿ ಯೋಜನೆಗೆ 500 ಕೋಟಿ ರೂ. ಗಂಡೋರಿ ನಾಲಾ ಯೋಜನೆಗೆ 60 ಕೋಟಿ ರೂ. ನೀಡುವ ಮೂಲಕ ಈ ಯೋಜನೆಗಳ ಆಧುನೀಕರಣಕ್ಕೆ ಸಹಾಯ ಹಸ್ತ ನೀಡಿದೆ ಎಂದರು. 
ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರವು ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ 165 ಭರವಸೆಗಳ ಪೈಕಿ ಎಲ್ಲ ಭರವಸೆಗಳನ್ನು ಪೂರೈಸುವ ನುಡಿದಂತೆ ನಡೆದ ಸರ್ಕಾರ ಇದಾಗಿದೆ. ಮುಖ್ಯಮಂತ್ರಿಗಳು ಈ ವರ್ಷದ ಆಯವ್ಯಯದಲ್ಲಿ ರೈತರ ಬೆಳಕು ಕಾರ್ಯಕ್ರಮ ಘೋಷಿಸಿದ್ದು, ಒಣ ಬೇಸಾಯ ಮಾಡುತ್ತಿರುವ ರೈತರಿಗೆ ಪ್ರತಿವರ್ಷ ಒಂದು ಎಕರೆಗೆ 2000 ರೂ.ದಂತೆ 5 ಎಕರೆ ವರೆಗೆ 10 ಸಾವಿರ ರೂ.ಗಳನ್ನು ನೇರವಾಗಿ ರೈತರ ಖಾತೆಗೆ ಮಾಡಲಾಗುವುದು. ರೈತರು ಒಣ ಬೇಸಾಯದಲ್ಲಿ ನಷ್ಟ ಅನುಭವಿಸಬಾರದೆಂಬ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೊಳಿಸಿದ್ದು, ಇದಕ್ಕಾಗಿ 3600 ಕೋಟಿ ರೂ.ಗಳನ್ನು ಮಿಸಲಿರಿಸಲಾಗಿದೆ ಎಂದರು. 
ಚಿಂಚೋಳಿ ಶಾಸಕ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಸದೀಯ ಕಾರ್ಯದರ್ಶಿ ಡಾ. ಉಮೇಶ ಜಾಧವ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ, ಕೆಳದಂಡೆ ಮುಲ್ಲಾಮಾರಿ ಯೋಜನೆ ಕಾಲುವೆಗಳ ನವೀಕರಣಗೊಂಡಲ್ಲಿ 80 ಕಿ.ಮೀ.ವರೆಗಿನ ರೈತರಿಗೆ ಸರಾಗವಾಗಿ ನೀರು ದೊರೆಯಲಿದೆ. ಸರ್ಕಾರವು ಹೈ.ಕ. ಭಾಗಕ್ಕೆ 371(ಜೆ) ಮೂಲಕ ವಿಶೇಷ ಅನುದಾನ ನೀಡುತ್ತಿರುವುದರಿಂದ ಚಿಂಚೋಳಿ ಮತಕ್ಷೇತ್ರದ ಎಲ್ಲ ಹಳ್ಳಿ ಮತ್ತು ತಾಂಡಾಗಳಿಗೆ ರಸ್ತೆ ಸಂಪರ್ಕ ಕಲ್ಪಿಸಲಾಗಿದೆ. ಚಿಂಚೋಳಿಯಲ್ಲಿ 3 ಕೋಟಿ ರೂ. ವೆಚ್ಚದ ಪುರಸಭೆ ಕಟ್ಟಡ, ಬಸ್ ನಿಲ್ದಾಣ, ಒಂದು ಎಕರೆ ಪ್ರದೇಶದಲ್ಲಿ ಡಾ. ಬಾಬಾಸಾಹೇಬ ಅಂಬೇಡ್ಕರ ಭವನ, 10 ಕೋಟಿ ರೂ. ವೆಚ್ಚದಲ್ಲಿ ಮಿನಿ ವಿಧಾನಸೌಧ, 1.5 ಕೋಟಿ ರೂ. ವೆಚ್ಚದಲ್ಲಿ ಬಾಬು ಜಗಜೀವನರಾಂ ಭವನ ನಿರ್ಮಿಸಲು ಕ್ರಮ ಜರುಗಿಸಲಾಗಿದೆ ಹಾಗೂ 60 ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸಲಾಗಿದೆ ಎಂದು ವಿವರಿಸಿದರು. 
ಕಾರ್ಯಕ್ರಮದಲ್ಲಿ ಪ್ರವಾಸೊದ್ಯಮ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ ಖರ್ಗೆ,ಕಾಡಾ ಅಧ್ಯಕ್ಷ ಮಹಾಂತಪ್ಪ ಸಂಗಾವಿ, ಚಿಂಚೋಳಿ ತಾಲೂಕು ಪಂಚಾಯಿತಿ ಅಧ್ಯಕ್ಷೆ ರೇಣುಕಾಬಾಯಿ ಅಶೋಕ ಚವ್ಹಾಣ, ಗಣ್ಯರಾದ ದೀಪಕನಾಗ ಪುಣ್ಯಶೆಟ್ಟಿ, ಭೀಮರಾವ ಟಿ.ಟಿ., ಜಗದೇವ ಗುತ್ತೇದಾರ, ಗೌತಮ ಪಾಟೀಲ, ಮೆಹಬೂಬ ಪಟೇಲ್, ಮಧುಸೂಧನ ರೆಡ್ಡಿ, ರವಿರಾಜ ಕೊರವಿ, ಗೋಪಾಲ ಕಟ್ಟಿಮನಿ, ಅನೀಲ ದೇವೇಂದ್ರಪ್ಪ ಜಮಾದಾರ, ಹೆಚ್ಚುವರಿ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ, ಕರ್ನಾಟಕ ನೀರಾವರಿ ನಿಗಮದ ಕಲಬುರಗಿ ನೀರಾವರಿ ಯೋಜನೆಗಳ ವಲಯದ ಮುಖ್ಯ ಇಂಜಿನಿಯರ ಬಿ.ಎಸ್. ಚಂದ್ರಶೇಖರ, ಕಾರ್ಯಪಾಲಕ ಇಂಜಿನಿಯರ್ ಸೂರ್ಯಕಾಂತ ಮಾಲೆ, ಕೆಳದಂಡೆ ಮುಲ್ಲಾಮಾರಿ ಯೋಜನೆ ಆಣೆಕಟ್ಟಿನ ಚಿಮ್ಮನಚೋಡ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕೃಷ್ಣಾ ಆಗ್ನಿಹೋತ್ರಿ, ಚೇತನ ಎಸ್. ಕಳಸ್ಕರ್ ಮತ್ತಿತರರು ಪಾಲ್ಗೊಂಡಿದ್ದರು.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in karnataka »

ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ

ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ

ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ

ರಾಮನಗರ, ಫೆ. 02  :  ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು

ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ

ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ

ಸಂವಿಧಾನ ಜಾಗೃತಿ ಜಾಥಾ

ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ

ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ

ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ

ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,

ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ

ರಾಮನಗರ:  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ

ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ

ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ  ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ

೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ

ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ  ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ

ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್

ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ

ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ

ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ

Top Stories »  


Top ↑